Horoscope Today April 15 2023 : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ ನೋಡೋಣ

ಶುಭೋಧಯ.. ಗ್ರಹಗಳ ಶುಭ ಸ್ಥಾನವು ಇಂದು ಯಾವ ರಾಶಿಯವರಿಗೆ ಪ್ರಯೋಜನವನ್ನು ನೀಡಲಿದೆ. ಯಾರಿಗೆ ಇಂದಿನ ದಿನ ಶುಭ? ಯಾರಿಗೆ ಅಶುಭ ಅನ್ನೋದನ್ನು ಇವತ್ತಿನ ದೈನಂದಿನ ಜಾತದಿಂದ ತಿಳಿಯೋಣ :
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ದಶಮಿ
ನಕ್ಷತ್ರ: ಶ್ರವಣ
ರಾಹುಕಾಲ: ಬೆಳಗ್ಗೆ 9:14 ರಿಂದ ಬೆಳಗ್ಗೆ 10:47 ರವರೆಗೆ

Dina Bhavishya - April 15 2023 Today Rashi Bhavishya, Daily Horoscope in Kannada

ಮೇಷ ರಾಶಿ
ಈ ದಿನ ನಿಮಗೆ ಕೆಲಸದಲ್ಲಿ ಬಿಡುವಿಲ್ಲದ ದಿನವಾಗಿರುತ್ತದೆ. ಹೆಚ್ಚು ಓಡಾಟ ನಡೆಸಬೇಕು. ಆದರೆ ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ನಿಮಗೆ ಒಳ್ಳೆಯ ಅವಕಾಶಗಳು ಹುಡುಕಿಕೊಂಡು ಬರಬಹುದು. ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಎದುರಾಗಬಹುದು. ಮನೆಯ ಸದಸ್ಯರ ಆರೋಗ್ಯ ಕ್ಷೀಣಿಸುವ ಸಾಧ್ಯತೆಯಿದೆ. ಖರ್ಚು ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೊಂಚ ಮುಂಚಾಗೃತೆ ವಹಿಸಿದರೆ ಉತ್ತಮ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ : ಸಂಜೆ 5:25 ರಿಂದ ರಾತ್ರಿ 9 ರವರೆಗೆ

ವೃಷಭ ರಾಶಿ
ಇಂದು ನಿಮ್ಮ ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಮನೆಯ ಸದಸ್ಯರಿಂದ ಸ್ವಲ್ಪ ದೂರ ಪ್ರಯಾಣಿಸಬೇಕಾಗುತ್ತದೆ. ಕಚೇರಿಯಲ್ಲಿ ಇಷ್ಟು ದಿನ ಬಾಕಿಯಿದ್ದ ಕೆಲವು ಕಷ್ಟಕರ ಕೆಲಸಗಳು ಪೂರ್ಣಗೊಳ್ಳುತ್ತದೆ. ವ್ಯಾಪಾರಕ್ಕೆ ಸಂಬಂಧಿಸಿದ ಜನರು ನಿರೀಕ್ಷಿತ ಫಲಿತಾಂಶ ಪಡೆಯುತ್ತೀರಿ. ಇನ್ನೂ ಕೆಲವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಅವಕಾಶವನ್ನು ಪಡೆಯುತ್ತೀರಿ. ಇಂದು ನೀವು ದೇವರ ಆರಾಧನೆಯಲ್ಲಿ ಹೆಚ್ಚು ಆಸಕ್ತರಾಗಿರುತ್ತೀರಿ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 45
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ರವರೆಗೆ

ಮಿಥುನ ರಾಶಿ
ಉದ್ಯಮಿಗಳು ಬಹಳ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೆಲಸ ಮಾಡುವ ಸ್ಥಳ ಅಂದ್ರೆ ಕಛೇರಿಯಲ್ಲಿ ತುಂಬಾ ಕ್ರಿಯಾಶೀಲರಾಗಿರಬೇಕು. ಇಂದು ಕೆಲಸದ ಹೊರೆ ಹೆಚ್ಚಾಗಬಹುದು. ಬಾಸ್‌ ನಿಮಗೆ ಇಂದು ಸವಾಲೊಡ್ಡುವ ಸಾಧ್ಯತೆ ಹೆಚ್ಚಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಸಮಯ ಪರಿಪಾಲನೆ ತುಂಬಾನೇ ಮುಖ್ಯ. ಸಂಗಾತಿಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಉಂಟಾಗಬಹುದು. ಅನಗತ್ಯ ವಿಷಯಗಳ ಬಗ್ಗೆ ವಾದ ಮಾಡಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ

ಕರ್ಕಾಟಕ
ನೀವು ಹೊಸ ಮನೆ, ಭೂಮಿಯನ್ನು ಖರೀದಿಸಲು ಯೋಚನೆ ಮಾಡಿದ್ದರೆ ಸಂಪೂರ್ಣ ತನಿಖೆ ಮಾಡಿದ ನಂತರ ನೀವು ನಿರ್ಧಾರ ತೆಗೆದುಕೊಂಡರೆ ಒಳ್ಳೆಯದು. ಉದ್ಯಮಿಗಳು ಕೆಲವು ದಿನಗಳಿಂದ ಬಾಕಿಯಿರುವ ವ್ಯವಹಾರವನ್ನು ಪೂರ್ಣಗೊಳಿಸುತ್ತೀರಿ. ನಿಮ್ಮ ಪರಿಶ್ರಮವು ಯಶಸ್ವಿಯಾಗುತ್ತದೆ ಮತ್ತು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಜವಾಬ್ದಾರಿಯುತ ಕೆಲಸವನ್ನು ವಹಿಸಿಕೊಡಬಹುದು. ಇನ್ನೂ ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ. ಕುಟುಂಬ ಜೀವನದಲ್ಲಿ ಸುಖಕರವಾಗಿರುತ್ತದೆ. ಮನೆಯ ಹಿರಿಯರ ಬೆಂಬಲ ಸಿಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ಸಿಂಹ ರಾಶಿ
ಈ ದಿನ ನೀವು ತುಂಬಾ ಜಾಗರೂಕರಾಗಿರಬೇಕು. ಶತ್ರುಗಳು ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು. ಕಚೇರಿಯಲ್ಲಿ ಸಹೋದ್ಯೋಗಿಗಳನ್ನು ಕುರುಡಾಗಿ ನಂಬಲು ಹೋಗಬೇಡಿ. ಇದರಿಂದ ನೀವು ತೊಂದರೆಗೆ ಸಿಲುಕಬಹುದು. ಉದ್ಯಮಿಗಳು ಇಂದು ಹೊಸ ಕೆಲಸವನ್ನು ಪ್ರಾರಂಭಿಸಿದರೆ ಅಡಚಣೆಯನ್ನು ಎದುರಿಸಬೇಕಾಗಬಹುದು. ಈ ದಿನ ನೀವು ತಾಳ್ಮೆಯಿಂದಿದ್ದರೆ ತುಂಬಾನೇ ಒಳ್ಳೆಯದು. ಶೀಘ್ರದಲ್ಲೇ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಮಗುವಿನ ಕಡೆಯಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಮನೆಯವರ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 11:35 ರವರೆಗೆ

ಕನ್ಯಾರಾಶಿ
ಪೂರ್ವಜರ ಆಸ್ತಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಆತ್ಮೀಯರಿಂದ ಸಲಹೆ ಪಡೆಯಿರಿ. ನಿಮ್ಮ ಸಣ್ಣ ನಿರ್ಲಕ್ಷ್ಯದಿಂದ ನಷ್ಟವಾಗುವ ಸಾಧ್ಯತೆ ಇದೆ. ಅಲ್ಲದೆ, ನಿಮ್ಮ ಸಂಬಂಧಗಳಲ್ಲಿ ಬಿರುಕು ಉಂಟಾಗಬಹುದು. ಉದ್ಯೋಗಸ್ಥರಿಗೆ ಇಂದು ಉತ್ತಮ ದಿನ. ನೀವು ಉನ್ನತ ಸ್ಥಾನ ಪಡೆಯುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಇದು ಉತ್ತಮ ಕಾಲ. ಆರ್ಥಿಕ ಲಾಭದ ನಿರೀಕ್ಷೆಯಿದೆ. ತಡರಾತ್ರಿಯವರೆಗೆ ಲ್ಯಾಪ್‌ಟಾಪ್ ಅಥವಾ ಮೊಬೈಲ್ ಬಳಸುವುದನ್ನು ನಿಲ್ಲಿಸಿ
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ

ತುಲಾ ರಾಶಿ
ಅದೃಷ್ಟವು ನಿಮಗೆ ಅನುಕೂಲಕರವಾಗಿರುತ್ತದೆ ಮತ್ತು ಕಡಿಮೆ ಪ್ರಯತ್ನದಿಂದ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನೀವು ಉದ್ಯಮಿಯಾಗಿದ್ದರೆ ನಿಮ್ಮ ವ್ಯಾಪಾರವು ವೇಗವಾಗಿ ಬೆಳೆಯುತ್ತದೆ. ಇಂದು ನೀವು ಪ್ರಾರಂಭಿಸುವ ಯಾವುದೇ ಕೆಲಸದಲ್ಲಿ ನೀವು ಯಶಸ್ವಿಯಾಗುತ್ತೀರಿ. ಮತ್ತೊಂದೆಡೆ, ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮ್ಮ ನೆಚ್ಚಿನ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವನ್ನು ನೀಡಬಹುದು. ಇಂತಹ ಪರಿಸ್ಥಿತಿಯಲ್ಲಿ ಉನ್ನತ ಅಧಿಕಾರಿಗಳ ನಿರೀಕ್ಷೆಗೆ ತಕ್ಕಂತೆ ಶ್ರಮಿಸಬೇಕು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಹಣಕಾಸಿನ ವಿಷಯಗಳಲ್ಲಿ ಆತುರವನ್ನು ತಪ್ಪಿಸಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ನಿಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
ಅದೃಷ್ಟ ಬಣ್ಣ: ಕೆನೆ
ಅದೃಷ್ಟ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2 ರವರೆಗೆ

ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಇಂದು ಉತ್ತಮ ದಿನ. ನೀವು ಕೊಟ್ಟ ಸಾಲ ವಾಪಾಸ್ಸಾಗುವ ನಿರೀಕ್ಷೆ ಇದೆ. ಆಲಸ್ಯ ಹಾಗೂ ಸೋಮಾರಿತನವನ್ನು ತ್ಯಜಿಸಿ ಕೆಲಸ ಮಾಡಿ. ಉದ್ಯಮಿಗಳು ಹೊಸ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕಾದರೆ ಬುದ್ಧಿವಂತಿಕೆ ತೋರಬೇಕು. ಕೌಟುಂಬಿಕ ಜೀವನಕ್ಕೆ ಹೆಚ್ಚು ಗಮನ ಕೊಡಿ. ವಿಶೇಷವಾಗಿ ಇಂದು ಪೋಷಕರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯವು ಬೇಡ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:45 ರಿಂದ ರಾತ್ರಿ 8 ರವರೆಗೆ

ಧನು ರಾಶಿ
ಅನವಶ್ಯಕ ಖರ್ಚು ಮಾಡಬೇಕಾದಿತು. ದುಡ್ಡಿನ ಬಗ್ಗೆ ಎಚ್ಚರಿಕೆಯಿಂದ ವ್ಯವಹರಿಸಿ. ಇಂದು ನೀವು ಕಚೇರಿಯಲ್ಲಿಅಪೂರ್ಣ ಕೆಲಸವನ್ನು ಪೂರ್ಣಗೊಳಿಸಲು ಕಷ್ಟಪಡಬೇಕಾಗಬಹುದು. ಉನ್ನತ ಅಧಿಕಾರಿಗಳ ಕಠಿಣ ಧೋರಣೆಯು ನಿಮಗೆ ನೋವುಂಟು ಮಾಡಬಹುದು. ಉದ್ಯಮಿಗಳು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ದೊಡ್ಡ ಉದ್ಯಮಿಗಳಿಗೆ ಇಂದು ಅತ್ಯತ್ತಮ ದಿನ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಉತ್ತಮ ಆರೋಗ್ಯಕ್ಕಾಗಿ ನೀವು ಪ್ರತಿದಿನ ಬೆಳಿಗ್ಗೆ ನಡೆದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ

ಮಕರ ರಾಶಿ
ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇಂದು ಒಳ್ಳೆಯ ದಿನ. ಶೀಘ್ರದಲ್ಲೇ ನಿಮಗಾಗಿ ಹೊಸ ಮಾರ್ಗಗಳು ತೆರೆದುಕೊಳ್ಳುವ ಸಾಧ್ಯತೆಯಿದೆ. ಉದ್ಯೋಗಸ್ಥರ ಪ್ರಗತಿಯ ಕನಸು ನನಸಾಗಬಹುದು. ಇಂದು ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ಶೀಘ್ರದಲ್ಲೇ ಸಾಲಗಳಿಂದ ಮುಕ್ತರಾಗುತ್ತೀರಿ. ಇಂದು ನಿಮ್ಮ ಸಂಗಾತಿಯೊಂದಿಗೆ ಬಹಳ ವಿಶೇಷವಾದ ದಿನವಾಗಿರುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಕುಂಭ ರಾಶಿ
ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಶುಭ ದಿನವಾಗಲಿದೆ. ಪರೀಕ್ಷೆಯಲ್ಲಿ ನೀವು ಅದ್ಭುತ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವವರು ಉತ್ತಮ ಉದ್ಯೋಗ ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಈ ದಿನವು ಲಾಭದಾಯಕವಾಗಿರುತ್ತದೆ. ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ. ಆರೋಗ್ಯದ ಬಗ್ಗೆ ಗಮನ ಕೊಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಸಹೋದರ ಅಥವಾ ಸಹೋದರಿ ಮದುವೆಯಾಗಿದ್ದರೆ ಅವರ ಮದುವೆಯ ಪ್ರಸ್ತಾಪ ಬರುತ್ತದೆ. ಆರ್ಥಿಕ ಲಾಭದ ನಿರೀಕ್ಷೆಯಿದೆ. ಉದ್ಯೋಗಸ್ಥರು ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಹಾಗೂ ಅವಕಾಶ ಪಡೆಯುತ್ತೀರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆಪ್ತರಿಗಾಗಿ ವಿಶೇಷ ಉಡುಗೊರೆಯನ್ನು ಸಹ ಖರೀದಿಸಬಹುದು. ನಿಮಗೆ ಮೈಗ್ರೇನ್‌ ಸಮಸ್ಯೆ ಇದ್ದರೆ ಅದರಿಂದ ಹೆಚ್ಚಿನ ನೋವು ಅನುಭವಿಸುತ್ತೀರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರವರೆಗೆ

English summary

Dina Bhavishya - April 15 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy April 15 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Saturday, April 15, 2023, 4:00 [IST]
X
Desktop Bottom Promotion