ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯ ದಿನದಂದು ಬೇರೆ ಬೇರೆ ರೀತಿಯಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತಾರೆ ಏಕೆ?

ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಈ ಬಾರಿ ಆಚರಣೆ ಮಾಡುತ್ತಿದೆ. 'ಸ್ವಾತಂತ್ರ್ಯದ ಅಮೃತ ಮಹೋತ್ಸವ' ಒಂದು ಸಾಮೂಹಿಕ ಜನಾಂದೋಲನ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ತಮ್ಮ 'ಮನ್ ಕೀ ಬಾತ್' ರೇಡಿಯೊ ಕಾರ್ಯಕ್ರಮದಲ್ಲಿ ಹೇಳಿದ್ದರು. ಈ ಅಮೃತ ಮಹೋತ್ಸವದ ಹಿನ್ನೆಲೆ ಜನರು ಆಗಸ್ಟ್ 2-15ರ ಅವಧಿಯಲ್ಲಿ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳ ಪ್ರೊಫೈಲ್ ಚಿತ್ರವಾಗಿ ರಾಷ್ಟ್ರಧ್ವಜ ಬಳಸಬೇಕು ಎಂದು ಕರೆ ನೀಡಿದ್ದರು.

Why Is The Tricolour unfurled On Republic Day But hoisted On Independence Day? in kannada

ಅಲ್ಲದೇ ಆಗಸ್ಟ್ 13 ರಿಂದ 15ರ ವರೆಗೆ ಹರ್ ಘರ್ ತಿರಂಗಾದಡಿ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಮೋದಿ ಮನವಿ ಮಾಡಿದ್ದಾರೆ. ಇನ್ನೇನು ಎರಡು ದಿನಗಳಲ್ಲಿ ಅಂದರೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದಾದ್ಯಂತ ಹಬ್ಬದಂತೆ ಆಚರಿಸಲಾಗುತ್ತದೆ. ಶಾಲೆ, ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜದ ರಂಗು ಜೋರಾಗಲಿದೆ. ದೇಶವಾಸಿಗಳು ಶುಭಾಶಯಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ನಿಮಗೊಂದು ಗೊತ್ತಾ ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವಕ್ಕೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ. ಆದರೆ ಸ್ವಾತಂತ್ರ್ಯ ದಿನಾಚರಣೆಗೂ ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೂ ವ್ಯತ್ಯಾಸವಿದೆ.

ಹೌದು, ಆಗಸ್ಟ್ 15 ರಂದು ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಇದೇ ರೀತಿ ಭಾರತದ ಸಂವಿಧಾನದ ಅಂಗೀಕಾರದ ವಾರ್ಷಿಕೋತ್ಸವದ ನೆನಪಿಗಾಗಿ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಎರಡು ಕಾರ್ಯಕ್ರಮಗಳಲ್ಲಿ ಧ್ವಜಾರೋಹಣ ಮಾಡುವುದರಲ್ಲಿ ವ್ಯತ್ಯಾಸವಿದೆ.

ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಹೇಗಿರುತ್ತದೆ?

15 ಆಗಸ್ಟ್ 1947 ರ ಐತಿಹಾಸಿಕ ಘಟನೆಯನ್ನು ಗೌರವಿಸುವ ಹಿನ್ನೆಲೆ ಧ್ವಜಾರೋಹಣವನ್ನು ಮಾಡಲಾಗುತ್ತದೆ. ಈ ದಿನದಂದು, ಧ್ವಜವನ್ನು ಹಗ್ಗದಲ್ಲಿ ಧ್ವಜ ಸ್ಥಂಬದ ಕೆಳಗೆ ಕಟ್ಟಲಾಗುತ್ತದೆ. ನಂತರ ಧ್ವಜವನ್ನು ಅತಿಥಿಗಳು ಮೇಲಕ್ಕೆ ಹಗ್ಗದ ಮೂಲಕ ಎಳೆಯುತ್ತಾರೆ. ನಂತರ ಧ್ವಜವನ್ನು ತೆರೆಯಲಾಗುತ್ತದೆ ಮತ್ತು ಹಾರಿಸಲಾಗುತ್ತದೆ. (ಧ್ವಜವನ್ನು ಸರಿಯಾಗಿ ತೆರೆಯುವಂತೆ ಕಟ್ಟಿರುತ್ತಾರೆ). ಇದು ಬ್ರಿಟಿಷರಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದ ಹಿನ್ನೆಲೆ ನಾವು ಈ ರೀತಿಯಾಗಿ ಬಾವುಟವನ್ನು ಹಾರಿಸುತ್ತೇವೆ. ಇದಕ್ಕೆ ಸಂವಿಧಾನದಲ್ಲಿ ಇದನ್ನು ಧ್ವಜಾರೋಹಣ ಎಂದು ಕರೆಯಲಾಗುತ್ತದೆ. ಆಗಸ್ಟ್ 15 ರಂದು ಪ್ರಧಾನ ಮಂತ್ರಿ ಧ್ವಜಾರೋಹಣ ಮಾಡುತ್ತಾರೆ, ಏಕೆಂದರೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನದಲ್ಲಿ ಭಾರತದ ಸಂವಿಧಾನವು ಜಾರಿಗೆ ಬರಲಿಲ್ಲ. ಅಧ್ಯಕ್ಷರು (ರಾಷ್ಟ್ರದ ಸಾಂವಿಧಾನಿಕ ಮುಖ್ಯಸ್ಥರು) ಅಲ್ಲಿಯವರೆಗೆ ಅಧಿಕಾರ ವಹಿಸಿಕೊಂಡಿರಲಿಲ್ಲ

ಗಣರಾಜ್ಯದಲ್ಲಿ ಹೇಗೆ ಹಾರಿಸಲಾಗುತ್ತೆ ತ್ರಿವರ್ಣ ಧ್ವಜ!

ಜನವರಿ 26ರ ದಿನ ಗಣರಾಜ್ಯೋತ್ಸವನ್ನು ದೇಶದಲ್ಲಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲೂ ದೇಶದ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ. ಆದ್ರೆ ಈ ದಿನ ಧ್ವಜವನ್ನು ಮೇಲ್ಭಾಗದಲ್ಲಿ ಕಟ್ಟಲಾಗುತ್ತದೆ, ನಂತರ ಹಗ್ಗದಿಂದ ಮೇಲಿಂದಲೇ ಅದನ್ನು ತೆರೆಯಲಾಗುತ್ತದೆ ಮತ್ತು ಹಾರಿಸಲಾಗುತ್ತದೆ. ಸಂವಿಧಾನದಲ್ಲಿ ಇದನ್ನು ಫ್ಲ್ಯಾಗ್ ಅನ್ ಫರ್ಲಿಂಗ್ ಎಂದು ಕರೆಯಲಾಗುತ್ತದೆ. ಹೀಗಾಗಿ ಫ್ಲ್ಯಾಗ್ ಅನ್ ಫರ್ಲಿಂಗ್ ಮತ್ತು ಫ್ಯ್ಲಾಗ್ ಹೊಯಿಸ್ಟಿಂಗ್ ಎನ್ನುವ ವ್ಯತ್ಯಾಸವನ್ನು ನಾವು ಕಾಣಬಹುದಾಗಿದೆ.ಮತ್ತೊಂದೆಡೆ, ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾರೆ. ದೇಶದಲ್ಲಿ ಸಂವಿಧಾನದ ಅನುಷ್ಠಾನದ ನೆನಪಿಗಾಗಿ ಜನವರಿ 26 ಅನ್ನು ಆಚರಿಸಲಾಗುತ್ತದೆ. ಈ ದಿನ ರಾಷ್ಟ್ರಪತಿಗಳು ಧ್ವಜಾರೋಹಣ ಮಾಡುತ್ತಾರೆ.

ಈ ದಿನ ದೆಹಲಿಯ ರಾಜ್ ಪಥ್ ನಲ್ಲಿ ವಿಜೃಂಭಣೆಯ ಕಾರ್ಯಕ್ರಮ ನಡೆಯುತ್ತದೆ. ಟ್ಯಾಬ್ಲೋ, ಸೇನೆಗಳ ಪರೇಡ್ ನಡೆಯುತ್ತದೆ.

ಈ ಬಾರಿ ನಾವು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಹೀಗಾಗಿ ಕೇಂದ್ರ ಸರ್ಕಾರವು ಎಲ್ಲಾ ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಪ್ರಚೋದಿಸಲು ಹರ್ ಘರ್ ತಿರಂಗಾ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ. ಅಭಿಯಾನವು ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿದೆ.ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಾರೋಹಣ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

English summary

Why Is The Tricolour 'unfurled' On Republic Day But 'hoisted' On Independence Day? in kannada

Do you know Indian flag will be 'unfurled' On Republic Day and 'hoisted' On Independence Day, Here are more details... read on..
Story first published: Thursday, August 11, 2022, 15:20 [IST]
X
Desktop Bottom Promotion