Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ದಿನ ಭವಿಷ್ಯ ಆಗಸ್ಟ್ 08: ಈ ದಿನ 12 ರಾಶಿಗಳ ರಾಶಿಫಲ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 8ರ ರಾಶಿಫಲ ನೀಡಲಾಗಿದ್ದು ನಿಮ್ಮ ರಾಶಿಗೆ ಈ ದಿನ ಹೇಗಿದೆ ಎಂದು ನೋಡೋಣ ಬನ್ನಿ....
ದಿನಾಂಕ: ಆಗಸ್ಟ್ 08
ತಿಥಿ: ಅಷ್ಟಮಿ
ನಕ್ಷತ್ರ: ಭರಣಿ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಮಧ್ಯಾಹ್ನ 03:39ರಿಂದ 05:16ರವರೆಗೆ

ಮೇಷ ರಾಶಿ
ಇಂದು ನಿಮಗೆ ಮಿಶ್ರ ಫಲಿತಾಂಶವಾಗಲಿದೆ. ಇಂದು ಕೆಲಸದ ಹೊರೆ ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮಗಾಗಿ ಸಾಕಷ್ಟು ಸಮಯ ಸಿಗದಿರಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಮಕ್ಕಳಿಗಾಗಿ ಕೆಲವು ಪ್ರಮುಖ ಶಾಪಿಂಗ್ ಕೂಡ ಮಾಡಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 7 ರಿಂದ 9:15 ರವರೆಗೆ
ವೃಷಭ ರಾಶಿ
ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮ ತಪ್ಪು ವರ್ತನೆ ನಿಮ್ಮ ಸಂಗಾತಿಯ ಭಾವನೆಗಳಿಗೆ ಧಕ್ಕೆ ತರಬಹುದು. ಆರ್ಥಿಕ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆನೀವು ಹೆಚ್ಚು ಉಳಿಸಿದರೆ, ಶೀಘ್ರದಲ್ಲೇ ನಿಮ್ಮ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿದೆ. ಕಛೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ
ಮಿಥುನ ರಾಶಿ
ಆಹಾರದಲ್ಲಿ ವ್ಯತ್ಯಾಸ ಉಂಟಾದರೆ ಆರೋಗ್ಯ ಹದಗೆಡುವ ಸಂಭವವಿದೆ. ಕೆಲಸದ ಜೊತೆಗೆ ನಿಮಗಾಗಿ ಸಾಕಷ್ಟು ಸಮಯ ತೆಗೆದುಕೊಂಡರೆ ಉತ್ತಮ. ಕಛೇರಿಯಲ್ಲಿ ಎಲ್ಲಾ ಕೆಲಸಗಳನ್ನು ಬೇಗ ಮುಗಿಸಬೇಕು. ಇಂದು ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡದಿರುವುದು ಉತ್ತಮ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಇಂದು ನಿಮ್ಮ ಆತ್ಮೀಯರು ನಿಮ್ಮ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 4:15 ರಿಂದ 9:15 ರವರೆಗೆ
ಕರ್ಕ ರಾಶಿ
ಇಂದು ನೀವು ದೀರ್ಘ ಪ್ರಯಾಣ ಮಾಡಲಿದ್ದರೆ ಸಾಧ್ಯವಾದರೆ ಮುಂದೂಡಿ. ನಿಮ್ಮ ಈ ಪ್ರಯಾಣವು ನಿಮ್ಮ ಹಣ ಮತ್ತು ಸಮಯವನ್ನು ಮಾತ್ರ ವ್ಯರ್ಥ ಮಾಡುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ವೈಮನಸ್ಸನ್ನು ಹೊಂದಿರಬಹುದು ಇದರಿಂದಾಗಿ ಇಂದು ನಿಮ್ಮ ಪ್ರೀತಿಪಾತ್ರರ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಕಂಡುಬರುತ್ತದೆ. ಕಚೇರಿಯಲ್ಲಿ ಬಾಸ್ ನಿಮ್ಮ ಮೇಲೆ ಕೋಪ ಮಾಡದಿರಲು ನಿಮ್ಮ ಕೆಲಸ ಕಾರ್ಯಗಳ ಕಡೆ ಗಮನಹರಿಸಿ. ಅಂತಹ ಪರಿಸ್ಥಿತಿಯಲ್ಲಿ, ಕೆಲಸದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ
ಇಂದು ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದಿದೆ. ಅದರ ಪರಿಣಾಮ ನಿಮ್ಮ ಕೆಲಸದ ಮೇಲೂ ಕಾಣಿಸುತ್ತದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮಗೆ ಹಣ ಬರುವ ಸಾಧ್ಯತೆ ಇದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಮನೆಯ ಹಿರಿಯರ ಆಶೀರ್ವಾದ ನಿಮ್ಮ ಮೇಲಿರಲಿದೆ. ನೀವಿಂದು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ನೀವು ಯಶಸ್ಸನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಗ್ಗೆ 10:10 ರಿಂದ ಮಧ್ಯಾಹ್ನ 12:50 ರವರೆಗೆ
ಕನ್ಯಾ ರಾಶಿ
ಉದ್ಯೋಗಸ್ಥರಿಗೆ ಇಂದು ಸವಾಲಿನ ದಿನವಾಗಿರುತ್ತದೆ. ನೀವು ಕಚೇರಿಯಲ್ಲಿ ಕೆಲವು ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಬೇಕಾಗುವುದು. ಮತ್ತೊಂದೆಡೆ ನಿರೀಕ್ಷಿಸಿದ ಲಾಭವನ್ನು ಪಡೆಯದ ಕಾರಣ ಉದ್ಯಮಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಇಂದು ನೀವು ಕುಟುಂಬಕ್ಕೆ ಸಮಯವನ್ನು ನೀಡಲು ಸಾಧ್ಯವಾಗದಿರಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಈ ದಿನ ಆಯಾಸ ಹೆಚ್ಚಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 6 ರಿಂದ 9:05 ರವರೆಗೆ
ತುಲಾ ರಾಶಿ
ಇಂದು ನೀವು ಕೆಲಸದ ಸ್ಥಳದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಮೇಲಾಧಿಕಾರಿಗಳ ವರ್ತನೆಯಿಂದ ನಿಮ್ಮ ಆತ್ಮವಿಶ್ವಾಸ ಕುಸಿಯಬಹುದು. ಆದರೆ, ನೀವು ಧನಾತ್ಮಕವಾಗಿದ್ದರೆ ಶೀಘ್ರದಲ್ಲೇ ವಿಷಯಗಳು ನಿಮ್ಮ ಪರವಾಗಿ ತಿರುಗಲು ಪ್ರಾರಂಭಿಸುತ್ತವೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ ಮಧ್ಯಾಹ್ನ 3 ರವರೆಗೆ
ವೃಶ್ಚಿಕ ರಾಶಿ
ನೀವು ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡಲು ಹೋದರೆ, ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಷ್ಟಗಳು ಸಂಭವಿಸಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮಗೆ ತುಂಬಾ ಕಾರ್ಯನಿರತವಾಗಿರುತ್ತದೆ. ನೀವು ಕೆಲವು ಕುಟುಂಬ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಆದರೆ ತಾಳ್ಮೆವಹಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 6:35 ರಿಂದ 11 ರವರೆಗೆ
ಧನು ರಾಶಿ
ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು ನಿಮ್ಮ ದಿನಚರಿಯಲ್ಲಿ ಬದಲಾವಣೆ ಮಾಡಿದರೆ ಒಳ್ಳೆಯದು. ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಇಲ್ಲದಿದ್ದರೆ ಇಬ್ಬರ ನಡುವೆ ಬಿರುಕು ಉಂಟಾಗಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:50 ರಿಂದ ರಾತ್ರಿ 8:10 ರವರೆಗೆ
ಮಕರ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಅದೃಷ್ಟದ ದಿನವಾಗಿದೆ. ಪರೀಕ್ಷೆಯಲ್ಲಿ ನೀವು ಅದ್ಭುತ ಯಶಸ್ಸನ್ನು ಸಾಧಿಸಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಗ್ಗೆ 4:30 ರಿಂದ 11:30 ರವರೆಗೆ
ಕುಂಭ ರಾಶಿ
ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ. ಹಳೆಯ ರೋಗ ಮರುಕಳಿಸುವ ಸಾಧ್ಯತೆ ಇದೆ. ಕೆಲಸದ ವಿಷಯದಲ್ಲಿ ಈ ದಿನ ಸಾಮಾನ್ಯವಾಗಿರುತ್ತದೆ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನೀವು ಆತುರದಿಂದ ದೂರವಿರಬೇಕು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ:1
ಅದೃಷ್ಟದ ಸಮಯ: ಸಂಜೆ 5:15 ರಿಂದ 8:15 ರವರೆಗೆ
ಮೀನ ರಾಶಿ
ಇಂದು ನೀವು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಈ ದಿನ ನೀವು ನಿಮ್ಮ ಶ್ರಮಕ್ಕೆ ಅನುಗುಣವಾಗಿ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯ ಜೊತೆಗೆ ಬಾಂಧವ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ



Click it and Unblock the Notifications











