Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ
ಆಗಸ್ಟ್ 1 ದಿನ ಭವಿಷ್ಯ: ತಿಂಗಳ ಮೊದಲ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ ತಿಂಗಳ ಮೊದಲ ದಿನ 12 ರಾಶಿಗಳಿಗೆ ಹೇಗಿದೆ ಎಂದು ನೋಡೋಣ ಬನ್ನಿ:
ದಿನಾಂಕ: ಆಗಸ್ಟ್ 1
ತಿಥಿ: ಪೂರ್ಣಿಮಾ
ನಕ್ಷತ್ರ: ಉತ್ತರ ಆಷಾಢ
ಪಕ್ಷ:ಶುಕ್ಲ ಪಕ್ಷ
ರಾಹುಕಾಲ:ಮಧ್ಯಾಹ್ನ 03:41ರಿಂದ ಸಂಜೆ 05:19ರವರೆಗೆ
ಮೇಷ ರಾಶಿ
ಈ ದಿನ ಹಠಾತ್ ಹಣ ಲಾಭವಾಗಬಹುದು , ಕೆಲಸದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ಉದ್ಯೋಗದಲ್ಲಿ ಆಗಲು, ವ್ಯವಹಾರದಲ್ಲಾಗಲಿ ಅದೃಷ್ಟದ ಬೆಂಬಲ ಇರುವುದರಿಂದ ಈ ದಿನ ಉತ್ತಮವಾಗಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ, ಆರೋಗ್ಯ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ

ವೃಷಭ ರಾಶಿ
ಸಂಗಾತಿಯೊಂದಿಗೆ ತುಂಬಾ ರೊಮ್ಯಾಂಟಿಕ್ ದಿನವಾಗಲಿದೆ. ನಿಮ್ಮಿಬ್ಬರ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿ ಇರುತ್ತದೆ, ಯಾವುದೇ ಪ್ರಮುಖ ವೃತ್ತಿ ಸಂಬಂಧಿತ ಸಮಸ್ಯೆಯು ಪರಿಹರಿಸಲ್ಪಡುತ್ತದೆ. ಇಂದು ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುವುದು, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತಾರೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: 10:10 ರಿಂದ 12:20 ರವರೆಗೆ
ಮಿಥುನ ರಾಶಿ
ಕೆಲಸದ ಬಗ್ಗೆ ಹೇಳುವುದಾದರೆ ಈ ದಿನ ಬಿಡುವಿಲ್ಲದ ದಿನವಾಗಿರಲಿದೆ. ಈ ದಿನ ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಒಳ್ಳೆಯದು. ದಿನದ ಎರಡನೇ ಭಾಗದಲ್ಲಿ ಇದ್ದಕ್ಕಿದ್ದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಕಾಣಬಹುದು. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12 ರವರೆಗೆ
ಕರ್ಕ ರಾಶಿ
ಹಣದ ವಿಷಯದಲ್ಲಿ ಇಂದು ದುಬಾರಿಯಾಗಲಿದೆ ಈ ದಿನ ನೀವು ಅತಿಯಾಗಿ ಖರ್ಚು ಮಾಡದಂತೆ ಸಲಹೆ ನೀಡಲಾಗಿದೆ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ, ಕಚೇರಿಯ ವಾತಾವರಣ ಉತ್ತಮವಾಗಿರುತ್ತದೆ. ಇಂದು ಬಾಸ್ ನಿಮಗೆ ಅತ್ಯುತ್ತಮವಾದ ಸಲಹೆ ನೀಡಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 7:25 ರವರೆಗೆ
ಸಿಂಹ ರಾಶಿ
ತುಂಬಾ ಸಮಯದ ಬಳಿಕ ಈ ದಿನ ಉತ್ತಮ ಸಮಯ ಕಳೆಯಬಹುದು, ಈ ದಿನ ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ನಿಮಗೆ ಸಾಧ್ಯವಾಗುವುದು, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸುವವರಿಗೆ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 6 ರಿಂದ 9:15 ರವರೆಗೆ
ಕನ್ಯಾ ರಾಶಿ
ಮನೆಯವರ ಜೊತೆ ಭಿನ್ನಾಭಿಪ್ರಾಯ ಉಂಟಾದರೆ ತಾಳ್ಮೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ತರಾತುರಿಯಲ್ಲಿ ಮತ್ತು ಗಾಬರಿಯಿಂದ ಯಾವುದೇ ಕೆಲಸವನ್ನು ಮಾಡಬೇಡಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಉತ್ತಮ ಆರೋಗ್ಯಕ್ಕಾಗಿ, ನೀವು ಪ್ರತಿದಿನ ಲಘು ವ್ಯಾಯಾಮವನ್ನು ಮಾಡಿದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 7:30 ರಿಂದ 11 ರವರೆಗೆ
ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವಹಿವಾಟು ಮಾಡದಂತೆ ಸಲಹೆ ನೀಡಲಾಗಿದೆ. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯುತ್ತಾರೆ. ಮತ್ತೊಂದೆಡೆ, ಉದ್ಯೋಗಿಗಳು ತಮ್ಮ ಉತ್ತಮ ಕಾರ್ಯಕ್ಷಮತೆಗಾಗಿ ಕೆಲಸದ ಸ್ಥಳದಲ್ಲಿ ಗೌರವವನ್ನು ಪಡೆಯುತ್ತಾರೆ. ದಾಂಪತ್ಯ ಜೀವನದಲ್ಲಿ ಹೊಸ ತಿರುವು ಸಿಗಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಈ ದಿನ ಏರಳಿತಗಳಿಂದ ಕೂಡಿರಲಿದೆ. ಇಂದು ನೀವು ಹಣಕಾಸಿನ ಅಡಚಣೆಗಳಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳು ಬರಬಹುದು. ಕೆಲಸದ ಬಗ್ಗೆ ಹೇಳುವುದಾದರೆ ಈ ದಿನ ಸರಾಸರಿಯ ದಿನವಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 9:50 ರವರೆಗೆ
ಧನು ರಾಶಿ
ಈ ದಿನ ನಿಮ್ಮ ಪ್ರಮುಖ ಚಿಂತೆ ದೂರಾಗಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಸಂಗಾತಿಯ ಭಾವನೆಗಳನ್ನು ನೀವು ಗೌರವಿಸಬೇಕು. ಆರೋಗ್ಯ ಸುಧಾರಿಸಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 7:30 ರಿಂದ 11:20 ರವರೆಗೆ
ಮಕರ ರಾಶಿ
ಇಂದು ನೀವು ನಿಮ್ಮ ಜೀವನ ಸಂಗಾತಿಗಾಗಿ ಕೆಲವು ಉತ್ತಮ ಯೋಜನೆಗಳನ್ನು ಮಾಡಬಹುದು, ಆದರೆ ಕೆಲವು ಕಾರಣಗಳಿಂದ ನಿಮ್ಮ ಯೋಜನೆಗೆ ಅಡ್ಡಿಯಾಗುತ್ತದೆ. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಹೆಚ್ಚುತ್ತಿರುವ ಕೆಲಸದ ಹೊರೆಯು ನಿಮಗೆ ತುಂಬಾ ಆಯಾಸವನ್ನುಂಟು ಮಾಡುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:55 ರಿಂದ 7:55 ರವರೆಗೆ
ಕುಂಭ ರಾಶಿ
ನಿಮ್ಮ ಆಸ್ತಿಯನ್ನು ಮಾರಾಟ ಮಾಡಲು ನೀವು ಯೋಜಿಸುತ್ತಿದ್ದರೆ, ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ವರ್ತಕರಿಗೆ ಈ ದಿನ ಉತ್ತಮವಾಗಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಲಾಗಿದೆ. ಇತರರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ಆರೋಗ್ಯ ಉತ್ತಮವಾಗಿರುತ್ತವೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 9:05 ರವರೆಗೆ
ಮೀನ ರಾಶಿ
ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ನಿಮ್ಮ ವರ್ತನೆಯಿಂದ ನಿಮ್ಮ ನಡುವಿನ ಅಂತರವನ್ನು ಹೆಚ್ಚಿಸಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಉದ್ಯೋಗ ಅಥವಾ ವ್ಯಾಪಾರದಲ್ಲಿ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ. ನಿಮ್ಮ ಯೋಜನೆಗೆ ಅನುಗುಣವಾಗಿ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5:15 ರಿಂದ 7 ರವರೆಗೆ



Click it and Unblock the Notifications












