Horoscope Today 10 April 2023: ಸೋಮವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್‌ 10ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ಚತುರ್ಥಿ
ನಕ್ಷತ್ರ: ಮಧ್ಯಾಹ್ನ 01:39ರವರೆಗೆ ಅನುರಾಧ ನಂತರ ಜ್ಯೇಷ್ಠ
ರಾಹುಕಾಲ: ಬೆಳಗ್ಗೆ 07:43ರಿಂದ 09:16ರವರೆಗೆ

Dina Bhavishya -April 10 2023 Today Rashi Bhavishya, Daily Horoscope in Kannada

ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿದೆ. ವ್ಯಾಪಾರಿಗಳು ದೊಡ್ಡ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ

ವೃಷಭ ರಾಶಿ
ನೀವು ಉದ್ಯಮಿಯಾಗಿದ್ದರೆ ಇಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಆಪ್ತರಿಂದ ಸಲಹೆಯನ್ನು ಪಡೆಯಬೇಕು. ಆತುರದ ನಿರ್ಧಾರವು ನಿಮಗೆ ತೊಂದರೆ ಉಂಟುಮಾಡಬಹುದು. ಉದ್ಯೋಗಸ್ಥರು ತಮ್ಮ ಸಹೋದ್ಯೋಗಿಗಳೊಂದಿಗೆ ಕಛೇರಿಯಿಂದ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಲು ಪ್ರಯತ್ನಿಸಬೇಕು. ಅನಗತ್ಯ ಅಹಂಕಾರ ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಬಹುದು. ಆರ್ಥಿಕ ರಂಗದಲ್ಲಿ ದಿನವು ಉತ್ತಮವಾಗಿರುತ್ತದೆ. ಖರ್ಚು ಕಡಿಮೆ ಇರಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 4:55 ರಿಂದ 9:30 ರವರೆಗೆ

ಮಿಥುನ ರಾಶಿ
ಆರ್ಥಿಕ ದೃಷ್ಟಿಕೋನದಿಂದ ಇಂದು ನಿಮಗೆ ತುಂಬಾ ಅದೃಷ್ಟದ ದಿನ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗಬಹುದು ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಉತ್ಕರ್ಷದ ಬಲವಾದ ಸಾಧ್ಯತೆಯಿದೆ. ವ್ಯಾಪಾರಸ್ಥರು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೋಗಬಾರದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮಗೆ ಥೈರಾಯ್ಡ್ ಸಮಸ್ಯೆಗಳಿದ್ದರೆ, ನಿಯಮಿತವಾಗಿ ನಿಮ್ಮ ಔಷಧಿಗಳನ್ನು ತೆಗೆದುಕೊಳ್ಳಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:45 ರವರೆಗೆ

ಕರ್ಕ ರಾಶಿ
ಕೌಟುಂಬಿಕ ಜೀವನದಲ್ಲಿ ಸ್ವಲ್ಪ ಏರುಪೇರು ಇರಬಹುದು. ಮನೆಯ ಹಿರಿಯರು ನಿಮಗೆ ಯಾವುದೇ ಜವಾಬ್ದಾರಿ ನೀಡಿದ್ದರೆ, ಅವರ ನಿರೀಕ್ಷೆಗೆ ತಕ್ಕಂತೆ ಬದುಕಲು ಪ್ರಯತ್ನಿಸಿ. ನಿಮ್ಮ ಅಸಡ್ಡೆ ವರ್ತನೆ ಅವರ ಅಸಮಧಾನ ಹೆಚ್ಚಿಸಬಹುದು. ಕೆಲಸದ ಬಗ್ಗೆ ಮಾತನಾಡುತ್ತಾ, ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆ ತೃಪ್ತಿಕರವಾಗಿರುತ್ತದೆ. ಇಂದು ಬಾಸ್ ನಿಮ್ಮ ಶ್ರಮವನ್ನು ಗಮನಿಸಬಹುದು. ಇಂದು ಉದ್ಯಮಿಗಳು ಕಾನೂನು ತೊಡಕಿನಲ್ಲಿ ಸಿಲುಕದಂತೆ ಎಚ್ಚರವಹಿಸಿ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮಗೆ ಸಂಧಿವಾತ ಸಮಸ್ಯೆ ಈ ದಿನ ಕಾಲು ನೋವು ಅಧಿಕವಿರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 8:45 ರವರೆಗೆ

ಸಿಂಹ ರಾಶಿ
ಕಚೇರಿಯಲ್ಲಿ ಈ ದಿನ ಉತ್ತಮವಾಗಿರಲಿದೆ, ಇಂದು ನೀವು ಟೀಮ್ ವರ್ಕ್ ಮೂಲಕ ನಿಮ್ಮ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಚಿಲ್ಲರೆ ವ್ಯಾಪಾರಸ್ಥರಿಗೆ ಲಾಭವಾಗುತ್ತಿದೆ. ಹಣದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ. ಬರಬೇಕಾಗಿದ್ದ ಹಣ ಸಿಗದ ಕಾರಣ ಇಂದು ನಿಮ್ಮ ಆತಂಕ ಹೆಚ್ಚಾಗಬಹುದು. ಕೆಲಸದ ಜೊತೆಗೆ ನಿಮ್ಮ ವೈಯಕ್ತಿಕ ಜೀವನದ ಬಗ್ಗೆಯೂ ಗಮನ ಹರಿಸಿ. ವಿಶೇಷವಾಗಿ ಸಂಗಾತಿಯನ್ನು ನಿರ್ಲಕ್ಷಿಸಬೇಡಿ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:15 ರವರೆಗೆ

ಕನ್ಯಾ ರಾಶಿ
ಆನ್‌ಲೈನ್ ವ್ಯಾಪಾರ ಮಾಡುವವರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಲಿದೆ. ನಿಮ್ಮ ಕೆಲಸದಲ್ಲಿ ಹೆಚ್ಚಳ ಕಂಡುಬರುವುದು. ನೀವು ಉದ್ಯೋಗದೊಂದಿಗೆ ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸುವುದಾದರೆ ನಿಮ್ಮ ಆಪ್ತರಿಮದ ಸಲಹೆ ಪಡೆಯಬಹುದು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತಿಳುವಳಿಕೆಯಿಂದ ನೀವು ಉತ್ತಮ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ

ತುಲಾ ರಾಶಿ
ಇಂದು ಪ್ರೇಮಿಗಳು ಸಂತೋಷದಿಮದ ದಿನ ಕಳೆಯುವಿರಿ. ವಿವಾಹಿತರ ಕುಟುಂಬ ಜೀವನ ಕೂಡ ಖುಷಿಯಿಂದ ಇರಲಿದೆ. ಈ ದಿನ ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದ ವಿಷಯದಲ್ಲಿ ಈ ದಿನವು ಉತ್ತಮವಾಗಿದೆ. ದಿನದ ಎರಡನೇ ಭಾಗದಲ್ಲಿ ನೀವು ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ ಮತ್ತಷ್ಟು ಪ್ರಯತ್ನ ಹಾಕಿ. ಆರೋಗ್ಯದ ದೃಷ್ಟಿಯಿಂದ ಇಂದು ಸರಾಸರಿ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಅದೃಷ್ಟ ಸಮಯ: ಬೆಳಿಗ್ಗೆ 4:20 ರಿಂದ 11 ರವರೆಗೆ

ವೃಶ್ಚಿಕ ರಾಶಿ
ಇಂದು ನೀವು ಹಣದ ವಿಷಯದಲ್ಲಿ ತುಂಬಾ ಅದೃಷ್ಟದ ದಿನ. ನೀವು ಯಾವುದೇ ಹಳೆಯ ಸಾಲವನ್ನು ಮರುಪಾವತಿಸಲು ಸಾಧ್ಯವಾಗುತ್ತದೆ. ಉದ್ಯೋಗಸ್ಥರಿಗೆ ಈ ದಿನವು ಕಾರ್ಯನಿರತವಾಗಿರುತ್ತದೆ. ಆದಾಗ್ಯೂ, ಈ ದಿನ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಉದ್ಯಮಿಗಳ ತಮ್ಮ ಕೆಲಸವನ್ನು ಯೋಜನೆಯಂತೆಯೇ ಪೂರ್ಣಗೊಳಿಸಬಹುದು. ಈ ದಿನ ನೀವು ಯಾವುದೇ ಕೆಲಸವನ್ನು ತರಾತುರಿಯಲ್ಲಿ ಮಾಡದಿರುವುದು ಉತ್ತಮ. ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:55 ರವರೆಗೆ

ಧನು ರಾಶಿ
ಪ್ರಣಯ ಜೀವನದಲ್ಲಿ ಸ್ಥಿರತೆ ಇರಲಿದೆ. ನಿಮ್ಮ ನಡುವೆ ಪ್ರೀತಿ ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ದಿನವು ಯಾವುದೇ ಶುಭ ಸಂಕೇತವನ್ನು ನೀಡುವುದಿಲ್ಲ. ಇತರರನ್ನು ಮೆಚ್ಚಿಸಲು ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಕಚೇರಿಯ ವಾತಾವರಣ ಅಷ್ಟು ಚೆನ್ನಾಗಿರಲ್ಲ, ಸ್ವಲ್ಪ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯುವ ಸಾಧ್ಯತೆ ಇದೆ. ದುರ್ಬಲ ಆರೋಗ್ಯದ ಕಾರಣ, ನೀವು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

ಮಕರ ರಾಶಿ
ಇಂದು ನೀವು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಶಿಕ್ಷಣದಲ್ಲಿ ಯಾವುದೇ ಅಡೆತಡೆಗಳು ಇದ್ದಲ್ಲಿ, ನಿಮ್ಮ ಶಿಕ್ಷಕರ ಬೆಂಬಲವನ್ನು ನೀವು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಇದಲ್ಲದೇ ಹೆಚ್ಚುತ್ತಿರುವ ವೆಚ್ಚದ ಬಗ್ಗೆಯೂ ಗಮನ ಹರಿಸಬೇಕು. ಕೆಲಸದ ಮುಂಭಾಗದಲ್ಲಿ ಇಂದು ಸರಾಸರಿ ದಿನವಾಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ

ಕುಂಭ ರಾಶಿ
ಉದ್ಯೋಗಸ್ಥರು ತಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯಬಹುದು. ಈ ದಿನ ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಇಂದು ಹಣ ಗಳಿಸುವ ಬಲವಾದ ಸಾಧ್ಯತೆಯಿದೆ. ಇಂದು ನಿಮ್ಮ ಸಂಗಾತಿಯೊಂದಿಗೆ ಈ ದಿನ ವಿಶೇಷವಾಗಿರಲಿದೆ. ಆರೋಗ್ಯದ ಬಗ್ಗೆ ಅತಿಯಾದ ನಿರ್ಲಕ್ಷ್ಯ ಒಳ್ಳೆಯದಲ್ಲ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ಮಧ್ಯಾಹ್ನ 3 ರವರೆಗೆ

ಮೀನ ರಾಶಿ
ಇಂದು ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಸಲಹೆ ನೀಡುವುದು ನೀಡಬೇಡಿ. ಕೆಲಸದ ಸ್ಥಳದಲ್ಲಿ ಉನ್ನತ ಅಧಿಕಾರಿಗಳ ಮಾತುಗಳು ನಿಮ್ಮ ನೈತಿಕತೆಯನ್ನು ಕುಗ್ಗಿಸಬಹುದು. ಆದರೆ ನೀವುಬಾದರ ಬಗ್ಗೆ ಗಮನಹರಿಸದೆ ಕೆಲಸದ ಕಡೆಗಷ್ಟೇ ಗಮಹರಿಸಿ. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಚೆನ್ನಾಗಿರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಇಂದು ನೀವು ತುಂಬಾ ಆಯಾಸವನ್ನು ಅನುಭವಿಸುವಿರಿ.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 38
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ

English summary

Dina Bhavishya -April 10 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 10 April 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Monday, April 10, 2023, 4:00 [IST]
X
Desktop Bottom Promotion