Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಆಗಸ್ಟ್ 5ರ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ನೋಡಿ
ಆಗಸ್ಟ್ 5 ರ ರಾಶಿಫಲ ಇಲ್ಲಿ ನೀಡಲಾಗಿದ್ದು ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಆಗಸ್ಟ್ 5
ತಿಥಿ: ಚತುರ್ಥಿ
ನಕ್ಷತ್ರ: ಉತ್ತರ ಭಾದ್ರಪದ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಬೆಳಗ್ಗೆ 09:14ರಿಂದ 10:50ರವರೆಗೆ

ಮೇಷ ರಾಶಿ
ಪ್ರೇಮಿಗಳಿಗೆ ಈ ದಿನ ತುಂಬಾ ಅನುಕೂಲಕರವಾಗಿದೆ. ವೈವಾಹಿಕ ಜೀವನ ಕೂಡ ಚೆನ್ನಾಗಿರಲಿದೆ, ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 8:55 ರವರೆಗೆ
ವೃಷಭ ರಾಶಿ
ನೀವು ಮನೆಯ ಯಾವುದೇ ಸದಸ್ಯರೊಂದಿಗೆ ವೈಮನಸ್ಸನ್ನು ಹೊಂದಿದ್ದರೆಇಂದು ಎಲ್ಲವೂ ಸರಿಯಿರಲಿದೆ. ನಿಮ್ಮ ನಡವಳಿಕೆ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿಈ ದಿನ ದುಬಾರಿಯಾಗಲಿದೆ, ಈ ದಿನ ಖರ್ಚು ಹೆಚ್ಚಿರಲಿದೆ. ಈ ದಿನ ಹಣದ ಖರ್ಚು ಅಧಿಕವಿರಬಹುದು. ಕಛೇರಿಯಲ್ಲಿ ನಿಮ್ಮ ಕೆಲಸದ ಕಡೆ ನೀವು ಸಂಪೂರ್ಣವಾಗಿ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ಮಿಥುನ ರಾಶಿ
ಹಣದ ವಿಷಯದಲ್ಲಿ ಈ ದಿನ ತುಂಬಾ ಚೆನ್ನಾಗಿದೆ. ನೀವು ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು. ಈ ದಿನ ಹಳೆಯ ಸಾಲ ತೀರಿಸುತ್ತೀರಿ. ತಂದೆಯೊಂದಿಗಿನ ನಿಮ್ಮ ಸಂಬಂಧ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗುದೆ. ಉದ್ಯೋಗಿಗಳಿಗೂ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8:25 ರವರೆಗೆ
ಕರ್ಕ ರಾಶಿ
ಆರೋಗ್ಯ ಸಂಬಂಧಿ ಸಮಸ್ಯೆ ಇರಲಿದೆ. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ. ವ್ಯಾಪಾರಸ್ಥರು ಇಂದು ಹಣಕಾಸಿನ ವಹಿವಾಟು ಮಾಡುವಾಗ ಹೆಚ್ಚು ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟವಾಗಬಹುದು. ಉದ್ಯೋಗದಲ್ಲಿ ಪ್ರಗತಿಯ ಪ್ರಬಲ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ದಾಂಪತ್ಯ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ 3:20 ರವರೆಗೆ
ಸಿಂಹ ರಾಶಿ
ನೀವು ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ದಿನ ತುಂಬಾ ಮುಖ್ಯವಾಗಿರುತ್ತದೆ. ಸಂಗಾತಿಯ ಜೊತೆ ಏನೇ ಮನಸ್ತಾಪವಿದ್ದರೂ ನಿಮ್ಮೆಲ್ಲಾ ಸಮಸ್ಯೆ ಬಗೆಹರಿಯಲಿದೆ. ಈ ದಿನ ತುಂಬಾ ಖುಷಿಯಿಂದ ಕಳೆಯುವಿರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5:10 ರಿಂದ 9:05 ರವರೆಗೆ
ಕನ್ಯಾ ರಾಶಿ
ಕೆಲಸದ ಒತ್ತಡ ಅಧಿಕವಿರಲಿದೆ.ಆದರೆ ನಿಮ್ಮ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಈ ದಿನ ನಿಮ್ಮ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ, ಆರೋಗ್ಯವಾಗಿರಲು ಲಘು ವ್ಯಾಯಾಮ ಮಾಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ
ತುಲಾ ರಾಶಿ
ಕಚೇರಿಯಲ್ಲಿ ನಿಮ್ಮ ಕೆಲಸವನ್ನು ಗುರುತಿಸಿ ಪ್ರಶಂಸಿಸಲಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಯೋಚಿಸದೆ ಅಧಿಕ ಖರ್ಚು ಮಾಡಬಾರದು,ಅಲ್ಲದೆ ಇತರರ ಸಲಹೆಯ ಮೇರೆಗೆ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 7 ರಿಂದ 9:15 ರವರೆಗೆ
ವೃಶ್ಚಿಕ ರಾಶಿ
ಮಕ್ಕಳ ಜೊತೆ ಈ ದಿನ ಖುಷಿಯಿಂದ ಸಮಯ ಕಳೆಯಲು ಸಾಧ್ಯವಾಗುವುದು. ನೀವು ಆಸ್ತಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದರೆ ಈ ದಿನ ಲಾಭದಾಯಕವಾಗಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಧನು ರಾಶಿ
ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ಯಾವುದೋ ಒಂದು ವಿಷಯ ನಿಮ್ಮನ್ನು ಕಾಡಬಹುದು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ನಿಮ್ಮ ಹಿರಿಯರ ಸಲಹೆಯನ್ನು ನಿರ್ಲಕ್ಷಿಸಬೇಡಿ, ಇಲ್ಲದಿದ್ದರೆ ನಷ್ಟಗಳು ಸಂಭವಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಇಂದು ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:30 ರಿಂದ 8:50 ರವರೆಗೆ
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಲ್ಲ. ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ 4:15 ರವರೆಗೆ
ಕುಂಭ ರಾಶಿ
ಸಂಗಾತಿಯ ತಪ್ಪು ನಡವಳಿಕೆಯು ನಿಮಗೆ ದುಃಖ ಹೆಚ್ಚಿಸಲಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಬುದ್ಧಿವಂತಿಕೆಯಿಂದ ಮತ್ತು ತಾಳ್ಮೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ. ಈ ದಿನ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಲು ಗಮನಹರಿಸುವುದು ಒಳ್ಳೆಯದು . ಶೀಘ್ರದಲ್ಲೇ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 5:05 ರಿಂದ ರಾತ್ರಿ 8 ರವರೆಗೆ
ಮೀನ ರಾಶಿ
ಆರೋಗ್ಯ ಉತ್ತಮವಾಗಿರುತ್ತದೆ. ಸಾಧ್ಯವಾದರೆ ನೀವು ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಇಂದು ನೀವು ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ವೈವಾಹಿಕ ಸಂಬಂಧ ಚೆನ್ನಾಗಿರಲಿದೆ. ಈ ದಿನ ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 6 ರಿಂದ 9:15 ರವರೆಗೆ



Click it and Unblock the Notifications