Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ರೇವತಿ ನಕ್ಷತ್ರದಲ್ಲಿ ಬುಧ-ಗುರು ಸಂಯೋಗ 2023 : ಈ 5 ರಾಶಿಯವರಿಗೆ ಅದೃಷ್ಟವೋ ಅದೃಷ್ಟ
ಗುರು ಮತ್ತು ಬುಧನನ್ನು ಮಂಗಳಕರ ಗ್ರಹಗಳೆಂದು ಪರಿಗಣಿಸಲಾಗುತ್ತದೆ. ಮಾರ್ಚ್ 25 ರಂದು ಗುರು ಮತ್ತು ಬುಧ ಎರಡೂ ಗ್ರಹಗಳು ಒಟ್ಟಾಗಿ ರೇವತಿ ನಕ್ಷತ್ರದಲ್ಲಿ ಗೋಚಾರವಾಗಿದೆ.
ಈ ಎರಡು ಗ್ರಹಗಳು ಮಾರ್ಚ್ 25 ರ ಶನಿವಾರದಂದು ರೇವತಿ ನಕ್ಷತ್ರವನ್ನು ಪ್ರವೇಶಿಸಿದ್ದು, ಈ ಕಾರಣದಿಂದಾಗಿ ರೇವತಿ ನಕ್ಷತ್ರದಲ್ಲಿ ಗುರು ಮತ್ತು ಬುಧ ಸಂಯೋಗವು ರೂಪುಗೊಳ್ಳುತ್ತಿದೆ. ಇದರ ಪರಿಣಾಮದಿಂದಾಗಿ ಕೆಲ ರಾಶಿಯವರಿಗೆ ಆರ್ಥಿಕವಾಗಿ ಶುಭಫಲಗಳಿದೆ.

ಹಾಗಾದ್ರೆ ಆ ರಾಶಿಗಳು ಯಾವುದು ಅನ್ನೋದನ್ನು ನೋಡೋಣ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಹನ್ನೊಂದನೇ ಮನೆಯಲ್ಲಿ ಬುಧ ಮತ್ತು ಗುರು ಸೇರಲಿದ್ದಾರೆ. ಈ ಕಾರಣದಿಂದಾಗಿ, ಈ ಬಾರಿ ವೃಷಭ ರಾಶಿಯವರಿಗೆ ಆರ್ಥಿಕವಾಗಿ ಉತ್ತಮವಾಗಿರಲಿದೆ. ಪೂರ್ವಜರ ಆಸ್ತಿಯಿಂದ ಲಾಭಗಳಿಸುವ ಸಾಧ್ಯತೆ ಇದೆ. ಇನ್ನೂ ಈ ಅವಧಿಯು ವೃಷಭ ರಾಶಿಯವರಿಗೆ ಸೃಜನಶೀಲ ಕೆಲಸಗಳಿಗೆ ಸಹ ಉತ್ತಮವಾಗಿದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚುತ್ತದೆ. ಹೊಸ ಜನರ ಸಂಪರ್ಕ ಹೆಚ್ಚುವುದು, ಕುಟುಂಬದಲ್ಲಿ ಅಣ್ಣ-ತಮ್ಮಂದಿರಿದ್ದರೆ ಅವರು ನಿಮ್ಮ ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತಾರೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಸಮಯ ತುಂಬಾನೇ ಪ್ರಶಸ್ತವಾಗಿದೆ. ಈ ಅವಧಿಯಲ್ಲಿ ಮಿಥುನ ರಾಶಿಯವರಿಗೆ ಹೊಸ ವೃತ್ತಿ ಅವಕಾಶಗಳು ಒದಗಿ ಬರುವ ಸಾಧ್ಯತೆಗಳಿದೆ. ಸ್ಥಿರಾಸ್ತಿಯನ್ನು ಖರೀದಿಸುವ ಅವಕಾಶಗಳು ಇದೆ. ಇನ್ನೂ ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಹಾಗೂ ನಿಮ್ಮ ಗೌರವವು ಹೆಚ್ಚಾಗುತ್ತದೆ.
ವೃಶ್ಚಿಕ ರಾಶಿ
ಗುರು ಮತ್ತು ಬುಧ ಗ್ರಹಗಳ ಸಂಯೋಗದ ಈ ಅವಧಿಯಲ್ಲಿ ವೃಶ್ಚಿಕ ರಾಶಿಯವರಿಗೆ ಸೃಜನಶೀಲ ಕೆಲಸಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹಾಗೂ ನಿಮ್ಮ ಆದಾಯ ಕೂಡ ಹೆಚ್ಚಾಗುತ್ತದೆ. ಈ ಅವಧಿಯಲ್ಲಿ ಆರ್ಥಿಕವಾಗಿ ಲಾಭ ಉಂಟಾಗುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಪ್ರಗತಿ ಇರುತ್ತದೆ. ಹೂಡಿಕೆ ಮಾಡುವವರಿಗೆ ಈ ಅವಧಿಯು ತುಂಬಾನೇ ಒಳ್ಳೆಯದು. ಸಂಕಷ್ಟ ಕಾಲದಲ್ಲಿ ಕುಟುಂಬ, ಪರಿಚಯಸ್ಥರು ಮತ್ತು ಸಹೋದ್ಯೋಗಿಗಳ ಬೆಂಬಲ ಇರಲಿದೆ.
ಧನು ರಾಶಿ
ಬುಧ ಮತ್ತು ಗುರುವಿನ ಸಂಯೋಜನೆಯಿಂದ ಧನು ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ. ಆಸ್ತಿ ಖರೀದಿಗೆ ಇದು ಉತ್ತಮ ಸಮಯವಾಗಿದ್ದು, ಹೊಸ ಉದ್ಯೋಗ ಅವಕಾಶಗಳನ್ನು ಪಡೆಯುವ ಸಾಧ್ಯತೆ ಇದೆ. ಇನ್ನೂ ನಿಮ್ಮ ವೃತ್ತಿಜೀವನದಲ್ಲಿ ಧನಾತ್ಮಕ ಬದಲಾವಣೆಯನ್ನು ಕಾಣಬಹುದು.
ಕುಂಭ ರಾಶಿ
ರೇವತಿ ನಕ್ಷತ್ರದಲ್ಲಿ ಬುಧ ಮತ್ತು ಗುರುಗಳ ಸಂಯೋಗದಿಂದ ಕುಂಭ ರಾಶಿಯವರು ಶುಭ ಫಲವನ್ನು ನಿರೀಕ್ಷಿಸಬಹುದು. ಆರ್ಥಿಕವಾಗಿ ಲಾಭವಾಗೋ ಸಾಧ್ಯತೆ ಇದೆ. ವ್ಯಾಪಾರ ಮಾಡುವವರಿಗೆ ಇದು ಲಾಭದಾಯಕ ಕಾಲವಾಗಿದೆ. ಇನ್ನೂ ಕುಂಭ ರಾಶಿಯ ವಿದ್ಯಾರ್ಥಿಗಳಿಗೂ ಶುಭ ಫಲಗಳಿದೆ.



Click it and Unblock the Notifications


