Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಬಿಗ್‌ಬಾಸ್‌ನಲ್ಲಿ ಗೆದ್ದ ಬೈಕ್ ಯುವಕನಿಗೆ ನೀಡಿದ ಪ್ರತಾಪ್..! ಯಾರು ಆ ಯುವಕ.?
ಬಿಗ್‌ಬಾಸ್ ಕನ್ನಡ ಸೀಸನ್ ಹತ್ತರ ರನ್ನರ್ ಅಪ್ ಡ್ರೋನ್ ಪ್ರತಾಪ್ ಒಂದಲ್ಲಾ ಒಂದು ವಿಚಾರವಾಗಿ ಯಾವಾಗಲು ಸುದ್ದಿಯಲ್ಲಿರುತ್ತಾರೆ. ಬಿಗ್‌ಬಾಸ್‌ನಿಂದ ಹೊರಬಂದ ಮೇಲೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಅವರು ಹೇಳಿಕೊಂಡಿದ್ದರು. ಇದೀಗ ಅಂತಹ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.
ಬಿಗ್‌ಬಾಸ್‌ನಲ್ಲಿ ಗೆದ್ದ ಎಲೆಕ್ಟ್ರಿಕ್ ಬೈಕ್ ಅನ್ನು ಅವರು ಉಡುಗೊರೆಯಾಗಿ ನೀಡಿದ್ದಾರೆ. ಹೌದು ಬಿಗ್‌ಬಾಸ್ ಮನೆಯಲ್ಲಿ ಅವರು ಹೇಳಿಕೊಂಡಂತೆ ಹೊರಬಂದ ಮೇಲೆ ಅದೇ ರೀತಿ ನಡೆದುಕೊಂಡಿದ್ದು, ಇತರರಿಗೂ ಮಾದರಿಯಾಗಿದ್ದಾರೆ. ಡ್ರೋನ್ ಪ್ರತಾಪ್ ಬಿಗ್‌ಬಾಸ್‌ನಿಂದ ಬರುವ ಹಣವನ್ನು ಒಳ್ಳೆಯ ಕಾರ್ಯಗಳಿಗೆ ಬಳಸುವುದಾಗಿ ಹೇಳಿಕೊಂಡಿದ್ದರು. ಜೊತೆಗೆ ಬಿಗ್‌ಬಾಸ್ ಸ್ಪರ್ಧಿಗೆ ನೀಡುವ ಎಲೆಕ್ಟ್ರಿಕ್ ಬೈಕ್ ಅನ್ನು ಅಗತ್ಯವಿರುವರು ಒಬ್ಬರಿಗೆ ನೀಡುವುದಾಗಿ ಹೇಳಿಕೊಂಡಿದ್ದರು.

ಡ್ರೋನ್ ಪ್ರತಾಪ್‌ನಿಂದ ಬೈಕ್ ಉಡುಗೊರೆಯಾಗಿ ಪಡೆದ ಯುವಕ ಯಾರು..?
ಕೊಟ್ಟ ಮಾತಿನಂತೆ ಬೈಕ್ ಅಗತ್ಯವಿದ್ದ ಓರ್ವ ಯುವಕನ ಆಯ್ಕೆ ಮಾಡಿಕೊಂಡು ಆತನಿಗೆ ಬೈಕ್ ಹಸ್ತಾಂತರಿಸಿದ್ದಾರೆ. ಈ ಕುರಿತು ಇನ್ಸ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಂಡಿರುವ ಪ್ರತಾಪ್ 'ಬಿಗ್‌ಬಾಸ್‌ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ..ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆ ವರೆಗೂ ಹೋಟಲ್ ನಲ್ಲಿ ಕೆಲಸ ಮಾಡಿ ಹಾಗೂ ಸಂಜೆಯ ಮೇಲೆ FOOD DELIVERY ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ ತಿಂಗಳು ತಿಂಗಳು ಕಂತು ಕಟ್ಟುತ್ತಿದ್ದರು ಆದರೆ ಅವರ ಸ್ನೇಹಿತ ಮಾಡಿದ ಮೋಸದಿಂದ ತಮ್ಮ ಬೈಕನ್ನು ಬ್ಯಾಂಕ್ ನವರು sieze ಮಾಡಿದರು ಹಾಗಾಗಿ ಇವರಿಗೆ ನನಗೆ ಬಹುಮಾನವಾಗಿ ಬಂದ ELECTRIC ಗಾಡಿಯನ್ನು ಈ ಹುಡುಗನಿಗೆ ನೀಡಿದು ನನಗೆ ತುಂಬಾ ಖುಷಿ ತಂದಿದೆ' ಎಂದು ಸಂತಸ ಹಂಚಿಕೊಂಡಿದ್ದಾರೆ.
ಡ್ರೋನ್ ಪ್ರತಾಪ್ ಅವರ ಕಾರ್ಯಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾನಾಡಿದ ಮಾತಿನಂತೆ ನಡೆದುಕೊಂಡ ಪ್ರತಾಪ್ ಅವರ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇಂತಹ ಇನ್ನಷ್ಟು ಕಾರ್ಯಗಳ ಮಾಡುವಂತೆಯೂ ಅವರಲ್ಲಿ ಮನವಿ ಮಾಡಿದ್ದಾರೆ.
ಡ್ರೋನ್ ಪ್ರತಾಪ್‌ಗೆ ವೇದಿಕೆ ಮೇಲೆ ಮದುವೆ ಆಫರ್.!
ಇತ್ತ ಡ್ರೋನ್ ಪ್ರತಾಪ್ ಸಮಾಜಮುಖಿ ಕಾರ್ಯಳ ಜೊತೆಗೆ ಒಂದಿಷ್ಟು ರಿಯಾಲಿಟಿ ಶೋಗಳು ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್ ಬಾಸ್ ಮುಗಿದ ಬಳಿಕ ಅವರ ಜನಪ್ರೀಯತೆಯೂ ಹೆಚ್ಚಾಗಿದೆ. ಪ್ರತಾಪ್ ಹೋದ ಕಡೆಗಳಲ್ಲಿ ಅಭಿಮಾನಿಗಳು ಅವರನ್ನು ಸುತ್ತುವರೆಯುತ್ತಿದ್ದಾರೆ. ಈ ನಡುವೆ ಅವರು ಕಲರ್ಸ್ ವಾಹಿನಿಯು ಹೊಸಪೇಟೆಯಲ್ಲಿ ಕೆಂಡಸಂಪಿಗೆ ಧಾರಾವಾಹಿ ಸೀರಿಯಲ್ ಸಂತೆ ನಡೆಸುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಹ ಭಾಗಿಯಾಗಿದ್ದಾರೆ.
ಈ ವೇಳೆ ವೇದಿಕೆಗೆ ಒಂದಿಷ್ಟು ಯುವತಿಯರು ಆಗಮಿಸಿ ನಾವಿಲ್ಲಿ ಡ್ರೋನ್ ಪ್ರತಾಪ್ ಮದುವೆಯಾಗಲು ಬಂದಿದ್ದೇವೆ ಎಂದಿದ್ದಾರೆ. ನೀವೆಂದರೆ ತುಂಬಾ ಇಷ್ಟ ನಿಮ್ಮನ್ನು ಮದುವೆಯಾಗಲು ಬಂದಿದ್ದೇವೆ ಎಂದಿದ್ದಾರೆ, ಇದನ್ನು ಕೇಳಿ ಪ್ರತಾಪ್ ನಾಚಿ ನೀರಾಗಿದ್ದಾರೆ. ಇದೊಂದೆ ಅಲ್ಲ ಅವರು ಬಿಗ್‌ಬಾಸ್‌ನಿಂದ ಹೊರಬಂದು ಆಟೋ ರಾಜನಾಗಿ ಬೆಂಗಳೂರಲ್ಲಿ ಆಟೋ ಓಡಿಸಿ ಸುದ್ದಿಯಾಗಿದ್ದರು.
ಬಿಗ್‌ಬಾಸ್‌ನಿಂದ ಡ್ರೋನ್ ಪ್ರತಾಪ್‌ಗೆ ಸಿಕ್ಕ ಹಣವೆಷ್ಟು..?
ಬಿಗ್‌ಬಾಸ್ ಸೀಸನ್ 10ರ ಮೊದಲ ರನರ್ ಅಪ್ ಆಗಿದ್ದ ಟ್ರೋನ್ ಪ್ರತಾಪ್‌ಗೆ ವಾಹಿನಿ ಕಡೆಯಿಂದ ಬರೋಬ್ಬರಿ 10 ಲಕ್ಷ ರೂಪಾಯಿ ಸಿಕ್ಕಿದೆಯಂತೆ. ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್ ಸಹ ಸಿಕ್ಕಿದೆ. ಆದರೆ ವಿನ್ನರ್ ಕಾರ್ತಿಕ್ ಮಹೇಶ್‌ಗೆ 50 ಲಕ್ಷ ರೂಪಾಯಿ ಹಾಗೂ ಮಾರುತಿ ಸುಜುಕಿ ಬ್ರೆಜಾ ಕಾರು ಬೌನ್ಸ್ ಇನ್ಫಿನಿಟಿ ಎಲೆಕ್ಟ್ರಿಕ್ ಬೈಕ್, ಟ್ರೋಫಿ ಸಹ ಸಿಕ್ಕಿದೆ.



Click it and Unblock the Notifications