Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಲೊವ್ಲಿನಾ ಬೊರ್ಗೊಹೈನ್: ಇವರ ಕುರಿತ ಆಸಕ್ತಿರ ಸಂಗತಿಗಳು
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಖಾತ್ರಿಯಾಗಿದೆ. ಎರಡೂ ಪದಕಗಳು ಮಹಿಳಾ ಕ್ರೀಡಾ ಪಟುಗಳ ಮೂಲಕವೇ ಭಾರತಕ್ಕೆ ಲಭಿಸಿವೆ. ಮೀರಾಬಾಯಿ ಚಾನು ಭಾರ ಎತ್ತುವ ಸ್ಪರ್ಧೆಯಲ್ಲಿ ಗೆಲ್ಲುವ ಮೂಲಕ ಬೆಳ್ಳಿ ಪದಕ ಭಾರತಕ್ಕೆ ಲಭಿಸಿದೆ. ಇದೀಗ ಲೊವ್ಲಿನಾ ಬೊರ್ಗೊಹೈನ್ ಮಹಿಳಾ ಬಾಕ್ಸಿಂಗ್ ಕ್ವಾರ್ಟರ್ ಫೈನಲ್‌ನಲ್ಲಿ ಗೆದ್ದು ಸೆಮಿಫೈನಲ್ ಪ್ರವೇಶಿಸಿ ಕಂಚಿನ ಪದಕ ಖಾತರಿ ಪಡಿಸಿಕೊಂಡಿದ್ದಾರೆ. ಇದರಿಂದ ಭಾರತೀಯರ ಸಂತೋಷ ದುಪ್ಪಟ್ಟಾಗಿದೆ.

ಲೊವ್ಲಿನಾ ಬೊರ್ಗೊಹೈನ್‌ರಿಗೆ ಇದೀಗ ಕಂಚಿನ ಪದಕ ಕಾತರಿಯಾಗಿದ್ದು ಸೆಮಿಫೈನಲ್‌ನಲ್ಲಿ ಗೆಲುವು ತಮ್ಮದಾಗಿಸಿದರೆ ಚಿನ್ನ ಅಥವಾ ಬೆಳ್ಳಿ ಪದಕ ಸಿಗುವ ನಿರೀಕ್ಷೆಯಿದೆ, ಒಂದು ವೇಳೆ ಸೋತರೆ ಕಂಚಿನ ಪದಕ ಲಭಿಸುವುದು. ಆದ್ದರಿಂದ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಾತರಿಯಾಗಿದೆ.
ಲೊವ್ಲಿನಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿ ಕಂಚಿನ ಪದಕ ಗೆದ್ದಿದ್ದಾರೆ. ತಮ್ಮ 20218ರಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಲೊವ್ಲಿನಾ ಮೊದಲಿಗೆ ಕಿಕ್ ಬಾಕ್ಸಿಂಗ್‌ನಲ್ಲಿ ಅಭ್ಯಾಸ ಮಾಡುತ್ತಾರೆ, ಅವರ ಸಾಮರ್ಥ್ಯವನ್ನು ಗುರುತಿಸಿದ ಸ್ಪೋರ್ಟ್ಸ್ ಅಥೋರಟಿ ಆಫ್ ಇಂಡಿಯಾದ ಪಾಡುಂ ಬೋರೋ ಅವರಿಗೆ ಬಾಕ್ಸಿಂಗ್ ಕಲಿಯುವಂತೆ ಸೂಚಿಸುತ್ತಾರೆ. ಮೀನನ್ನು ನದಿಗೆ ಬಿಟ್ಟಾಗ ಈಜುವಂತೆ ಲೊವ್ಲಿನಾ ಬಾಕ್ಸಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಾರಂಭಿಸುತ್ತಾರೆ. ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಎರಡು ಬಾರಿ ಕಂಚಿನ ಪದಕ ತಂದುಕೊಟ್ಟ ಹೆಗ್ಗಳಿಕೆ ಇವರದ್ದು.
ಭಾರತಕ್ಕೆ ಪದಕ ತಂದು ಕೊಟ್ಟ ಮೂರನೇಯ ಕ್ರೀಡಾಪಟು ಲೊವ್ಲಿನಾ
2008ರ ಒಲಿಂಪಿಕ್ಸ್‌ನಲ್ಲಿ ವಿಜೇಂದ್ರ ಸಿಂಗ್, 2012ರ ಒಲಿಂಪಿಕ್ಸ್‌ನಲ್ಲಿ ಮೇರಿ ಕೋಮ್ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.
ಲೊವ್ಲಿನಾ ಬೊರ್ಗೊಹೈನ್ ಅವರ ಬಗ್ಗೆ ಹೆಚ್ಚಿನ ಮಾಹಿತಿ
ಪೂರ್ಣ ಹೆಸರು: ಲೊವ್ಲಿನಾ ಬೊರ್ಗೊಹೈನ್
ಜನನ: ಅಸ್ಸಾಂನ ಗೊಲಾಘಾಟ್‌ನಲ್ಲಿ ಅಕ್ಟೋ 2, 1997ರಲ್ಲಿ ಜನಿಸಿದರು
ಸಾಶನೆ:
2017ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು
2018ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು
2018ರ ನೂತನ ವಿಶ್ಚ ಚಾಂಪಿಯನ್ಶಿಪ್‌ನಲ್ಲಿ ಕಂಚು
2020: ಅರ್ಜುನ ಪ್ರಶಸ್ತಿ
2020 ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಖಚಿತ ಪಡಿಸಿಕೊಂಡಿದ್ದು ಗೆದ್ದರೆ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲಲಿದ್ದಾರೆ.



Click it and Unblock the Notifications