ಆಗಸ್ಟ್ 22ರ ದಿನ ಭವಿಷ್ಯ: ಈ ದಿನ 12 ರಾಶಿಗಳಲ್ಲಿ 5 ರಾಶಿಯವರಿಗೆ ತುಂಬಾನೇ ಶುಭವಾಗಿದೆ

ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್‌ 22ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಆಗಸ್ಟ್ 22
ನಕ್ಷತ್ರ: ಬೆಳಗ್ಗೆ 06:31ರವರೆಗೆ ಚಿತ್ರ ನಂತರ ಸ್ವಾತಿ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಸಂಜೆ 03:34ರಿಂದ 05:08ರವರೆಗೆ

ಮೇಷ ರಾಶಿ
ಇಂದು ವ್ಯಾಪಾರಸ್ಥರಿಗೆ ತುಂಬಾ ಲಾಭದಾಯಕ ದಿನವಾಗಲಿದೆ. ಹಿಂದೆ ಮಾಡಿದ ಹೂಡಿಕೆಯಿಂದ ಉತ್ತಮ ಪ್ರಯೋಜನವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಇಂದು ಕಚೇರಿಯಲ್ಲಿ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 6 ರಿಂದ 8:25 ರವರೆಗೆ

Dina Bhavishya

ವೃಷಭ ರಾಶಿ
ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ಪೋಷಕರ ಆಶೀರ್ವಾದದಿಂದ ದೊಡ್ಡ ಸಮಸ್ಯೆ ಬಗೆಹರಿಯಲಿದೆ. ಕೆಲಸದ ಸ್ಥಳದಲ್ಲಿ, ನಿಮ್ಮ ಕೆಲಸವನ್ನು ಪೂರ್ಣ ಉತ್ಸಾಹದಿಂದ ಮಾಡಿ. ನಿಮ್ಮ ಕಠಿಣ ಪರಿಶ್ರಮಕ್ಕೆ ಶೀಘ್ರದಲ್ಲೇ ನೀವು ಒಳ್ಳೆಯ ಫಲಿತಾಂಶ ಪಡೆಯುವಿರಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಗ್ಗೆ 7:50 ರಿಂದ ಮಧ್ಯಾಹ್ನ 12 ರವರೆಗೆ

ಮಿಥುನ ರಾಶಿ
ಸಂಗಾತಿ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ಸರಿಪಡಿಸಲು ಪ್ರಯತ್ನಿಸಬೇಕು, ಇಲ್ಲದಿದ್ದರೆ ನಿಮ್ಮ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವುದು. ರೋಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗಲಿದೆ. ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ. ಇದರಿಂದ ಬಜೆಟ್ ಸಮಸ್ಯೆ ಉಂಟಾಗುವುದು. ಕೆಲಸದ ದೃಷ್ಟಿಯಿಂದ ಈ ದಿನ ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 2 ರವರೆಗೆ

ಕರ್ಕ ರಾಶಿ
ನೀವು ವಿದ್ಯಾರ್ಥಿಯಾಗಿದ್ದು ವಿದೇಶದಲ್ಲಿ ಅಧ್ಯಯನ ಮಾಡಲು ಬಯಸಿದರೆ ಈ ದಿನ ಮುಖ್ಯವಾಗಿರುತ್ತದೆ, ಇದಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ನೀವು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಮನೆಯ ಸದಸ್ಯರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಡಬಹುದು. ಇಂದು ಖರ್ಚು ಹೆಚ್ಚಾಗಬಹುದು ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಇಂದು ನೀವು ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 4:55 ರಿಂದ ರಾತ್ರಿ 8 ರವರೆಗೆ

ಸಿಂಹ ರಾಶಿ
ಸಂಗಾತಿ ಜೊತೆ ಭಿನ್ನಾಭಿಪ್ರಾಯವಿದ್ದರೆ ಸರಿಪಡಿಸಲು ಪ್ರಯತ್ನಿಸಿ, ಸಮಸ್ಯೆ ಹೆಚ್ಚಾದರೆ ಸಂಬಂಧ ದುರ್ಬಲವಾಗಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಕೆಲಸದ ಕಡೆ ಗಮನ ಹರಿಸಿ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 9:45 ರವರೆಗೆ

ಕನ್ಯಾ ರಾಶಿ
ಹಣದ ವಿಷಯದಲ್ಲಿಈ ದಿನ ತುಂಬಾ ಚೆನ್ನಾಗಿರಲಿದೆ, ನೀವು ಹಳೆಯ ಕುಟುಂಬದ ಸಾಲವನ್ನು ತೀರಿಸಲು ಸಾಧ್ಯವಾಗುವುದು, ಹಣಕ್ಕೆ ಸಂಬಂಧಿಸಿದ ದೊಡ್ಡ ಚಿಂತೆ ದೂರಾಗುವುದು, ಕಛೇರಿಯಲ್ಲಿ ನಿಮ್ಮ ಎಲ್ಲಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಈ ದಿನ ನೀವು ಧನಾತ್ಮಕವಾಗಿರುತ್ತೀರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ 2:35 ರವರೆಗೆ

ತುಲಾ ರಾಶಿ
ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ನಿಮ್ಮ ಹಿರಿಯರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಇಂದು ಸವಾಲಿನ ದಿನವಾಗಲಿದೆ. ನಿಮ್ಮ ಕೆಲಸವು ತಾತ್ಕಾಲಿಕವಾಗಿದ್ದರೆ ನಿಮ್ಮ ಆತಂಕವು ಹೆಚ್ಚಾಗಬಹುದು, ಕುಟುಂಬ ಜೀವನದಲ್ಲಿ ಸ್ವಲ್ಪ ಏರುಪೇರು ಉಂಟಾಗಬಹುದು. ವೈಯಕ್ತಿಕ ಜೀವನದ ಸಮಸ್ಯೆಗಳು ನಿಮ್ಮ ಕೆಲಸದಲ್ಲಿ ಮೇಲುಗೈ ಸಾಧಿಸಲು ಬಿಡಬೇಡಿ. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 6:30 ರಿಂದ 9:05 ರವರೆಗೆ

ವೃಶ್ಚಿಕ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ನಿಮ್ಮ ಯಾವುದೇ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ. ತಂದೆಯ ಆರೋಗ್ಯ ಸುಧಾರಿಸಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದರೆ ಈ ದಿನ ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ಕೆಲಸದ ವಿಷಯದಲ್ಲಿ ಈ, ದಿನವು ಉತ್ತಮವಾಗಿರುತ್ತದೆ. ಯೋಜನೆಯ ಪ್ರಕಾರ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 8:10 ರಿಂದ ಮಧ್ಯಾಹ್ನ 12:10 ರವರೆಗೆ

ಧನು ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಬಹಳ ಜಾಗರೂಕರಾಗಿರಲು ಸೂಚಿಸಲಾಗಿದೆ. ಇಂದು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಉದ್ಯೋಗಸ್ಥರು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಅಧಿಕ ಖರ್ಚು ಮಾಡಲು ಹೋಗಬೇಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ

ಮಕರ ರಾಶಿ
ಈ ದಿನ ನಿಮಗೆ ಮಿಶ್ರಫಲ. ಕಚೇರಿಯಲ್ಲಿ ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಬೇಕಾಗಿದೆ, ಮಕ್ಕಳಿದ್ದರೆ ಅವರ ನಡವಳಿಕೆ ಕಡೆ ಗಮನಹರಿಸಿ, ಆರೋಗ್ಯವಾಗಿರಲು ನೀವು ಆಹಾರಕ್ರಮದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ರಾತ್ರಿ 9 ರವರೆಗೆ

ಕುಂಭ ರಾಶಿ
ಈ ದಿನ ನಿಮಗೆ ರೊಮ್ಯಾಂಟಿಕ್ ಆಗಿರಲಿದೆ. ವೈವಾಹಿಕ ಹಾಗೂ ಪ್ರೇಮ ಜೀವನ ಚೆನ್ನಾಗಿರಲಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಕೂಡ ಮಾಡಬಹುದು. ಕೆಲಸದ ಸ್ಥಳದಲ್ಲಿ ಸಮತೋಲಿತ ರೀತಿಯಲ್ಲಿ ವರ್ತಿಸಲು ನಿಮಗೆ ಸಲಹೆ ನೀಡಲಾಗಿದೆ. ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವಾಗ ನಿಮ್ಮ ಮಾತುಗಳನ್ನು ಬುದ್ಧಿವಂತಿಕೆಯಿಂದ ವರ್ತಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9:15 ರವರೆಗೆ

ಮೀನ ರಾಶಿ
ಹಣದ ವಿಷಯದಲ್ಲಿಈ ದಿನ ಅದೃಷ್ಟದ ದಿನವಾಗಲಿದೆ. ಕಡಿಮೆ ಪ್ರಯತ್ನದಿಂದ, ನೀವು ಉತ್ತಮ ಹಣವನ್ನು ಪಡೆಯಬಹುದು, ನಿಮ್ಮ ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ, ಇದರಿಂದ ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 2:30 ರವರೆಗೆ

English summary

Dina Bhavishya 22nd Aug 2023: August 22 Daily Horoscope

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Monday, August 21, 2023, 20:30 [IST]
X
Desktop Bottom Promotion