Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಆಗಸ್ಟ್ 4 ನಿಮ್ಮ ರಾಶಿಗೆ ಹೇಗಿರಲಿದೆ ನೋಡಿ
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್4ರ ರಾಶಿಫಲ ನೀಡಲಾಗಿದ್ದು ನಿಮ್ಮ ರಾಶಿಗೆ ಹೇಗಿದೆ ನೋಡೋಣ ಬನ್ನಿ:
ದಿನಾಂಕ: ಆಗಸ್ಟ್ 4
ತಿಥಿ: ತೃತೀಯ
ನಕ್ಷತ್ರ: ಬೆಳಗ್ಗೆ 07:08ರವರೆಗೆ ಶತಾಭಿಷ ನಂತರ ಪೂರ್ವಭಾದ್ರಪದ
ಪಕ್ಷ: ಕೃಷ್ಣಪಕ್ಷ
ರಾಹುಕಾಲ: ಬೆಳಗ್ಗೆ 10:50ರಿಂದ ಮಧ್ಯಾಹ್ನ 12:27ರವರೆಗೆ
ಮೇಷ ರಾಶಿ
ಧಾರ್ಮಿಕ ಕಾರ್ಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಹಣದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ. ನೀವು ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಿದರೆ ದೊಡ್ಡ ನಷ್ಟ ಸಂಭವಿಸಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 6 ರವರೆಗೆ

ವೃಷಭ ರಾಶಿ
ಈ ದಿನ ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೈನಂದಿನ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ಜೀವನ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶ ಸಿಗಲಿದೆ. ನೀವು ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:30 ರವರೆಗೆ
ಮಿಥುನ ರಾಶಿ
ಕಚೇರಿ ನಿಮ್ಮ ಯಾವುದೇ ಪ್ರಮುಖ ಕೆಲಸ ಪೆಂಡಿಂಗ್‌ನಲ್ಲಿದ್ದರೆ ಅದು ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗಿರುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸುವ ಬಲವಾದ ಸಾಧ್ಯತೆಯಿದೆ. ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆರೋಗ್ಯ ವಿಷಯದಲ್ಲಿ ಈ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 6 ರಿಂದ 8:15 ರವರೆಗೆ
ಕರ್ಕ ರಾಶಿ
ಪ್ರೇಮಿಗಳಿಗೆ ಈ ದಿನ ಉತ್ತಮವಾಗಿದೆ. ಸಂಗಾತಿಯೊಂದಿಗೆ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಸಂಬಂಧದಲ್ಲಿ ಹೊಸತನವನ್ನು ಅನುಭವಿಸುವಿರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 5:15 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ
ಈ ದಿನ ಇಮಗೆ ಸವಾಲಿನಿಂದ ಕೂಡಿರುತ್ತದೆ. ನಿಮ್ಮ ಯೋಜನೆಗಳಲ್ಲಿ ಅಡಚಣೆ ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಕಿರಿಕಿರಿ ಅನುಭವಿಸುತ್ತೀರಿ. ಗ್ರಹಗಳ ಅಶುಭ ಸ್ಥಾನದ ಪರಿಣಾಮವು ನಿಮ್ಮ ನಡವಳಿಕೆಯಲ್ಲಿ ಕಂಡುಬರುತ್ತದೆ. ಹಣದ ವಿಷಯದಲ್ಲಿ ಈ ದಿನವು ಸರಾಸರಿಯಾಗಲಿದೆ. ಆರೋಗ್ಯ ಹದಗೆಡಬಹುದು, ಆದ್ದರಿಂದ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ 10 ರವರೆಗೆ
ಕನ್ಯಾ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ. ಈ ದಿನ ಹಣದ ಹೂಡಿಕೆ ಮಾಡುವುದಾದರೆ ಈ ದಿನ ಜಾಗ್ರತೆವಹಿಸಿ. ಉದ್ಯೋಗಸ್ಥರು ಕಷ್ಟಪಟ್ಟು ಕೆಲಸ ಮಾಡಲು ಸಲಹೆ ನೀಡಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಸಾಧ್ಯವಾದರೆ, ಇಂದು ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6 ರವರೆಗೆ
ತುಲಾ ರಾಶಿ
ಈ ದಿನ ನಿಮಗೆ ಕೆಲಸದ ಹೊರೆ ಹೆಚ್ಚಿರಲಿದೆ. ಈ ದಿನ ತುಂಬಾ ಕೆಲಸವಿರುವುದರಿಂದ ವೈಯಕ್ತಿಕ ವಿಷಯಗಳ ಕಡೆ ಗಮನಹರಿಸಲು ಕಷ್ಟವಾಗುವುದು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ನಿಮ್ಮ ಆದಾಯ ಹೆಚ್ಚಾಗುವ ಬಲವಾದ ಸಾಧ್ಯತೆ ಇದೆ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಬೆಂಬಲ ಸಿಗಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 5:15 ರಿಂದ 9:55 ರವರೆಗೆ
ವೃಶ್ಚಿಕ ರಾಶಿ
ಕಚೇರಿಯಲ್ಲಿ ನಿಮ್ಮ ಕೆಲಸಗಳಿಗೆ ಅಡ್ಡಿಯಾಗಬಹುದು. ಮೇಲಧಿಕಾರಿಯ ಕೋಪವನ್ನೂ ಎದುರಿಸಬೇಕಾಗುತ್ತದೆ. ಹಣದ ವಿಷಯದಲ್ಲಿ ಈ ದಿನವು ತುಂಬಾ ದುಬಾರಿಯಾಗಲಿದೆ. ಮಕ್ಕಳ ವಿದ್ಯಾಭ್ಯಾಸ ಇತ್ಯಾದಿಗಳಿಗೆ ಸಾಕಷ್ಟು ಹಣ ಖರ್ಚಾಗುವುದು. ಪ್ರಣಯ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 7:10 ರಿಂದ 10:10 ರವರೆಗೆ
ಧನು ರಾಶಿ
ಈ ದಿನ ಆಹಾರಕ್ರಮದ ಕಡೆ ಗಮನಹರಿಸಿ, ಇಲ್ಲದಿದ್ದರೆ ನಿಮ್ಮ ಆರೋಗ್ಯ ಕ್ಷೀಣಿಸಬಹುದು. ಹೊಟ್ಟೆಗೆ ಸಂಬಂಧಿಸಿದ ಏನಾದರೂ ಸಮಸ್ಯೆಯಿದ್ದರೆ ಹೆಚ್ಚಾಗುವ ಸಾಧ್ಯತೆ ಇದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ಆಸ್ತಿಗೆ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ಲಾಭ ಗಳಿಸುತ್ತೀರಿ. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಸಂಜೆ 6 ರಿಂದ 9:05 ರವರೆಗೆ
ಮಕರ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಲಿದೆ. ಶಿಕ್ಷಣಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರವಹಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ಮಕ್ಕಳಿಗೆ ಸಂಬಂಧಿಸಿದ ಯಾವುದೇ ಚಿಂತೆ ದೂರಾಗುತ್ತದೆ, ಈ ದಿನ ನಿಮ್ಮ ಮನಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಹೆಚ್ಚು ಉಳಿತಾಯ ಮಾಡಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ
ಮೀನ ರಾಶಿ
ಆರೋಗ್ಯದಲ್ಲಿ ಈ ದಿನ ದೊಡ್ಡ ಸುಧಾರಣೆ ಕಂಡುಬರುತ್ತದೆ, ಈ ದಿನ ಸ್ಥಗಿತಕೊಂಡಿದ್ದ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನೀವು ಯಾರೊಂದಿಗಾದರೂ ಹಣವನ್ನು ಸಾಲ ಪಡೆಯಲು ಯೋಚಿಸುತ್ತಿದ್ದರೆ, ಅಗತ್ಯಕ್ಕಿಂತ ಹೆಚ್ಚು ಹಣವನ್ನು ತೆಗೆದುಕೊಳ್ಳಬೇಡಿ. ಇಲ್ಲದಿದ್ದರೆ ನೀವು ಭವಿಷ್ಯದಲ್ಲಿ ತೊಂದರೆಗೆ ಒಳಗಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 5:20 ರವರೆಗೆ



Click it and Unblock the Notifications
