Horoscope Today 14 April 2023: ಶುಕ್ರವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್‌ 14ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ನವಮಿ
ನಕ್ಷತ್ರ: ಬೆಳಗ್ಗೆ 9:14ರವರೆಗೆ ಉತ್ತರ ಆಷಾಢ ನಂತರ ಶ್ರಾವಣ
ರಾಹುಕಾಲ: ಬೆಳಗ್ಗೆ 10:47ರಿಂದ 12:20ರವರೆಗೆ

Dina Bhavishya -April 14 2023 Today Rashi Bhavishya, Daily Horoscope in Kannada

ಮೇಷ ರಾಶಿ
ಪ್ರಣಯ ಜೀವನದಲ್ಲಿ ಸಮಸ್ಯೆಯಿದ್ದರೆ ಈ ದಿನ ಬಗೆಹರಿಸಲು ಪ್ರಯತ್ನಿಸಿ. ಇದರಿಂದ ಒಬ್ಬರನ್ನೊಬ್ಬರು ಪರಸ್ಪರ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದು. ಕಚೇರಿಯಲ್ಲಿ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ನಿರ್ಲಕ್ಷ್ಯದಿಂದ ನಿಮಗೆ ನಷ್ಟ ಹೆಚ್ಚಾಗಬಹುದು. ವ್ಯಾಪಾರಸ್ಥರು ಈ ದಿನ ಮಿಶ್ರ ಲಾಭ ಪಡೆಯುವಿರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ

ವೃಷಭ ರಾಶಿ
ಮನೆಯ ವಾತಾವರಣವು ಖುಷಿಯಿಂದ ಕೂಡಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಣಕ್ಕೆ ಸಂಬಂಧಿಸಿದಂತೆ ಇಂದು ಯಾವುದೇ ಸಮಸ್ಯೆಯಿರಲ್ಲ, ಈ ದಿನ ನಿಮಗೆ ಉತ್ತಮವಾಗಿದೆ. ಉದ್ಯಮಿಗಳು ಸಹ ಅಪೇಕ್ಷಿತ ಲಾಭವನ್ನು ಪಡೆಯಬಹುದು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಿವವರು ಒಳ್ಳೆಯ ಲಾಭ ಗಳಿಸುವಿರಿ. ಆರೋಗ್ಯ ಉತ್ತಮವಾಗಿರುತ್ತದೆ, ಈ ದಿನ ಧನಾತ್ಮಕವಾಗಿರುತ್ತೀರಿ.
ಅದೃಷ್ಟದ ಬಣ್ಣ: ತಿಳಿ ಹಸಿರು
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ

ಮಿಥುನ ರಾಶಿ
ಮಿಥುನ ರಾಶಿಯವರೇ, ಕೆಲವರು ನಿಮಗೆ ತಪ್ಪು ಮಾಹಿತಿ ನೀಡುವ ಮೂಲಕ ನಿಮ್ಮನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಬಹುದು, ಜಾಗ್ರತೆ. ಇಂದು ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನೀವು ಯಾವುದೇ ಪೂರ್ವಜರ ಆಸ್ತಿ ಮಾರಾಟ ಮಾಡಲು ಬಯಸಿದರೆ ಈ ದಿನ ಉತ್ತಮ ಅವಕಾಶ ಪಡೆಯಬಹುದು. ಇಂದು ನೀವು ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಈ ದಿನ ಕೆಲಸಗಳ ಹೊರೆ ಹೆಚ್ಚಾಗಲಿದೆ. ನೀವು ವ್ಯಾಪಾರಸ್ಥರಾಗಿದ್ದರೆ ಇಂದು ನೀವು ದೂರದ ಪ್ರಯಾಣವನ್ನು ಮಾಡಬೇಕಾಗಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಈ ದಿನ ಆರೋಗ್ಯದ ಬಗ್ಗೆ ಎಚ್ಚರವಾಗಿರಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5 ರವರೆಗೆ

ಕರ್ಕ ರಾಶಿ
ಈ ದಿನ ಮಾನಸಿಕವಾಗಿ ತುಂಬಾ ಚೆನ್ನಾಗಿರುತ್ತೀರಿ, ಈ ದಿನ ಕಚೇರಿಯಲ್ಲಿ ಕೆಲಸದ ಕಡೆಗೆ ಅಧಿಕ ಗಮನಹರಿಸಿ. ವ್ಯಾಪಾರಸ್ಥರು ಈ ದಿನ ತಕ್ಕ ಲಾಭವನ್ನು ಪಡೆಯಬಹುದು. ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ವ್ಯವಹಾರ ಮಾಡಲು ಹೋಗಬೇಡಿ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ಯಶಸ್ಸು ಪಡೆಯುತ್ತೀರಿ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ಸಿಂಹ ರಾಶಿ
ಇಂದು ನಿಮ್ಮ ಸಂಗಾತಿಯೊಂದಿಗೆ ಈ ದಿನ ಖುಷಿಯಿಂದ ಕಳೆಯುವಿರಿ. ಕೆಲಸದ ವಿಷಯದಲ್ಲಿ ಈ ದಿನವು ಉತ್ತಮವಾಗಿದೆ. ನೀವು ನಿಮ್ಮ ಕೆಲಸ ಕಾರ್ಯಗಳನ್ನು ಉತ್ಸಾಹದಿಂದ ಪೂರ್ಣಗೊಳಿಸುತ್ತೀರಿ. ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ, ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನೀವು ಶೀಘ್ರದಲ್ಲೇ ಅದರ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯವಾಗಿರಲು, ನೀವು ಹೆಚ್ಚಿನ ಒತ್ತಡದಿಂದ ದೂರವಿರಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4:25 ರಿಂದ 10 ರವರೆಗೆ

ಕನ್ಯಾ ರಾಶಿ
ನೀವು ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಲು ಬಯಸಿದರೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವುದು ಈ ಸಮಯದಲ್ಲಿ ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಉದ್ಯೋಗಸ್ಥರು ವಿಚಿತ್ರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಕೆಲಸದ ವಿಷಯದಲ್ಲಿ ಚಿಕ್ಕ ನಿರ್ಲಕ್ಷ್ಯ ಕೂಡ ಮಾಡಬೇಡಿ. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ, ಆ ಈ ದಿನ ನಿಮ್ಮ ಖರ್ಚುಗಳು ಹೆಚ್ಚಾಗಬಹುದು. ಹೆಚ್ಚುತ್ತಿರುವ ಕೆಲಸದ ಒತ್ತಡ ನಿಮ್ಮ ಆಯಾಸ ಹೆಚ್ಚಿಸಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ

ತುಲಾ ರಾಶಿ
ಇಂದು ಮನೆಯ ವಾತಾವರಣ ಸರಿ ಇರುವುದಿಲ್ಲ. ಕಚೇರಿಯಲ್ಲೂ ಅಷ್ಟೇ ಯಾವುದೇ ಕೆಲಸವನ್ನು ನಾಳೆಯವರೆಗೆ ಮುಂದೂಡಬೇಡಿ. ಉದ್ಯಮಿಗಳು ಇಂದು ಯಾವುದೇ ಹೂಡಿಕೆ ಮಾಡಲು ಹೊರಟಿದ್ದರೆ, ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ, ನಿಮಗೆ ಆತುರ ಒಳ್ಳೆಯದಾಗುವುದಿಲ್ಲ. ಹೆಚ್ಚುತ್ತಿರುವ ಕೆಲಸದ ಒತ್ತಡವು ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ದಣಿದಂತೆ ಮಾಡುತ್ತದೆ. ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ. ಹಣದ ವಿಷಯದಲ್ಲಿ, ದಿನವು ಸರಾಸರಿಯಾಗಿರುತ್ತದೆ. ಮನೆಯಲ್ಲಿ ಕೋಪದ ಬದಲಿಗೆ ತಾಳ್ಮೆಯಿಂದ ವರ್ತಿಸಿದರೆ ಪರಿಸ್ಥಿತಿ ಸುಧಾರಿಸುವುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:10 ರವರೆಗೆ

ವೃಶ್ಚಿಕ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ತುಂಬಾ ಮಂಗಳಕರವಾಗಿದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಇಂದು ನೀವು ಮಾನಸಿಕವಾಗಿ ಉತ್ತಮವಾಗುತ್ತೀರಿ. ಉದ್ಯೋಗಸ್ಥರು ತಮ್ಮ ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಮತ್ತು ಸೃಜನಶೀಲತೆಯಿಂದ ಮೇಲಾಧಿಕಾರಿಗಳ ಗಮನ ಸೆಳೆಯಲಿದೆ. ಉದ್ಯಮಿಗಳಿಗೂ ಲಾಭವಾಗುತ್ತಿದೆ. ನೀವು ದೊಡ್ಡ ಆದೇಶಕ್ಕಾಗಿ ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದರೆ, ಇಂದು ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 7:15 ರವರೆಗೆ

ಧನು ರಾಶಿ
ಇಂದು ನೀವು ಚರ್ಚೆಯಿಂದ ದೂರವಿರಲು ಸಲಹೆ ನೀಡಲಾಗಿದೆ. ನೀವು ಕಚೇರಿಯಲ್ಲಿ ಟೀಮ್ ವರ್ಕ್ ಬಗ್ಗೆ ಗಮನ ಹರಿಸಬೇಕು. ಅನಗತ್ಯ ದುರಹಂಕಾರವು ನಿಮ್ಮ ಕೆಲಸದ ಜೊತೆಗೆ ನಿಮ್ಮ ಇಮೇಜ್ ಮೇಲೆ ಪರಿಣಾಮ ಬೀರಬಹುದು. ಉದ್ಯಮಿಗಳು ಇಂದು ದೊಡ್ಡ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಲು ಅವಕಾಶವನ್ನು ಪಡೆಯಬಹುದು. ಮನೆಯ ವಾತಾವರಣ ಶಾಂತವಾಗಿರುತ್ತದೆ. ಪೋಷಕರಿಂದ ಲಾಭ ಸಾಧ್ಯ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ಆರೋಗ್ಯದಲ್ಲಿ ಹಠಾತ್ ಕುಸಿತ ಕಂಡು ಬರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ಮಕರ ರಾಶಿ
ಆಸ್ತಿ ವ್ಯವಹಾರದಲ್ಲಿ ಕೆಲಸ ಮಾಡುವವರಿಗೆ ಇಂದು ಅತ್ಯಂತ ಅದೃಷ್ಟದ ದಿನವಾಗಿರುತ್ತದೆ. ಈ ದಿನ ಆರ್ಥಿಕ ಲಾಭ ಗಳಿಸುತ್ತೀರಿ. ಉದ್ಯೋಗಸ್ಥರು ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ಆತುರಪಡಬೇಡಿ. ಹಣದ ವಿಚಾರದಲ್ಲಿ ಏರಿಳಿತದಿಂದ ಕೂಡಿರಲಿದೆ. ಆರೋಗ್ಯ ಸಮಸ್ಯೆ ಇದ್ರೆ ಇಂದು ಆರೋಗ್ಯ ಸುಧಾರಿಸಬಹುದು.
ಅದೃಷ್ಟದ ಬಣ್ಣ: ಗಾಢ ಕೆಂಪು
ಶುಭ ದಿನ: 23
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ರಾತ್ರಿ 9:15 ರವರೆಗೆ

ಕುಂಭ ರಾಶಿ
ಇಂದು ನೀವು ದೀರ್ಘ ಪ್ರಯಾಣ ಮಾಡಲು ಹೋಗಬೇಡಿ. ಅಲ್ಲದೆ, ನಿಮ್ಮ ಬಹಳಷ್ಟು ಹಣವನ್ನು ಸಹ ಖರ್ಚು ಮಾಡಬಹುದು. ಕೆಲಸದ ಮುಂಭಾಗದಲ್ಲಿ ಈ ದಿನವು ಉತ್ತಮವಾಗಿರುತ್ತದೆ. ಈ ದಿನ ಖಂಡಿತವಾಗಿಯೂ ನಿಮ್ಮ ಶ್ರಮಕ್ಕೆ ಉತ್ತಮ ಫಲಿತಾಂಶ ಸಿಗುತ್ತದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ ಕುಟುಂಬದಲ್ಲಿ ಪ್ರೀತಿ, ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 6:30 ರವರೆಗೆ

ಮೀನ ರಾಶಿ
ಕಛೇರಿಯಲ್ಲಿನ ಅನಗತ್ಯ ವಿಷಯಗಳಲ್ಲಿ ಮೂಗು ತೂರಿಸಬೇಡಿ, ಇಲ್ಲದಿದ್ದರೆ ಇಂದು ನೀವು ಕೆಲವು ದೊಡ್ಡ ತೊಂದರೆಗಳಿಗೆ ಸಿಲುಕಬಹುದು. ವ್ಯಾಪಾರಸ್ಥರು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು.ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ, ಅವರ ಆರೋಗ್ಯದ ಕಡೆ ಗಮನಹರಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

English summary

Dina Bhavishya -April 14 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 14 April 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Friday, April 14, 2023, 4:00 [IST]
X
Desktop Bottom Promotion