Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಹುರ್ರೇ...ನಾಡಿಗೆ ಬಂತು ನವರಾತ್ರಿ ಹಬ್ಬ

ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿದ್ದು 9 ದಿನಗಳ ಕಾಲ ಆದಿ ಶಕ್ತಿಯ ದುರ್ಗಾ ದೇವಿಯನ್ನು ಒಂಬತ್ತು ವಿಧದಲ್ಲಿ ಪೂಜಿಸಲಾಗುವುದು.
ಮೊದಲ ದಿನ-ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
ಎರಡನೇ ದಿನ - ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
ಮೂರನೇ ದಿನ ತದಿಗೆ - ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
ನಾಲ್ಕನೇ ದಿನ ಚತುರ್ದಶಿ - ಶೈಲ ಜಾತಾ ದುರ್ಗಾಪೂಜಾ.
ಐದನೇ ದಿನ ಪಂಚಮಿ - ದೂಮೃಹಾ ದುರ್ಗಾಪೂಜಾ.
ಆರನೇ ದಿನ ಶಷ್ಠಿ - ಚಂಡ-ಮುಂಡ ಹಾ ದುರ್ಗಾಪೂಜಾ.
ಏಳನೇ ದಿನ ಸಪ್ತಮಿ - ರಕ್ತ ಬೀಜ ಹಾ ದುರ್ಗಾಪೂಜಾ.
ಎಂಟನೇ ದಿನ ಅಷ್ಟಮಿ - ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.
ನವರಾತ್ರಿ ಹಬ್ಬವನ್ನು ಭಾರತದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುವುದು. ಗುಜರಾತ್ , ಮುಂಬಯಿ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ, ಪಂಜಾಬ್ ನವರಾತ್ರಿಯ ಸಮಯದಲ್ಲಿ ಉಪವಾಸ, ದೇವಿ ಮಂದಿರಗಳಲ್ಲಿ ಪೂಜೆಕಾರ್ಯಗಳು ವಿಶೇಷವಾಗಿರುತ್ತವೆ. ಪಂಜಾಬ್ ರಾಜ್ಯದಲ್ಲಿ ಕೂಡಾ ಉಪವಾಸ ಮತ್ತು ಜಾಗರಣೆ ಹಾಗೂ ದೇವಿಯ ಪೂಜೆಯನ್ನು ನೆರವೇರಿಸುತ್ತಾರೆ.
ಈ ಒಂಬತ್ತು ದಿನಗಳಲ್ಲಿ ಕಿರಿಯ ವಯಸ್ಸಿನ ಬಾಲಕಿಯರನ್ನು ದೇವಿಯ ರೂಪದಲ್ಲಿ ನೋಡಲಾಗುತ್ತದೆ. ಕುಮಾರಿಯರಿಗೆ ಪಾದ ಪೂಜೆ ಮಾಡಿ, ಮೃಷ್ಟಾನ್ನ ಭೋಜನ ನೀಡುವುದಲ್ಲದೇ ಅವರಿಗೆ ದಕ್ಷಿಣೆಯನ್ನು ಕೊಡಲಾಗುತ್ತದೆ. ಈ ಹಬ್ಬವು ಸ್ತ್ರೀಯರಿಗೆ ಉನ್ನತ ಸ್ಥಾನಮಾನವನ್ನು ಕೊಟ್ಟು, ಅವರನ್ನು ಗೌರವಿಸಿ ಎಂಬ ಸಂದೇಶ ನೀಡುತ್ತದೆ.
9ನೇ ದಿನ ಆಯುಧಗಳಿಗೆ ಪೂಜೆ ಮಾಡಲಾಗುವುದು. ಇದನ್ನು ಆಯುಧ ಪೋಜೆ ಎಂದು ಆಚರಿಸಲಾಗುತ್ತದೆ. ನವರಾತ್ರಿ ಕಳೆದು ಹತ್ತನೇ ದಿನಕ್ಕೆ ವಿಶ್ವ ಪ್ರಸಿದ್ಧ ದಸಾರ ಹಬ್ಬವನ್ನು ಆಚರಿಸಲಾಗುವುದು.



Click it and Unblock the Notifications
