Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಬಿಜೆಪಿ ಸೋತ ಹತಾಶೆಯಲ್ಲಿ ಟಿವಿ ಒಡೆದು ಬೆಂಕಿ ಹಚ್ಚಿದ ಅಭಿಮಾನಿ..!
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಬಹುತೇಕ ಎನ್‌ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗುವುದು ಖಚಿತವಾಗಿದೆ. ಇದು ನಡೆದರೆ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿ ಹುದ್ದೆ ಅಲಂಕರಿಸಿದವರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಸಹ ಸೇರಿಕೊಳ್ಳಲಿದ್ದಾರೆ.
ಇನ್ನೊಂದೆಡೆ ಬಿಜೆಪಿ ಉತ್ತರ ಭಾಗದಲ್ಲಿ ಹೇಳಿಕೊಳ್ಳುವಷ್ಟು ಸಾಧನೆ ಮಾಡಿಲ್ಲ. ಕಳೆದ ಬಾರಿಗೆ ಹೋಲಿಸಿದರೆ 50ಕ್ಕಿಂತ ಕಡಿಮೆ ಸ್ಥಾನಗಳ ಗೆದ್ದು ಸುಲಭ ಬಹುಮತ ಪಡೆದು ನಿಟ್ಟುಸಿರು ಬಿಟ್ಟಿದೆ. ಆದರೆ ಈ ಬಾರಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಬದಲಿಗೆ ಎನ್‌ಡಿಎ ಒಕ್ಕೂಟದ ಮೂಲಕ ಸರ್ಕಾರ ರಚಿಸಲಿದೆ.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಎಸ್‌ಪಿ ಹಾಗೂ ಕಾಂಗ್ರೆಸ್ ಕಮಾಲ್ ಮಾಡಿವೆ. ಬಿಜೆಪಿ ಅಲ್ಲಿ ಕಡಿಮೆ ಸ್ಥಾನ ಗೆಲ್ಲುವ ಮೂಲಕ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಈ ನಡುವೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿ ಸೋಲು ಅನುಭವಿಸಿದ ಕಾರಣ ಆಗ್ರಾದಲ್ಲಿರುವ ಬಿಜೆಪಿ ಅಭಿಮಾನಿಯೊಬ್ಬರು ಟಿವಿಯನ್ನೇ ಒಡೆದು ಪುಡಿ ಮಾಡಿದ್ದಾರೆ.
ತಮ್ಮ ನೆಚ್ಚಿನ ನಾಯಕನ ಸೋಲು ಸಹಿಸಲಾಗದೆ ಅವರು ಟಿವಿಯನ್ನೇ ಒಡೆದು ಹಾಕಿದರು. ರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಗೋವಿಂದ್ ಪರಾಶರ್ ತಮ್ಮ ಕಚೇರಿಯಲ್ಲಿದ್ದ ಟಿವಿಯನ್ನು ಒಡೆದು ಆಕ್ರೋಶ ಹೊರಹಾಕಿದರು. ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಗವಿಲ್ಲ ಎಂದು ತಿಳಿದ ಅವರು ಕಚೇರಿಯಲ್ಲಿದ್ದ ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ.
RHP ರಾಷ್ಟ್ರೀಯ ಅಧ್ಯಕ್ಷ ಮತ ಏಣಿಕೆ ಕಾರ್ಯ ನಡೆಯುತ್ತಿರುವುದನ್ನು ಟಿವಿಯಲ್ಲಿ ತೋರಿಸುತ್ತಿರುವುದನ್ನು ನೋಡುತ್ತಿದ್ದಾರೆ. ಈ ವೇಳೆ ಬಿಜೆಪಿ ಬಹುಮತ ಪಡೆಯುವಲ್ಲಿ ಹಿನ್ನಡೆ ಅನುಭವಿಸಿರುವುದನ್ನು ಟಿವಿಯಲ್ಲಿ ತೋರಿಸುತ್ತಿದ್ದಂತೆ ಆಕ್ರೋಶಗೊಂಡ ಅವರು ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅವರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಹಿಂಬದಿಯಲ್ಲಿರುವುದನ್ನು ಗಮನಿಸಬಹುದು. ಟಿವಿಯನ್ನು ಎರಡು ಮೂರು ಎತ್ತಿ ಎಸೆದ ಬಳಿಕ ಕಾಲಿನಿಂದ ತುಳಿಯುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಅಷ್ಟಕ್ಕೆ ಅವರ ಹತಾಶೆ ಕಡಿಮೆಯಾಗಲಿಲ್ಲ ಬಳಿಕೆ ಟಿವಿಗೆ ಬೆಂಕಿ ಹಚ್ಚಿ ಸುಡಲು ಮುಂದಾಗಿದ್ದಾರೆ. ಅವರು ಟಿವಿಯ ಮೇಲೆ ಯಾವುದೋ ದ್ರವವನ್ನು ಸುರಿಯುತ್ತಾರೆ. ಬಳಿಕ ಬೆಂಕಿ ಕಡ್ಡಿಯನ್ನು ಹಚ್ಚಲು ಮುಂದಾಗುತ್ತಾರೆ.
ಅವರ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ಅವರ ಹತಾಶೆಗೆ ಮತ್ತಷ್ಟು ಎಣ್ಣೆ ಸುರಿಯುವ ಯತ್ನ ಮಾಡಿದ್ದಾರೆ. ನಾವು ಈ ರೀತಿ ವರ್ತನೆ ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳಲ್ಲಿ ಮಾತ್ರ ನೋಡಿದ್ದೇವು. ಭಾರತದ ಮೇಲೆ ಸೋತಾಗಲೆಲ್ಲ ಅವರು ಮನೆಯಲ್ಲಿ ಟಿವಿಗಳು ಒಡೆಯುತ್ತಿದ್ದವು, ಇಲ್ಲಿಯೂ I.N.D.I.A ಗೆದ್ದಿದೆ ಹೀಗಾಗಿ ಟಿವಿಗಳನ್ನು ಒಡೆಯಲಾಗುತ್ತಿದೆ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಅಲ್ಲದೆ ಇವರು ಬಿಜೆಪಿ ಸೋತಿದ್ದಕ್ಕೆ ಟಿವಿ ಒಡೆಯುತ್ತಿದ್ದಾರೆ ಎಂದು ಕಾಣಿಸುತ್ತಿಲ್ಲ ಬದಲಿಗೆ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಿದೆ ಎಂಬ ಕೋಪದಲ್ಲಿ ಹೀಗೆ ಮಾಡಿದ್ದಾರೆ ಎಂದು ಮತ್ತೊಬ್ಬರು ಬರೆದಿದ್ದಾರೆ. ಮತ್ತೆ ಕೆಲವರು ಟಿವಿ ಒಡೆದು ಅದಕ್ಕೆ ಬೆಂಕಿ ಹಚ್ಚುವ ಬದಲು ಇಡಿ ಕಚೇರಿಗೆ ಒಂದೇ ಬಾರಿಗೆ ಇಡಬಹುದಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಸದ್ಯ ಚುನಾವಣೆ ಫಲಿತಾಂಶ ಹೊರಬಿದ್ದು, ಸರ್ಕಾರ ರಚನೆಯ ಕಾದಾಟ ಆರಂಭವಾಗಿದೆ. ದೆಹಲಿ ನಾಯಕರು ಈಗ ಸರ್ಕಾರ ರಚನೆ ಕಾರ್ಯದಲ್ಲಿ ತೊಡಗಿದ್ದು, ಇನ್ನೆರಡು ದಿನದಲ್ಲಿ ಪೂರ್ಣ ಚಿತ್ರಣ ಸಿಗಲಿದೆ.



Click it and Unblock the Notifications
