Latest Updates
-
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ
ಆಗಸ್ಟ್ 6 ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿದೆ ನೋಡಿ
ಶುಭೋದಯ... ವೈದಿಕ ಶಾಸ್ತ್ರದ ಪ್ರಕಾರ ಈ ದಿನ 12 ರಾಶಿಗಳ ಭವಿಷ್ಯ ಹೇಗಿರಲಿದೆ ಎಂದು ನೋಡೋಣ ಬನ್ನಿ:
ದಿನಾಂಕ: ಆಗಸ್ಟ್ 6, 2023
ತಿಥಿ: ಪಂಚಮಿ
ನಕ್ಷತ್ರ: ರೇವತಿ
ರಾಹುಕಾಲ: ಸಂಜೆ 05:17ರಿಂದ 06:53ರವರೆಗೆ

ಮೇಷ ರಾಶಿ
ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರಲಿದೆ, ಅವರ ಆರೈಕೆ ಕಡೆಗೆ ಹೆಚ್ಚಿನ ಗಮನಹರಿಸಿ. ಆರ್ಥಿಕ ಪರಿಸ್ಥಿತಿ ಕುಸಿತ ಉಂಟಾಗುವ ಸಾಧ್ಯತೆ ಇದೆ. ಖರ್ಚುಗಳು ತುಂಬಾ ಹೆಚ್ಚಾಗಲಿದೆ, ಕಛೇರಿಯಲ್ಲಿ ಕೆಲಸದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ಇಲ್ಲದಿದ್ದರೆ ಅದು ನಿಮ್ಮ ಪ್ರಗತಿಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 4:10 ರಿಂದ 8:50 ರವರೆಗೆ
ವೃಷಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮ ಎಲ್ಲಾ ನಿರ್ಧಾರಗಳನ್ನು ನೀವು ಬಹಳ ಯೋಚಿಸಿ ತೆಗೆದುಕೊಳ್ಳಿ. ಸಂಗಾತಿಯೊಂದಿಗೆ ಈ ದಿನ ರೊಮ್ಯಾಂಟಿಕ್ ಆಗಿ ಕಳೆಯುತ್ತೀರಿ. ನೀವು ಉದ್ಯಮಿಯಾಗಿದ್ದು, ಮತ್ತು ನಿಮ್ಮ ವ್ಯವಹಾರವನ್ನು ಮುಂದುವರಿಸಲು ಸಾಲವನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದರೆ, ಈ ದಿನ ನಿಮಗೆ ತುಂಬಾ ಮುಖ್ಯವಾಗಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8:20 ರವರೆಗೆ
ಮಿಥುನ ರಾಶಿ
ಕೌಟುಂಬಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಈ ದಿನ ಹಣದ ಬಗ್ಗೆ ಚರ್ಚೆಯಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು. ಕಛೇರಿಯಲ್ಲಿ ಉನ್ನತ ಅಧಿಕಾರಿಗಳ ಅನುಚಿತ ವರ್ತನೆ ನಿಮ್ಮನ್ನು ತುಂಬಾ ಕಾಡಬಹುದು. ಇಂದು ನೀವು ಕೆಲಸದಲ್ಲಿ ಸರಿಯಾಗಿ ಗಮನಕೊಡಲು ಸಾಧ್ಯವಾಗುವುದಿಲ್ಲ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ರಾತ್ರಿ 9 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ತುಂಬಾ ಉತ್ತಮವಾಗಿದೆ. ಯೋಜನೆಯ ಪ್ರಕಾರ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತದೆ. ನೀವು ಪಾಲುದಾರಿಕೆಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನೀವು ಖಂಡಿತ ಯಶಸ್ಸನ್ನು ಪಡೆಯಬಹುದು. ಉದ್ಯೋಗಿಗಳು ಮೇಲಾಧಿಕಾರಿಗಳ ಸಲಹೆ ಪಾಲಿಸಿದರೆ ಒಳ್ಳೆಯದು. ಕುಟುಂಬದ ಸದಸ್ಯರೊಂದಿಗೆ ಹೊಂದಾಣಿಕೆ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಸಿಂಹ ರಾಶಿ
ಸಂಗಾತಿಯೊಂದಿಗೆ ಈ ದಿನ ಖುಷಿಯಿಂದ ಕಳೆಯುತ್ತೀರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಖರ್ಚು ಮಾಡುವ ಮೊದಲು, ನಿಮ್ಮ ಬಜೆಟ್ ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಅನಗ್ಯತ ಹಣ ಖರ್ಚು ಬೇಡ, ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನ ತುಂಬಾ ಚೆನ್ನಾಗಿರಲಿದೆ. ಈ ದಿನ ಯಾವುದೇ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7:10 ರಿಂದ 10:10 ರವರೆಗೆ
ಕನ್ಯಾ ರಾಶಿ
ಉದ್ಯೋಗಸ್ಥರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಅದೇ ಸಮಯದಲ್ಲಿ ವ್ಯಾಪಾರಸ್ಥರು ಉತ್ತಮ ಆರ್ಥಿಕ ಬೆಳವಣಿಗೆ ಕಾಣಬಹುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರ ನಡುವೆ ಹೊಂದಾಣಿಕೆ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ ಸಂಜೆ 4 ರವರೆಗೆ
ತುಲಾ ರಾಶಿ
ಇಂದು ನಿಮ್ಮ ಮನಸ್ಸಿನಲ್ಲಿ ಹಣದ ಚಿಂತೆ ಕಾಡಬಹುದು. ಶೀಘ್ರದಲ್ಲೇ ಹಣ ಗಳಿಸುವ ವಿಷಯದಲ್ಲಿ ಯಾವುದೇ ತಪ್ಪು ಮಾರ್ಗವನ್ನು ಅಳವಡಿಸಿಕೊಳ್ಳದಿರುವುದು ಉತ್ತಮ. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ. ನಿಮ್ಮ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮಗೆ ಸಲಹೆ ನೀಡಲಾಗಿದೆ. ಇಂದು ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ವೃಶ್ಚಿಕ ರಾಶಿ
ಸಂಗಾತಿಯ ಕೋಪ ಮನೆಯ ವಾತಾವರಣ ಹಾಳಾಗಬಹುದು. ನಿಮ್ಮ ಕೋಪ ನಿಯಂತ್ರಿಸಿ, ಇಲ್ಲದಿದ್ದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು, ಇಲ್ಲದಿದ್ದರೆ ಸಂಬಂಧದಲ್ಲಿ ನಿಮ್ಮ ಅಂತರ ಹೆಚ್ಚಾಗಬಹುದು. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಬೇಕು. ಈ ರಾಶಿಯ ನಿರುದ್ಯೋಗಿಗಳಿಗೆ ಈ ದಿನ ದಿನ ತುಂಬಾ ಮುಖ್ಯವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:05 ರವರೆಗೆ
ಧನು ರಾಶಿ
ಇದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮಗೆ ಮಿಶ್ರ ಫಲಿತಾಂಶ. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ಹಾಗೆ ಮಾಡಿದರೆ ನಷ್ಟ ಉಂಟಾಗುವುದು. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ಶಾಪಿಂಗ್ ಮಾಡಬಹುದು, ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ 10:10 ರವರೆಗೆ
ಮಕರ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ, ಇಂದು ಅಧ್ಯಯನದ ಕಡೆ ಹೆಚ್ಚಿನ ಗಮನ ಕೊಡಲು ಸಾಧ್ಯವಾಗುವುದಿಲ್ಲ, ಆದರೆ ನಿರ್ಲಕ್ಷ್ಯ ಮಾಡಿದರೆ ಗುರಿ ಮುಟ್ಟಲು ಕಷ್ಟವಾಗುವುದು. ಕೆಲವು ಕಾರಣಗಳಿಂದ ನೀವು ಮನೆಯಿಂದ ದೂರವಿದ್ದರೆ ಈ ದಿನ ಅವರನ್ನು ತುಂಬಾ ಮಿಸ್ ಮಾಡುತ್ತೀರಿ. ಇಂದು ಭಾವನಾತ್ಮಕವಾಗಿ ತುಂಬಾ ದುರ್ಬಲವಾಗಿರುತ್ತೀರಿ, ಈ ದಿನ ಮನಸ್ಸಿನಲ್ಲಿ ಯಾವುದೋ ಒಂದು ಚಿಂತೆ ಕಾಡುತ್ತಿರುತ್ತದೆ, ಹಣದ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:35 ರವರೆಗೆ
ಕುಂಭ ರಾಶಿ
ಈ ದಿನ ದಿನ ಸ್ನೇಹಿತರ ಜೊತೆಗೆ ಉತ್ತಮ ಸಮಯ ಕಳೆಯಲು ಸಾಧ್ಯವಾಗುವುದು. ಈ ದಿನ ಸಂಗಾತಿಯ ಜೊತೆ ನಿಮ್ಮ ಬಾಂಧವ್ಯ ಉಂಟಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಹವಾಮಾನ ಬದಲಾವಣೆಯಿಂದ ಆರೋಗ್ಯ ಸಮಸ್ಯೆ ಉಂಟಾಗಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 9:20 ರವರೆಗೆ
ಮೀನ ರಾಶಿ
ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಗುರಿ ಆಧಾರಿತ ಕೆಲಸವನ್ನು ಮಾಡುವವರು ತಮ್ಮ ಕಠಿಣ ಪರಿಶ್ರಮದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಸಣ್ಣ ವ್ಯಾಪಾರಸ್ಥರಿಗೆ ಇಂದು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ, ಮಾನಸಿವಾಗಿ ಈ ದಿನ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ



Click it and Unblock the Notifications











