Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ಮಹಾ ಶಿವರಾತ್ರಿ ವಿಶೇಷ: ಅಂದು ಬ್ರಹ್ಮ-ವಿಷ್ಣುವಿನ ಮೇಲೆ ಶಿವ ಕೋಪಗೊಂಡಿದ್ದು ಯಾಕೆ?
ಶಿವರಾತ್ರಿಗೆ ಇನ್ನೇನು ಬೆರಳಣಿಕೆ ದಿನಗಳು ಮಾತ್ರ ಉಳಿದಿವೆ, ಹಿಂದೂ ಧರ್ಮದಲ್ಲಿ ಶಿವರಾತ್ರಿಗೆ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ.
ಇನ್ನು ಶಿವರಾತ್ರಿಗೆ ಹಿಂದೂ ಧರ್ಮದಲ್ಲಿ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸ ನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ. ಶುಚಿರ್ಭೂತರಾಗಿ ಶಿವನನ್ನು ಧ್ಯಾನಿಸುತ್ತಾ ದಿನಪೂರ್ತಿ ಭಕ್ತರು ಆಹಾರ ನೀರು ಮುಟ್ಟದೆ ಉಪವಾಸ ಕೈಗೊಳ್ಳುತ್ತಾರೆ.
ಅಲ್ಲದೆ, ಉಪವಾಸವು ಹಗಲಿನಿಂದ ಪ್ರಾರಂಭಗೊಂಡು ರಾತ್ರಿ ಪೂರ್ತಿ ನಡೆದು ಮರುದಿನ ಪ್ರಾತಃ ಕಾಲಕ್ಕೆ ಕೊನೆಗೊಳ್ಳುತ್ತದೆ. ವ್ರತದ ಸಮಯದಲ್ಲಿ ಆಹಾರವಿಲ್ಲದೆ ಕಟ್ಟುನಿಟ್ಟಾಗಿ ದೇವರಲ್ಲಿ ಐಕ್ಯಗೊಳ್ಳಬೇಕು. ವ್ರತಾಧಾರಿಯು ಹಣ್ಣಿನ ರಸ, ಹಣ್ಣುಗಳು ಮತ್ತು ವಿಶೇಷ ವ್ರತ ಆಹಾರಗಳಾದ ವ್ರತದ ಅನ್ನ, ಬೀಜಗಳು, ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಪದಾರ್ಥಗಳನ್ನು ಸೇವಿಸಬಹುದು. ಸೂರ್ಯಾಸ್ತದ ನಂತರವಷ್ಟೇ ಊಟವನ್ನು ಸೇವಿಸಬೇಕು.
ಅಷ್ಟೇ ಅಲ್ಲದೆ ಮುಂಜಾನೆ ಲಿಂಗಕ್ಕೆ ಅಭಿಷೇಕವನ್ನು ಪೂರೈಸಿ ಪ್ರಾರ್ಥನೆಗಳನ್ನು ಸಲ್ಲಿಸಿದ ನಂತರವಷ್ಟೇ ವ್ರತವನ್ನು ಸಂಪನ್ನಗೊಳಿಸಬೇಕು. ವ್ರತ ಸಂಪನ್ನಗೊಳಿಸುವಾಗ ಪ್ರಸಾದ ಇಲ್ಲವೇ, ಶಿವನಿಗೆ ಅರ್ಪಿಸಿದ ಆಹಾರವನ್ನು ಮೊದಲು ತೆಗೆದುಕೊಳ್ಳಬೇಕು, ಬನ್ನಿ ಇಂದಿನ ಲೇಖನದಲ್ಲಿ ಶಿವರಾತ್ರಿ ಆಚರಣೆಗೆ ಸಂಬಂಧವನ್ನು ಪಡೆದಿರುವ ಕೆಲವೊಂದು ಐತಿಹಾಸಿಕ ಕಥೆಗಳನ್ನು ತಿಳಿಸಿಕೊಡಲಿದ್ದೇವೆ. ಶಿವರಾತ್ರಿ ಏಕೆ ಅತಿ ಮಹತ್ವದ್ದು ಮತ್ತು ಪವಿತ್ರವಾದುದು ಎಂಬುದನ್ನು ನಿಮಗಿಲ್ಲಿ ತಿಳಿದುಕೊಳ್ಳಬಹುದಾಗಿದೆ....

ಬ್ರಹ್ಮ- ವಿಷ್ಣು ಇವರಲ್ಲಿ ಯಾರು ಶ್ರೇಷ್ಠರು?
ಒಮ್ಮೆ ಬ್ರಹ್ಮ ಮತ್ತು ವಿಷ್ಣು ಅವರುಗಳಲ್ಲಿ ಯಾರು ಶ್ರೇಷ್ಠರು ಎಂಬ ಬಗ್ಗೆ ಜಗಳವಾಯಿತು. ಇವರಿಬ್ಬರ ಜಗಳದಿಂದ ಬೇಸತ್ತ ಇತರ ದೇವರುಗಳು, ಮಧ್ಯಸ್ಥಿಕೆ ವಹಿಸಲು ಶಿವನನ್ನು ಕೇಳಿಕೊಂಡರು. ಆಗ ಶಿವನು ಉದ್ದನೆಯ ಬೆಂಕಿಯ ಕಂಬದಂತೆ ಇವರಿಬ್ಬರ ಮಧ್ಯೆ ನಿಂತನು. ಬೆಂಕಿಯ ತೀಕ್ಷಣತೆಯನ್ನು ಕಂಡು ಇವರಿಬ್ಬರೂ ಇದರ ಮೂಲವನ್ನು ಹುಡುಕಲು ಹೊರಟರು. ಬ್ರಹ್ಮನು ಹಂಸದ ರೂಪವಾಗಿ ಆಕಾಶಕ್ಕೂ, ವಿಷ್ಣುವು ವರಾಹ ರೂಪದಲ್ಲಿ ಭೂಮಿಯೊಳಗೂ ಹೊರಟರು. ಸಾವಿರಾರು ಮೈಲುಗಳನ್ನು ಕ್ರಮಿಸಿದರೂ ಇದರ ಮೂಲ ತಿಳಿಯದಾಯಿತು.

ಬ್ರಹ್ಮ- ವಿಷ್ಣು ಇವರಲ್ಲಿ ಯಾರು ಶ್ರೇಷ್ಠರು?
ಇವರಿಬ್ಬರ ಪರದಾಟವನ್ನು ಕಂಡು ಶಿವನು ಮುಗುಳ್ನಕ್ಕನು. ಆತನ ನಗುವಿನಿಂದ ಅಲ್ಲಿಯೇ ಇದ್ದ ಕೇತಕಿ ಪುಷ್ಪವು ಬೆಂಕಿಯ ಕಂಬದಿಂದ ಕೆಳಗೆ ಇಳಿದು ಬರತೊಡಗಿತು. ಅಂತಹ ಸಂದರ್ಭದಲ್ಲಿ ಅಲ್ಲಿಯೇ ಬರುತ್ತಿದ್ದ ಬ್ರಹ್ಮನಿಗೆ ಇದು ಗೋಚರವಾಯಿತು. ಆತನು ಆ ಪುಷ್ಪವನ್ನು ಎಲ್ಲಿಂದ ಬಂದೆಯೆಂದು ಕೇಳಿದಾಗ, ಅದು ಈ ಬೆಂಕಿಯ ಕಂಬದ ಮೇಲ್ಭಾಗದಿಂದ ಕೆಳಗಿಳಿದು ಬರುತ್ತಿದ್ದೇನೆಂದು ಕೇತಕಿ ಪುಷ್ಟವು ತಳಿಸಿದಾಗ, ಕುಪಿತನಾದ ಬ್ರಹ್ಮನು, ಅಲ್ಲಿಯವರೆಗೆ ಬೆಂಕಿಯ ಮೂಲವನ್ನು ತಿಳಿಯದೇ ಬೇಸತ್ತಿರುವ ಬ್ರಹ್ಮ ಪುಷ್ಪವನ್ನೇ ಸಾಕ್ಷಿಯನ್ನಾಗಿ ತೆಗೆದುಕೊಂಡನು. ಆಗ ಕುಪಿತಗೊಂಡ ಶಿವನು ತನ್ನ ಮೂಲ ಸ್ವರೂಪವನ್ನು ತೋರಿದನು. ಮತ್ತು ಬ್ರಹ್ಮನನ್ನು ಯಾರೂ ಪೂಜಿಸಬಾರದೆಂದೂ, ಕಪಟತನ ತೋರಿದ ಕೇತಕಿ ಪುಷ್ಪವನ್ನು ಯಾರೂ ಪೂಜೆಗೆ ಬಳಸಬಾರದೆಂದೂ ಶಾಪವನ್ನಿತ್ತನು.

ಮಹಾಶಿವರಾತ್ರಿ ಹಬ್ಬದ ಮಹತ್ವ
ಮಹಾಶಿವರಾತ್ರಿಯ ಮಧ್ಯರಾತ್ರಿಯಂದು ಮಹಾದೇವನು ಲಿಂಗ ಸ್ವರೂಪವನ್ನು ಧರಿಸುತ್ತಾರೆ. ಫಲ್ಗಣ ಮಾಸದ 14 ನೇ ಗಾಢ ಮಾಸದಂದು ಇದು ಸಂಭವಿಸುತ್ತದೆ. ಶಿವನು ಪ್ರಥಮ ಬಾರಿ ಲಿಂಗ ರೂಪವನ್ನು ಧರಿಸುವುದು ಎಂಬುದಾಗಿ ಇದನ್ನು ಕಾಣಲಾಗುತ್ತದೆ. ಆ ದಿನವನ್ನೇ ಮಹಾಶಿವರಾತ್ರಿಯಾಗಿ ಆಚರಿಸಲಾಗುತ್ತದೆ. ಈ ದಿನಂದು ಶಿವನನ್ನು ಪೂಜಿಸುವುದು ಸಕಲ ಇಷ್ಟಾರ್ಥಗಳನ್ನು ನೆರವೇರಿಸಲಿದೆ ಮತ್ತು ಸುಖ ಸಂತೋಷವನ್ನು ತರಲಿದೆ ಎಂಬುದು ಪ್ರತೀತಿಯಾಗಿದೆ.

ಬುಡಕಟ್ಟು ಜನಾಂಗದ ಮನುಷ್ಯನ ಕಥೆ
ಬುಡಕಟ್ಟು ಜನಾಂಗದ ಬಡ ಶಿವ ಭಕ್ತನನ್ನು ಆಧರಿಸಿ ಇನ್ನೊಂದು ಕಥೆಯಿದೆ. ರಾತ್ರಿ ವೇಳೆಯಲ್ಲಿ ಒಮ್ಮೆ ಆತನು ದಾರಿ ತಪ್ಪುತ್ತಾನೆ. ಕಾಡುಪ್ರಾಣಿಗಳ ಧ್ವನಿಯನ್ನು ಕೇಳಿ ಭಯದಿಂದ ಮರವನ್ನೇರಿ ಈತ ಕುಳಿತುಕೊಳ್ಳುತ್ತಾನೆ. ತಾನು ಮಲಗಿದ ಸಂದರ್ಭದಲ್ಲಿ ಪ್ರಾಣಿಗಳು ತನ್ನ ಮೇಲೆ ದಾಳಿ ನಡೆಸಿದರೆ ಎಂದು ಹೆದರಿ ಆತ ಎಚ್ಚರಗೊಂಡಿರುತ್ತಾನೆ. ಶಿವನ ಸ್ಮರಣೆಯನ್ನು ಮಾಡುತ್ತಿರುತ್ತಾನೆ. ಬೆಳಗ್ಗಿನ ಜಾವ ನೋಡಿದಾಗ ಶಿವಲಿಂಗದ ಮೇಲೆ ಎಲೆಗಳು ಬೀಳುತ್ತಿರುವುದನ್ನು ನೋಡುತ್ತಾನೆ. ಆತ ರಾತ್ರಿಯೆಲ್ಲಾ ಶಿವನ ನಾಮ ಸ್ಮರಣೆ ಮಾಡುತ್ತಿದ್ದುದು ಶಿವನು ಮೆಚ್ಚಿಕೊಳ್ಳುತ್ತಾರೆ ಮತ್ತು ಆತ ಶಿವನ ಕೃಪಾಕಟಾಕ್ಷಕಕ್ಕೆ ಒಳಗಾಗಿರುತ್ತಾನೆ.

ಬುಡಕಟ್ಟು ಜನಾಂಗದ ಮನುಷ್ಯನ ಕಥೆ
ಶಿವರಾತ್ರಿ ಹಬ್ಬಕ್ಕೆ ಸಂಬಂಧಿಸಿದಂತೆ ಜನರು ಹೆಚ್ಚಿನ ಕಥೆಗಳನ್ನು ಹೇಳುತ್ತಿರುತ್ತಾರೆ. ಈ ದಿನವೇ ಶಿವನು ತಾಂಡವ ನೃತ್ಯವನ್ನು ಆಡಿದ್ದು ಮತ್ತು ಪಾರ್ವತಿ ದೇವಿಯನ್ನು ವರಿಸಿರುವುದು ಎಂಬುದಾಗಿ ಕೂಡ ಪುರಾಣಗಳಲ್ಲಿ ಉಲ್ಲೇಖಗೊಂಡಿದೆ. ಅದಾಗ್ಯೂ ಶಿವರಾತ್ರಿಯನ್ನು ದೇಶದೆಲ್ಲೆಡೆ ಒಂದೇ ದಿನ ಸಂಭ್ರಮದಂದು ಆಚರಿಸಲಾಗುತ್ತದೆ. ದೇವರಿಗೆ ಜಾಗರಣೆ, ವ್ರತಗಳನ್ನು ಈ ದಿನ ನಡೆಸಲಾಗುತ್ತದೆ.



Click it and Unblock the Notifications











