Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Dina Bhavishya 9th Aug: ಸಿಂಹ ರಾಶಿಯವರೇ ಜಾಗ್ರತೆ, ಉಳಿದ ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 9ರಂದು 12 ರಾಶಿಗಳ ರಾಶಿಫಲ ಹೇಗಿದೆ ನೋಡೋಣ...
ದಿನಾಂಕ: ಆಗಸ್ಟ್ 09
ತಿಥಿ: ನವಮಿ
ನಕ್ಷತ್ರ: ಕೃತಿಕಾ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಮಧ್ಯಾಹ್ನ 12:27ರಿಂದ 02:03ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಸಕಾರಾತ್ಮಕ ಫಲಿತಾಂಶ ಕಾಣುವುದರಿಂದ ಈ ದಿನ ಖುಷಿಯಾಗಿರುತ್ತೀರಿ. ಯಾವುದೇ ಪ್ರಮುಖ ಕೆಲಸ-ಸಂಬಂಧಿತ ಸಮಸ್ಯೆ ಈ ದಿನ ಬಗೆಹರಿಯಲಿದೆ, ನಿಮ್ಮ ಕೆಲಸ ಕಾರ್ಯದ ಕಡೆ ಗಮನಹರಿಸಲು ಸಾಧ್ಯವಾಗುವುದು. ಹಣದ ಸ್ಥಿತಿ ಚೆನ್ನಾಗಿರಲಿದೆ, ಬರಬೇಕಾಗಿರುವ ಹಣ ಕೈ ಸೇರಲಿದೆ. ಮನೆಯಲ್ಲಿ ಪೂಜಾ ಕಾರ್ಯ ನಡೆಸಬಹುದು.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ
ವೃಷಭ ರಾಶಿ
ಸಂಗಾತಿಯೊಂದಿಗಿನ ಸಂಬಂಧದ ತುಂಬಾ ಚೆನ್ನಾಗಿರಲಿದೆ. ಪ್ರೀತಿಸುತ್ತಿದ್ದರೆ ಮದುವೆ ನಿಮ್ಮ ಮನೆಯವರಿಂದ ಒಪ್ಪಿಗೆ ದೊರೆಯಲಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಈ ದಿನ ಅತಿಯಾಗಿ ಖರ್ಚು ಮಾಡಬೇಡಿ. ಈ ದಿನ ಕೆಲಸದ ಒತ್ತಡ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 7:55 ರಿಂದ 11 ರವರೆಗೆ
ಮಿಥುನ ರಾಶಿ
ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರುತ್ತದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಿದರೆ, ಶೀಘ್ರದಲ್ಲೇ ನೀವು ಸಾಲಗಳಿಂದ ಮುಕ್ತರಾಗುತ್ತೀರಿ. ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ಕರ್ಕ ರಾಶಿ
ಕರ್ಕ ರಾಶಿ ಈ ದಿನ ಉತ್ತಮವಾಗಿರುವುದಿಲ್ಲ. ಈ ದಿನ ಕೆಲಸದ ಕಡೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ದಿನಚರಿಯಲ್ಲಿ ಬದಲಾವಣೆ ಮಾಡಿದರೆ ಒಳ್ಳೆಯದು. ಅಲ್ಲದೆ ನೀವು ಆಹಾರಕ್ರಮದ ಕಡೆಗೆ ತುಂಬಾನೇ ಗಮನಹರಿಸಬೇಕು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಈ ದಿನ ಅಧಿಕ ಖರ್ಚು ಬರಬಹುದು. ಕುಟುಂಬದ ಸದಸ್ಯರ ಜೊತೆಗೆ ಮಾತನಾಡುವಾಗ ಯಾವುದೇ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 10 ರವರೆಗೆ
ಸಿಂಹ ರಾಶಿ
ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ಇಂದು ನಿಮ್ಮ ತೊಂದರೆಗೆ ಕಾರಣವಾಗಬಹುದು. ಕೂಲಂಕುಷವಾಗಿ ಯೋಚಿಸಿದ ನಂತರ ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳುವುದು ಉತ್ತಮ. ಕೆಲಸದ ಸ್ಥಳದಲ್ಲಿ ಮೇಲಾಧಿಕಾರಿಯ ಜೊತೆಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ಈ ದಿನ ನೀವು ತಾಳ್ಮೆಯಿಂದ ವರ್ತಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಸಂಜೆ 5:55 ರಿಂದ 9:15 ರವರೆಗೆ
ಕನ್ಯಾ ರಾಶಿ
ಬಹಳ ಸಮಯದ ನಂತರ ಇಂದು ನೀವು ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಬಹುದು. ನಿಮ್ಮ ಸಂಗಾತಿಯೊಂದಿಗೆ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನ ಮಾಡುತ್ತಿದ್ದರೆ ನಿಮ್ಮ ಪ್ರಯತ್ನ ಮತ್ತಷ್ಟು ಚುರುಕುಗೊಳಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6 ರವರೆಗೆ
ತುಲಾ ರಾಶಿ
ಭಾವನಾತ್ಮಕವಾಗಿ ದುರ್ಬಲರಾಗಿರುತ್ತೀರಿ, ಮನಸ್ಸಿನಲ್ಲಿ ಬೇಸರ ಕಾಡಲಿದೆ. ನಿಮ್ಮ ಕೆಲಸದ ಮೇಲೂ ಸರಿಯಾಗಿ ಗಮನಹರಿಸಲು ಸಾಧ್ಯವಾಗದೇ ಇರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಉದ್ಯೋಗಸ್ಥರಿಗೆ ಈ ದಿನ ಸವಾಲಿನಿಂದ ಕೂಡಿರಲಿದೆ. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 1:50 ರಿಂದ ಸಂಜೆ 7:30 ರವರೆಗೆ
ವೃಶ್ಚಿಕ ರಾಶಿ
ಕೇವಲ ಅದೃಷ್ಟವನ್ನು ನಂಬಿದರೆ ಸಾಲದು ಹೆಚ್ಚು ಶ್ರಮಪಟ್ಟರೆ ಮಾತ್ರ ಗುರಿ ಸಾಧಿಸಲು ಸಾಧ್ಯವಾಗುವುದು. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಹಣದ ವಿಷಯದಲ್ಲಿ ಈ ದಿನ ಏರಿಳಿತಗಳಿಂದ ಕೂಡಿರಲಿದೆ. ಹಣಕಾಸಿನ ಅಡೆತಡೆಗಳಿಂದಾಗಿ, ದೈನಂದಿನ ಖರ್ಚುಗಳನ್ನು ಪೂರೈಸುವಲ್ಲಿ ನೀವು ತೊಂದರೆಗಳನ್ನು ಎದುರಿಸಬಹುದು. ನಿಮ್ಮ ಆರೋಗ್ಯ ದುರ್ಬಲವಾಗಿರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 10 ರವರೆಗೆ
ಧನು ರಾಶಿ
ಈ ದಿನ ಅನುಕೂಲಕರವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಇದರಿಂದಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಆದರೆ ಹಣವನ್ನು ನೋಡಿಕೊಂಡು ಖರ್ಚು ಮಾಡಿ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2:20 ರಿಂದ ಸಂಜೆ 5 ರವರೆಗೆ
ಮಕರ ರಾಶಿ
ನೀವು ಉದ್ಯಮಿಯಾಗಿದ್ದರೆ ಯಾವುದೇ ಹೊಸ ಒಪ್ಪಂದ ಮಾಡಿಕೊಳ್ಳಬೇಡಿ, ಒಂದು ವೇಳೆ ಹೊಸ ಕಾರ್ಯಕ್ಕೆ ಕೈ ಹಾಕುವ ಮುನ್ನ ಆಪ್ತರ ಸಲಹೆ ಪಡೆಯಿರಿ. ಉದ್ಯೋಗಿಗಳಿಗೆ ಈ ದಿನ ಸಾಮಾನ್ಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ನೀವು ಮತ್ತಷ್ಟು ಚುರುಕುಗೊಳಿಸಿ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಆದರೆ ತಾಳ್ಮೆಯಿಂದ ವರ್ತಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ
ಕುಂಭ ರಾಶಿ
ಈ ದಿನ ಮಿಶ್ರಫಲ. ಕೆಲಸದ ಹೊರೆ ಹೆಚ್ಚಿರಲಿದೆ, ಇದರಿಂದ ನೀವು ತುಂಬಾ ಕಿರಿಕಿರಿ ಅನುಭವಿಸಬಹುದು. ಮಗುವಿನ ಶಿಕ್ಷಣಕ್ಕೆ ಸಂಬಂಧಿಸಿದ ಚಿಂತೆ ಕಾಡಬಹುದು. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಮಧ್ಯಾಹ್ನದ ನಂತರ ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 4:10 ರಿಂದ ರಾತ್ರಿ 8:10 ರವರೆಗೆ
ಮೀನ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದರೆ ಸುಧಾರಣೆ ಕಂಡು ಬರಲಿದೆ. ಇಂದು ನೀವು ನಿಮ್ಮ ಸ್ಥಗಿತಗೊಂಡ ಕೆಲವು ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಉತ್ಕರ್ಷದ ಬಲವಾದ ಸಾಧ್ಯತೆಯಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ರೊಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ನಿಮ್ಮ ನಡುವಿನ ಪ್ರೀತಿ ಇನ್ನಷ್ಟು ಆಳವಾಗಿರುತ್ತದೆ. ಸಂಗಾತಿಯೊಂದಿಗೆ ರೊಮ್ಯಾಂಟಿಕ್ ಆಗಿ ಕಳೆಯಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ 11:30 ರವರೆಗೆ



Click it and Unblock the Notifications