Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 13 April 2023: ಬುಧವಾರ: ವೃಷಭದವರಿಗೆ ಅನುಕೂಲಕರವಾಗಿದೆ, ಉಳಿದವರಿಗೆ ಈ ದಿನ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 13ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ಅಷ್ಟಮಿ
ನಕ್ಷತ್ರ: ಪೂರ್ವ ಆಷಾಢ
ರಾಹುಕಾಲ: ಮಧ್ಯಾಹ್ನ 01:53ರಿಂದ 03:26ರವರೆಗೆ

ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಏರಿಳಿತಗಳಿಂದ ಕೂಡಿರಲಿದೆ. ಅನೇಕ ಚಿಂತೆಗಳ ಕಾರಣ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಕಷ್ಟವಾಗಬಹುದು. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ದುಂದುಗಾರಿಕೆ ಹೆಚ್ಚಾಗಬಹುದು. ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಂಬಂಧವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ಅನಗತ್ಯ ಕೋಪ ಮತ್ತು ದುರಹಂಕಾರ ಸಂಬಂಧದಲ್ಲಿ ಸಮಸ್ಯೆ ಹೆಚ್ಚು ಮಾಡುವುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 10:15 ರವರೆಗೆ
ವೃಷಭ ರಾಶಿ
ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆದರೆ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು, ನೀವು ನಿಮ್ಮ ಕುಟುಂಬ ಸದಸ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು. ಆತುರ ಒಳ್ಳೆಯದಲ್ಲ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ. ಶೀಘ್ರದಲ್ಲೇ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಸುವರ್ಣಾವಕಾಶ ದೊರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮ್ಮ ಆರೋಗ್ಯದ ಬಗ್ಗೆ ನೀವು ಹೆಚ್ಚು ಜಾಗರೂಕರಾಗಿರಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 2:20 ರಿಂದ ಸಂಜೆ 4:30 ರವರೆಗೆ
ಮಿಥುನ ರಾಶಿ
ನಿಮ್ಮ ಸಂಗಾತಿಯೊಂದಿಗೆ ನೀವು ಯಾವುದೋ ವಿಷಯಕ್ಕೆ ಜಗಳವಾಡಬಹುದು. ಆದರೆ ಕೋಪವನ್ನು ನಿಯಂತ್ರಿಸಿ ತಾಳ್ಳೆಯಿಂದ ಪರಿಸ್ಥಿತಿ ನಿಭಾಯಿಸಿ. ಹಣದ ವಿಷಯದಲ್ಲಿ ಇಂದು ಅದೃಷ್ಟದ ದಿನ. ಕಚೇರಿಯಲ್ಲಿ ಬಾಕಿ ಉಳಿದಿರುವ ಕೆಲಸಗಳ ಹೊರೆ ಕಡಿಮೆಯಾಗಲಿದೆ. ಇಂದು ನೀವು ಹೊಸದನ್ನು ಕಲಿಯುವ ಅವಕಾಶವನ್ನು ಪಡೆಯಬಹುದು. ಉದ್ಯಮಿಗಳ ಯಾವುದೇ ಸ್ಥಗಿತಗೊಂಡ ಕೆಲಸ ಇಂದು ಪೂರ್ಣವಾಗಲಿದೆ. ಆರೋಗ್ಯದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 2:25 ರವರೆಗೆ
ಕರ್ಕ ರಾಶಿ
ನೀವು ಬಹಳ ಸಮಯದಿಂದ ಆಸ್ತಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಇಂದು ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಶೀಘ್ರದಲ್ಲೇ ನಿಮ್ಮ ಆಸೆ ಈಡೇರುತ್ತದೆ. ನೀವು ಸರ್ಕಾರಿ ಕೆಲಸಕ್ಕೆ ತಯಾರಿ ನಡೆಸುತ್ತಿದ್ದರೆ, ಇಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಇಂದು ನಿಮ್ಮ ಎಲ್ಲಾ ಕೆಲಸಗಳು ತ್ವರಿತವಾಗಿ ಪೂರ್ಣಗೊಳ್ಳುತ್ತವೆ. ನೀವು ಕೆಲವು ಹೊಸ ವ್ಯಾಪಾರ ಯೋಜನೆಗಳನ್ನು ಸಹ ಮಾಡುತ್ತೀರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾರೆ ಮೈಕೈ ನೋವು ಇರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6:40 ರವರೆಗೆ
ಸಿಂಹ ರಾಶಿ
ಮಾನಸಿಕವಾಗಿ ನೀವು ತುಂಬಾ ದೃಢವಾಗಿರುತ್ತೀರಿ ಮತ್ತು ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳುತ್ತೀರಿ. ನಿಮ್ಮ ಯಾವುದೇ ಬೆಲೆಬಾಳುವ ವಸ್ತುಗಳು ತಪ್ಪಿಹೋಗಿದ್ದರೆ, ಇಂದು ಅದನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಉದ್ಯೋಗಸ್ಥರು ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸದಂತೆ ಸೂಚಿಸಲಾಗಿದೆ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಹಣದ ಬಗ್ಗೆ ಹೇಳುವುದಾದರೆ ನಿಮ್ಮ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಲು ಸಲಹೆ ನೀಡಲಾಗಿದೆ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಕನ್ಯಾ ರಾಶಿ
ನೀವು ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಆದಾಯದಿಂದ ತೃಪ್ತರಾಗದಿದ್ದರೆ, ಈ ಸಮಯದಲ್ಲಿ ಬೇರೆ ಕಡೆ ಪ್ರಯತ್ನಿಸಬಹುದು. ಉದ್ಯಮಿಗಳು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೆ, ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ದಿನನಿತ್ಯದ ಖರ್ಚುಗಳನ್ನು ಸುಲಭವಾಗಿ ಪೂರೈಸಲಾಗುವುದು. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಮನೆಯಲ್ಲಿ ಯಾವುದೇ ಶುಭ ಅಥವಾ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಆರೋಗ್ಯದ ಬಗ್ಗೆ ಗಮನ ನೀಡಿ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 3 ರವರೆಗೆ
ತುಲಾ ರಾಶಿ
ಸ್ವಾರ್ಥಿಗಳೊಂದಿಗೆ ನೀವು ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಅವರು ನಿಮ್ಮನ್ನು ಬಳಸಿಕೊಂಡು ಲಾಭ ಪಡೆಯಬಹುದು. ವ್ಯಾಪಾರಸ್ಥರಿಗೆ ಇಂದು ಲಾಭದಾಯಕವಾಗಿರುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿರಲಿದೆ. ಹೆಚ್ಚುತ್ತಿರುವ ಖರ್ಚುಗಳನ್ನು ನೀವು ನಿಯಂತ್ರಿಸಬೇಕಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಗ್ಗೆ11 ರಿಂದ ಮಧ್ಯಾಹ್ನ 12:25ರವರೆಗೆ
ವೃಶ್ಚಿಕ ರಾಶಿ
ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ ಪರಿಸ್ಥಿತಿ ನಿಭಾಯಿಸಿಕೊಂಡು ಹೋಗಲು ಪ್ರಯತ್ನಿಸಿ. ನಿಮ್ಮ ಸಂಬಂಧಗಳಿಗೆ ನೀವು ಪ್ರಾಮುಖ್ಯತೆಯನ್ನು ನೀಡಬೇಕು. ಹಣದ ವಿಷಯದಲ್ಲಿಈ ದಿನವು ಉತ್ತಮವಾಗಿದೆ. ನಿಮ್ಮ ಸಂಚಿತ ಬಂಡವಾಳವು ಹೆಚ್ಚಾಗುತ್ತದೆ. ಉದ್ಯೋಗಸ್ಥರು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ದೊಡ್ಡ ಲಾಭ ಗಳಿಸಲು ಯಾವುದೇ ತಪ್ಪು ಕ್ರಮಗಳನ್ನು ತೆಗೆದುಕೊಳ್ಳದಂತೆ ವ್ಯಾಪಾರಿಗಳಿಗೆ ಸಲಹೆ ನೀಡಲಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಸ್ವಲ್ಪ ದುರ್ಬಲವಾಗಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:30 ರಿಂದ 8:10 ರವರೆಗೆ
ಧನು ರಾಶಿ
ಇಂದು ನೀವು ತುಂಬಾ ಧನಾತ್ಮಕ ಮತ್ತು ಶಕ್ತಿಯುತವಾಗಿರುತ್ತೀರಿ.ಪ್ರೀತಿಯ ವಿಷಯದಲ್ಲಿ ಈ ದಿನವು ತುಂಬಾ ರೋಮ್ಯಾಂಟಿಕ್ ಆಗಿರಲಿದೆ. ಈ ರಾಶಿಯ ವಿವಾಹಿತರಿಗೆ ಇಂದು ವಿಶೇಷ ದಿನವಾಗಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆದರೂ ದೊಡ್ಡ ಖರ್ಚು ಮಾಡುವ ಮೊದಲು, ನೀವು ಎಚ್ಚರಿಕೆಯಿಂದ ಯೋಚಿಸಬೇಕು. ಕೆಲಸದ ವಿಷಯದಲ್ಲಿ ಅತಿಯಾದ ಒತ್ತಡವನ್ನು ತೆಗೆದುಕೊಳ್ಳಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ಇಂದು ನೀವು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ಕಚೇರಿಯಲ್ಲಿ, ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡಲು ಹೋಗಬೇಡಿ. ವ್ಯಾಪಾರಸ್ಥರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿರುತ್ತದೆ ಈ ದಿನ ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುತ್ತದೆ. ದೈನಂದಿನ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ಸಹ ನೀವು ಪಡೆಯುತ್ತೀರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:20 ರವರೆಗೆ
ಕುಂಭ ರಾಶಿ
ನೀವು ನಿರುದ್ಯೋಗಿಗಳಾಗಿದ್ದರೆ ಒಳ್ಳೆಯ ಕೆಲಸಕ್ಕಾಗಿ ಹುಡುಕುತ್ತಿದ್ದರೆ ನೀವು ಉದ್ಯೋಗವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಸಾಧಿಸುವ ಅಗತ್ಯವಿದೆ. ಸಂಗಾತಿಯ ನಡವಳಿಕೆಯಲ್ಲಿ ದೊಡ್ಡ ಬದಲಾವಣೆಯಾಗಬಹುದು. ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಈ ದಿನ ಆರೋಗ್ಯ ಸುಧಾರಿಸಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟ ಸಮಯ: ಬೆಳಿಗ್ಗೆ 4:25 ರಿಂದ ಮಧ್ಯಾಹ್ನ 12:20 ರವರೆಗೆ
ಮೀನ ರಾಶಿ
ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರಲಿದೆ. ನೀವು ಕೆಲಸ ಮಾಡುತ್ತಿದ್ದರೆ ಮತ್ತು ಕಠಿಣ ಪರಿಶ್ರಮದ ಹೊರತಾಗಿಯೂ, ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೆ, ನೀವು ಆತುರದಿಂದ ದೂರವಿರಬೇಕು. ಉತ್ತಮ ಆರ್ಥಿಕ ಲಾಭಕ್ಕಾಗಿ ಉದ್ಯಮಿಗಳು ತಮ್ಮ ವ್ಯಾಪಾರ ಯೋಜನೆಗಳನ್ನು ಮರುಪರಿಶೀಲಿಸಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯದ ಚಿಂತೆ ಕಾಡಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 4:30 ರವರೆಗೆ



Click it and Unblock the Notifications
