For Quick Alerts
ALLOW NOTIFICATIONS  
For Daily Alerts

ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಯ ಮಹತ್ವ

|

ದಕ್ಷಿಣ ಭಾರತೀಯರು ವರ್ಷದ ಸಂಭವನೀಯ ಹಬ್ಬವೆಂದೇ ಜನಜನಿತ ಯುಗಾದಿಯ ಸ್ವಾಗತಿಸುವಿಕೆಯಲ್ಲಿದ್ದಾರೆ. ಕರ್ನಾಟಕ, ಆಂಧ್ರದ ಜನತೆಗೆ ಹೊಸ ವರ್ಷದ ಆರಂಭವನ್ನು ಯುಗಾದಿ ಹಬ್ಬದ ಸುಗ್ಗಿ ಸೂಚಿಸುತ್ತದೆ.

ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ. ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ.

ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ. ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.

Tradition of Ugadi in South India

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: ಯುಗಾದಿ ಸ್ಪೆಶಲ್ ಮಸಾಲಾ ಗರೇಲು ರೆಸಿಪಿ!

ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ "ಬೇವು-ಬೆಲ್ಲ." ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಬೇವು-ಬೆಲ್ಲ ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು.

ಇಂದಿನ ದಿನದಿಂದ ವಸಂತ ಮಾಸ ಪ್ರಾರಂಭವಾಗಿ ತರು ಲತೆಗಳು ಚಿಗುರುತ್ತವೆ. ಹೊಸ ಹೊಸ ಹೂಗಳು ಕಂಪನ್ನು ಬೀರುತ್ತವೆ. ಹಳೆಯ ತರಗೆಲೆಗಳು ಉದುರಿ ಗಿಡ ಮರಗಳು ಮತ್ತೆ ಮರಳಿ ಹೊಸ ಚೈತನ್ಯ ಪಡೆಯುತ್ತವೆ. ಜೀವನದಲ್ಲಿ ಒಂದು ವರುಷಗಳಲ್ಲಿ ಕಂಡ ಸುಖ ದು:ಖಗಳನ್ನು ಮರೆತು ಹೊಸ ಬಾಳನ್ನು ನೋಟ್‌ಬುಕ್ಕಿನ ಹೊಸ ಪುಟದಂತೆ ಪ್ರಾರಂಭಿಸುವ ಸೂಚನೆಯ ಈ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ.

ಈ ದಿನ ಶ್ರೀರಾಮನು ರಾವಣನನ್ನು ಜಯಿಸಿ ಮರಳಿ ಅಯೋಧ್ಯೆಗೆ ಬಂದು ರಾಜ್ಯಭಾರ ಮಾಡಿದನೆಂದು ಪ್ರತೀತಿ. ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: ಯುಗಾದಿಗೆ ಸಾಂಪ್ರಾದಾಯಕವಾದ ಮನೆ ಅಲಂಕಾರ

ಹಬ್ಬದ ಆಚರಣೆಯ ವಿಶೇಷತೆ:
ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ' ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ. ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು.

ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು.

English summary

Tradition of Ugadi in South India

Ugadi is celebrated with great enthusiasm all over South India. The Ugadi day marks the advent of the spring season which signifies the beginning of new life as the trees start bearing flowers and fruits.
Story first published: Monday, March 24, 2014, 14:19 [IST]
X
Desktop Bottom Promotion