Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 7 ದಿನ ಭವಿಷ್ಯ: ಈ ದಿನ ಯಾವ ರಾಶಿಗೆ ಶುಭ, ಯಾರಿಗಲ್ಲ
ಶುಭೋದಯ... ವೈದಿಕ ಶಾಸ್ತ್ರದ ಪ್ರಕಾರ ಈ ದಿನ 12 ರಾಶಿಗಳ ಭವಿಷ್ಯ ಹೇಗಿರಲಿದೆ ಎಂದು ನೋಡೋಣ ಬನ್ನಿ:
ದಿನಾಂಕ: ಆಗಸ್ಟ್ 7, 2023
ತಿಥಿ:ಸಪ್ತಮಿ
ನಕ್ಷತ್ರ: ಅಶ್ವಿನಿ
ಪಕ್ಷ: ಕೃಷ್ಣಪಕ್ಷ
ರಾಹುಕಾಲ:ಬೆಳಗ್ಗೆ 07:38ರಿಂದ 09:18ರವರೆಗೆ

ಮೇಷ ರಾಶಿ
ಮೇಷ ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಲ್ಲ. ನೀವು ಈ ದಿನ ತಾಳ್ಮೆಯಿಂದಿರುವುದು ಒಳ್ಳೆಯದು. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ನಿಮ್ಮ ನಡುವೆ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9:05 ರವರೆಗೆ
ವೃಷಭ ರಾಶಿ
ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ , ಮಾನಸಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಚಿಕ್ಕ ನಿರ್ಧಾರವನ್ನು ನೀವು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ಉದ್ಯಮಿಗಳಿಗೆ ಈ ದಿನ ಉತ್ತಮ ಅವಕಾಶ ದೊರೆಯಲಿದೆ. ನಿಮ್ಮ ವ್ಯಾಪಾರದಲ್ಲಿ ಬೆಳವಣಿಗೆ ಇರಲಿದೆ, ಉದ್ಯೋಗಿಗಳು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಈ ನಿಮ್ಮ ಸಂಗಾತಿಯೊಂದಿಗೆ ಸಂಬಂಧ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ಮಿಥುನ ರಾಶಿ
ಇಂದು ಹಣದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ವಿಶೇಷವಾಗಿ ಕ್ರೆಡಿಟ್ ವಹಿವಾಟುಗಳನ್ನು ಮಾಡಬೇಡಿ, ಯಾರ ಬಳಿಯೂ ಸಾಲ ಪಡೆಯಬೇಡಿ. ವ್ಯಾಪಾರ ಮಾಡುವವರು ಕಾನೂನು ವಿಷಯಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡದಂತೆ ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಷ್ಟ ಉಂಟಾಗಬಹುದು, ನಿಮ್ಮ ಪ್ರಸ್ತುತ ಕೆಲಸದಲ್ಲಿ ನೀವು ಅತೃಪ್ತರಾಗಿದ್ದರೆ, ಕೆಲಸವನ್ನು ಬದಲಾಯಿಸಲು ಈ ಸಮಯ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 4:20 ರಿಂದ 7:20 ರವರೆಗೆ
ಕರ್ಕ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಈ ದಿನ ನೀವು ಖುಷಿಯಿಂದ ಕಳೆಯುವಿರಿ. ಹಣದ ವಿಷಯದಲ್ಲಿ ಈ ದಿನ ಮಿಶ್ರಪಲ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೋ ಚಿಂತೆ ಕಾಡಬಹುದು. ಈ ಸಮಯದಲ್ಲಿ ಅವರಿಗೆ ನಿಮ್ಮ ಮಾರ್ಗದರ್ಶನದ ಅಗತ್ಯವಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 12:55 ರಿಂದ ಸಂಜೆ 6 ರವರೆಗೆ
ಸಿಂಹ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡುವ ಸಾಧ್ಯತೆಯಿದೆ. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ನೀವು ಬಯಸಿದ ಫಲ ಸಿಗಲು ಕಷ್ಟವಾಗುವುದು, ಮನೆಯ ವಾತಾವರಣ ಶಾಂತವಾಗಿರುತ್ತದೆ. ಸಂಗಾತಿಯೊಂದಿಗೆ ಸಂಬಂಧ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಗ್ಗೆ 5 ರಿಂದ 8:20 ರವರೆಗೆ
ಕನ್ಯಾ ರಾಶಿ
ಇಂದು ಹಳೆಯ ವಿಷಯಗಳನ್ನು ಯೋಚಿಸಿ ನೊಂದುಕೊಳ್ಳಬಹುದು, ನೀವು ಹಿಂದಿನದನ್ನು ಮರೆತು ಮುಂದುವರಿಯಬೇಕು ಎಂಬ ಸಲಹೆ ನೀಡಲಾಗಿದೆ. ಅನಗತ್ಯ ವಿಷಯಗಳಲ್ಲಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಿ. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಆಕಾಶ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1:35 ರಿಂದ ಸಂಜೆ 4:35 ರವರೆಗೆ
ತುಲಾ ರಾಶಿ
ಈ ದಿನ ನಿಮಗೆ ಮಿಶ್ರಪಲ. ಕೆಲಸದ ಒತ್ತಡ ಹೆಚ್ಚಾಗುವುದರಿಂದ ನಿಮ್ಮ ಆತಂಕವು ಗಮನಾರ್ಹವಾಗಿ ಹೆಚ್ಚಾಗಬಹುದು. ಇದಲ್ಲದೆ, ನೀವು ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ಅಂತಹ ಪರಿಸ್ಥಿತಿಯಲ್ಲಿ, ಆರೋಗ್ಯವು ಕ್ಷೀಣಿಸುವ ಸಾಧ್ಯತೆಯಿದೆ. ಮನೆಯ ಸದಸ್ಯರೊಂದಿಗೆ ನಿಮ್ಮ ನಡವಳಿಕೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಸಣ್ಣ ವಿಷಯಗಳನ್ನು ನಿರ್ಲಕ್ಷಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 6 ರಿಂದ 8:25 ರವರೆಗೆ
ವೃಶ್ಚಿಕ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ತೋರದಂತೆ ಸಲಹೆ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧ ಬಲವಾಗಿರುತ್ತದೆ. ಇಂದು ಆರೋಗ್ಯದ ವಿಷಯದಲ್ಲಿ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 8:45 ರವರೆಗೆ
ಧನು ರಾಶಿ
ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಕುಟುಂಬದೊಂದಿಗೆ ಈ ದಿನ ಖುಷಿಯಿಂದ ಕಳೆಯಲು ಸಾಧ್ಯವಾಗುವುದು. ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ, ಈ ದಿನ ನಿಮ್ಮ ನಡುವೆ ಘರ್ಷಣೆ ಉಂಟಾಗಬಹುದು. ಈ ದಿನ ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 4:15 ರಿಂದ 8:15 ರವರೆಗೆ
ಮಕರ ರಾಶಿ
ಪ್ರೀತಿಪಾತ್ರರ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಗಳಿಗೆ ಒಳ್ಳೆಯ ಫಲ ಸಿಗಲಿದೆ. ಸಂಗಾತಿಯ ಪ್ರೀತಿಯ ನಡವಳಿಕೆಯಿಂದಾಗಿ ನೀವು ತುಂಬಾ ಖುಷಿಯಾಗಿರುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ
ಕುಂಭ ರಾಶಿ
ಪ್ರೀತಿಯ ವಿಷಯದಲ್ಲಿ ಈ ದಿನ ತುಂಬಾ ವಿಶೇಷವಾಗಿರುತ್ತದೆ. ವಿವಾಹಿತರಿಗೆ ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ. ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ನಿಮ್ಮ ಹಣ ಕಳೆದು ಹೋಗಬಹುದು, ಜಾಗ್ರತೆವಹಿಸಿ. ಆರೋಗ್ಯದಲ್ಲಿ ಏರುಪೇರು ಉಂಟಾಗುವುದು.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಗ್ಗೆ 6:55 ರಿಂದ 8 ರವರೆಗೆ
ಮೀನ ರಾಶಿ
ನಿಮ್ಮ ಕಚೇರಿಯಲ್ಲಿ ಯಾವುದೇ ಪ್ರಮುಖ ಕೆಲಸ ಬಾಕಿ ಇದ್ದರೆ, ಇಂದು ನೀವು ಅದನ್ನು ಪೂರ್ಣಗೊಳಿಸಲು ತುಂಬಾ ಪ್ರಯತ್ನಿಸಿ. ವ್ಯಾಪಾರಸ್ಥರು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸದಿದ್ದರೆ ಒಳ್ಳೆಯದು ಎಂಬ ಸಲಹೆ ನೀಡಲಾಗಿದೆ. ಮನೆಯ ಹಿರಿಯರೊಂದಿಗೆ ಸೌಜನ್ಯದಿಂದ ವರ್ತಿಸಿ. ನಿಮ್ಮ ತಪ್ಪು ವರ್ತನೆಯಿಂದ ಮನೆಯವರ ಮನಸ್ಸು ನೋಯಿಸಲು ಪ್ರಯತ್ನಿಸಬೇಡಿ. ಆರೋಗ್ಯ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಸಂಜೆ 4:30 ರಿಂದ ಸಂಜೆ 7 ರವರೆಗೆ



Click it and Unblock the Notifications