Dina Bhavishya 12th Aug 2023: ಪರಮ ಏಕಾದಶಿ ದಿನ ನಿಮ್ಮ ರಾಶಿಫಲ ಹೇಗಿದೆ?

ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 12ರ ರಾಶಿಫಲ ನೀಡಿದ್ದು ಈ ದಿನ ನಿಮ್ಮ ರಾಶಿಗೆ ಹೇಗಿದೆ ಎಂದು ನೋಡೋಣ...
ದಿನಾಂಕ: ಆಗಸ್ಟ್ 12
ತಿಥಿ: ಏಕಾದಶಿ
ನಕ್ಷತ್ರ: ಮೃಗಶೀರ್ಷ
ರಾಹುಕಾಲ ಬೆಳಗ್ಗೆ 10:50ರಿಂದ ಮಧ್ಯಾಹ್ನ 12:26ರವರೆಗೆ

Dina Bhavishya

ಮೇಷ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ತುಂಬಾ ಮುಖ್ಯವಾಗಿರುತ್ತದೆ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ತುಂಬಾ ಓಡಾಡಬೇಕಾಗುತ್ತದೆ. ಆದರೆ ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನವು ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕವರಲ್ಲ, ವಿಶೇಷವಾಗಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ಪಾಲುದಾರರೊಂದಿಗೆ ವಿವಾದ ಉಂಟಾಗಬಹುದು. ಹಣದ ವಿಷಯದಲ್ಲಿ ದುಬಾರಿಯಾಗಲಿದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಬರಬಹುದು. ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಅವರ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಬೆಳಗ್ಗೆ 5:15 ರಿಂದ 8:50 ರವರೆಗೆ

ಮಿಥುನ ರಾಶಿ
ಮನೆಯ ವಾತಾವರಣ ಇಂದು ಅಷ್ಟು ಸರಿಯಿರುವುದಿಲ್ಲ, ಆಸ್ತಿಗೆ ಸಂಬಂಧಿಸಿದ ಮಾತುಕತೆ ಉಂಟಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ದೊಡ್ಡ ಖರ್ಚು ಮಾಡದಿರಿ. ಕಚೇರಿಯಲ್ಲಿ ಕೆಲಸದ ಕಡೆಗೆ ಸಂಪೂರ್ಣ ಗಮನಹರಿಸಬೇಕಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ

ಕರ್ಕ ರಾಶಿ
ವ್ಯಾಪಾರಸ್ಥರು ತಮ್ಮ ವಿರೋಧಿಗಳೊಂದಿಗೆ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ಅವರು ನಿಮ್ಮ ಕೆಲವು ಪ್ರಮುಖ ಕೆಲಸಕ್ಕೆ ಅಡ್ಡಿಯಾಗಬಹುದು. ಅದೇ ಉದ್ಯೋಗಿಗಳು ಕಚೇರಿಯಲ್ಲಿ ತಮ್ಮ ಬಗ್ಗೆ ಹೆಚ್ಚು ಮಾತನಾಡುವುದಕ್ಕೆ ಹೋಗಬಾರದು, ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಸಂಗಾತಿಯೊಂದಿಗೆ ಪರಸ್ಪರ ತಿಳುವಳಿಕೆ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಸಿಂಹ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳುವ ಲಕ್ಷಣಗಳಿವೆ. ನಿಮ್ಮ ಆದಾಯ ಹೆಚ್ಚಾಗಬಹುದು. ಕಚೇರಿಯಲ್ಲಿ ಇಂದು ಪ್ರಮುಖ ದಿನವಾಗಿದೆ. ನಿಮ್ಮ ನಿಲುವನ್ನು ವಿಶ್ವಾಸದಿಂದ ಪ್ರಸ್ತುತಪಡಿಸಲು ಸಲಹೆ ನೀಡಲಾಗಿದೆ. ಈ ದಿನ ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 37
ಅದೃಷ್ಟದ ಸಮಯ: ಬೆಳಿಗ್ಗೆ 6:30 ರಿಂದ 8:35 ರವರೆಗೆ

ಕನ್ಯಾ ರಾಶಿ
ಹಣದ ವಿಷಯದಲ್ಲಿ ಇಂದು ತುಂಬಾ ಅದೃಷ್ಟದ ದಿನ. ಈ ದಿನ ಹಣವನ್ನು ಗಳಿಸಲು ಸಾಧ್ಯವಾಗುವುದು. ಬರಬೇಕಾಗಿರುವ ಹಣ ಮರಳಿ ಬರಲಿದೆ. ವೈವಾಹಿಕ ಜೀವನ ಮಧುರವಾಗಿರಲಿದೆ. ದುಡಿಯುವ ಜನರಿಗೆ ಪ್ರಗತಿಯ ಹಾದಿ ತೆರೆದುಕೊಳ್ಳುತ್ತದೆ. ವ್ಯಾಪಾರಸ್ಥರಿಗೂ ಉತ್ತಮ ಲಾಭ ದೊರೆಯಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 4 ರವರೆಗೆ

ತುಲಾ ರಾಶಿ
ವ್ಯಾಪಾರಸ್ಥರು ಇಂದು ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗಿದೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಇಂದು ನೀವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ

ವೃಶ್ಚಿಕ ರಾಶಿ
ನೀವು ಈಗಾಗಲೇ ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರೆ, ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ಕೆಲಸದ ಕಡೆಗೆ ಅಧಿಕ ಗಮನಹರಿಸಿ, ಇದರಿಂದ ಶೀಘ್ರದಲ್ಲೇ ನೀವು ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ. ಉದ್ಯಮಿಗಳಿಗೆ ಈ ದಿನ ಉತ್ತಮವಾಗಿದೆ, ವ್ಯಾಪಾರಸ್ಥರು ಲಾಭ ಗಳಿಸಬಹುದು, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಹಣಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇರುವುದಿಲ್ಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8:25 ರವರೆಗೆ

ಧನು ರಾಶಿ
ಈ ದಿನ ವಿವಾಹಿತರಿಗೆ ರೊಮ್ಯಾಂಟಿಕ್ ಆಗಿರಲಿದೆ. ನಿಮ್ಮ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ನಿರ್ಧರಿಸುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೇಗಾದರೂ, ದೊಡ್ಡ ಖರ್ಚು ಮಾಡುವ ಮೊದಲು, ನಿಮ್ಮ ಬಜೆಟ್ ಗಮನದಲ್ಲಿಟ್ಟು ಮಾಡುವುದು ಒಳ್ಳೆಯದು . ಕೆಲಸದ ಸ್ಥಳದಲ್ಲಿ ಹೆಚ್ಚು ತಮಾಷೆ ಮಾಡಲು ಹೀಗಬೇಡಿ, ಇಲ್ಲದಿದ್ದರೆ ಚಿಕ್ಕ ವಿಷಯ ದೊಡ್ಡದಾಗಬಹುದು. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ

ಮಕರ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ ಈ ದಿನ ಒಳ್ಳೆಯ ಸುದ್ದಿ ಪಡೆಯಬಹುದು. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಇತರರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡಬೇಡಿ. ಆರೋಗ್ಯಕ್ಕೆ ಸಂಬಂಧಿಸಿದಂತೆ, ಹವಾಮಾನ ಬದಲಾವಣೆಯಿಂದ, ನಿಮಗೆ ಶೀತ, ಜ್ವರ ಮುಂತಾದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಗ್ಗೆ 11:10 ರಿಂದ ಸಂಜೆ 4:10 ರವರೆಗೆ

ಕುಂಭ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಅಷ್ಟು ಅನುಕೂಲಕರವಲ್ಲ, ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಲಾಗಿದೆ. ಕೆಲವು ಕುಟುಂಬದ ಸದಸ್ಯರ ನಡವಳಿಕೆಯು ನಿಮ್ಮೊಂದಿಗೆ ಉತ್ತಮವಾಗಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಭಾವನಾತ್ಮಕವಾಗಿ ತುಂಬಾ ದುರ್ಬಲರಾಗುತ್ತೀರಿ. ನಿಮ್ಮ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 5:30 ರಿಂದ 9:15 ರವರೆಗೆ

ಮೀನ ರಾಶಿ
ಕೆಲವು ಕಾರಣಗಳಿಂದ ಮನಸ್ಸು ಚಂಚಲವಾಗಿರುತ್ತದೆ, ಇದರಿಂದ ನೀವು ನಕಾರಾತ್ಮಕತೆಯನ್ನು ಅನುಭವಿಸುವಿರಿ ಬೇಡದ ವಿಷಯಗಳಿಂದ ದೂರವಿರುವುದು ಉತ್ತಮ. ನೀವು ಒಳ್ಳೆಯದನ್ನು ಯೋಚಿಸಿದರೆ ನಿಮಗೆ ಒಳ್ಳೆಯದು ಸಂಭವಿಸುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣದ ಬಗ್ಗೆ ಅತಿಯಾದ ಚಿಂತೆ ಬೇಡ. ಕೆಲಸದ ಸ್ಥಳದಲ್ಲಿ ಉನ್ನತ ಅಧಿಕಾರಿಗಳ ಸ ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ 8 ರವರೆಗೆ

English summary

12th August 2023 Daily Horoscope Prediction in Kannada

Check Out The Dina Bhavishya (ದಿನ ಭವಿಷ್ಯ) Or Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Saturday, August 12, 2023, 4:37 [IST]
X
Desktop Bottom Promotion