Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಭಾರತದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನಟಿ ದೀಪಿಕಾ ಪಡುಕೋಣೆ ನೇಮಕ!
ವ್ಯಕ್ತಿಯೊಬ್ಬರಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯಓ ಹಾಗೆ ಮಾನಸಿಕ ಆರೋಗ್ಯ ಕೂಡ ಅಷ್ಟೇ ಮುಖ್ಯವಾಗುತ್ತದೆ. ಅದ್ರಲ್ಲೂ ಭಾರತದಲ್ಲಿ ಮಾನಸಿಕ ಆರೋಗ್ಯ ಕುರಿತಾದ ದೊಡ್ಡ ಆತಂಕವಿದೆ. ಭಾರತದ ಬಹುತೇಕರು ಒತ್ತಡ, ಆತಂಕ ಸೇರಿದಂತೆ ಹಲವು ರೀತಿಯ ಮಾನಸಿಕ ಸಮಸ್ಯೆಗಳ ಹೊಂದಿರುವುದು ನೋಡಬಹುದು.
ಸದ್ಯ ಈ ಮಾನಸಿಕ ಆರೋಗ್ಯ ಸುಧಾರಣೆ ಸಂಬಂಧವಾಗಿ ಆರೋಗ್ಯ ಇಲಾಖೆ ಹಲವು ರೀತಿಯ ಯೋಜನೆಗಳ ರೂಪಿಸುವುದು ನೋಡಬಹುದು. ಈಗ ಮಾನಸಿಕ ಆರೋಗ್ಯ ರಾಯಭಾರಿಯನ್ನಾಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ನೇಮಿಸಿದೆ. ದಿ ಲೈವ್ ಲವ್ ಲಾಫ್ ಎಂಬ ಫೌಂಡೇಶನ್ ನಡೆಸುತ್ತಿರುವ ದೀಪಿಕಾ ಪಡುಕೋಣೆಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನೇಮಿಸಿದೆ.

ಭಾರತದ ಮಾನಸಿಕ ಆರೋಗ್ಯ ಬೆಂಬಲ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಯೋಗಕ್ಷೇಮದ ಕುರಿತಾಗಿ ಮುಕ್ತ ಮಾತುಕತೆಯ ಉತ್ತೇಜಿಸುವ ಸಲುವಾಗಿ ನಟಿಯನ್ನು ನೇಮಿಸಿರುವ ಹಿಂದಿನ ಗುರಿ ಹೊಂದಲಾಗಿದೆ. ಹಾಗೆ ಮುಂಬರುವ ಹಲವು ಮಾನಸಿಕ ಆರೋಗ್ಯ ಸುಧಾರಣೆ ಯೋಜನೆಗಳಲ್ಲಿ ದೀಪಿಕಾ ಪಡುಕೋಣೆ ಸಕ್ರೀಯವಾಗಿ ಭಾಗಿಯಾಗಲಿದ್ದಾರೆ.
ದೀಪಿಕಾ ಪಡುಕೋಣೆ ಅವರೊಂದಿಗಿನ ಪಾಲುದಾರಿಕೆಯು ಭಾರತದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು, ಕಳಂಕವನ್ನು ಕಡಿಮೆ ಮಾಡಲು ಚರ್ಚೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮಾನಸಿಕ ಆರೋಗ್ಯವನ್ನು ಸಾರ್ವಜನಿಕ ಆರೋಗ್ಯದ ಅವಿಭಾಜ್ಯ ಅಂಶವಾಗಿ ಎತ್ತಿ ತೋರಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಜೆ ಪಿ ನಡ್ಡಾ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ಸೇವೆ ಸಲ್ಲಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಭಾರತವು ಮಾನಸಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಈ ಕುರಿತಾದ ಸಾಧನೆಯನ್ನು ಹೆಚ್ಚಿಸಲು ಮತ್ತು ನಮ್ಮ ದೇಶದ ಮಾನಸಿಕ ಆರೋಗ್ಯ ಚೌಕಟ್ಟನ್ನು ಮತ್ತಷ್ಟು ಬಲಪಡಿಸಲು ಸಚಿವಾಲಯದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ನಟಿ ದೀಪಿಕಾ ಪಡುಕೋಣೆ ಕೂಡ ಸಂತಸ ಹಂಚಿಕೊಂಡಿದ್ದಾರೆ.
ಈ ಮೂಲಕ ದೇಶದ ನಾಗರಿಕರಿಗೆ ಮಾನಸಿಕ ಆರೋಗ್ಯ ಕುರಿತಾದ ಮಾಹಿತಿ ನೀಡುವುದು, ಶಿಕ್ಷಣ, ಯೋಜನೆಗಳು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲ್ಲಿದ್ದಾರೆ. ಸರ್ಕಾರಿ ಬೆಂಬಲಿತ ಕಾರ್ಯಕ್ರಮಗಳ ಜೊತೆ ಕೈ ಜೋಡಿಸಲಿದ್ದಾರೆ. ಹಾಗೆ ದೇಶದ ಕೊನೆಯ ವ್ಯಕ್ತಿಗೂ ಈ ಜಾಗೃತಿ ಅಭಿಯಾನಗಳ ಮಾಹಿತಿ ಸಿಗುವಂತೆ ನೋಡಿಕೊಳ್ಳಲಿದ್ದಾರೆ.
ಹತ್ತು ವರ್ಷದ ಹಿಂದೆ ಅಂದರೆ 2015ರಲ್ಲಿ ದಿ ಲೈವ್ ಲವ್ ಲಾಫ್ ಎಂಬ ಸಂಸ್ಥೆಯನ್ನು ಅವರು ಆರಂಭಿಸಿದ್ದರು. ಈ ಮೂಲಕ ಮಾನಸಿಕ ಆರೋಗ್ಯ ಸುಧಾರಣೆಗಾಗಿ ಹಲವು ರೀತಿಯ ಪ್ರಯತ್ನಗಳ ಮಾಡಿದ್ದರು. ಭಾರತದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಯ ಭವಿಷ್ಯವು ಯೋಗ ಮತ್ತು ಧ್ಯಾನದಂತಹ ಭಾರತೀಯ ಸಂಪ್ರದಾಯಗಳೊಂದಿಗೆ ವಿಜ್ಞಾನವನ್ನು ಮಿಶ್ರಣ ಮಾಡುವುದರಲ್ಲಿ ಮತ್ತು ಮಾನಸಿಕ ಆರೋಗ್ಯ ಸಂಭಾಷಣೆಗಳನ್ನು ದೈನಂದಿನ ಜೀವನದ ಸಾಮಾನ್ಯ ಭಾಗವನ್ನಾಗಿ ಮಾಡುವುದರಲ್ಲಿದೆ ಎಂದು ದೀಪಿಕಾ ಪಡುಕೋಣೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.
2017ರಲ್ಲಿ ದಿ ಲ್ಯಾನ್ಸೆಟ್ ಅಂದಾಜಿನ ಪ್ರಕಾರ ಸುಮಾರು 197 ಮಿಲಿಯನ್ ಭಾರತೀಯರು ಮಾನಸಿಕ ಅಸ್ವಸ್ಥತೆಗಳನ್ನು ಹೊಂದಿದ್ದಾರೆ, ಅವರಲ್ಲಿ 45 ಮಿಲಿಯನ್‌ಗಿಂತಲೂ ಹೆಚ್ಚು ಜನರು ಖಿನ್ನತೆಯಂತಹ ಸಮಸ್ಯೆಗಳ ಹೊಂದಿದ್ದಾರೆ. ಇತ್ತೀಚಿನ ಅಧ್ಯಯನಗಳು 10.5ರಷ್ಟು ಭಾರತೀಯರು ರೋಗನಿರ್ಣಯ ಮಾಡಬಹುದಾದ ಮಾನಸಿಕ ಅಸ್ವಸ್ಥತೆಯ ಹೊಂದಿದ್ದಾರೆ ಎಂದು ಅದರಲ್ಲಿ ಬಹುತೇಕರು ಚಿಕಿತ್ಸೆ ಪಡೆಯುವ ಕಡೆ ಗಮನವಿಡುವುದಿಲ್ಲ ಎಂದು ಸಹ ತಿಳಿದುಬಂದಿದೆ.



Click it and Unblock the Notifications
