Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಬುಧ ಗುರು ಯುತಿ 2023 (ಜೂ.7ರ ವರೆಗೆ): ಈ ರಾಶಿಯವರಿಗೆ ಅದೃಷ್ಟದ ಸಮಯವಿದು
ಗುರು ಏಪ್ರಿಲ್ 22ಕ್ಕೆ ಮೇಷ ರಾಶಿಗೆ ಪ್ರವೇಶಿಸಿದೆ. ಬುಧ ಗ್ರಹವು ಮಾರ್ಚ್ 31 ರಂದು ಮೇಷ ರಾಶಿಯನ್ನು ಪ್ರವೇಶಿಸಿ ನಂತರ ಹಿಮ್ಮುಖ ಚಲನೆಯಲ್ಲಿತ್ತು, ಇದೀಗ ಮೇ 15ರಿಂದ ಮತ್ತೆ ಮೇಷ ರಾಶಿಯಲ್ಲಿ ನೇರ ಚಲನೆಯಲ್ಲಿ ಇರಲಿದೆ. ಗುರು ಹಾಗೂ ಬುಧ ಎರಡೂ ಮೇಷ ರಾಶಿಯಲ್ಲಿಯೇ ಇರುವುದರಿಂದ ಬುಧ-ಗುರು ಯುತಿ ಏರ್ಪಟ್ಟಿದೆ. ಗುರು ನಮ್ಮ ಸೌಕರ್ಯಗಳ ಮೇಲೆ ಪ್ರಭಾವ ಬೀರುವ ಗ್ರಹವಾದರೆ ಬುಧ ನಮ್ಮ ಸಂವಹನದ ಮೇಲೆ ಪ್ರಭಾವ ಬೀರುತ್ತದೆ.

ವೈದಿಕ ಶಾಸ್ತ್ರದ ದೃಷ್ಟಿಯಿಂದ ಈ ಎರಡೂ ಗ್ರಹವೂ ತುಂಬಾ ಪ್ರಮುಖವಾದ ಗ್ರಹವಾಗಿದೆ. ಇದೀಗ ಮೇಷ ರಾಶಿಯಲ್ಲಿ ಈ ಎರಡೂ ಗ್ರಹವಿರುವುದರಿಂದ ಈ ಅವಧಿ ಕೆಲ ರಾಶಿಯವರಿಗಂತೂ ತುಂಬಾ ಪ್ರಯೋಜನಕಾರಿಯಾಗಲಿದೆ. ಬುಧವು ಜೂನ್ 7ರವರೆಗೆ ಮೇಷ ರಾಶಿಯಲ್ಲಿಯೇ ಇರಲಿದೆ. ಈ ಅವಧಿ ಈ ಕೆಳಗಿನ ರಾಶಿಯವರಿಗೆ ತುಂಬಾ ಅದೃಷ್ಟ ತರಲಿದೆ. ನಿಮ್ಮ ಬಯಕೆಗಳು ಈಡೇರುವುದು, ಏನಾದರೂ ಹೊಸ ಕಾರ್ಯಕ್ಕೆ ಕೈ ಹಾಕಿದರೆ ಅದರಲ್ಲಿ ಯಶಸ್ಸು ಸಿಗಲಿದೆ. ಈ ಅವಧಿ ಯಾವೆಲ್ಲಾ ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಗುರು-ಬುಧ ಯುತಿ ವರದಾನವಾಗಿ ಪರಿಣಮಿಸಿದೆ. ಈ ಸಮಯದಲ್ಲಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ತುಂಬಾನೇ ಒಳ್ಳೆಯ ಫಲಿತಾಂಶ ಕಾಣುವಿರಿ, ನಿಮ್ಮ ಕೆಲಸದಲ್ಲಿ ಪ್ರಗತಿಯಾಗಲಿದೆ, ಅಪೂರ್ಣವಾಗಿದ್ದ ಕೆಲಸಗಳು ಪೂರ್ಣವಾಗಲಿದೆ. ಇದರಿಂದಾಗಿ ಆರ್ಥಿಕ ಸ್ಥಿತಿಯಲ್ಲೂ ಸುಧಾರಣೆ ಉಂಟಾಗುವುದು. ಏನಾದರೂ ಹಳೆಯ ಸಾಲವಿದ್ದರೆ ಅದನ್ನು ಕೂಡ ಮರುಪಾವತಿಸುವಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ದಾಂಪತ್ಯ ಜೀವನದಲ್ಲಿ ಮಾಧುರ್ಯ ಹೆಚ್ಚಾಗಲಿದೆ. ಅವಾಹಿತರು ವಿವಾಹಕ್ಕೆ ಸಂಬಂಧ ಹುಡುಕುತ್ತಿದ್ದರೆ ಗುರು ಬಲದಿಂದಾಗಿ ಸಂಬಂಧ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ಪಾಲುದಾರಿಕೆಯಲ್ಲಿ ಕೆಲಸ ಮಾಡುವವರು ಕೂಡ ಈ ಅವಧಿಯಲ್ಲಿ ಅಭಿವೃದ್ಧಿ ಕಾಣುವಿರಿ.
ಮಿಥುನ ರಾಶಿ
ಗುರು ಮತ್ತು ಬುಧದ ಸಂಯೋಜನೆಯು ಮಿಥುನ ರಾಶಿಯವರಿಗೆ ಅತ್ಯುತ್ತಮ ಫಲಿತಾಂಶಗ ನೀಡಲಿದೆ. ಗುರು ಹಾಗೂ ಬುಧದ ಮೈತ್ರಿಯು ಹೊಸ ಆದಾಯದ ಮೂಲವನ್ನು ಸೃಷ್ಟಿಸಲಿದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿಯೂ ಸದೃಢವಾಗಿರುತ್ತದೆ. ನೀವು ಈ ಅವಧಿಯಲ್ಲಿ ಮಾಡುವ ಹೂಡಿಕೆಯಿಂದ ಒಳ್ಳೆಯ ಲಾಭ ಗಳಿಸುವಿರಿ. ಈ ಅವಧಿಯಲ್ಲಿ ವಿದೇಶದಲ್ಲಿ ಉದ್ಯೋಗ ಮಾಡಲು ಕನಸು ಕಾಣುತ್ತಿದ್ದು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನಿಮ್ಮ ಪ್ರಯತ್ನ ಯಶಸ್ವಿಯಾಗಲಿದೆ. ಈ ಸಮಯದಲ್ಲಿ ನೀವು ಯಾವುದೇ ಹಳೆಯ ಹೂಡಿಕೆಯಿಂದ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವ್ಯಾಪಾರ ಮಾಡುವವರಿಗೂ ಈ ಸಮಯ ಒಳ್ಳೆಯದಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದರಿಂದ ಒಳ್ಳೆಯ ಲಾಭಗಳಿಸಬಹುದು. ಈ ಅವಧಿಯಲ್ಲಿ ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ಎನಾದರೂ ವಾಹನ ಅಥವಾ ಆಸ್ತಿ ಖರೀದಿಸಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನಿಮ್ಮ ಆಸೆ ಈಡೇರಲಿದೆ.
ಕರ್ಕ ರಾಶಿ
ಗುರು ಮತ್ತು ಬುಧದ ಯುತಿ ಕರ್ಕ ರಾಶಿಯವರಿಗೆ ತುಂಬಾನೇ ಅದೃಷ್ಟ ತರಲಿದೆ. ಉದ್ಯೋಗ ಬದಲಾವಣೆಗೆ ಅಥವಾ ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿರಯವವರಿಗೆ ಒಳ್ಳೆಯ ಅವಕಾಶಗಳು ದೊರೆಯಲಿದೆ. ಉದ್ಯೋಗಿಗಳು ತಮ್ಮ ವೃತ್ತಿ ಕ್ಷೇತ್ರದಲ್ಲಿ ಒಳ್ಳೆಯ ಪ್ರಯೋಜನ ಪಡೆಯುತ್ತಾರೆ. ವ್ಯಾಪಾರ ಮಾಡುವವರು ವ್ಯಾಪಾರದಲ್ಲಿ ಅಪಾರ ಲಾಭವನ್ನು ಪಡೆಯುತ್ತಾರೆ. ಕುಟುಂಬ ಜೀವನದಲ್ಲಿ ಪ್ರೀತಿ, ಸಂತೋಷದ ವಾತಾವರಣ ಇರಲಿದೆ. ಈ ಅವಧಿ ಆರ್ಥಿಕವಾಗಿ ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದಿದೆ.



Click it and Unblock the Notifications
