Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
Horoscope Today 16 April 2023: ಭಾನುವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 16ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಶತಾಭಿಷ
ರಾಹುಕಾಲ: ಸಂಜೆ 04:59ರಿಂದ 06:32ರವರೆಗೆ

ಮೇಷ ರಾಶಿ
ಕೌಟುಂಬಿಕ ಜೀವನದಲ್ಲಿ ಸಮಸ್ಯೆ ಹೆಚ್ಚಾಗಬಹುದು, ಹಳೆಯ ವಿಷಯಗಳನ್ನು ಕೆದಕಿ ಸಮಸ್ಯೆ ಮತ್ತಷ್ಟು ಹೆಚ್ಚಾಗುವುದು . ವೈಯಕ್ತಿಕ ಕಾರಣಗಳಿಂದ ಇಂದು ನಿಮ್ಮ ಕೆಲಸದ ಕಡೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ನೀವು ತಾಳ್ಮೆಯ ವರ್ತಿಸುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಹೇಗಾದರೂ, ಇಂದು ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ಕೆಲಸವನ್ನು ಮಾಡದಂತೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಸಂಜೆ 6 ರವರೆಗೆ
ವೃಷಭ ರಾಶಿ
ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುತ್ತೀರಿ. ಇಂದು ಕೆಲಸದ ವಿಷಯದಲ್ಲಿ ಉತ್ತಮ ಸೂಚನೆ ಸಿಗಲಿದೆ. ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮಗೆ ಹೊಟ್ಟೆಯ ಸೋಂಕು ಇರಬಹುದು. ತಣ್ಣನೆಯ ಹಾಗೂ ಹಳೆಯ ಆಹಾರ ಸೇವಿಸಬೇಡಿ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ
ಮಿಥುನ ರಾಶಿ
ಉದ್ಯೋಗಸ್ಥರಿಗೆ ಇಂದು ಮಹತ್ವದ ದಿನವಾಗಲಿದೆ. ಉದ್ಯಮಿಗಳು ಹೊಸ ಒಪ್ಪಂದವನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಬೇಕು, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ಸಣ್ಣ ವಿಷಯಕ್ಕೆ ನಿಮ್ಮ ಸಂಗಾತಿಯೊಂದಿಗೆ ಜಗಳವಾಗಬಹುದು. ನಿಮ್ಮ ಕೋಪದ ಸ್ವಭಾವವನ್ನು ನೀವು ನಿಗ್ರಹಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಕೆಟ್ಟ ಚಟವಿದ್ದರೆ ಆರೋಗ್ಯದ ದೃಷ್ಟಿಯಿಂದ ಅವುಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 3:40 ರವರೆಗೆ
ಕರ್ಕ ರಾಶಿ
ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರಲಿದೆ. ಈ ದಿನ ದೊಡ್ಡ ಸಾಲ ಮಾಡಲು ಹೋಗಬೇಡಿ. ನೀವು ಕೆಲಸ ಮಾಡಿದರೆ, ಇಂದು ನೀವು ಕಚೇರಿಯಲ್ಲಿ ವಿಶೇಷವಾದದ್ದನ್ನು ಮಾಡಬಹುದು. ಈ ದಿನ ಕೆಲಸದ ಕಡೆಗೆ ಅಧಿಕ ಗಮನ ನೀಡಿ. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ವಿಶೇಷವಾಗಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ ನಿಮ್ಮ ವ್ಯವಹಾರದಲ್ಲಿ ಧನಾತ್ಮಕ ಬದಲಾವಣೆ ಕಂಡು ಬರುವುದು. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಕುಟುಂಬ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಇರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6:15 ರವರೆಗೆ
ಸಿಂಹ ರಾಶಿ
ನಿಮ್ಮ ಕೆಲಸದಲ್ಲಿ ಪ್ರಗತಿ ಬಯಸುವುದಾದರೆ ನೀವು ಮತ್ತಷ್ಟು ಪ್ರಯತ್ನ ಮಾಡಿ. ವ್ಯಾಪಾರಸ್ಥರು ಇಂದು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಲಾಗಿದೆ. ಅಲ್ಲದೆ ಈ ದಿನ ಬೇರೆಯವರ ಮಾತಿನಿಂದ ಪ್ರಭಾವಿತರಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಸಹಜವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅನಗತ್ಯ ಚಿಂತೆಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ 7:20 ರವರೆಗೆ
ಕನ್ಯಾ ರಾಶಿ
ಮಕ್ಕಳ ಕಡೆಯಿಂದ ಖುಷಿ ಸಿಗಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಕೆಲಸಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳುವುದು. ನಿಮ್ಮ ಸ್ಥಾನ ಮತ್ತು ಖ್ಯಾತಿ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಇಂದು ತರಾತುರಿಯಲ್ಲಿ ಯಾವುದೇ ಕೆಲಸ ಮಾಡಬೇಡಿ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:15 ರವರೆಗೆ
ಸಿಂಹ ರಾಶಿ
ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ, ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ದಿನ ದುಂದು ವೆಚ್ಚ ಮಾಡಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರಲಿದೆ. ಕೆಲಸದ ಜೊತೆಗೆ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ
ಕನ್ಯಾ ರಾಶಿ
ಈ ದಿನ ನೀವು ಕೆಲಸದಲ್ಲಿ ತುಂಬಾ ಜಾಗರೂಕರಾಗಿರಬೇಕು. ನಿಮ್ಮ ಕೆಲವು ಪ್ರಮುಖ ಕೆಲಸಗಳಿಗೆ ಕೆಲವರು ಅಡ್ಡಿಪಡಿಸಬಹುದು. ಅಲ್ಲದೆ ಅವರು ನಿಮ್ಮ ಇಮೇಜ್ ಹಾಳು ಮಾಡಲು ಪ್ರಯತ್ನಿಸಬಹುದು, ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ. ಕುಟುಂಬದಲ್ಲಿ ನಿಮ್ಮ ನಡುವಿನ ಸಮಸ್ಯೆಗಳನ್ನು ಶಾಂತ ಮನಸ್ಸಿನಿಂದ ಪರಿಹರಿಸಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ
ತುಲಾ ರಾಶಿ
ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ, ಇಲ್ಲದಿದ್ದರೆ ಉನ್ನತ ಅಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳಬಹುದು. ನೀವು ವ್ಯಾಪಾರಸ್ಥರಾಗಿದ್ದರೆ ಹಳೆಯ ಸ್ಥಗಿತಗೊಂಡ ಯೋಜನೆಯಲ್ಲಿ ಕೆಲಸ ಮಾಡಲು ಇಂದು ಉತ್ತಮ ದಿನವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಅದ್ದೂರಿಯಾಗಿ ಖರ್ಚು ಮಾಡಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಕೆಲಸದ ಜೊತೆಗೆ ಆರೋಗ್ಯದ ಕಡೆ ಗಮನ ಕೊಡಿ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಇಂದು ಕೆಲಸದ ಸ್ಥಳದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ನಿಮ್ಮ ಕೆಲವು ಪ್ರಮುಖ ಕೆಲಸಗಳಿಗೆ ಕೆಲವರು ಅಡ್ಡಿಪಡಿಸಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇಂದು ನೀವು ಯಾವುದೇ ಹಳೆಯ ಬಾಕಿ ಬಿಲ್ ಪಾವತಿಸಬೇಕಾಗಬಹುದು. ಸಂಗಾತಿಯ ತಪ್ಪು ವರ್ತನೆ ಇಂದು ನಿಮ್ಮ ಭಾವನೆಗಳನ್ನು ಘಾಸಿಗೊಳಿಸಬಹುದು. ನಿಮ್ಮ ನಡುವಿನ ಸಮಸ್ಯೆಗಳನ್ನು ಶಾಂತ ಮನಸ್ಸಿನಿಂದ ಪರಿಹರಿಸಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ
ಧನು ರಾಶಿ
ವಿದ್ಯಾರ್ಥಿಗಳು ತಾವು ಬಯಸಿದ ಕೋರ್ಸ್ ಪಡೆಯಲು ಪ್ರಯತ್ನಿಸಿದರೆ ಅವಕಾಶ ದೊರೆಯಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಪೋಷಕರು ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ, ನೀವು ಅವಿವಾಹಿತರಾಗಿದ್ದರೆ , ಸಂಗಾತಿಯ ಹುಡುಕಾಟದಲ್ಲಿದ್ದರೆ ಶೀಘ್ರವೇ ನಿಮಗೆ ಸಂಗಾತಿ ಸಿಗಲಿದ್ದಾರೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಸರಾಸರಿ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ
ಮಕರ ರಾಶಿ
ನೀವು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಘರ್ಷಣೆ ಅಥವಾ ಅನಗ್ಯತ ಸ್ಪರ್ಧೆಗೆ ನಿಲ್ಲಬೇಡಿ. ವ್ಯಾಪಾರಸ್ಥರು ಇಂದು ಅನಗತ್ಯವಾಗಿ ಓಡಬೇಕಾಗುತ್ತದೆ. ಇದಲ್ಲದೆ, ನಿಮ್ಮ ಬಹಳಷ್ಟು ಹಣವನ್ನು ಸಹ ಖರ್ಚು ಮಾಡಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಕೆಲಸದಲ್ಲಿ ಅಧಿಕ ಒತ್ತಡ ತೆಗೆದುಕೊಳ್ಳಲು ಹೋಗಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ
ಕುಂಭ ರಾಶಿ
ಮನೆಯ ವಾತಾವರಣ ಚೆನ್ನಾಗಿರಲಿದೆ ಈ ದಿನ ನೀವು ಸಾಕಷ್ಟು ಹಣವನ್ನು ಖರ್ಚು ಮಾಡುವ ಸಾಧ್ಯತೆಯಿದೆ. ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ಬಾಕಿ ಉಳಿದಿರುವ ಕಾರ್ಯಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟ ಬಣ್ಣ: ಕಡು ನೀಲಿ
ಅದೃಷ್ಟ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 9:05 ರವರೆಗೆ
ಮೀನ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ, ಇಂದು ನಿಮ್ಮ ಶಿಕ್ಷಣದಲ್ಲಿ ಅಡೆತಡೆಗಳು ಉಂಟಾಗಬಹುದು. ನೀವು ತಾಳ್ಮೆಯಿಂದಿದ್ದರೆ ಶೀಘ್ರದಲ್ಲೇ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ಆದರೆ ನಿಮ್ಮ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದ ಬಲದಿಂದ ನೀವು ಈ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯುತ್ತಾರೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಮಿಶ್ರಫಲ
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಿಗ್ಗೆ 10:30 ರಿಂದ ಸಂಜೆ 4:50 ರವರೆಗೆ



Click it and Unblock the Notifications












