Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಈ ವರ್ಷ ಸಾಮಾನ್ಯಕ್ಕಿಂತ ಉತ್ತಮ ಮಾನ್ಸೂನ್..! ಸೌತ್ ಏಷ್ಯಾ ಹವಾಮಾನ ತಜ್ಞರಿಂದ ಮುನ್ಸೂಚನೆ..!
ರಾಜ್ಯದಲ್ಲಿ ಸದ್ಯಕ್ಕೆ ಮಳೆಯಾಗದೆ ತಾಪಮಾನ ಉತ್ತುಂಗದಲ್ಲಿದೆ. ಮುಂಗಾರು ಪೂರ್ವ ಮಳೆಯಾಗಬೇಕಿದ್ದ ಸಮಯದಲ್ಲೂ ಮಳೆ ಕಣ್ಣಾಮುಚ್ಚಾಲೆ ಆಡಿದೆ. ರಾಜ್ಯದ ಕೆಲವೇ ಕೆಲವು ಭಾಗದಲ್ಲಿ ಮಾತ್ರ ಮಳೆಯ ಸಿಂಚನವಾಗಿ ಬಹುತೇಕ ಕಡೆಗಳಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣವಾಗಿದೆ.
ಅದರಲ್ಲೂ ರಾಜ್ಯದ ಉತ್ತರ ಭಾಗ ಹಾಗೂ ಬೆಂಗಳೂರು ಈ ಬಾರಿ ಮಳೆಯ ಕೊರತೆಗೆ ಒಳಗಾಗಿದ್ದು, ತಾಪಮಾನ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ. ರಾಜ್ಯದ ಬಹುತೇಕ ಕಡೆ ಬರ ಉಂಟಾಗಿದ್ದು, ಜಲಾಶಯಗಳ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಈ ನಡುವೆ ಇಡೀ ದೇಶವೇ ಖುಷಿಪಡುವಂತಹ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಇದು ನಮ್ಮ ದೇಶದ ಇಲಾಖೆ ಒಂದೇ ಅಲ್ಲ ಏಷ್ಯಾದ ಬಹುತೇಕ ಹವಾಮಾನ ಇಲಾಖೆಗಳು ಈ ಖುಷಿ ಸುದ್ದಿ ನೀಡಿದೆ. ಅದೇನೆಂದರೆ ಈ ಬಾರಿಯ ಮಾನ್ಸೂನ್ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ ಎಂದು ಅಭಿಪ್ರಾಯ ಪಟ್ಟಿದೆ.
ದಕ್ಷಿಣ ಏಷ್ಯಾದ ಬಹುತೇಕ ಭಾಗಗಳಲ್ಲಿ 2024 ನೈಋತ್ಯ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಸೌತ್ ಏಷ್ಯನ್ ಕ್ಲೈಮೇಟ್ ಔಟ್ಲುಕ್ ಫೋರಮ್ ಮಾಹಿತಿ ಹಂಚಿಕೊಂಡಿದೆ. ಈ ಸೂಚನೆಯ ಪ್ರಕಾರ ಭಾರತದಲ್ಲೂ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ನಿರೀಕ್ಷಿಸಬಹುದಿದೆ.
ಭಾರತದಲ್ಲಿ ಸಾಮಾನ್ಯವಾಗಿ ಜೂನ್ ಆರಂಭದಲ್ಲಿ ಮಾನ್ಸೂನ್ ಆರಂಭವಾಗಲಿದೆ. ಆದರೆ ಈ ಬಾರಿ ಈ ಮಾನ್ಸೂನ್ ಮಳೆ ಸ್ವಲ್ಪ ತಡವಾಗುವ ಸಂಭವವಿದ್ದರೂ, ಆಗಸ್ಟ್ ಹಾಗೂ ಸೆಪ್ಟೆಂಬರ್ ವೇಳೆ ಮಳೆ ಪ್ರಮಾಣ ಉತ್ತುಂಗ ಮಟ್ಟ ತಲುಪಲಿದೆ ಎಂದು ತಿಳಿಸಲಾಗಿದೆ.
2024ರ ನೈಋತ್ಯ ಮಾನ್ಸೂನ್ ಋತುವಿನಲ್ಲಿ (ಜೂನ್-ಸೆಪ್ಟೆಂಬರ್) ದಕ್ಷಿಣ ಏಷ್ಯಾದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಉತ್ತರ, ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ಸಾಮಾನ್ಯಕ್ಕಿಂತ ಕಡಿಮೆ ಮಳೆ ಬೀಳುವ ಸಾಧ್ಯತೆಯಿದೆ ಎಂದು ಸೌತ್ ಏಷ್ಯನ್ ಕ್ಲೈಮೇಟ್ ಔಟ್ಲುಕ್ ಫೋರಮ್ (SASCOF) ತಿಳಿಸಿದೆ.
ಈ ವರ್ಷದಲ್ಲಿ ಪೆಸಿಫಿಕ್ ಸಾಗರದ ಮೇಲೆ ಬಿದ್ದಿರುವ ಹಿಮದ ಹೊದಿಕೆಯು ಕಳೆದ 58 ವರ್ಷದಲ್ಲಿ ಕಡಿಮೆ ಎನ್ನಲಾಗಿದ್ದು, ಈ ಕಾರಣದಿಂದಾಗಿ ಅಲ್ಲಿ ಎನ್ ನಿನೊ ಸದರ್ನ್ ಆನಿಲೇಷನ್ ಪರಿಸ್ಥಿತಿ ಹೆಚ್ಚಾಗಿದೆ. ಈ ಕಾರಣದಿಂದಾಗಿ ಈ ಬಾರಿಯ ಮಾನ್ಸೂನ್ ಮೇಲೆ ಅದರ ಪರಿಣಾಮ ಹೆಚ್ಚಾಗಿರಲಿದೆ. ಇದು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ತರುವಲ್ಲಿ ಪ್ರಮುಖ ಕಾರಣವಾಗಿದೆ ಎಂದು ಅಂತಾರಾಷ್ಟ್ರೀಯ ತಜ್ಞರ ತಂಡ ವಿಶ್ಲೇಷಿಸಿದೆ.
ಇತ್ತ ರಾಜ್ಯದ ಪರಿಸ್ಥಿತಿ ನೋಡುವುದಾದರೆ ಈ ವರ್ಷ ಮಾನ್ಸೂನ್ ತಡವಾಗಿ ಆರಂಭಗೊಂಡರು ಮಧ್ಯ ಮಳೆಗಾಲದಲ್ಲಿ ಉತ್ತಮ ಮಳೆ ಬೀಳಲಿದೆ ಎಂದು ಈ ಹಿಂದೆಯೇ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆದರೆ ರಾಜ್ಯದಲ್ಲಿ ಬರಗಾಲ ಯಾವ ಪ್ರಮಾಣಕ್ಕೆ ತಲುಪಿದೆ ಅಂದರೆ ರಾಜ್ಯದ ಬಹುತೇಕ ಜಲಾಶಯಗಳು ಈಗ ಬರಿದಾಗುತ್ತಿವೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ.25ಕ್ಕಿಂತ ಕಡಿಮೆಯಾಗಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಕೇವಲ 217.75 ಟಿಎಂಸಿ ನೀರು ಮಾತ್ರ ಬಾಕಿ ಉಳಿದಿದೆ. ಇವುಗಳ ಒಟ್ಟು ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದೆ. ಆದರೆ ಬರಗಾಲದ ಹೊಡೆತಕ್ಕೆ ನೀರು ಸಾಮರ್ಥಕ್ಕಿಂತ ಶೇ.25ರಷ್ಟು ಕಡಿಮೆಯಾಗಿದೆ.
ಮೇ ತಿಂಗಳ ಹವಾಮಾನ ವರದಿ ಏನು?
ಇನ್ನು ಮೇ ತಿಂಗಳಲ್ಲಿ ರಾಜ್ಯದಲ್ಲಿ ಮಳೆ ಬೀಳುವ ಸಂಭವವಿದೆ. ಮೊದಲ ವಾರದ ನಂತರ ರಾಜ್ಯದ ಬಹುತೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಏಪ್ರಿಲ್‌ನಲ್ಲಿ ರಾಜ್ಯ 55 ಮಿ.ಮೀ ಮಳೆ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅಷ್ಟು ಮಳೆಯಾಗಿಲ್ಲ. ಹೀಗಾಗಿ ಮೇ ತಿಂಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಇಡಲಾಗಿದೆ.



Click it and Unblock the Notifications
