Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಜೆಟ್ 2026: ಆರೋಗ್ಯ ವಲಯಕ್ಕೆ ಸಿಕ್ಕಿದ್ದೇನು? ಯಾವೆಲ್ಲಾ ಔಷಧಿಗಳು ಅಗ್ಗ!
ಬಹು ನಿರೀಕ್ಷಿತ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಸಮಯದಲ್ಲಿ ಹಲವು ವಲಯಗಳಿಗೆ ಭರ್ಜರಿ ಕೊಡುಗೆಗಳ ಘೋಷಿಸಿದ್ದಾರೆ. ಅದ್ರಲ್ಲೂ ಆರೋಗ್ಯ ವಲಯಕ್ಕೆ ಹಲವು ರೀತಿಯ ಕೊಡುಗೆಗಳ ಘೋಷಿಸಲಾಗಿದೆ. ಹಾಗಾದ್ರೆ ಈ ಬಜೆಟ್‌ನಲ್ಲಿ ಆರೋಗ್ಯ ವಲಯಕ್ಕೆ ಸಿಕ್ಕಿದ್ದೇನು ಎಂಬುದನ್ನು ತಿಳಿದುಕೊಳ್ಳೋಣ.
ವಿಶೇಷವಾಗಿ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಈ ಬಜೆಟ್ ಸಿಹಿ ಸುದ್ದಿ ತಂದಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಅದ್ರಲ್ಲೂ ಹಲವು ಕಡೆಗಳಲ್ಲಿ ಹೊಸ ಸಂಶೋಧನ ಕೇಂದ್ರ ಹಾಗೆ ಆಸ್ಪತ್ರೆ ನಿರ್ಮಾಣ ಕುರಿತಾಗಿಯೂ ಅವರು ಘೋಷಣೆ ಮಾಡಿದ್ದಾರೆ.

ಇದರಲ್ಲಿ 3 ಹೊಸ ಏಮ್ಸ್ ಆಸ್ಪತ್ರೆ ಹಾಗೂ ಐದು ಯೂನಿರ್ವಸಿಟಿ ಟೌನ್ ಷಿಪ್ ಸ್ಥಾಪನೆ, 3 ಆಯುರ್ವೇದ ಇನ್ಸಿ ಟಿಟ್ಯೂಟ್ ಸ್ಥಾಪನೆ ಸೇರಿವೆ. ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆ ಹಾಗೂ ದಿನೇ ದಿನೇ ಹೆಚ್ಚುತ್ತಿರುವ ಸಕ್ಕರೆ ಕಾಯಿಲೆಯ ಔಷಧಗಳ ಬೆಲೆ ಇಳಿಕೆಯಾಗುತ್ತಿರುವುದು ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಆರ್ಥಿಕ ನೆರವು ನೀಡಲಿದೆ. ಔಷಧಿಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ಘೋಷಣೆ ಮಾಡಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಕೆಲವು ಪ್ರಮುಖ ಔಷಧಗಳ ಆಮದು ಸುಂಕದಲ್ಲಿ ರಿಯಾಯಿತಿ ನೀಡಲಾಗಿದೆ. ಇದರಿಂದ ದೇಶೀಯ ಔಷಧಿ ಉತ್ಪಾದನೆಗೆ ಪ್ರೋತ್ಸಾಹ ನೀಡಲಾಗಿದೆ. ಇದರಿಂದ ತೆರಿಗೆ ವಿನಾಯಿತಿಯ ಮೂಲಕ ಔಷಧಿಗಳ ಮೇಲಿನ ದರ ಕಡಿತಕ್ಕೆ ಮುಂದಾಗಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ 17 ಪ್ರಮುಖ ಔಷಧಗಳ ಮೇಲಿನ ಜಿಎಸ್‌ಟಿ ಕಡಿತ ಘೋಷಿಸಿದ್ದು, ಹಲವು ಔಷಧಿಗಳ ದರ ಇಳಿಕೆಯಾಗಲಿದೆ.
ಹಾಗೆ ಇದೇ ಮೊದಲ ಬಾರಿಗೆ ಆರೋಗ್ಯ ವಲಯಕ್ಕೆ ಬರೋಬ್ಬರಿ ₹1,04,599 ಕೋಟಿ ಮೀಸಲಿಡಲಾಗಿದೆ. ಖಾಸಗಿ ವಲಯದ ಸಹಭಾಗಿತ್ವದಲ್ಲಿ ಐದು ವೈದ್ಯಕೀಯ ಪ್ರವಾಸೋದ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ. ಗುಜರಾತ್‌ನ ಜಾಮ್‌ನಗರದಲ್ಲಿರುವ ಆಯುಷ್ ಔಷಧಾಲಯಗಳು ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯಗಳು ಮತ್ತು WHO ಸಾಂಪ್ರದಾಯಿಕ ಔಷಧ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾಪಿಸಿದ್ದಾರೆ. ತುರ್ತು ಮತ್ತು ಆಘಾತ ಆರೈಕೆ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಜಿಲ್ಲಾ ಆಸ್ಪತ್ರೆಗಳಲ್ಲಿ 50% ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.
ಮಾನಸಿಕ ಆರೋಗ್ಯಕ್ಕೆ ಒತ್ತು
ಆಯುರ್ವೇದ, ಯೋಗ, ಮಾನಸಿಕ ಆರೋಗ್ಯ ಸೇವೆಗಳು ಮತ್ತು ಸಂಬಂಧಿತ ಆರೋಗ್ಯ ರಕ್ಷಣಾ ಶಿಕ್ಷಣವನ್ನು ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳ ಸ್ಥಾಪನೆಯನ್ನು ಘೋಷಿಸಲಾಗಿದೆ. ಮುಂಬರುವ ವರ್ಷಗಳಲ್ಲಿ ಒಂದು ಲಕ್ಷ ಆರೋಗ್ಯ ವೃತ್ತಿಪರರಿಗೆ ತರಬೇತಿ ನೀಡುವ ಹತ್ತು ಹೊಸ ಸಂಬಂಧಿತ ಆರೋಗ್ಯ ವಿಭಾಗಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.
ಹೊಸ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆ, ನಿಮ್ಹಾನ್ಸ್ 2 ಮತ್ತು ಐದು ಪ್ರಾದೇಶಿಕ ವೈದ್ಯಕೀಯ ಪ್ರವಾಸೋದ್ಯಮ ಕೇಂದ್ರ ಸ್ಥಾಪಿಸಲು ಪ್ರಸ್ತಾಪಿಸಿದ್ದಾರೆ. ಹಾಗೆ ಸರ್ಕಾರವು ಪ್ರಮುಖ ಕ್ಯಾನ್ಸರ್ ಔಷಧಿಗಳ ಮೇಲಿನ ಮೂಲಭೂತ ಕಸ್ಟಮ್ಸ್ ಸುಂಕವನ್ನು ವಿನಾಯಿತಿ ನೀಡುವುದರಿಂದ 17 ವಿಧದ ಕ್ಯಾನ್ಸರ್ ಔಷಧಿಗಳು ಅಗ್ಗವಾಗಲಿವೆ. ವಿಶೇಷ ವೈದ್ಯಕೀಯ ಉದ್ದೇಶಗಳಿಗಾಗಿ ಆಹಾರದ ವೈಯಕ್ತಿಕ ಆಮದುಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಗೆ 7 ಹೆಚ್ಚುವರಿ ಅಪರೂಪದ ಕಾಯಿಲೆಗಳಿಗೆ ಔಷಧಿಗಳನ್ನು ಸೇರಿಸಲಾಗಿದೆ.
ಜೈವಿಕ ಮತ್ತು ಬಯೋಸಿಮಿಲರ್‌ಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ಕ್ಯಾನ್ಸರ್ ಮತ್ತು ಸ್ವಯಂ ನಿರೋಧಕ ಸಮಸ್ಯೆಗಳ ಕಾಯಿಲೆಗಳನ್ನು ಪರಿಹರಿಸಲು ₹10,000 ಕೋಟಿ ವೆಚ್ಚದೊಂದಿಗೆ ಬಯೋಫಾರ್ಮಾ 'ಶಕ್ತಿ ಮಿಷನ್' ಅನ್ನು ಪ್ರಾರಂಭಿಸುವುದಾಗಿದೆ.



Click it and Unblock the Notifications











