Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸಿಂಹ ರಾಶಿಯಲ್ಲಿ ಬುಧ ಸಂಚಾರ: 68 ದಿನಗಳವರೆಗೆ ಈ 3 ರಾಶಿಯವರಿಗೆ ಲಕ್ಷ್ಮಿ ಯೋಗ
ವೈದಿಕ ಶಾಸ್ತ್ರದ ಪ್ರಕಾರ ಬುಧ ಸಿಂಹ ರಾಶಿಗೆ ಸಂಚರಿಸಿರುವುದರಿಂದ ತುಂಬಾ ಶುಭ ಯೋಗವಾದ ಲಕ್ಷ್ಮಿನಾರಾಯಣ ಯೋಗ ಏರ್ಪಟ್ಟಿದೆ. ಶುಕ್ರದಲ್ಲಿ ಶುಕ್ರ ಈಗಾಗಲೇ ಇದೆ. ಸಿಂಹದಲ್ಲಿ ಶುಕ್ರ ಹಾಗೂ ಬುಧ ಯುತಿಯಿಂದಾಗಿ ಲಕ್ಷ್ಮಿ ನಾರಾಯಣ ಯೋಗ ಏರ್ಪಟ್ಟಿದೆ. ಆಗಸ್ಟ್ 7ರವರೆಗೆ ಲಕ್ಷ್ಮಿ ನಾರಾಯಣ ಯೋಗವಿದೆ, ಅಲ್ಲದೆ ಬುಧ ಅಕ್ಟೋಬರ್ 1ರವರೆಗೆ ಸಿಂಹ ರಾಶಿಯಲ್ಲಿಯೇ ಇರಲಿದೆ. ಈ ಅವಧಿ ಈ ಮೂರು ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಅವಧಿ ತುಂಬಾನೇ ಚೆನ್ನಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿಯನ್ನು ಕಾಣುತ್ತೀರಿ. ಈ ಅವಧಿಯಲ್ಲಿ ನೀವು ಮಾಡುವ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುತ್ತಿರಿ. ಈ ಸಮಯದಲ್ಲಿ ಹೂಡಿಕೆ ಮಾಡಿದರೆ ಅದರ ಲಾಭ ಪಡೆಯುತ್ತೀರಿ. ಸಿಂಹ ರಾಶಿಯಲ್ಲಿ ಬುಧದ ಸಂಚಾರವು ನಿಮ್ಮ ಜೀವನದಲ್ಲಿ ಕೂಡ ಅನೇಕ ಬದಲಾವಣೆಗಳನ್ನು ತರುತ್ತದೆ. ಈ ಅವಧಿಯಲ್ಲಿ ಉದ್ಯೋಗಿಗಳು ಬಯಸಿದ ಬಡ್ತಿ ಸಿಗಲಿದೆ. ಹಣಕಾಸಿನ ಸ್ಥಿತಿ ತುಂಬಾ ಉತ್ತಮವಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಉಳಿತಾಯ ಹೆಚ್ಚಾಗಲಿದೆ. ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಒಳ್ಳೆಯ ಲಾಭ ಸಿಗಲಿದೆ. ವೈವಾಹಿಕ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಕುಟುಂಬ ಜೀವನದಲ್ಲಿ ನೆಮ್ಮದಿ ಇರುತ್ತದೆ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಬುಧ ಸಂಕ್ರಮಣ ಸಿಂಹ ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ. ನೀವು ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ಈ ಸಮಯದಲ್ಲಿ ಕೆಲವು ಅಡೆತಡೆಗಳಿಂದ ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ. ಕುಟುಂಬ ಜೀವನದಲ್ಲಿ ಸಂತೋಷದ ವಾರಾವರಣ ಇರಲಿದೆ. ಈ ಸಮಯದಲ್ಲಿ ಹಣಕಾಸಿನ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ಈ ಸಮಯದಲ್ಲಿ ನಿಮ್ಮ ನಾಯಕತ್ವದ ಸಾಮರ್ಥ್ಯದಿಂದಾಗಿ, ನಿಮ್ಮ ಎಲ್ಲಾ ಕಾರ್ಯಗಳನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಸ್ಥರು ಈ ಅವಧಿಯಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಬುಧದ ಸಂಚಾರವು ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡಲಿದೆ.
ಧನು ರಾಶಿ
ಬುಧ ಸಿಂಹ ರಾಶಿಯಲ್ಲಿ ಇರುವ ಈ ಅವಧಿ ಧನು ರಾಶಿಯವರಿಗೆ ತುಂಬಾನೇ ಉತ್ತಮವಾಗಿದೆ. ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಸಿಂಹ ರಾಶಿಯಲ್ಲಿ ಬುಧದ ಸಂಚಾರವು ನಿಮಗೆ ಅದ್ಭುತವಾಗಿದೆ. ಈ ಸಮಯದಲ್ಲಿ ನೀವು ಅನೇಕ ಉದ್ಯೋಗ ಅವಕಾಶಗಳನ್ನು ಪಡೆಯುತ್ತೀರಿ. ಈ ಅವಧಿಯಲ್ಲಿ ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಉತ್ತಮ ಅವಕಾಶಗಳು ದೊರೆಯಲಿದೆ. ವ್ಯಾಪಾರಸ್ಥರು ಈ ಸಮಯದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರುತ್ತದೆ.



Click it and Unblock the Notifications
