Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಚಂದ್ರ ಗ್ರಹಣ 2023 : ಈ ರಾಶಿಯವರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ
ರಾಹು ಮತ್ತು ಕೇತುವಿನ ಪ್ರಭಾವವು ಚಂದ್ರನ ಮೇಲೆ ಬಿದ್ದಾಗ ಚಂದ್ರ ಗ್ರಹಣವಾಗುತ್ತದೆ. 2023ರ ಮೊದಲ ಚಂದ್ರಗ್ರಹಣ ಮೇ 5ರಂದು ಗೋಚರಿಸಲಿದೆ. ಚಂದ್ರ ಗ್ರಹಣವು ಮೇ 5 ರಂದು ರಾತ್ರಿ 9:00 ಗಂಟೆಗೆ ಪ್ರಾರಂಭವಾಗುತ್ತದೆ. ಗ್ರಹಣ ಆರಂಭವಾಗುವುದಕ್ಕಿಂತಲೂ ಮುಂಚಿನ ಒಂಬತ್ತು ಗಂಟೆಯ ಸಮಯ ಸೂತಕ ಕಾಲವೆಂದು ಕರೆಯಲಾಗುತ್ತದೆ. ಈ ಚಂದ್ರ ಗ್ರಹಣವು ಕೆಲವೊಂದು ರಾಶಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಹಾಗಾದ್ರೆ ಚಂದ್ರ ಗ್ರಹಣದ ಪ್ರಭಾವದಿಂದ ಯಾವೆಲ್ಲಾ ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀಳಲಿದೆ ಅನ್ನೋದನ್ನು ತಿಳಿಯೋಣ.
ಮೇಷ ರಾಶಿ
ಮೇಷ ರಾಶಿಯವರ ಮೇಲೆ ಈ ಚಂದ್ರ ಗ್ರಹಣವು ನಕಾರಾತ್ಮಕ ಪರಿಣಾಮವನ್ನು ಬೀರಲಿದೆ. ಈ ಸಮಯದಲ್ಲಿ ನೀವು ಸ್ವಲ್ಪ ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ನೀವು ಮಾನಸಿಕ ಒತ್ತಡವನ್ನು ಅನುಭವಿಸುತ್ತೀರಿ. ಆದ್ದರಿಂದ ಈ ಸಮಯದಲ್ಲಿ ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಈ ಅವಧಿಯಲ್ಲಿ ನಿಮ್ಮ ಹಣಕಾಸು ಪರಿಸ್ಥಿತಿ ದುರ್ಬಲವಾಗಿರುತ್ತದೆ. ಆದ್ದರಿಂದ ಖರ್ಚುಗಳ ಬಗ್ಗೆ ಜಾಗೃತೆ ವಹಿಸಿ. ಇನ್ನೂ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಮಾಡೋದನ್ನು ಮರೀಬೇಡಿ.

ಮಿಥುನ ರಾಶಿ
ಚಂದ್ರಗ್ರಹಣದ ಪರಿಣಾಮದಿಂದ ಕೆಲವೊಂದು ಸಮಸ್ಯೆಗಳನ್ನು ನೀವು ಎದುರಿಸಬೇಕಾಗುತ್ತದೆ. ಹೀಗಾಗಿ ನಿಮ್ಮ ಮಾತಿನ ಮೇಲೆ ಹಿಡಿತವಿರಬೇಕು. ಇನ್ನೂ ನಿಮ್ಮ ಹಣಕಾಸಿನ ಪರಿಸ್ಥಿತಿಯ ಬಗ್ಗೆಯೂ ಗಮನ ಹರಿಸಬೇಕು. ಅನಗತ್ಯ ವೆಚ್ಚಗಳು ನಿಮಗೆ ಮಾನಸಿಕ ಒತ್ತಡವನ್ನು ಉಂಟುಮಾಡಬಹುದು. ಈ ಅವಧಿಯಲ್ಲಿ ನೀವು ಚಿಂತೆಗೊಳಗಾಗುವ ಸಾಧ್ಯತೆ ಇದೆ. ನಿಮ್ಮ ಮನಸ್ಸು ಗೊಂದಲಕ್ಕೊಳಗಾಗಬಹುದು.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರು ಗ್ರಹಣದ ಸಮಯದಲ್ಲಿ ಅಶುಭ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ನೀವು ಈ ಅವಧಿಯಲ್ಲಿ ಆರೋಗ್ಯ, ಹಣಕಾಸು ಮತ್ತು ಕುಟುಂಬದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಇನ್ನೂ ನಿಮ್ಮ ಕೆಲಸದ ಬಗ್ಗೆ ಕೊಂಚ ಗಮನವಿಡೋದು ಒಳ್ಳೆಯದು. ಇಲ್ಲದಿದ್ದರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಮಾತು ಹಿಡಿತದಲ್ಲಿರಲಿ ಇಲ್ಲದಿದ್ದರೆ ನೀವು ವಾದ, ಪ್ರತಿವಾದಗಳಲ್ಲಿ ಸಿಲುಕಿಕೊಳ್ಳುತ್ತೀರಿ.
ಕನ್ಯಾ ರಾಶಿ
ಈ ಚಂದ್ರಗ್ರಹಣದ ಸಮಯದಲ್ಲಿ ಕನ್ಯಾಯವರು ತುಂಬಾನೇ ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ನೀವು ಋಣಾತ್ಮಕ ಪರಿಣಾಮ ಎದುರಿಸಬೇಕಾಗುತ್ತದೆ. ನಿಮ್ಮ ಕುಟುಂಬದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೆ ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ.



Click it and Unblock the Notifications

