Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ: ಬೀಗರ ಆಸ್ತಿ ಎಷ್ಟು ಕೋಟಿ ಗೊತ್ತಾ?
ಭಾರತದ ಶ್ರೀಮಂತ ಉದ್ಯಮಿ ಅಂಬಾನಿ ಪುತ್ರನ ವಿವಾಹ ಮಹೋತ್ಸವ ಈಗ ದೇಶದಾದ್ಯಂತ ಸುದ್ದಿ ಮಾಡುತ್ತಿದೆ. ಉದ್ಯಮಿ ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ಭರ್ಜರಿ ತಯಾರಿ ನಡೆದಿದೆ. ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಮದುವೆ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ. ಮದುವೆ ಮೂರು ದಿನಗಳ ಕಾಲ ನಡೆಯಲಿದ್ದು, ಸ್ವರ್ಗ ಲೋಕವನ್ನೇ ಭೂಮಿ ಮೇಲೆ ಸೃಷ್ಟಿಸಿದ್ದಾರೆ.
ಮೂರು ದಿನಗಳು ನಡೆಯಲಿರುವ ಮದುವೆ ಸಮಾರಂಭಕ್ಕೆ ಬಾಲಿವುಡ್ ಸ್ಟಾರ್‌ಗಳ, ಕ್ರೀಡಾ ಲೋಕದ ದಿಗ್ಗಜರು, ದೇಶದ ಪ್ರತಿಷ್ಠಿತ ಉದ್ಯಮಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ನೂರಾರು ಗಣ್ಯರು ಭಾಗಿಯಾಗಲಿದ್ದಾರೆ. ಹೀಗಾಗಿ ಈ ಮದುವೆ ಒಟ್ಟಾರೆ ಖರ್ಚು ಬರೋಬ್ಬರಿ 5 ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ.

ಅನಂತ್ ಅಂಬಾನಿ ನಾಳೆ ಕೈ ಹಿಡಿಯಲಿರುವ ರಾಧಿಕಾ ಮರ್ಚೆಂಟ್ ಧನಿಕ ಉದ್ಯಮಿ ವಿರೇನ್ ಮರ್ಚೆಂಟ್ ಪುತ್ರಿ ಎಂದು ತಿಳಿದಿದೆ. ಇವರೂ ಸಹ ಉದ್ಯಮಿಗಳೇ, ಕೋಟಿ ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ವಿರೇನ್ ಎನ್‌ಕೋರ್ ಹೆಲ್ತ್‌ಕೇರ್ ಸಂಸ್ಥೆಯ ಮಾಲೀಕರಾಗಿದ್ದಾರೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಬಹುಕಾಲದ ಗೆಳೆಯರಾಗಿದ್ದಾರೆ.
ನೂತನ ವಧು ವರರಿಗೆ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಭರ್ಜರಿ 640 ಕೋಟಿ ರೂ. ಮೌಲ್ಯದ ಐಷಾರಾಮಿ ವಿಲ್ಲಾವನ್ನು ಉಡುಗೊರೆಯಾಗಿ ನೀಡಿದ್ದಾರೆ. ದುಬೈನಲ್ಲಿರುವ ಪಾಮ್ ಜಮೈರಾಹ್‌ನಲ್ಲಿರುವ 3000 ಚದರ ಅಡಿ ವಿಸ್ತೀರ್ಣದ ಈ ವಿಲ್ಲಾವನ್ನು ಅಂಬಾನಿ ಕುಟುಂಬ ಖರೀದಿಸಿದ್ದು, ಹೊಸ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇದು ದುಬೈನ 2ನೇ ಅತ್ಯಂತ ದುಬಾರಿ ನಿವಾಸ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಅಂಬಾನಿ ತಮ್ಮ ಪುತ್ರ ಅನಂತ್ ವಿವಾಹವು 3 ದಿನಗಳ ಕಾಲ ನಡೆಯಲಿದ್ದು, ಅರಶಿಣ ಶಾಸ್ತ್ರದ ಮೂಲಕ ಸಂಪ್ರದಾಯಗಳು ಆರಂಭಗೊಂಡಿವೆ. ಬಳಿಕ ಮೆಹಂದಿ ಶಾಸ್ತ್ರ, ಆಶೀರ್ವಾದ ಕಾರ್ಯಕ್ರಮ, ಮಂಗಳ ಉತ್ಸವದಂತಹ ಕಾರ್ಯಕ್ರಮಗಳು ನಿಗದಿಯಾಗಿವೆ.
ಯಾರೆಲ್ಲಾ ಅತಿಥಿಗಳು ಭಾಗಿ?
ಅನಂತ್ ಅಂಬಾನಿ ಮದುವೆಗೆ ಬಾಲಿವುಡ್ ನಟರು ಹಾಗೂ ರಾಜಕಾರಣಿಗಳ ದಂಡೇ ಸೇರಲಿದೆ. ಅದರಲ್ಲೂ ಸಲ್ಮಾನ್ ಖಾನ್, ಶಾರುಖ್ ಖಾನ್, ಅಜಯ್ ದೇವಗನ್, ಆಮಿರ್ ಖಾನ್, ಕಾಜೊಲ್, ರಣಬೀರ್ ಕಪೂರ್, ಅಕ್ಷಯ್ ಕುಮಾರ್, ಕಾಜೊಲ್, ಐಶ್ವರ್ಯ ರೈ ಬಚ್ಚನ್, ಅಭಿಷೇಕ್ ಸೇರಿ ಪ್ರಮುಖ ಕಲಾವಿದರು ಭಾಗಿಯಾಗುವ ನಿರೀಕ್ಷೆ ಇದೆ. ಇತ್ತ ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಲಾಗಿದ್ದು, ಭಾಗಿಯಾಗುವ ನಿರೀಕ್ಷೆ ಇದೆ. ಈಗಾಗಲೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗಿಯಾಗಿದ್ದಾರೆ.
ವೀರೇನ್ ಮರ್ಚೆಂಟ್ ಆಸ್ತಿ ಎಷ್ಟು ಗೊತ್ತಾ?
ರಾಧಿಕಾ ಮರ್ಚೆಂಟ್ ಅವರ ತಂದೆ ವೀರೇನ್ ಮರ್ಚೆಂಟ್ ಎನ್‌ಕೋರ್ ಹೆಲ್ತ್‌ಕೇರ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಆಗಿದ್ದಾರೆ. ಇದು ದೇಶದ ಅತೋ ದೊಡ್ಡ ಔಷಧಿ ವಿತರಣಾ ಸಂಸ್ಥೆಯಲ್ಲಿ ಒಂದಾಗಿದೆ. ರಾಧಿಕಾ ಮರ್ಚೆಂಟ್ ಸಹ ಈ ಸಂಸ್ಥೆಯ ನಿರ್ದೇಶಕರಾಗಿ ಕೆಲಸ ಮಾಡುತ್ತಾರೆ.
ವೀರೇನ್ ಮರ್ಚೆಂಟ್ 755 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಎನ್‌ಕೋರ್ ಹೆಲ್ತ್‌ಕೇರ್‌ನ ಸಿಇಒ ಅಲ್ಲದೆ ಅನೇಕ ದೊಡ್ಡ ಕಂಪನಿಗಳ ನಿರ್ದೇಶಕರೂ ಆಗಿದ್ದಾರೆ, ಇದರಲ್ಲಿ ಎನ್‌ಕೋರ್ ಬ್ಯುಸಿನೆಸ್ ಸೆಂಟರ್ ಪ್ರೈವೇಟ್ ಲಿಮಿಟೆಡ್, ಎನ್‌ಕೋರ್ ನ್ಯಾಚುರಲ್ ಪಾಲಿಮರ್ಸ್ ಪ್ರೈವೇಟ್ ಲಿಮಿಟೆಡ್, ZYG ಫಾರ್ಮ್ಸ್ ಮುಂತಾದ ಹೆಸರುಗಳಿವೆ. ಇನ್ನು ಪುತ್ರಿ ರಾಧಿಕಾ ಮರ್ಚೆಂಟ್ ಅವರ ಸ್ವಂತ ಆಸ್ತಿ ಸುಮಾರು 8ರಿಂದ 10 ಕೋಟಿ ರೂಪಾಗಿ ಆಗಿರಬಹುದು ಎಂದು ಅಂದಾಜಿಸಲಾಗಿದೆ.



Click it and Unblock the Notifications

