Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಿಳಾ ದಿನಾಚರಣೆಯಂದೇ ಸುಧಾ ಮೂರ್ತಿ ರಾಜ್ಯಸಭೆಗೆ ನಾಮ ನಿರ್ದೇಶನ..!
ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದವರ ಸಾಲಿನಲ್ಲಿ ಲೇಖಕಿ, ಇನ್ಫೋಸಿಸ್ ಫೌಂಡೇಷನ್‌ನ ಮುಖ್ಯಸ್ಥೆ ಸುಧಾಮೂರ್ತಿ ಅವರು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರ ಸಮಾಜಮುಖಿ ಕಾರ್ಯದಿಂದಲೇ ಹೆಸರಾಗಿದ್ದಾರೆ. ಈಗ ಅವರಿಗೆ ಸರ್ಕಾರದಿಂದ ಮತ್ತೊಂದು ಗೌರವ ಸಿಕ್ಕಿದೆ.
ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಶ್ರೀಮತಿ ಮೂರ್ತಿ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ದೇಶದ 'ನಾರಿ ಶಕ್ತಿ'ಗೆ ಪ್ರಬಲವಾದ ಸಾಕ್ಷಿಯಾಗಿದೆ ಎಂದು ಹೇಳಿದರು.

ನರೇಂದ್ರ ಮೋದಿ ಟ್ವೀಟ್
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನರೇಂದ್ರ ಮೋದಿ, "ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ" ಎಂದು ಹೇಳಿದ್ದಾರೆ.
ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ಅವರ ಸಂಸದೀಯ ಅಧಿಕಾರಾವಧಿಗೆ ಹಾರೈಸುತ್ತೇನೆ" ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ಸುಧಾ ಮೂರ್ತಿ ಅವರ ಬಗ್ಗೆ
ಆಗಸ್ಟ್ 19, 1950ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುಧಾಮೂರ್ತಿ ಜನಿಸಿದರು. ಡಾ. ಆರ್. ಹೆಚ್. ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ ದಂಪತಿಯ ಪುತ್ರಿ. ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ BVB ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದರು. ನಂತರ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಟಾಟಾ ಇಂಜಿನಿಯರಿಂಗ್ ಮತ್ತು ಲೋಕೊಮೊಟಿವ್ ಕಂಪನಿಯಲ್ಲಿ ಸುಧಾಮೂರ್ತಿ ಕೆಲಸ ಆರಂಭಿಸಿದರು. ಅತಿದೊಡ್ಡ ವಾಹನ ತಯಾರಿಕಾ ಘಟಕಕ್ಕೆ ನೇಮಕಗೊಂಡ ಮೊದಲ ಮಹಿಳಾ ಇಂಜಿನಿಯರ್ ಎಂಬ ಹೆಗ್ಗಳಿಕೆ ಅವರದ್ದು. ಮುಂಬೈ ಮತ್ತು ಜಮ್‌ಶೆಡ್‌ಪುರದಲ್ಲಿಯೂ ಕಾರ್ಯ ನಿರ್ವಹಣೆ ಮಾಡಿದರು.
ಸುಧಾಮೂರ್ತಿ ಅವರು 1970 ಫೆಬ್ರವರಿ 10ರಂದು ನಾರಾಯಣ ಮೂರ್ತಿ ಅವರನ್ನು ವಿವಾಹವಾದರು. ಇನ್ಪೋಸಿಸ್ ಕಂಪನಿ ಸ್ಥಾಪಿಸಿದರು. ಕಂಪನಿ ಆದಾಯದಲ್ಲಿ ಒಂದಷ್ಟು ಹಣವನ್ನು ಸಮಾಜ ಸೇವೆಗೆ ಮೀಡಲಿಟ್ಟರು. 1996ರಲ್ಲಿ ಇನ್ಫೋಸಿಸ್ ಫೌಂಡೇಷನ್ ಸ್ಥಾಪನೆ ಮಾಡಲಾಯಿತು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮನೆ ನಿರ್ಮಾಣ, ಶಾಲೆಗಳಲ್ಲಿ ಗ್ರಂಥಾಲಯ ನಿರ್ಮಾಣ, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಫೌಂಡೇಷನ್ ತೊಡಗಿಸಿಕೊಂಡಿದೆ. ಸುಧಾಮೂರ್ತಿ ಅವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕನ್ನಡ, ಇಂಗ್ಲೀಷ್‌ನಲ್ಲಿ ಹಲವಾರು ಪುಸ್ತಕಗಳನ್ನು ಅವರು ಬರೆದಿದ್ದಾರೆ.
ಅವರ ಕುರಿತ ಅಚ್ಚರಿಯ ಮಾಹಿತಿ
ಭಾರತದ ಅತಿ ದೊಡ್ಡ ವಾಹನ ತಯಾರಕ ಕಂಪನಿಯಾದ ಟಾಟಾ ಇಂಜಿನಿಯರಿಂಗ್ ಮತ್ತು ಲೊಕೊಮೊಟಿವ್ ಕಂಪನಿ (ಟೆಲ್ಕೊ) ನಲ್ಲಿ ನೇಮಕಗೊಂಡ ಮೊದಲ ಮಹಿಳಾ ಇಂಜಿನಿಯರ್ ಸುಧಾಮೂರ್ತಿ ಆಗಿದ್ದಾರೆ.
29ನೇ ವಯಸ್ಸಿನಲ್ಲಿ, ಸುಧಾ ಮೂರ್ತಿ ಅವರು ತಮ್ಮ ಚೊಚ್ಚಲ ಪುಸ್ತಕ ಮಹಾಶ್ವೇತವನ್ನು ಪ್ರಕಟಿಸಲು ಯುನೈಟೆಡ್ ಸ್ಟೇಟ್ಸ್ಗೆ ತೆರಳಿದರು. ಅವರು ಈ ಮೊದಲ ಸಾಹಿತ್ಯ ಕೃತಿಯನ್ನು ತಮ್ಮ ಜೀವನ ಸಂಗಾತಿ ಮತ್ತು ಸ್ನೇಹಿತರಾಗಿದ್ದ ಪತಿ ನಾರಾಯಣ ಮೂರ್ತಿ ಅವರಿಗೆ ಅರ್ಪಿಸಿದರು.
ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಅವರು 1980 ರಲ್ಲಿ ನಾರಾಯಣ ಮೂರ್ತಿ ಅವರನ್ನು ಮದುವೆಯಾಗುವ ಮೊದಲು ಹಲವಾರು ವರ್ಷಗಳ ಕಾಲ ಕಂಪ್ಯೂಟರ್ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದರು.
1980 ರ ದಶಕದ ಆರಂಭದಲ್ಲಿ, ಸುಧಾ ಮೂರ್ತಿ ಅವರು ಕಂಪ್ಯೂಟರ್ ತಂತ್ರಜ್ಞಾನದಲ್ಲಿ ಚೆನ್ನಾಗಿ ಪರಿಣತಿ ಹೊಂದಿರದ ವ್ಯಕ್ತಿಗಳಿಗೆ ಕಂಪ್ಯೂಟರ್ ಸಂವಹನವನ್ನು ಸುಲಭಗೊಳಿಸಲು ಬಳಕೆದಾರ ಸ್ನೇಹಿ ಪ್ರೋಗ್ರಾಮಿಂಗ್ ಭಾಷೆಯನ್ನು ರಚಿಸಲು ಯೋಜನೆಯನ್ನು ಪ್ರಾರಂಭಿಸಿದರು. ಈ ಪ್ರಯತ್ನವು 1981 ರಲ್ಲಿ ಇನ್ಫೋಸಿಸ್ ಸ್ಥಾಪನೆಯಲ್ಲಿ ಉತ್ತುಂಗಕ್ಕೇರಿತು.
ಸುಧಾ ಮೂರ್ತಿ ಅವರಿಗೆ ಪ್ರಾಣಿಗಳ ಮೇಲೆ ಅಪಾರ ಪ್ರೀತಿ. ಬೀದಿ ನಾಯಿಗಳು ಮತ್ತು ಬೆಕ್ಕುಗಳನ್ನು ರಕ್ಷಿಸಲು ಮತ್ತು ಆರೈಕೆ ಮಾಡುವುದು ಅವರ ಸಮಾಜ ಸೇವೆಯಲ್ಲಿ ಒಂದಾಗಿದೆ.
ಸುಧಾ ಮೂರ್ತಿ ಅವರು ಹಲವು ಕನ್ನಡ ಶಾಲೆಗಳು, ಅನಾಥಾಶ್ರಮಗಳಿಗೆ ತಮ್ಮ ಫೌಂಡೇಶನ್ ಮೂಲಕ ನೆರವು ನೀಡುತ್ತಿದ್ದಾರೆ.



Click it and Unblock the Notifications











