Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಆಗಸ್ಟ್ 5th 2019:ನಾಗರ ಪಂಚಮಿ ಹಬ್ಬದ ವಿಶೇಷ: ನೀವು ತಿಳಿಯಲೇಬೇಕಾದ ಸಂಗತಿಗಳು
ಶ್ರಾವಣ ಮಾಸದ ಆರಂಭದಲ್ಲಿ ಬರುವ ಹಬ್ಬವೇ ನಾಗಪಂಚಮಿ. ಈ ಪವಿತ್ರವಾದ ಹಬ್ಬವು 2019ರಲ್ಲಿ ಆಗಸ್ಟ್ 5ರಂದು
ಆಚರಿಸಲಾಗುತ್ತದೆ. ಪವಿತ್ರ ಕಥೆ-ಪುರಾಣಗಳನ್ನು ಒಳಗೊಂಡಿರುವ ಈ ಹಬ್ಬವು ನಾಡಿಗೆ ದೊಡ್ಡದು ಎಂದು ಪರಿಗಣಿಸಲಾಗುತ್ತದೆ. ನಾಗ
ದೇವತೆಯು ವ್ಯಕ್ತಿಯ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಬದಲಾವಣೆ ಹಾಗೂ ಆಶೀರ್ವಾದಗಳನ್ನು ಮಾಡುತ್ತದೆ. ನಾಗ ದೇವತೆಯಿಂದಲೇ ಸಂತಾನ ಭಾಗ್ಯ, ಸಂಸಾರದಲ್ಲಿ ಅಭಿವೃದ್ಧಿ, ವೃತ್ತಿ ಕ್ಷೇತ್ರದಲ್ಲಿ ಮನ್ನಣೆ ಹೀಗೆ ಅನೇಕ ಬಗೆಯ ಧನಾತ್ಮಕ ಫಲಿತಾಂಶವನ್ನು ನೀಡುತ್ತದೆ ಎನ್ನುವ ನಂಬಿಕೆಯಿದೆ.
ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ
ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ.

ಪುರಾಣ ಕಥೆ:
ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು 'ಸರ್ಪಯಜ್ಞ'ವನ್ನು ಆರಂಭಿಸಿದ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು 'ವರವನ್ನು ಕೇಳು'ಎಂದು ಹೇಳಿದಾಗ, ಆಸ್ತಿಕನು ಪ್ರಾಣಿ ಹಿಂಸೆ ಮಹಾ ಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪ ಯಜ್ಞವನ್ನು ನಿಲ್ಲಿಸಿದ. ಆ ದಿನ ಪಂಚಮಿಯಾಗಿತ್ತು.
ಐತಿಹಾಸಿಕ ಕಥೆ
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ನಾಗರಹಾವೊಂದು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು
ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು
ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ - ತಂಗಿ ಇಬ್ಬರು ಸೇರಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ನಾಗರ ಪಂಚಮಿಯ ವೈಶಿಷ್ಟ್ಯ
ನಾಗರಪಂಚಮಿ - ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ. ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ
ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು -'ತಮ್ಮ ಕೃಪೆಯಿಂದ ಈ ದಿನದಂದು ಶಿವ
ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ."
ನಾಗದೇವತೆಯು ಸಂಪೂರ್ಣ
ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ. ಸ್ಥೂಲ
ದೇಹವು ಪ್ರಾಣಹೀನವಾಗಿದೆಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.
ನಾಗರ ಪಂಚಮಿಯ ಪೂಜಾ ವಿಶೇಷ
•ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವ ನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀಕಣಗಳು.
•ಭಾವಾರ್ಥ:
'ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರ ಪಂಚಮಿಯ ದಿನ ನಾಗಗಳ ಪೂಜೆಯಿಂದ 'ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ'ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.
•ನಿಷೇಧ:
ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು
ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು.
ಉಪವಾಸದ ಮಹತ್ವ
• ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ
ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. 'ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟ ಗಳಿಂದ ಪಾರಾಗಲಿ'ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ.
• ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ
ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ. ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು
ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.



Click it and Unblock the Notifications
















