Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಚಂಡಮಾರುತ: ಡಿಸೆಂಬರ್ 1ರಿಂದ ಕರ್ನಾಟಕದ ಈ ಭಾಗಗಳಲ್ಲಿ ಡಿಸೆಂಬರ್ 3ರವರೆಗೆ ಭಾರೀ ಮಳೆ ಸಾಧ್ಯತೆ
ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆ ಭಾರೀ ನಷ್ಟವನ್ನು ಉಂಟು ಮಾಡುವ ಆತಂಕ ಉಂಟಾಗಿದೆ. ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆ ಬೀಳುವ ಸೂಚನೆಯಿದೆ. ಫಂಗಲ್ ಸೈಕ್ಲೋನ್‌ನಿಂದಾಗಿ ಎಲ್ಲಡೆ ಮೋಡ ಮುಸಕಿದ ವಾತಾವರಣ ಇದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ
ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಹಾಗೂ ಅಂಡಮಾನ್, ನಿಕೋಬಾರ್ ದ್ವೀಪಗಳಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಜಾಗ್ರತೆ
ವಾರಾಂತ್ಯದಲ್ಲಿ ಟ್ರಿಪ್ ಹೋಗುವವರು ಸಾಧ್ಯವಾದರೆ ತಮ್ಮ ಟ್ರಿಪ್‌ಗಳನ್ನು ಮುಂದೂಡುವುದು ಒಳ್ಳೆಯದು, ಭಾರೀ ಮಳೆ ತುಂಬಾನೇ ಅಡ್ಡಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜನ ಜೀವನ ಅಸ್ತವ್ಯಸ್ಥವಾಗಬಹುದು. ಈ ಸಮಯದಲ್ಲಿ ಸಮುದ್ರದ ಬಳಿ ಹೋಗುವುದು ಅಥವಾ ನೀರಿನ ಅಪಾಯವಿರುವ ಸ್ಥಳಗಳಿಗೆ ಹೋಗದಿರುವುದು ಸುರಕ್ಷಿತ. ಮೀನುಗಾರರಿಗೆ ಮೀನು ಬೋಟುಗಳನ್ನು ಸಮುದ್ರಕ್ಕೆ ಇಳಿಸದಂತೆ ಸೂಚನೆ ನೀಡಲಾಗಿದೆ.
ಅಕಾಲಿಕ ಮಳೆಯಿಂದ ಬೆಳೆ ನಷ್ಟ
ಈಗ ಚಂಡಾಮಾರುತದಿಂದಾಗಿ ಮಳೆ ಬೀಳುತ್ತಿರುವುದರಿಂದ ಹಲವು ಕಡೆ ಬೆಳೆ ನಷ್ಟ ಉಂಟಾಗುತ್ತಿದೆ, ಇನ್ನು ಕೆಲವು ಕಡೆ ಭಾರೀ ದುರಂತವನ್ನೇ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ ಜನರಿಗೆ ನೆರವಾಗಲು ಸಕಲ ಸಿದ್ಧತೆ ನಡೆಸಿದೆ.
ತಮಿಳುನಾಡಿನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ, ಹಲವು ಕಡೆಯಿಂದ ಜನರನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ, ಅಲ್ಲದೆ ನೀರಿನ ಪ್ರಮಾಣ ಹೆಚ್ಚಾದರೆ ಜನರ ರಕ್ಷಣೆಗೆ ಮೋಟಾರ್ ಪಂಪ್‌ಗಳು, ಜನರೇಟರ್, ದೋಣಿ, ಬೋಟು ಅಂತ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಂಗಳೂರು, ಅದರ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾವರಣ
ಬೆಂಗಳೂರು ಹಾಗೂ ಸುತ್ತ ಮುತ್ತಲಿನ ಪ್ರದೇಶದದಲ್ಲಿ ಇನ್ನೂ 40 ಗಂಟೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಉಷ್ಣಾಂಶ 18 ಡಿಗ್ರಿC ಇರುವುದರಿಂದ ಚಳಿಯೂ ಅಧಿಕವಿರಲಿದೆ, ಹಾಗಾಗಿ ಟ್ರಾವೆಲ್ ಮಾಡುವಾಗ ಹವಾಮಾನ ವರದಿ ಪರಿಶೀಲಿಸಿ ಹೋಗುವುದು ಸೂಕ್ತವಾಗಿದೆ.
ಡಿಸೆಂಬರ್ 2ರವರೆಗೆ ಭಾರೀ ಮಳೆಯ ಸಾಧ್ಯತೆ ಇದೆ
ಕೊಡಗು, ಚಿಕ್ಕಮಗಳೂರು, ಹಾಸನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಹಲವು ಕಡೆ ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ರಾಮನಗರ, ಮಂಡ್ಯ, ತುಮಕೂರು ಈ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ, ಉತ್ತರ ಕರ್ನಾಟಕದ ಸಾಧಾರಣ ಮಳೆಯಾಗಲಿದೆ.



Click it and Unblock the Notifications
