Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪುರಸ್ಕೃತೆ ಬಾನು ಮುಷ್ತಾಕ್ : ಯಾರು ಈ ಲೇಖಕಿ ಗೊತ್ತಾ?
ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ ದಸರಾ ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಾರಿಯ ದಸರಾ ಉದ್ಘಾಟನೆ ಯಾರು ನೆರವೇರಿಸಲಿದ್ದಾರೆ ಎಂಬುದು ಬಹಳ ಕುತೂಹಲ ಮೂಡಿಸಿತ್ತು. ಆದ್ರೆ ಈಗ ಈ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ.
ಈ ಬಾರಿಯ ದಸರಾ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದೆ, ದಸರಾ ಆನೆಗಳು ಕೂಡ ತಾಲೀಮು ನಡೆಸುತ್ತಿವೆ. ಹಾಗೆ ಸೆ. 22ರಂದು ದಸರಾಗೆ ಅಧಿಕೃತವಾಗಿ ಚಾಲನೆ ಸಿಗಲಿದೆ.

ಯಾರು ಈ ಬಾನು ಮುಷ್ತಾಕ್
ಬಾನು ಮುಷ್ತಾಕ್ ಹಾಸನದಲ್ಲಿ ಹುಟ್ಟಿ ಬೆಳೆದವರು ಅಲ್ಲಿಯೇ ಶಿಕ್ಷಣ ಪಡೆದವರು. ಆರಂಭದಲ್ಲಿ ಶಾಲಾ ಜೀವನದಲ್ಲಿಯೇ ಅವರು ಸಾಹಿತ್ಯದ ಕಡೆಗೆ ಒಲವು ಹೊಂದಿದ್ದರು, ಈ ಸಮಯದಲ್ಲಿ ಅವರು ಸಣ್ಣ ಕಥೆಗಳ ಬರೆದು ಶಿಕ್ಷಕರಿಂದ ಪ್ರಶಂಸೆ ಗಳಿಸಿದ್ದರು. ತಮ್ಮ 26ನೇ ವಯಸ್ಸಿನಲ್ಲಿ ಅವರು ಪ್ರಜಾಮತ ಎಂಬ ಕನ್ನಡ ನಿಯತಕಾಲಿಕೆಗೆ ಕಥೆಯೊಂದನ್ನು ಬರೆದಿದ್ದರು. ಇದು ಎಲ್ಲರ ಗಮನ ಸೆಳೆದಿದ್ದಲ್ಲದೆ ಅವರ ಸಣ್ಣ ಕಥೆಗಳು ಈ ಸಮಯದಲ್ಲಿ ಜನಪ್ರಿಯವಾಗಲು ಕಾರಣವಾಯಿತು.
ಹಾಗೆ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಹಸೀನಾ ಚಿತ್ರಕ್ಕೂ ಮುಷ್ತಾಕ್ ಅವರು ಬರೆದಿರುವ ಕರಿ ನಾಗರಗಳು ಎಂಬ ಕೃತಿ ಸ್ಪೂರ್ತಿಯಾಗಿತ್ತು. ಹಾರ್ಟ್ ಆಫ್ ಲ್ಯಾಂಪ್ ಕೃತಿಗೆ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿರುವ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪಡೆದ ಮೊದಲ ಭಾರತದ ಮಹಿಳಾ ಬರಹಗಾರ್ತಿ ಆಗಿದ್ದಾರೆ. ಇದಿಷ್ಟೇ ಅಲ್ಲ ಅವರು ಹಾಸನ ನಗರ ಪುರಸಭೆಯಲ್ಲಿ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
1990ರಿಂದ 2023ರ ವರೆಗಿನ ಮುಸ್ಲಿಂ ಮಹಿಳೆಯರ ಹೋರಾಟಗಳ ಕುರಿತು ಅವರ ಹಾರ್ಟ್ ಆಫ್ ಲ್ಯಾಂಪ್ ಕೃತಿಯಲ್ಲಿ ನೋಡಬಹುದು. ಹಾಗೆ ಈಗ ದಸರಾ ಉದ್ಘಾಟನೆಗೂ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ತಂದಿದೆ. ಅವರು ಕೂಡ ಬಹಳ ಹೋರಾಟದ ಹಿನ್ನೆಲೆಯಲ್ಲಿ ಬಂದವರು, ಮುಸ್ಲಿ ಮಹಿಳೆಯರ ಹಕ್ಕುಗಳಿಗೆ ಹೋರಾಡಿದವರು, ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದಿದ್ದಾರೆ. ಮೈಸೂರು ಜಿಲ್ಲಾಡಳಿತವು ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ದಸರಾ ಉದ್ಘಾಟಿಸಿದ್ದು ಯಾರು?
2024ನೇ ಸಾಲಿನ ಮೈಸೂರು ದಸರಾವನ್ನು ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ನೆರವೇರಿಸಿದ್ದರು. ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಿದ್ದರು.
2025ರ ದಸರಾ ಆರಂಭ ಯಾವಾಗ?
2025 ಸೆಪ್ಟೆಂಬರ್ 22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಆಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದೆ. ವಾರಗಳ ಕಾಲ ದಸರಾ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಈ ಸಮಯದಲ್ಲಿ ಮೈಸೂರು ಪ್ರವಾಸಗರಿಂದ ತುಂಬಿರಲಿದೆ.



Click it and Unblock the Notifications