Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜುಲೈ 6ರ ರಾಶಿಫಲ ದ್ವಾದಶ ರಾಶಿಗಳಿಗೆ ಹೇಗಿರಲಿದೆ
ಶುಭೋದಯ.... ಈ ದಿನ ಗ್ರಹಗತಿಗಳ ಆಧಾರದ ಮೇಲೆ ದ್ವಾದಶ ರಾಶಿಗಳಿಗೆ ಈ ದಿನ ಹೇಗಿರಲಿದೆ ನೋಡೋಣ....
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ.ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿನ್ನಬೇಡಿ. ಪ್ರೇಮ ಜೀವನದಲ್ಲಿ ಏನಾದರೂ ವಿಶೇಷವಾದ ಘಟನೆ ಸಂಭವಿಸಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟ ದಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ವೃಷಭ ರಾಶಿ
ಈ ದಿನ ಖರ್ಚು ಹೆಚ್ಚಾಗಲಿದೆ. ಕುಟುಂಬದಲ್ಲೂ ವಾತಾವರಣ ಅಷ್ಟು ಸರಿಯಿರಲ್ಲ, ನೀವು ಕೆಲಸವನ್ನು ಏಕಾಗ್ರತೆಯಿಂದ ಮಾಡಿ. ಇಂದು ಕೆಲಸದ ಒತ್ತಡ ಅಧಿಕವಿರಲುದೆ, ವ್ಯಾಪಾರಸ್ಥರು ಬಯಸಿದ ಲಾಭ ಗಳಿಸಲು ಸಾಧ್ಯವಾಗುವುದಿಲ್ಲ. ಕಿವಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು. ಪ್ರೇಮ ಹಾಗೂ ವೈವಾಹಿಕ ಜೀವನದಲ್ಲಿ ಒತ್ತಡದ ಪರಿಸ್ಥಿತಿ ಇರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4:25 ರಿಂದ ಮಧ್ಯಾಹ್ನ 2 ರವರೆಗೆ
ಮಿಥುನ ರಾಶಿ
ಈ ದಿನ ಕೆಲಸದಲ್ಲಿನ ವಿಳಂಬಗಳು, ಅಡೆತಡೆಗಳು ಆತಂಕಕ್ಕೆ ಕಾರಣವಾಗುತ್ತವೆ. ಈ ದಿನ ನಿಮಗೆ ಸ್ನೇಹಿತರ ಬೆಂಬಲ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವ್ಯಾಪಾರ ಮತ್ತು ಆರ್ಥಿಕ ದೃಷ್ಟಿಯಿಂದ ಈ ಪ್ರಯಾಣವು ಲಾಭದಾಯಕವಾಗಿರುತ್ತದೆ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಪರಿಸ್ಥಿತಿಯನ್ನು ತಾಳ್ಮೆಯಿಮದ ನಿಭಾಯಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಮಿಶ್ರಫಲ, ದಿನದ ಆರಂಭದಲ್ಲಿ ಸ್ವಲ್ಪ ಆಲಸ್ಯ ಇರುತ್ತದೆ. ನೀವು ಇಂದು ಯಾವುದೇ ರೀತಿಯ ಮೊಂಡುತನವನ್ನು ತಪ್ಪಿಸಬೇಕು, ಇಲ್ಲದಿದ್ದರೆ ನಿಮಗೇ ತೊಂದರೆಯಾಗಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಆಹಾರಕ್ರಮದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಹಣದ ಸ್ಥಿತಿ ಚೆನ್ನಾಗಿರಲಿದೆ. ಇಂದು ನೀವು ಮಕ್ಕಳು ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಇಷ್ಟ ಪಡುತ್ತೀರಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 44
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಸಿಂಹ ರಾಶಿ
ಧಾರ್ಮಿಕ ಕ್ಷೇತ್ರಕ್ಕೆ ಮಾಡುವ ಪ್ರಯಾಣ ಇಂದು ಅನುಕೂಲಕರ ಸಮಯ. ಈ ದಿನ ಚೆನ್ನಾಗಿರಲಿದೆ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಹಣದ ಸ್ಥಿತಿ ಚೆನ್ನಾಗಿರಲಿದೆ. ಭಾವುಕರಾಗಿ ಯಾರ ಬಳಿಯೂ ನಿಮ್ಮ ಗುಟ್ಟನ್ನು ಹೇಳಬೇಡಿ. ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ನೀವು ಕೋಪ ನಿಯಂತ್ರಿಸಬೇಕು, ನಿಮ್ಮ ಮಾತುಗಳು ಸಂಬಂಧದ ಮೇಲೆ ಪ್ರಭಾವ ಬೀರದಂತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಏರಳಿತಗಳಿಂದ ಕೂಡಿರಲಿದೆ. ನೀವು ಆತುರದ ನಿರ್ಧಾರಗಳನ್ನು ತೆಗೆದುಕೊಂಡರೆ, ನೀವು ನಷ್ಟಕ್ಕೆ ಒಳಗಾಗುತ್ತೀರಿ. ಕೆಲಸದಲ್ಲಿ ಸವಾಲುಗಳು ಅಧಿಕವಿರಲಿದೆ. ನಿಮ್ಮ ಪ್ರತಿಸ್ಪರ್ಧಿಗಳ ಮೇಲೆ ನೀವು ನಿಗಾ ಇಡುವುದು ಸೂಕ್ತ. ಖರ್ಚಿನ ಕಡೆಗೆ ಗಮನಹರಿಸಿ
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:50 ರಿಂದ ಸಂಜೆ 4:20 ರವರೆಗೆ
ತುಲಾ ರಾಶಿ
ಮಹಿಳೆಯರು ತಮ್ಮ ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಮ್ಮ ಆರೋಗ್ಯದ ಕಡೆ ಗಮನಹರಿಸಿ. ವೈವಾಹಿಕ ಜೀವನ ಸುಂದರವಾಗಲು ನೀವು ಒಬ್ಬರನ್ನೊಬ್ಬರು ನಂಬಬೇಕು. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು, ಪ್ರೇಮಿಗಳು ಕುಟುಂಬದ ಸದಸ್ಯರು ಬೆಂಬಲವನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಈ ದಿನ ಸ್ವಂತ ವ್ಯಾಪಾರ ಮಾಡುವವರಿಗೆ ಲಾಭದಾಯಕವಾಗಿದೆ. ಇಂದು ನಿಮ್ಮ ವ್ಯವಹಾರದಲ್ಲಿ ಹಣ ಗಳಿಸುವ ಸಾಧ್ಯತೆಗಳಿವೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲ್ಲ, ಕೆಲವು ಮನಸ್ತಾಪಗಳಿಂದಾಗಿ ಮಾನಸಿಕ ಒತ್ತಡ ಹೆಚ್ಚಾಗುವುದು, ಪರಿಸ್ಥಿತಿಯನ್ನು ತಾಳ್ಮೆಯಿಂದ ನಿಭಾಯಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ ಮಧ್ಯಾಹ್ನ 3 ರವರೆಗೆ
ಧನು ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಏನಾದರೂ ಆರೋಗ್ಯ ಸಮಸ್ಯೆ ಇದ್ದಿದ್ದರೆ ನಿರ್ಲಕ್ಷ್ಯ ಬೇಡ. ವೃತ್ತಿ ಜೀವನ ಸರಾಸರಿಯಾಗಿರಲಿದೆ. ದೂರದ ಪ್ರಯಾಣ ಸಾಧ್ಯವಾದರೆ ಮುಂದೂಡಿ. ಮಕ್ಕಳಿಂದ ವಿಶೇಷವಾಗಿ ಮಗನ ಕಾರಣದಿಂದಾಗಿ ಕೆಲವು ಮಾನಸಿಕ ಒತ್ತಡ ಉಂಟಾಗಬಹುದು. ಪ್ರೇಮಿಗಳು ತಮ್ಮ ಭಿನ್ನಾಭಿಪ್ರಾಯ ಸರಿಪಡಿಸಲು ಪ್ರಯತ್ನಿಸಬೇಕು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 7 ರವರೆಗೆ
ಮಕರ ರಾಶಿ
ಈ ದಿನ ನಿಮಗೆ ಅದ್ಭುತವಾಗಿರಲಿದೆ. ರಾಜಕೀಯ ಸಂಬಂಧಿಸಿದ ವ್ಯಕ್ತಿಗಳಿಗೆ ಅನುಕೂಲಕರವಾಗಿದೆ. ನಿಮ್ಮ ನಡವಳಿಕೆಯಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮಲ್ಲಿರುವ ಬದಲಾವಣೆಯನ್ನು ನೋಡಿ ನಿಮ್ಮ ಕುಟುಂಬದ ಸದಸ್ಯರು ತುಂಬಾ ಸಂತೋಷಪಡುತ್ತಾರೆ. ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಸಂಗಾತಿಯ ಭಾವನೆ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:45 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಒಳ್ಳೆಯದಿದೆ. ವ್ಯಾಪಾರದಲ್ಲಿ, ಉದ್ಯೋಗದಲ್ಲಿ ಈ ದಿನ ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ದೂರ ಪ್ರಯಾಣ ಮಾಡುವುದಾದರೆ ಎಚ್ಚರವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2 ರವರೆಗೆ
ಮೀನ ರಾಶಿ
ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಬೆಳವಣಿಗೆ ಕಾಣಲಿದೆ. ಉದ್ಯೋಗಿಗಳ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳಲಿದೆ. ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ. ಅವಾಹಿತರಿಗೆ ಮದುವೆ ಸಂಬಂಧದ ಮಾತುಕತೆ ಬರಬಹುದು. ಪ್ರೇಮಿಗಳಿಗೆ, ವಿವಾಹಿತರಿಗೆ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ



Click it and Unblock the Notifications
