Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 19 April 2023: ಬುಧವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 19ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ಚತುರ್ದಶಿ
ನಕ್ಷತ್ರ: ರೇವತಿ
ರಾಹುಕಾಲ:ಮಧ್ಯಾಹ್ನ 12:19ರಿಂದ 01:52ರವರೆಗೆ

ಮೇಷ ರಾಶಿ
ವೈಯಕ್ತಿಕ ಅಥವಾ ವೃತ್ತಿಪರ ಜೀವನದಲ್ಲಿ ಆಗಲಿ ಈ ದಿನ ತುಂಬಾ ಉತ್ತಮವಾಗಿದೆ. ನಿಮ್ಮ ಕೆಲಸದಲ್ಲಿ ನಿರತರಾಗುವಿರಿ, ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಭಾವೋದ್ವೇಗಕ್ಕೆ ಒಳಗಾಗುವುದನ್ನು ತಪ್ಪಿಸಬೇಕು ಮತ್ತು ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7:40 ರಿಂದ 11 ರವರೆಗೆ
ವೃಷಭ ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ಕೆಲವು ದಿನಗಳಿಂದ ಎಲ್ಲವೂ ಸರಿಯಿಲ್ಲದಿದ್ದರೆ ಈ ದಿ ಮನಸ್ಸು ಬಿಚ್ಚಿ ಮಾತನಾಡುವ ಮೂಲಕ ಪರಿಸ್ಥಿತಿ ಸರಿಪಡಿಸಲು ಪ್ರಯತ್ನಿಸಿ. ಕಚೇರಿಯಲ್ಲಿ ಮೇಲಾಧಿಕಾರಿಗಳ ಸಲಹೆಯನ್ನು ಪಾಲಿಸಿ. ದೊಡ್ಡ ಲಾಭ ಗಳಿಸಲು ಯಾವುದೇ ತಪ್ಪು ದಾರಿ ಹಿಡಿಯದಂತೆ ವ್ಯಾಪಾರಿಗಳಿಗೆ ಸೂಚಿಸಲಾಗಿದೆ. ನಿಮ್ಮ ಒಂದು ತಪ್ಪು ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು. ಹಣದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 4 ರಿಂದ 7:25 ರವರೆಗೆ\
ಮಿಥುನ ರಾಶಿ
ನಿಮಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆ ಇದ್ದರೆ ಈ ದಿನ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ಶೀಘ್ರದಲ್ಲೇ ನಿಮಗೆ ಯಶಸ್ಸಿನ ಬಾಗಿಲು ತೆರೆಯುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ಸಂಚಿತ ಬಂಡವಾಳದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಗ್ಗೆ 8:35 ರಿಂದ 11:30 ರವರೆಗೆ
ಕರ್ಕ ರಾಶಿ
ಸ್ನೇಹಿತರನ್ನು ಅತಿಯಾಗಿ ನಂಬಲು ಹೋಗಬೇಡಿ. ಕೆಲವೊಮ್ಮೆ ತುಂಬಾ ನಂಬಿದವರೇ ಮೋಸ ಹೋಗಬಹುದು. ಉದ್ಯೋಗಿಗಳಿಗೆ ಸಾಮಾನ್ಯ ದಿನವಾಗಲಿದೆ. ಉತ್ತಮ ಯಶಸ್ಸನ್ನು ಸಾಧಿಸಲು ನೀವು ಹೊಸದನ್ನು ಮತ್ತು ಸೃಜನಶೀಲತೆಯನ್ನು ಮಾಡಬೇಕಾಗಿದೆ. ಸಣ್ಣ ವ್ಯಾಪಾರಸ್ಥರಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಇಂದು ನಿಮ್ಮ ಮಾರಾಟ ಹೆಚ್ಚಾಗಬಹುದು. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನ ನೀಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ
ಸಿಂಹ ರಾಶಿ
ಚಿಕ್ಕ ವಿಷಯಗಳಿಗೆ ಹೆಚ್ಚು ಚಿಂತೆ ಮಾಡಬೇಡಿ, ಆರೋಗ್ಯವು ಕ್ಷೀಣಿಸಬಹುದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಮಾರ್ಗದರ್ಶನ ಸಿಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಅನಗ್ಯತ ಚಿಂತೆಗಳಿಂದ ದೂರವಿರಿ, ಇಲ್ಲದಿದ್ದರೆ ಭಾರೀ ನಷ್ಟಗಳು ಸಾಧ್ಯ. ಆರ್ಥಿಕ ರಂಗದಲ್ಲಿ ಇಂದು ನಿಮಗೆ ಮಿಶ್ರ ದಿನಫಲ. ನಿಮ್ಮ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಸಾಧಿಸಿ. ನಿಮ್ಮ ಪ್ರಮುಖ ನಿರ್ಧಾರಗಳಲ್ಲಿ ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಕನ್ಯಾ ರಾಶಿ
ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ ಈ ದಿನ ನೀವು ದೊಡ್ಡ ಲಾಭವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಇಂದು ಒತ್ತಡ ಹೆಚ್ಚಿರಲಿದೆ. ಇದರಿಂದ ಆಯಾಸ ಹೆಚ್ಚಾಗಲಿದೆ, ಆದರೂ ಚಿಂತೆ ಮಾಡಬೇಕಾಗಿಲ್ಲ, ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಹಣದ ವಿಷಯದಲ್ಲಿ ಅದೃಷ್ಟದ ದಿನ. ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:05 ರವರೆಗೆ
ತುಲಾ ರಾಶಿ
ನೀವು ಉದ್ಯಮಿಯಾಗಿದ್ದರೆ ಸ್ಥಗಿತಗೊಂಡ ನಿಮ್ಮ ಯೋಜನೆಗಳು ವೇಗವನ್ನು ಪಡೆಯುತ್ತವೆ. ಇಂದು ನೀವು ಕೆಲವು ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಉದ್ಯೋಗಸ್ಥರಿಗೆ ಈ ದಿನ ಅನುಕೂಲಕರವಲ್ಲ. ನಿಮ್ಮ ಅಜಾಗರೂಕತೆಯಿಂದ ಭಾರೀ ನಷ್ಟದ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ಇಂದು ಉತ್ತಮ ದಿನವಾಗಿರುತ್ತದೆ. ಇಂದು ನೀವು ಹೆಚ್ಚು ಉಳಿತಾಯ ಮಾಡಲು ಸಾಧ್ಯವಾಗುವುದು. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಹಲ್ಲು ನೋವಿನ ಸಮಸ್ಯೆ ಹೊಂದಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ
ವೃಶ್ಚಿಕ ರಾಶಿ
ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಕೆಲವು ದೊಡ್ಡ ಲಾಭ ಪಡೆಯುವ ಸಾಧ್ಯತೆಯಿದೆ. ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ ಮತ್ತು ನೀವು ಮನೆಯಲ್ಲಿ ಹಿರಿಯರಾಗಿದ್ದರೆ, ಇಂದು ನಿಮ್ಮ ಚಿಕ್ಕ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಸರ್ಕಾರಿ ಕೆಲಸ ಮಾಡುವವರಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದಿದ್ದರೆ, ಈ ಸಮಯದಲ್ಲಿ ನೀವು ತಾಳ್ಮೆಯಿಂದಿರಬೇಕು. ಆರೋಗ್ಯ ಸಂಬಂಧಿಸಿದ ಸಮಸ್ಯೆ ದೂರಾಗಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 3:15 ರಿಂದ ಸಂಜೆ 6 ರವರೆಗೆ
ಧನು ರಾಶಿ
ಪ್ರೇಮಿಗಳು ಈ ದಿನ ಹಲವು ಸಮಸ್ಯೆ ಎದುರಿಸಬಹುದು. ವಿವಾಹಿತರಿಗೆ ಇಂದು ಬಹಳ ವಿಶೇಷವಾದ ದಿನವಾಗಿರುತ್ತದೆ. ಉದ್ಯೋಗಿಗಳು ತಮ್ಮ ಕೆಲಸದ ಕಡೆ ಅಧಿಕ ಗಮನ ನೀಡಬೇಕು. ಉದ್ಯಮಿಗಳು ಹೊಸ ಒಪ್ಪಂದವನ್ನು ಮಾಡಲು ಹೊರಟಿದ್ದರೆ, ನೀವು ಹೆಚ್ಚು ಜಾಗರೂಕರಾಗಿರಬೇಕು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನೀವು ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ವರ್ತಿಸಬೇಕು. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ಇಂದು ನಿಮಗೆ ಅತ್ಯಂತ ಆಹ್ಲಾದಕರ ದಿನವಾಗಲಿದೆ. ನಿಮ್ಮ ವೃತ್ತಿಜೀವನದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಇಂದು ನಿಮ್ಮ ಸಮಸ್ಯೆಯು ಬಗೆಹರಿಯುತ್ತದೆ. ಬಹಳ ಸಮಯದ ನಂತರ, ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುತ್ತದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಖುಷಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ. ನೀವು ಇಂದು ಮಾನಸಿಕವಾಗಿ ಉತ್ತಮವಾಗುತ್ತೀರಿ ಮತ್ತು ದೈಹಿಕವಾಗಿ ನೀವು ತುಂಬಾ ಚುರುಕಾಗಿರುತ್ತೀರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 11:15 ರವರೆಗೆ
ಕುಂಭ ರಾಶಿ
ಇಂದು ಯಾವುದೇ ಧಾರ್ಮಿಕ ಅಥವಾ ಶುಭ ಕಾರ್ಯಕ್ರಮವನ್ನು ಮನೆಯಲ್ಲಿ ಆಯೋಜಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ಸ್ನೇಹಿತರು ಮತ್ತು ಸಂಬಂಧಿಕರ ಜೊತೆ ಸಮಯ ಕಳೆಯಲು ಉತ್ತಮ ಅವಕಾಶ ಸಿಗಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಉದ್ಯೋಗಸ್ಥರು ಇಂದು ತಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯಬಹುದುವ್ಯಾಪಾರಸ್ಥರ ಆರ್ಥಿಕ ಸ್ಥಿತಿಯೂ ಬಲಗೊಳ್ಳುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ
ಮೀನ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ನೀವು ಶ್ರದ್ಧೆಯಿಂದ ಅಧ್ಯಯನ ಮಾಡಬೇಕಾಗುತ್ತದೆ. ಈ ಸಮಯದಲ್ಲಿ ನಿರ್ಲಕ್ಷ್ಯ ಮಾಡಿದರೆ ತುಂಬಾನೇ ನಷ್ಟವಾಗುವುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಪ್ರೀತಿಪಾತ್ರರ ಪ್ರೀತಿ ಮತ್ತು ಬೆಂಬಲ ಸಿಗುತ್ತದೆ. ಕೆಲಸದ ದೃಷ್ಟಿಯಿಂದ ಇಂದು ಏರಳಿತಗಳಿಂದ ಕೂಡಿರಲಿದೆ. ಈ ದಿನ ಉದ್ಯಮಿಗಳು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು. ಆರೋಗ್ಯದ ಕ್ಷೀಣತೆಯಿಂದಾಗಿ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ 9:25 ರವರೆಗೆ



Click it and Unblock the Notifications
