Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಆಗಸ್ಟ್ 2ರ ದಿನಭವಿಷ್ಯ: ದ್ವಾದಶ ರಾಶಿಗಳಲ್ಲಿ 6 ರಾಶಿಯವರಿಗೆ ಅದೃಷ್ಟಕರ, 6 ರಾಶಿಯವರು ಜಾಗ್ರತೆ
ಶುಭೋದಯ: ಈ ದಿನ ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯಲಿ ಎಂದು ಹೇಳುತ್ತಾ ವೈದಿಕ ಶಾಸ್ತ್ರದ ಪ್ರಕಾರ ಈ ದಿನ ಹೇಗಿರಲಿದೆ ಎಂದು ನೋಡೋಣ...
ಮೇಷ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಮಾಡಬಹುದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಮನೆಯಲ್ಲಿ ಹಣದ ವಿಷಯ ಚರ್ಚೆಯಾಗಬಹುದು. ಈ ಅವಧಿಯಲ್ಲಿ ತುಂಬಾ ಬುದ್ಧಿವಂತಿಕೆಯಿಂದ ವರ್ತಿಸಿ, ಆರೋಗ್ಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 7:30 ರವರೆಗೆ

ವೃಷಭ ರಾಶಿ
ಈ ದಿನ ಅಪೂರ್ಣವಾಗಿದ್ದ ನಿಮ್ಮ ಕೆಲವು ಕೆಲಸಗಳನ್ನು ಪೂರ್ಣಗೊಳಿಸಬಹುದು. ದಿನದ ಎರಡನೇ ಭಾಗದಲ್ಲಿ ನೀವು ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಇಂದು ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ನಡುವೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ. ನಿಮ್ಮ ಮನಸ್ಥಿತಿ ಕೂಡ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 8:20 ರಿಂದ 11:20 ರವರೆಗೆ
ಮಿಥುನ ರಾಶಿ
ಹಣದ ವಿಷಯದಲ್ಲಿ ಈ ದಿನ ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ನಿರೀಕ್ಷೆಯಂತೆ ಫಲಿತಾಂಶಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ, ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯ ಉತ್ತಮವಾಗಿರುತ್ತವೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5:30 ರಿಂದ 7:35 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯ ವಿದ್ಯಾರ್ಥಿಗಳು ಕಲಿಕೆ ಕಡೆ ಹೆಚ್ಚಿನ ಗಮನಹರಿಸಬೇಕು. ನಿರ್ಲಕ್ಷ್ಯವು ದುಬಾರಿಯಾಗಬಹುದು, ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 2:05 ರಿಂದ ಸಂಜೆ 4 ರವರೆಗೆ
ಸಿಂಹ ರಾಶಿ
ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಬರಬೇಕಾಗಿರುವ ಹಣ ಸಿಗಲಿದೆ. ಕೆಲಸದಲ್ಲಿ ತುಂಬಾ ಕಾರ್ಯನಿರತವಾಗಿರುತ್ತೀರಿ. ಶೀಘ್ರದಲ್ಲೇ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಅಧಿಕ ಚಿಂತೆ ಮಾಡಲು ಹೋಗಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 5:15 ರಿಂದ 9:50 ರವರೆಗೆ
ಕನ್ಯಾ ರಾಶಿ
ಈ ದಿನ ಐಷಾರಾಮಿ ವಸ್ತುವಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಯೋಚಿಸದೆ ಯಾವುದೇ ದೊಡ್ಡ ಖರ್ಚು ಮಾಡದಂತೆ ನಿಮಗೆ ಸಲಹೆ ನೀಡಲಾಗಿದೆ. ಸಂಗಾತಿಯೊಂದಿಗೆ ಮನಸ್ತಾಪವಿರಬಹುದು, ಈ ದಿನ ನೀವು ತಾಳ್ಮೆಯಿಂದಿರಲು ಸಲಹೆ ನೀಡಲಾಗಿದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಕೆಲಸದ ವಿಷಯದಲ್ಲಿ ಈ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ತುಲಾ ರಾಶಿ
ಇಂದು ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ, ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ, ಅಧಿಕ ಖರ್ಚು ಮಾಡಲು ಹೋಗಬೇಡಿ, ಕಚೇರಿಯಲ್ಲಿ, ನಿಮ್ಮ ಕೆಲಸವನ್ನು ಪೂರ್ಣ ಶಕ್ತಿ ಮತ್ತು ಉತ್ಸಾಹದಿಂದ ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 7:30 ರಿಂದ 10:30 ರವರೆಗೆ
ವೃಶ್ಚಿಕ ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ. ನಿಮ್ಮಿಬ್ಬರ ನಡುವೆ ಬಿರುಕು ಉಂಟಾಗುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ, ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿಮ್ಮ ಎಲ್ಲಾ ಚಟುವಟಿಕೆಗಳನ್ನು ಮುಂಚಿತವಾಗಿಯೇ ಪ್ಲ್ಯಾನ್ ಮಾಡಿದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 4:15 ರಿಂದ 8:15 ರವರೆಗೆ
ಧನು ರಾಶಿ
ನಿಮ್ಮ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ. ಅನಗತ್ಯ ಕೋಪ ಮತ್ತು ದುರಹಂಕಾರ ನಿಮಗೆ ಒಳ್ಳೆಯದಲ್ಲ. ಇಂದು ನೀವು ತುಂಬಾ ಟೀಕೆಗೆ ಒಳಗಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹಳೆಯ ಸಾಲವನ್ನು ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ಸಂಗಾತಿಯ ಆರೋಗ್ಯ ದುರ್ಬಲವಾಗಿರಬಹುದು, ಅವರ ಆರೈಕೆ ಕಡೆ ಗಮನ ನೀಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ
ಮಕರ ರಾಶಿ
ಉದ್ಯೋಗಿಗಳಿಗೆ ಬಡ್ತಿ ಸಿಗಬಹುದು, ನಿಮ್ಮ ಸಂಬಳವೂ ಹೆಚ್ಚಾಗುತ್ತದೆ. ಅದೇ ವೇಳೆ ಉದ್ಯಮಿಗಳ ಆರ್ಥಿಕ ಸಮಸ್ಯೆಯೂ ಬಗೆಹರಿಯಲಿದೆ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದು ಉತ್ತಮ. ಆಹಾರಕ್ರಮದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 6:05 ರಿಂದ 9:05 ರವರೆಗೆ
ಕುಂಭ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿದೆ. ಸಂಗಾತಿಯೊಂದಿಗೆ ಉತ್ತಮ ಹೊಂದಾಣಿಕೆ ಇರಲಿದೆ, ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 1:50 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಮಹತ್ವದ ದಿನವಾಗಿರುತ್ತದೆ. ವಿವಾಹಿತರ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ನಿಮ್ಮ ಪರಸ್ಪರ ತಿಳುವಳಿಕೆ ಉತ್ತಮವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:30 ರಿಂದ ರಾತ್ರಿ 8:30 ರವರೆಗೆ



Click it and Unblock the Notifications











