Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಬುಧ ಗೋಚಾರ 2023: ಈ 3 ರಾಶಿಯವರ ವೃತ್ತಿ, ಆರ್ಥಿಕ ಜೀವನಕ್ಕೆ ಪೆಟ್ಟು ಬೀಳಲಿದೆ
ವೈದಿಕ ಜ್ಯೋತಿಷ್ಯದಲ್ಲಿ ಬುಧವನ್ನು ತರ್ಕ ಮತ್ತು ಸಂಭಾಷಣೆಯ ಅಂಶವೆಂದು ಪರಿಗಣಿಸಲಾಗಿದೆ. ಬುಧನು ಜೂನ್ 7 ರಂದು ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಜೂನ್ 24 ರವರೆಗೆ ಇದೇ ರಾಶಿಯಲ್ಲಿ ಸಾಗಲಿದ್ದಾನೆ. ನಂತರ ಅವರು ಮಿಥುನ ರಾಶಿಯಲ್ಲಿ ಸಾಗುತ್ತಾರೆ. ಬುಧನು ವೃಷಭ ರಾಶಿಗೆ ಪ್ರವೇಶ ಮಾಡಿರೋದ್ರಿಂದ ಮೂರು ರಾಶಿಯವರು ಜಾಗರೂಕರಾಗಿರಬೇಕು. ಹಾಗಾದರೆ ಆ 3 ರಾಶಿಗಳು ಯಾವುವು ಅನ್ನೋದನ್ನು ತಿಳಿಯೋಣ.
ಮೇಷ ರಾಶಿ
ಬುಧನು ವೃಷಭ ರಾಶಿಗೆ ಪ್ರವೇಶ ಮಾಡಿರೋದ್ರಿಂದ ನೀವು ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ನಿಮ್ಮ ಕುಟುಂಬದಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಹುಟ್ಟಿಕೊಳ್ಳುತ್ತದೆ. ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತೀರಿ. ನಿಮ್ಮ ಖರ್ಚು ಹೆಚ್ಚಾಗುತ್ತದೆ. ಕೈಯಲ್ಲಿ ದುಡ್ಡು ಉಳಿಯೋದಿಲ್ಲ. ನಿಮ್ಮ ವೈವಾಹಿಕ ಜೀವನದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ನಿಮ್ಮ ಸಂಗಾತಿಯಿಂದ ಒತ್ತಡವನ್ನು ಅನಭವಿಸುತ್ತೀರಿ. ಆದರೆ ಎಲ್ಲಾ ಸಮಸ್ಯೆಗಳನ್ನು ನೀವು ಜಾಗರೂಕತೆಯಿಂದ ನಿಭಾಯಿಸಬೇಕು.

ತುಲಾ ರಾಶಿ
ಬುಧನು ವೃಷಭ ರಾಶಿಗೆ ಪ್ರವೇಶ ಮಾಡಿರೋದ್ರಿಂದ ಜೀವನದಲ್ಲಿ ಆಕಸ್ಮಿಕ ಘಟನೆಗಳು ನಡೆಯಬಹುದು. ಈ ಸಮಯದಲ್ಲಿ ಬುಧ ಸಂಚಾರವು ನಿಮಗೆ ಸ್ವಲ್ಪ ತೊಂದರೆಯನ್ನು ಉಂಟು ಮಾಡುವ ಸಾಧ್ಯತೆಯಿದೆ. ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ನಿಮ್ಮ ಉನ್ನತ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಆಗದಂತೆ ನೋಡಿಕೊಳ್ಳಿ.
ಧನು ರಾಶಿ
ಬುಧನು ವೃಷಭ ರಾಶಿಗೆ ಪ್ರವೇಶ ಮಾಡಿರೋದ್ರಿಂದ ನಿಮಗೆ ಕೆಲಸದ ವಿಚಾರದಲ್ಲಿ ಉತ್ತಮ ಫಲಿತಾಂಶವನ್ನು ನೀಡುವುದಿಲ್ಲ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬಹುದು. ಈ ಬುಧ ಸಂಕ್ರಮಣ ನಿಮ್ಮ ವೃತ್ತಿಗೆ ಒಳ್ಳೆಯದಲ್ಲ. ನೀವು ಕೆಲಸದಲ್ಲಿ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಕಚೇರಿಯಲ್ಲಿ ನೀವು ಸಾಧಿಸಲು ಸಾಧ್ಯವಾಗದಂತಹ ಗುರಿಯನ್ನು ನೀಡಬಹುದು. ಮತ್ತು ಅದರಿಂದ ನೀವು ಮಾನನಷ್ಟವನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ಸ್ಥಿತಿಗೆ ಸಂಬಂಧಿಸಿದಂತೆ ನೋಡೋದಾದ್ರೆ ಈ ಸಮಯದಲ್ಲಿ ನಿಮ್ಮ ಖರ್ಚುಗಳು ಹೆಚ್ಚಾಗುತ್ತವೆ. ಮತ್ತು ನಿಮ್ಮ ಉಳಿತಾಯವು ಕಡಿಮೆಯಾಗುತ್ತದೆ.



Click it and Unblock the Notifications
