Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಮೊಬೈಲ್‌ನಲ್ಲೇ ಪಿಯುಸಿ ಫಲಿತಾಂಶ ನೋಡಿ..! ಇಲ್ಲಿದೆ ಸುಲಭ ಮಾರ್ಗ
ಮಾರ್ಚ್ 1 ರಿಂದ ಮಾರ್ಚ್ 22ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಬುಧವಾರ) ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳ ಬದುಕಿನಲ್ಲಿ ಪಿಯುಸಿ ಬಹಳ ಪ್ರಮುಖ ಘಟ್ಟವಾಗಿದ್ದು ಈ ಬಾರಿ ಬರೋಬ್ಬರಿ 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಇಂದು 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಜೊತೆಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ನಂಬರ್‌ಗೂ ಸಂದೇಶ ಹೋಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿತ್ತು.

11 ಗಂಟೆಗೆ ವೆಬ್‌ಸೈಟ್‌ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ಮೂರು ಭಾಗಗಳಿಗೆ ಮಾಡಲಾಗಿದೆ.
ಫಲಿತಾಂಶ ನೋಡುವುದು ಹೇಗೆ?
ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ
ಪಿಯುಸಿ ಫಲಿತಾಂಶಗಳ ಕುರಿತು ಅಧಿಸೂಚನೆಯನ್ನು ನೋಡಿ
ಅಲ್ಲಿ ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕಗಳು ಮತ್ತು ಇತರ ಲಾಗಿನ್ ರುಜುವಾತುಗಳನ್ನು ನಮೂದಿಸಿ.
2ನೇ ಪಿಯುಸಿ ಕರ್ನಾಟಕ ಫಲಿತಾಂಶ 2024 ಅನ್ನು ಸಲ್ಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಕಳೆದ ವರ್ಷ, 12ನೇ ತರಗತಿಯ PUC 2 ಪರೀಕ್ಷೆಗಳನ್ನು ಮಾರ್ಚ್ 9 ರಿಂದ 29 ರವರೆಗೆ ನಡೆಸಲಾಯಿತು, ಏಪ್ರಿಲ್ 21 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಒಟ್ಟಾರೆ ಉತ್ತೀರ್ಣ ಶೇಕಡಾ 74.67 ರಷ್ಟು ಇತ್ತು, 7,27,923 ನೊಂದಾಯಿತರಲ್ಲಿ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ತೇರ್ಗಡೆ ದರಗಳು ಕಲಾ ವಿಭಾಗ ಶೇ. 61.22ರಷ್ಟು, ವಾಣಿಜ್ಯ ವಿಭಾಗ ಶೇ. 75.89 ರಷ್ಟಯ ಮತ್ತು ವಿಜ್ಞಾನ ವಿಭಾಗದ ಶೇ. 85.71 ರಷ್ಟು ಫಲಿತಾಂಶ ಬಂದಿತ್ತು.



Click it and Unblock the Notifications

