Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಗುರು ಪೂರ್ಣಿಮೆಯ ಮಹತ್ವವೇನು ಗೊತ್ತೇ?
ನಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನ ಗುರುವಿನದ್ದಾಗಿದೆ. ನಮ್ಮ ಭವಿಷ್ಯವನ್ನು ರೂಪಿಸಿ ನಮ್ಮನ್ನು ವಿದ್ಯಾವಂತರು ಬುದ್ಧಿವಂತರನ್ನಾಗಿ ಮಾಡುವ ಕಲೆ ನಮ್ಮ ಗುರಗಳದ್ದಾಗಿದೆ. ಹಸಿಮಣ್ಣಿಗೆ ಆಕಾರ ಕೊಡುವ ಗುರು ಎಂಬ ಮಾರ್ಗದರ್ಶಿ ತಂದೆ ತಾಯಿಯ ಸ್ಥಾನಕ್ಕೆ ಸಮಾನರು. ಜ್ಞಾನ ಎಂಬ ಬೆಳಕಿನೆಡೆಗೆ ನಮ್ಮನ್ನು ಕೊಂಡೊಯ್ಯುವ ಈ ಮಹಾನುಭಾವರಾದ ಗುರುಗಳು ನಮ್ಮ ಜೀವನದ ದಿಕ್ಕನ್ನು ಬದಲಾಯಿಸುವವರಲ್ಲಿ ಪ್ರಮುಖರಾಗಿದ್ದಾರೆ.
ಹಿಂದೂ ಕ್ಯಾಲೆಂಡರ್‌ನಲ್ಲಿ ಗುರು ಪೂರ್ಣಿಮೆಯನ್ನು ನಮ್ಮ ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಗುರುಗಳಿಗೆ ಅರ್ಪಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಗುರು ಅಥವಾ ಶಿಕ್ಷಕರನ್ನು ದೇವರಿಗೆ ಹೋಲಿಸಲಾಗುತ್ತದೆ. ನಿಜವಾದ ಗುರುವು ವ್ಯಕ್ತಿ ಮತ್ತು ಮಹಾನ್ ಶಕ್ತಿಗೆ ಒಂದು ಸಂಪರ್ಕ ಅಥವಾ ಕೊಂಡಿ ಇದ್ದಂತೆ. ಆದ್ದರಿಂದಲೇ ಗುರು ಪೂರ್ಣಿಮೆಯಂದು ಗುರುಗಳಿಗೆ ಶಿಕ್ಷಕರಿಗೆ ಗೌರವ ತೋರುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ನಿಮ್ಮನ್ನು ಶಿಕ್ಷಣದ ಮೂಲಕ ಉತ್ತಮ ಜೀವನಕ್ಕೆ ಕಾಲಿರಿಸುವಂತೆ ಮಾಡಿದ ಗುರುಗಳಿಗೆ ಈ ದಿನವನ್ನು ಅರ್ಪಿಸಬೇಕು. ಹಿಂದೂ ತಿಂಗಳ ಆಷಾಢ ಮಾಸ (ಜುಲೈ -ಆಗಸ್ಟ್) ದಂದು ಪೂರ್ಣ ಚಂದ್ರನ ದಿನದಂದು ಗುರುವಿಗೆ ವಿಶೇಷ ಗೌರವ ಸಲ್ಲಿಸುವ ದಿನವನ್ನಾಗಿ ಆಚರಿಸಲಾಗುತ್ತದೆ.
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದ ಮಹಾತ್ಮರಾಗಿದ್ದಾರೆ ವೇದವ್ಯಾಸರು.
ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಪ್ರಥಮ ಉಪದೇಶವನ್ನು ಬುದ್ಧನು ಈ ದಿನ ಮಾಡಿದರೆಂದು ಪ್ರತೀತಿ ಇದೆ.
ಗುರು ಪೂರ್ಣಿಮೆಯ ಮಹತ್ವ ಮತ್ತು ವಿಶೇಷತೆಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು ಮುಂದೆ ಓದಿ.
ಗುರು ಪೂರ್ಣಿಮೆಯ ಆಚಾರಗಳು
ಹಿಂದೂ ಆಧ್ಯಾತ್ಮಿಕ ಗುರುಗಳನ್ನು ಅವರ ಜೀವನ ಮತ್ತು ಕಲಿಸುವಿಕೆಗಳನ್ನು ಸ್ಮರಿಸಿಕೊಂಡು ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ. ಹಲವಾರು ದೇವಸ್ಥಾನಗಳಲ್ಲಿ ವ್ಯಾಸ ಪೂಜೆಯನ್ನು ನೆರವೇರಿಸಲಾಗುತ್ತದೆ.
ಹೂವು ಮತ್ತು ಕೆಲವೊಂದು ಉಡುಗೊರೆಗಳನ್ನು ಅವರ ಗೌರವಕ್ಕಾಗಿ ಈ ದಿನ ಅರ್ಪಿಸಲಾಗುತ್ತದೆ. ಅನುಯಾಯಿಗಳಿಗಾಗಿ ಪ್ರಸಾದ ರೂಪದಲ್ಲಿ ಹಬ್ಬವನ್ನು ಆಚರಿಸುವವರು ಈ ದಿನವನ್ನು ಆಚರಿಸುತ್ತಾರೆ. ಅಂದರೆ ಅನುಯಾಯಿಗಳಿಗೆ ಪ್ರಸಾದ ಮತ್ತು ಫಲ ಪುಷ್ಪಗಳನ್ನು ಅರ್ಪಿಸುವುದಾಗಿದೆ.
ಗುರುಗಳ ಪಾದಗಳನ್ನು ತೊಳೆಯುವುದು ಗುರುವಿನ ಕೃಪೆ ಕರುಣೆ ನಮ್ಮ ಮೇಲೆ ಯಾವಾಗಲೂ ಇರುತ್ತದೆ ಎಂಬುದನ್ನು ತೋರಿಸುವ ದ್ಯೋತಕವಾಗಿದೆ. ಬೌದ್ಧ ಭಿಕ್ಷುಗಳು ಈ ದಿನದಂದು ಯೋಗವನ್ನು ಮಾಡುತ್ತಾರೆ ಇದರಿಂದಾಗಿಯೇ ಅರಿಷಡ್ವರ್ಗಗಳ ವಿರುದ್ಧ ಅವರಿಗೆ ಹೋರಾಡಲು ಸಾಧ್ಯವಾಗಿರುವುದು.
ಗುರುಪೂರ್ಣಿಮೆಯ ಮಹತ್ವ
ಹಿಂದೂಗಳಿಗಾಗಿ, ಗುರುಪೂರ್ಣಿಮೆಯಂದು ಚಾತುರ್ಮಾಸ ಆರಂಭವಾಗುತ್ತದೆ. ರೈತರಿಗೆ ಈ ದಿನ ಅತ್ಯಂತ ಮಹತ್ವದ್ದಾಗಿದೆ. ಮಳೆಗಾಲದ ಪ್ರಾರಂಭವನ್ನು ಸೂಚಿಸುವ ಗುರುಪೂರ್ಣಿಮೆ ದವಸ ಧಾನ್ಯಗಳ ಬೆಳೆಯುವಿಕೆ ಅತೀ ಮುಖ್ಯವಾದ ಸಮಯವಾಗಿದೆ.
ಬೇಸಿಗೆಯ ತಾಪದಿಂದ ತಂಪಿನ ಅನುಭೂತಿಯನ್ನು ನಮಗೆ ನೀಡುವ ಮಾನ್‌ಸೂನ್ ಅಥವಾ ಮಳೆಗಾಲ ನಿಮ್ಮ ಆಧ್ಯಾತ್ಮಿಕ ಪಾಠಗಳನ್ನು ಪ್ರಾರಂಭಿಸಲು ಮುಖ್ಯವಾದ ದಿನಗಳಾಗಿವೆ. ಆದ್ದರಿಂದ ಗುರುಪೂರ್ಣಿಮೆಯಂದು ಸ್ವಲ್ಪ ಹೊತ್ತನ್ನು ಗುರುವಿಗಾಗಿ ಮೀಸಲಿಟ್ಟು ನಿಮ್ಮನ್ನು ಜ್ಞಾನದ ಕಡೆಗೆ ಕೊಂಡೊಯ್ದ ಆ ಮಹಾನ್ ಚೇತನಕ್ಕೆ ನಮಸ್ಕರಿಸಿ.



Click it and Unblock the Notifications











