Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
Varamahalakshmi vratha 2023: ವರ ಮಹಾಲಕ್ಷ್ಮೀ ಹಬ್ಬದ ದಿನ ಈ 4 ವಸ್ತುಗಳನ್ನು ಮನೆಗೆ ತಂದರೆ ಶುಭವಾಗಲಿದೆ!
ಭಾರತೀಯ ಸಂಸ್ಕೃತಿಯಲ್ಲಿ ವರ ಮಹಾಲಕ್ಷ್ಮೀ ಹಬ್ಬಕ್ಕೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಅದ್ರಲ್ಲೂ ದಕ್ಷಿಣ ಭಾರದಲ್ಲಿ ಈ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಪ್ರತಿಯೊಬ್ಬರ ಮನೆಯಲ್ಲಿಯೂ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಆಕೆಗೆ ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಲಾಗುತ್ತದೆ. ವರಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ಲಕ್ಷ್ಮೀಯನ್ನು ಅಲಂಕರಿಸಿ ವಿಶೇಷವಾಗಿ ಪೂಜಿಸಿದ್ರೆ ಸಂಪತ್ತಿನ ಅಧಿದೇವತೆ ಮನೆಗೆ ಪ್ರವೇಶ ಮಾಡುತ್ತಾಳೆ ಎನ್ನುವ ನಂಬಿಕೆಯಿದೆ.

ಪ್ರತಿ ವರ್ಷ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಲಕ್ಷ್ಮಿ ದೇವಿಗೆ ಸಮರ್ಪಿತವಾದ ವರಮಹಾಲಕ್ಷ್ಮಿ ವ್ರತವನ್ನು ಆಗಸ್ಟ್ 25 ರ ಶುಕ್ರವಾರ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಲಕ್ಷ್ಮಿ ದೇವಿಗೆ ಇಷ್ಟವಾದ ವಸ್ತುಗಳನ್ನು ಮನೆಗೆ ತರುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ಆಹ್ವಾನಿಸುತ್ತಂತೆ. ಅಷ್ಟಕ್ಕೂ ವರಮಹಾಲಕ್ಷ್ಮಿ ಹಬ್ಬದ ದಿನ ಮನೆಗೆ ಏನೆಲ್ಲಾ ವಸ್ತುಗಳನ್ನು ತರಬೇಕು ಅನ್ನೋದನ್ನು ತಿಳಿಯೋಣ.
ಪಾರಿಜಾತ ಹೂವುಗಳು
ಪಾರಿಜಾತ ಹೂವಿಗೆ ಹಿಂದೂ ಧರ್ಮ ಹಾಗೂ ಸಂಸ್ಕೃತಿಯಲ್ಲಿ ಮಹತ್ವವಾದ ಸ್ಥಾನವನ್ನು ನೀಡಲಾಗಿದೆ. ಸಮುದ್ರ ಮಂಥನದ ಸಮಯದಲ್ಲಿ ಹೊರಬರುವ 14 ವಸ್ತುಗಳಲ್ಲಿ ಪಾರಿಜಾತ ಹೂವು ಕೂಡ ಒಂದಾಗಿದೆ. ಇಂದ್ರನು ಈ ಗಿಡವನ್ನು ಸರ್ಗಲೋಕಕ್ಕೆ ತೆಗೆದುಕೊಂಡು ಹೋಗಿ ನೆಟ್ಟನು ಎಂಬ ಪ್ರತೀತಿ ಇದೆ. ಈ ಸಸ್ಯವು ಲಕ್ಷ್ಮಿ ದೇವಿಗೆ ಪ್ರಿಯವಾಗಿದೆ. ಮತ್ತು ಇಂದಿಗೂ ಈ ಸಸ್ಯವು ಭೂಮಿಯ ಮೇಲೆ ವರದಾನವಾಗಿದೆ ಎಂದು ಜನ ನಂಬುತ್ತಾರೆ. ವರಮಹಾಲಕ್ಷ್ಮೀ ಹಬ್ಬದ ದಿನ ಈ ವಿಶಿಷ್ಟ ಸಸ್ಯವನ್ನು ಮನೆಯಲ್ಲಿ ನೆಡುವುದರಿಂದ ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತೆ ಅಂತ ಹೇಳಲಾಗುತ್ತದೆ.
ಕವಡೆ
ಕವಡೆಯನ್ನು ಜ್ಯೋತಿಷಿಗಳು ಹೆಚ್ಚಾಗಿ ಬಳಸೋದನ್ನು ನಾವು ನೋಡಿರ್ತೀವಿ. ಕವಡೆಯು ಲಕ್ಷ್ಮಿ ದೇವಿಗೆ ಪ್ರಿಯವಾದ ವಸ್ತುಗಳಲ್ಲಿ ಒಂದಾಗಿದ್ಯಂತೆ. ಹೀಗಾಗಿ ವರ ಮಹಾಲಕ್ಷ್ಮೀ ಹಬ್ಬದ ದಿನದಂದು ದೇವಿಯನ್ನು ಪೂಜಿಸುವಾಗ ಕವಡೆಯನ್ನು ಲಕ್ಷ್ಮೀ ದೇವಿಗೆ ಅರ್ಪಿಸಿದ್ರೆ ಆಕೆ ಸಂತುಷ್ಟಳಾಗುತ್ತಾಳಂತೆ. ಈ ದಿನ 11 ಲಕ್ಷ್ಮಿ ಚಿಪ್ಪುಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಮತ್ತು ನಿಮ್ಮ ಮನೆಯ ಉತ್ತರ ಭಾಗದಲ್ಲಿ ಇರಿಸಿದ್ರೆ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ.
ತೆಂಗಿನಕಾಯಿ
ಸಮೃದ್ಧಿಯ ದೇವತೆಯಾದ ಲಕ್ಷ್ಮಿ ದೇವಿಗೆ ತೆಂಗಿನಕಾಯಿಗಳೆಂದರೆ ತುಂಬಾನೇ ಇಷ್ಟವಂತೆ. ವರಮಹಾಲಕ್ಷ್ಮಿ ಹಬ್ಬದಂದು ತೆಂಗಿನಕಾಯಿಯನ್ನು ಮನೆಗೆ ತಂದರೆ ಶುಭವಾಗುತ್ತೆ ಎನ್ನುವ ನಂಬಿಕೆಯಿದೆ. ಇದರಿಂದ ಸಮೃದ್ಧಿ ಹೆಚ್ಚಾಗುತ್ತೆ ಹಾಗೂ ಲಕ್ಷ್ಮೀಯ ಆಶೀರ್ವಾದದಿಂದ ಎಲ್ಲವೂ ಒಳ್ಳೆಯದಾಗುತ್ತಂತೆ. ಹೀಗಾಗಿ ಈ ಬಾರಿ ವರಮಹಾಲಕ್ಷ್ಮಿ ಹಬ್ಬದಂದು ಚಿಕ್ಕ ತೆಂಗಿನಕಾಯಿಯನ್ನು ಮನೆಗೆ ತೆಗೆದುಕೊಂಡು ಹೋಗುವುದನ್ನು ಮರೆಯಬೇಡಿ.
ಶಂಖ
ಸಮುದ್ರ ಮಂಥನದ ಸಮಯದಲ್ಲಿ ಕಾಣಿಸಿಕೊಂಡ 14 ಪವಿತ್ರ ರತ್ನಗಳಲ್ಲಿ ಈ ಶಂಖ ಕೂಡ ಒಂದಾಗಿದೆ. ಇದನ್ನು ಲಕ್ಷ್ಮಿ ದೇವಿಯ ನೆಚ್ಚಿನ ವಸ್ತುವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳಲ್ಲಿ ದಕ್ಷಿಣಾವರ್ತಿ ಶಂಖವನ್ನು ಲಕ್ಷ್ಮಿ ದೇವಿಯ ಸಹೋದರ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಈ ಶಂಖವನ್ನು ಪೂಜಿಸುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಮತ್ತು ವಿಷ್ಣುವಿನ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗುತ್ತಂತೆ. ವಿಷ್ಣು ಪುರಾಣದ ಪ್ರಕಾರ ಲಕ್ಷ್ಮಿ ದೇವಿಯು ದಕ್ಷಿಣಾವರ್ತಿ ಶಂಖದಲ್ಲಿ ನೆಲೆಸಿದ್ದಾಳೆ. ಇದರಿಂದ ಮನೆಯಲ್ಲಿ ಈ ಶಂಖವನ್ನು ಪೂಜಿಸಿದರೆ ಆ ಮನೆಯಲ್ಲಿ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ ಎಂದು ನಂಬಲಾಗಿದೆ.



Click it and Unblock the Notifications
