Latest Updates
-
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು!
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ ಸ್ವಾತಿ ರಾಥೋಡ್
ಜನವರಿ 26 ಗಣರಾಜ್ಯೋತ್ಸವ ದಿನ, ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ನಾವೆಲ್ಲಾ ಸ್ವಾತಂತ್ರ್ಯರು ಎಂದು ಕೊಂಡಾಡುವ ದಿನ.
ಅನೇಕ ಸ್ವಾತಂತ್ರ್ಯ ಹೋರಾಟದ, ಬಲಿದಾನ ಫಲ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ. ನಮ್ಮ ದೇಶಕ್ಕೆ ಸಂವಿಧಾನ ಜಾರಿಯಾದ ದಿನ. ಭಾರತೀಯರ ಹಕ್ಕು, ಕರ್ತವ್ಯಗಳನ್ನು ಸಂವಿಧಾನದಲ್ಲಿ ಹೇಳಲಾಗಿದೆ. ಅದರಲ್ಲಿರುವ ಹಕ್ಕುಗಳು ಭಾರತೀಯ ಪ್ರಜೆಯ ಘನತೆಯನ್ನು ಕಾಪಾಡಿದರೆ, ಅದರಲ್ಲಿರುವ ಕರ್ತವ್ಯವನ್ನು ಪಾಲಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ.

ನಾವು ಈ ವರ್ಷ 72ನೇ ಗಣರಾಜ್ಯೋತ್ಸವ ಆಚರಿಸಲಿದ್ದೇವೆ. ಈ ಗಣರಾಜ್ಸೋವದಲ್ಲಿ ಒಬ್ಬ ವೀರ ವನಿತೆ ಇತಿಹಾಸ ಸೃಷ್ಟಿಸಲಿದ್ದಾರೆ. ಅವರೇ ಫ್ಲೈಟ್ ಲೆಫ್ಟಿನೆಂಟ್ ಸ್ವಾತಿ ರಾಥೋಡ್.
ಇವರು ಗಣರಾಜ್ಯೋತ್ಸವದಂದು ನಡೆಯುವ ಪರೇಡ್‌ನಲ್ಲಿ ವೈಮಾನಿಕ ಪ್ರದರ್ಶನವನ್ನು ಮುನ್ನಡೆಸುವ ಜವಾಬ್ದಾರಿ ಇವರ ಮೇಲಿದೆ. ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ವೈಮಾನಿಕ ಪ್ರದರ್ಶನವನ್ನು ಮುನ್ನಡೆಸುತ್ತಿದ್ದಾರೆ.
ತಮ್ಮ ಮಗಳ ಸಾಧನೆ ಕಂಡು ಪೋಷಕರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಮಗಳು ಕಂಡ ಕನಸು ನೆನಸಾಗಿದೆ ಎಂದು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಲೆಫ್ಟಿನೆಂಟ್ ಸ್ವಾತಿ ರಾಥೋಡ್ ಅವರ ತಂದೆ ರಾಜಾಸ್ಥಾನದ ಕೃಷಿ ಇಲಾಖೆಯಲ್ಲಿ ಕಾರ್ಯ ಮಾಡುತ್ತಿದ್ದು, 'ಹೆಣ್ಣು ಮಕ್ಕಳ ಕನಸು ನೆರವೇರಲು ಬೆಂಬಲ ನೀಡಿ' ಎಂದು ಎಲ್ಲಾ ಪೋಷಕರಲ್ಲಿ ಕೇಳಿಕೊಂಡಿದ್ದಾರೆ.
ಪೈಲೆಟ್ ಆಗಬೇಕೆಂಬ ಕನಸು ಕಂಡಿದ್ದ ಸ್ವಾತಿ ಅವರು 2014ರಲ್ಲಿ ಮೊದಲ ಪ್ರಯತ್ನದಲ್ಲಿಯೇ ಭಾರತೀಯ ವಾಯು ಸೇನೆಯಲ್ಲಿ ಪೈಲೆಟ್ ಆಗಿ ನೇಮಕಗೊಂಡರು. ಅವರ ಸಹೋದರ ನೌಕಾ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
2013ರಲ್ಲಿ ಸ್ವಾತಿ ಅವರು ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್‌ನಲ್ಲಿ ಭಾಗವಹಿಸಿದ್ದರು. 2014 ಮಾರ್ಚ್‌ನಲ್ಲಿ ಏರ್ ಫೋರ್ಸ್ ಸೆಲೆಕ್ಷನ್ ಬೋರ್ಡ್‌ನಿಂದ ಸಂದರ್ಶನಕ್ಕೆ ಕರೆ ಬಂದಿತ್ತು. ಸುಮಾರು 200 ವಿದ್ಯಾರ್ಥಿನಿಯರು ಸಂದರ್ಶನಕ್ಕೆ ಬಂದಿದ್ದರು, ಅದರಲ್ಲಿ 98 ಮಂದಿಯಷ್ಟೇ ಆಯ್ಕೆಯಾಗಿದ್ದರು, ಅದರಲ್ಲೂ ಸ್ಕ್ರೀನಿಂಗ್ ಬಳಿಕ ಐವರಷ್ಟೇ ಉಳಿದಿದ್ದರು, ಅದರಲ್ಲಿ ಫ್ಲೈಯಿಂಗ್ ಬ್ರಾಂಚ್‌ಗೆ ಆಯ್ಕೆಯಾದವರು ಸ್ವಾತಿ ರಾಥೋಡ್ ಮಾತ್ರ.
ಸ್ವಾತಿ ಅವರು ಗಣರಾಜ್ಯೋತ್ಸವ ಪರೇಡ್‌ನಲ್ಲಿ ವೈಮಾನಿಕ ಪ್ರದರ್ಶನವನ್ನು ಮುನ್ನಡೆಸುವ ಕುರಿತು ಮಾತನಾಡಿದ ರಾಜಾಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ' ಅವರು ರಾಜ್ಯದ ಘನತೆಯನ್ನು ಎತ್ತಿ ಹಿಡಿದಿರುವುದು ಮಾತ್ರವಲ್ಲ, ಮಹಿಳೆಯರ ಸಬಲೀಕರಣಕ್ಕೆ ಒಬ್ಬ ವಿಶೇಷ ಉದಾಹರಣೆಯಾಗಿದ್ದಾರೆ' ಎಂದಿದ್ದಾರೆ.
ಹೆಣ್ಣು ಎಂದರೆ ಅವಳೊಂದು ಅಪೂರ್ವವಾದ ಶಕ್ತಿ, ಆಕೆಗೊಂದು ಸ್ಪೂರ್ತಿ ನೀಡಿದರೆ ಎಷ್ಟು ಎತ್ತರಕ್ಕೆ ಬೇಕಾದರೂ ಬೆಳೆಯುತ್ತಾಳೆ ಎಂಬುವುದಕ್ಕೆ ನಿದರ್ಶನ ಸ್ವಾತಿ ರಾಥೋಡ್.



Click it and Unblock the Notifications

