Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ನಟ, ರಾಜಕಾರಣಿ ಕೆ.ಶಿವರಾಂ ನಿಧನ..! ಅವರ ಸಿನಿಮಾ, ರಾಜಕೀಯ ಜೀವನ ಮಾಹಿತಿ ಇಲ್ಲಿದೆ.!
ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಕೆ. ಶಿವರಾಂ (70) ಇಂದು ವಿಧಿವಶರಾಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕಳೆದ 20 ದಿನಗಳಿಂದ ಶಿವರಾಂ ಅವರು ಬೆಂಗಳೂರಿನ ಹೆಚ್‌ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಸುತ್ತಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. ಕೆ ಶಿವರಾಮ್ ನಟನಾಗಿ ಅಷ್ಟೇ ಅಲ್ಲದೇ ಉತ್ತಮ ರಾಜಕಾರಣಿಯಾಗಿಯೂ ಜನಪ್ರಿಯತೆ ಪಡೆದಿದ್ದರು.

ಯಾರು ಈ ಕೆ.ಶಿವರಾಂ
ಕೆ ಶಿವರಾಂ 1953ರ ಏಪ್ರಿಲ್ 6ರಂದು ರಾಮನಹಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದ್ದರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ ಇವರು, ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿದ ಶಿವರಾಮ್, ನಂತರ 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಎಷ್ಟು ಸಿನಿಮಾದಲ್ಲಿ ನಟಿಸಿದ್ದರು?
90ರ ಕಾಲಘಟ್ಟದಲ್ಲಿ ಕನ್ನಡ ಸಿನಿಮಾ ಪ್ರೇಕ್ಷಕರ ಪಾಲಿನ ನೆಚ್ಚಿನ ಹೀರೋ ಆಗಿದ್ದರು. ಸರ್ಕಾರಿ ಹುದ್ದೆಯಲ್ಲಿದ್ದ ಅವರು ಕೆಲಸಕ್ಕೆ ರಾಜೀನಾಮೆ ನೀಡಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಕೆ.ಶಿವರಾಂ 'ಬಾನಲ್ಲೆ ಮಧುಚಂದ್ರಕ್ಕೆ', ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ 3, ಪ್ರತಿಭಟಬೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಚಿತ್ರದಲ್ಲಿ ನಟಿಸಿದ್ದರು. ಕನ್ನಡ ಸಿನಿಮಾ ಇಂಡಸ್ಟ್ರಿ ಪಾಲಿಗೆ ತುಂಬಾ ಲಕ್ಕಿ ಹೀರೋ ಅನ್ನಿಸಿಕೊಂಡಿದ್ದರು. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನ ಮಾಡಿದ್ದ ಬಾ ನಲ್ಲೆ ಮಧು ಚಂದ್ರಕೆ ಸಿನಿಮಾ ಹಿಟ್ ಆಗಿತ್ತು. ಅಲ್ಲದೆ ಹತ್ತಾರು ಸಿನಿಮಾದಲ್ಲಿ ಪೋಷಕ ನಟರಾಗಿಯೂ ಕಾಣಿಸಿಕೊಂಡಿದ್ದರು. ಅವರು ಕೊನೆಯದಾಗಿ 2017ರಲ್ಲಿ ಟೈಗರ್ ಎಂಬ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಬಿಟ್ಟರೆ ಮತ್ಯಾವ ಸಿನಿಮಾದಲ್ಲಿಯೂ ಬಣ್ಣ ಹಚ್ಚಲಿಲ್ಲ. ಇದಾಗಿ ಹಲವು ವರ್ಷ ಚಿತ್ರರಂಗದಿಂದ ದೂರ ಉಳಿದರು.
ರಾಜಕೀಯ ಎಂಟ್ರಿ
2013ರಲ್ಲಿ ನಿವೃತ್ತಿಯ ನಂತರ ಮೊದಲು ಅವರ ರಾಜಕೀಯ ಜೀವನ ಆರಂಭಗೊಂಡಿದ್ದು ಜೆಡಿಎಸ್ ಪಕ್ಷದ ಮೂಲಕ. 2014ರಲ್ಲಿ ಲೋಕಸಭೆ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ ಅದೇ ವರ್ಷ ದಲಿತರಿಗೆ ಸಿಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇದ್ದಾಗ ಬಿಜೆಪಿ ಸೇರಿದರು. ಕೊನೆಯ ವರೆಗೂ ಬಿಜೆಪಿಯಲ್ಲಿ ಉಳಿದರು. ಆದರೆ ಕೆಲವು ವರ್ಷದಿಂದ ರಾಜಕೀಯದಿಂದ ದೂರ ಉಳಿದಿದ್ದ ಅವರು, ಅನಾರೋಗ್ಯಕ್ಕೆ ಒಳಗಾಗಿದ್ದರು.



Click it and Unblock the Notifications

