Latest Updates
-
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ!
1-9 ಸಂಖ್ಯೆಯ ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮ ಸಂಖ್ಯೆ ಪ್ರಕಾರ ಮೇ ತಿಂಗಳು ನಿಮಗೆ ಹೇಗಿರಲಿದೆ?
ನಿಮ್ಮ ದಿನಾಂಕದ ಪ್ರಕಾರ ಸಂಖ್ಯಾಶಾಸ್ತ್ರದ ಸಂಖ್ಯೆ ಯಾವುದು ಎಂದು ತಿಳಿಯಬಹುದು. ಉದಾಹರಣೆಗೆ ನಿಮ್ಮ ಜನ್ಮ 29 ಆದರೆ ನಿಮ್ಮ ಜನ್ಮ ಸಂಖ್ಯೆ 2 (2+9=11,1+1=2)ಮೇ ತಿಂಗಳು ಸಂಖ್ಯಾಶಾಸ್ತ್ರದ ಪ್ರಕಾರ ನಿಮಗೆ ಹೇಗಿರಲಿದೆ ನೋಡೋಣ ಬನ್ನಿ:

ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ನಿಮಗೆ ಯಾವುದೋ ಚಿಂತೆ ಕಾಡಬಹುದು, ಇದರಿಣದಾಗಿ ನಿಮ್ಮ ಕೆಲಸದ ಮೇಲೆ ಗಮನಹರಿಸಲು ಕಷ್ಟವಾಗಬಹುದು. ನೀವು ಹೆಚ್ಚು ಆಲೋಚಿಸಿ ಮನಸ್ಸು ಕೆಡಿಸಿಕೊಳ್ಳುವ ಬದಲಿಗೆ ಗಮನವನ್ನು ಬೇರೆ ಕಡೆಗೆ ತಿರುಗಿಸಿ, ಸ್ನೇಹಿತರ ಜಿತೆ ಸಮಯ ಕಳೆಯಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ವೃತ್ತಿ ಬದುಕಿನ ಬಗ್ಗೆ ಹೇಳುವುದಾದರೆ ಹೆಚ್ಚು ಗಮನಹರಿಸಿ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ತಿಂಗಳು ನಿಮಗೆ ತುಂಬಾ ಚೆನ್ನಾಗಿರಲಿದೆ.ಈ ಅವಧಿಯಲ್ಲಿ ಒಳ್ಳೆಯ ಅವಕಾಶ ಸಿಗಲಿದೆ, ಅದನ್ನು ಬಳಸಿಕೊಳ್ಳಲು ಪ್ರಯತ್ನಿಸಿ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆದರೆ ಅವರಿಗೆ ಹೆಚ್ಚು ಸಮಯ ಕೊಡಲು ಪ್ರಯತ್ನಿಸಿ. ಒಟ್ಟಿನಲ್ಲಿ ಈ ತಿಂಗಳು ಉತ್ತಮವಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಮನಸ್ಸಿನ ಒತ್ತಡ ಕಡಿಮೆ ಮಾಡಲು ಧ್ಯಾನ, ಪ್ರಾಣಾಯಾಮ ಇವುಗಳ ಕಡೆಗೆ ಗಮನಹರಿಸಿ. ಖರ್ಚುಗಳನ್ನು ಉತ್ತಮವಾಗಿ ನಿಭಾಯಿಸುವುದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಬಹುದು. ನೀವು ಬೇರೆಯವರಿಂದ ಸಹಾಯ ನಿರೀಕ್ಷಿಸುವ ಬದಲು, ನೀವು ನಿಮ್ಮ ಸ್ವಂತ ಸಾಮರ್ಥ್ಯದ ಮೇಲೆ ಅವಲಂಬಿತರಾಗಬೇಕು. ನೀವು ಪ್ರಗತಿಯನ್ನು ಕಾಣಲು ಸಾಧ್ಯವಾಗುವುದು.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಈ ತಿಂಗಳು ನಿಮಗೆ ತುಂಬಾನೇ ಉತ್ತಮವಾಗಿದೆ. ನಿಮ್ಮ ವೃತ್ತಿ ಬದುಕಿನಲ್ಲಿ ನೀವು ಉತ್ತಮ ಫಲ ಪಡೆಯಬಹುದು. ಪ್ರೇಮಿಗಳಿಗೆ ವಿಶೇಷವಾಗಿರಲಿದೆ. ನಿಮ್ಮ ಮದುವೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯಲ್ಲಿ ಸೌಕರ್ಯ ಹೆಚ್ಚಾಗಲಿದೆ. ನೀವು ನಿಮ್ಮ ಗುರಿಯತ್ತ ಗಮನ ಹರಿಸಿದರೆ ಒಳ್ಳೆಯದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ತಿಂಗಳು ನಿಮಗೆ ಧನಾತ್ಮಕವಾಗಿರಲಿದೆ. ಈ ತಿಂಗಳು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಕೆಲಸದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳು ಹಾಗೂ ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಪ್ರತಿಫಲ ಪಡೆಯುವುದರಿಂದ ಖುಷಿಯಾಗಿರುತ್ತೀರಿ, ಆರ್ಥಿಕ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ನಿಮ್ಮೆಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ನಿಮ್ಮ ಕೆಲಸವನ್ನು ಬದಲಾಯಿಸಲು ಪ್ರಯತ್ನಿಸಿದರೆ ಈ ಅವಧಿ ಅನುಕೂಲಕರವಾಗಿದೆ. ಈ ತಿಂಗಳು ನಿಮ್ಮ ಜೀವನದಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು, ಆದರೆ ಆ ನಿರ್ಧಾರಗಳಿಂದ ನೀವು ಉತ್ತಮ ಫಲ ಪಡೆಯಲು ಸಾಧ್ಯವಾಗುವುದು. ನಿಮ್ಮ ನಡವಳಿಕೆ ಇತರರನ್ನು ಆಕರ್ಷಿಸುತ್ತದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಈ ತಿಂಗಳು ನಿಮಗೆ ಅನುಕೂಲಕರವಾಗಿದೆ. ಆಸ್ತಿಯಲ್ಲಿ ಹೂಡಿಕೆಗೆ ಈ ಅವಧಿ ತುಂಬಾನೇ ಚೆನ್ನಾಗಿರಲಿದೆ. ನೀವು ಮನೆಯಲ್ಲಿ ಕೋಪವನ್ನು ನಿಯಂತ್ರಿಸಿದರೆ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಉದ್ಯೋಗ ಬದಲಾಯಿಸಲು ಈ ಅವಧಿ ಉತ್ತಮವಾಗಿದೆ, ಅಲ್ಲದೆ ಒಂದು ಕೆಲಸ ಸಿಗುವವರೆಗೆ ಈಗ ಇರುವ ಕೆಲಸ ಬಿಡಲು ಹೋಗಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಈ ತಿಂಗಳಿನಲ್ಲಿ ಹೂಡಿಕೆಯಿಂದ ಉತ್ತಮ ಲಾಭ ಪಡೆಯಲಿದೆ. ಅವಾಹಿತರಿಗೆ ಹೊಸ ವ್ಯಕ್ತಿಯ ಆಗಮನವು ನಿಮ್ಮ ಜೀವನದಲ್ಲಿ ಸಂತೋಷ ತರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊರಗಡೆಯ ಆಹಾರ ಸೇವಿಸಬೇಡಿ. ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳ ಒಲವು ಹೆಚ್ಚಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ನಿಮ್ಮ ಕೋಪವೇ ಪ್ರಧಾನ ಶತ್ರು, ಕೋಪವನ್ನು ನಿಯಂತ್ರಿಸಿ. ಸಹೋದ್ಯೋಗಿಗಳ ಜೊತೆ ಯಾವುದೇ ತಕರಾರು ಮಾಡಬೇಡಿ. ಕುಟುಂಬ ಜೀವನಚ ಚೆನ್ನಾಗಿರಲಿದೆ, ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಈ ಅವಧಿಯಲ್ಲಿ ಆರ್ಥಿಕವಾಗಿ ಒಳ್ಳೆಯದಿದೆ.



Click it and Unblock the Notifications