Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 2 April 2023: ಭಾನುವಾರ: ಈ ದಿನ ಯಾವ ರಾಶಿಗಳಿಗೆ ಶುಭ, ಯಾರಿಗಲ್ಲ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 2ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಶುಕ್ಲ ಪಕ್ಷ
ತಿಥಿ: ದ್ವಾದಶಿ
ನಕ್ಷತ್ರ: ಮಘಾ
ರಾಹುಕಾಲ: ಬೆಳಗ್ಗೆ 04:59ರಿಂದ 06:31ರವರೆಗೆ

ಇಡೀ ದಿನ ಕೆಲಸ ಅಂತ ಓಡುತ್ತಿರುತ್ತೇವೆ, ಭಾನುವಾರ ಕುಟುಂಬಕ್ಕೆ ಸ್ವಲ್ಪ ಸಮಯ ನೀಡೋಣ ಎಂದು ಹೇಳುತ್ತಾ ಏಪ್ರಿಲ್ 2 ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಪರೀಕ್ಷೆಯಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಸ್ಥರ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳು ಕೆಲಸದ ಕಡೆ ನಿರ್ಲಕ್ಷ್ಯ ಮಾಡದೆ ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಲು ಸಲಹೆ ನೀಡಲಾಗಿದೆ. ಸ್ವಲ್ಪ ಅಜಾಗರೂಕತೆಯು ಇಂದು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ
ವೃಷಭ ರಾಶಿ
ಈ ದಿನ ನಿಮಗೆ ತುಂಬಾ ಒತ್ತಡದಿಂದ ಕೂಡಿರಲಿದೆ. ನಿಮ್ಮ ಕೆಲಸದ ಕುರಿತು ಮೊದಲೇ ಪ್ಲ್ಯಾನ್ ಮಾಡಿ ಅದರಂತೆ ಕೆಲಸ ಪ್ರಾರಂಭಿಸಿದರೆ ದೊಡ್ಡ ಸಮಸ್ಯೆಯಿಲ್ಲದೆ ಕೆಲಸವನ್ನು ಮುಗಿಸಬಹುದು. ಈ ದಿನ ವ್ಯಾಪಾರಸ್ಥರಿಗೆ ಉತ್ತಮವಾಗಿದೆ. ಇಂದು ವೃಷಭ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ಬಿಡುವಿಲ್ಲದ ಕೆಲಸದ ನಡುವಿನಿಂದ ವಿಶ್ರಾಂತಿ ಕಡೆ ಗಮನ ಹರಿಸುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:35 ರಿಂದ ಸಂಜೆ 7 ರವರೆಗೆ
ಮಿಥುನ ರಾಶಿ
ಈ ದಿನ ಮಿಥುನ ರಾಶಿಯವರಿಗೆ ಒಳ್ಳೆಯದಿದೆ. ಇಂದು ಹಣಕ್ಕೆ ಸಂಬಂಧಿಸಿದ ಚಿಂತೆ ದೂರವಾಗಲಿದೆ. ಈ ದಿನ ನಿಮ್ಮ ಆದಾಯ ಹೆಚ್ಚಾಗಬಹುದು. ಈ ದಿನದ ನೀವು ಹಣದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರುವುದು ಉತ್ತಮ. ವೈಯಕ್ತಿಕ ವಿಷಯಗಳು ನಿಮ್ಮ ಕೆಲಸದ ಮೇಲೆ ಪ್ರಭಾವ ಬೀರಲು ಬಿಡಬೇಡಿ. ಈ ದಿನ ವಿಶ್ರಾಂತಿ ಕಡೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6 ರವರೆಗೆ
ಕರ್ಕ ರಾಶಿ
ಈ ದಿನ ಉದ್ಯೋಗಿಗಳಿಗೆ ಏರಳಿತಗಳಿಂದ ಕೂಡಿರಲಿದೆ. ನೀವು ಇತ್ತೀಚೆಗೆ ಯಾವುದೇ ಹೂಡಿಕೆ ಮಾಡಿ ಅದರಲ್ಲಿ ನೀವು ಬಯಸಿದ ರಿಸಲ್ಟ್ ಸಿಗದಿದ್ದಾಗ ನಿರಾಸೆ ಪಡಬೇಡಿ, ಸದ್ಯದಲ್ಲಿ ನಿಮ್ಮ ಶ್ರಮಕ್ಕೆ ಫಲ ಸಿಗಲಿದೆ. ಹಣದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ. ಆರೋಗ್ಯದಲ್ಲಿ ಕ್ಷೀಣಿಸುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 4:15ರಿಂದ ಸಂಜೆ 5 ಗಂಟೆಯವರೆಗೆ
ಸಿಂಹ ರಾಶಿ
ನೀವು ಕೆಲಸ ಮಾಡುತ್ತಿದ್ದರೆ, ಇಂದು ನೀವು ಸಮಯವನ್ನು ಹೆಚ್ಚು ಕಾಳಜಿ ವಹಿಸಲು ಸಲಹೆ ನೀಡಲಾಗುತ್ತದೆ. ಬಾಸ್ ನ ಕಣ್ಣು ನಿಮ್ಮ ಮೇಲೆಯೇ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ತಪ್ಪುಗಳನ್ನು ಮಾಡುವುದನ್ನು ತಪ್ಪಿಸಬೇಕು. ಉದ್ಯಮಿಗಳು ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವನ್ನು ಪಡೆಯಬಹುದು. ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಆರ್ಥಿಕ ಭಾಗವು ಬಲವಾಗಿ ಉಳಿಯುತ್ತದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಮನೆಯ ವಾತಾವರಣದಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ.
ಬಹಳ ಸಮಯದ ನಂತರ ಇಂದು ನೀವು ಇಡೀ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತದೆ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ಕನ್ಯಾ ರಾಶಿ
ಈ ದಿನ ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿರಲು ಸಲಹೆ ನೀಡಲಾಗಿದೆ. ಸಾಧ್ಯವಾದರೆ, ನಿಮ್ಮ ದಿನಚರಿಯಲ್ಲಿ ಕೆಲವು ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳಿ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆನ್‌ಲೈನ್ ವ್ಯಾಪಾರ ಮಾಡುವವರು ಒಳ್ಳೆಯ ಲಾಭ ಗಳಿಸುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ತುಂಬಾ ಸಮಯದಿಂದ ಬರಬೇಕಾಗಿದ್ದ ಹಣ ಕೈ ಸೇರಲಿದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಗ್ಗೆ 8:15 ರಿಂದ ಸಂಜೆ 6 ಗಂಟೆಯವರೆಗೆ
ತುಲಾ ರಾಶಿ
ನೀವು ಉದ್ಯಮಿಯಾಗಿದ್ದರೆ, ಯಾವುದೋ ಕಾರಣಕ್ಕೆ ಸ್ಥಗಿತಗೊಂಡ ನಿಮ್ಮ ಕೆಲಸ ಮತ್ತು ಪ್ರಾರಂಭವಾಗಲಿದೆ. ಉದ್ಯೋಗಿಗಳಿಗೆ ಅಧಿಕ ಜವಾಬ್ದಾರಿ ನೀಡಬಹುದು, ಆದರೆ ಹಿಂಜರಿಯಬೇಡಿ, ಆತ್ಮವಿಶ್ವಾಸದಿಂದ ಕೆಲಸ ಮಾಡಿ ಮುಗಿಸಲು ಪ್ರಯತ್ನಿಸಿ. ಇಂದು ನಿರ್ಗತಿಕರಿಗೆ ಸಹಾಯ ಮಾಡಲು ನಿಮಗೆ ಅವಕಾಶ ಸಿಕ್ಕಿದರೆ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸಹಾಯ ಮಾಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಉತ್ತಮ ದಿನಚರಿಯತ್ತ ಗಮನಹರಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 6 ರಿಂದ 8:05 ರವರೆಗೆ
ವೃಶ್ಚಿಕ ರಾಶಿ
ಈ ದಿನ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ಗಮನವಿರಲಿ. ಈ ದಿನ ಅಧಿಕ ಮಾನಸಿಕ ಒತ್ತಡ ಇರಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳಿಂದ ದೂರವಿರಿ. ಇಲ್ಲದಿದ್ದರೆ ಆರ್ಥಿಕ ತೊಂದರೆ ಉಂಟಾಗಬಹುದು. ಸ್ನೇಹಿತರನ್ನು ಭೇಟಿಯಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 13
ಅದೃಷ್ಟ ಸಮಯ: ಬೆಳಗ್ಗೆ 6:55 ರಿಂದ ಮಧ್ಯಾಹ್ನ 12:45 ರವರೆಗೆ
ಧನು ರಾಶಿ
ಇಂದು ಮನೆಯ ವಾತಾವರಣವು ತುಂಬಾ ಚೆನ್ನಾಗಿರಲಿದೆ. ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಇಂದು ಒಳ್ಳೆಯ ಸುದ್ದಿ ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಬಡ್ತಿಯ ಬಲವಾದ ಸಾಧ್ಯತೆ ಇದೆ. ವ್ಯಾಪಾರಸ್ಥರು ಈ ದಿನ ಹೊಸ ಸಾಹಸಕ್ಕೆ ಕೈ ಹಾಕಬೇಡಿ. ಇಂದು ಹಣಕಾಸಿನ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡುಬರುವುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದದರೆ ನರಗಳಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:40 ರಿಂದ ರಾತ್ರಿ 8:05
ಮಕರ ರಾಶಿ
ಈ ದಿನ ನೀವು ಮಾನಸಿಕವಾಗಿ ಉತ್ತಮವಾಗುತ್ತೀರಿ. ಕುಟುಂಬದ ಜೊತೆ ಸಮಯವನ್ನು ಕಳೆಯುತ್ತೀರಿ.ಕಚೇರಿಯಲ್ಲಿ ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡದಂತೆ ಸಲಹೆ ನೀಡಲಾಗಿ. ಮತ್ತೊಂದೆಡೆ, ವ್ಯಾಪಾರಸ್ಥರು ತಮ್ಮ ವಿರೋಧಿಗಳೊಂದಿಗೆ ಜಾಗರೂಕರಾಗಿರಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 9 ರವರೆಗೆ
ಕುಂಭ ರಾಶಿ
ಇಂದು ಉದ್ಯಮಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಕಛೇರಿಯಲ್ಲಿ ಕೆಲಸದ ಹೊರೆ ಹೆಚ್ಚಿರಲಿದೆ ಮಾನಸಿಕ ಒತ್ತಡ ಹೆಚ್ಚಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸಬೇಕು. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಮಧ್ಯಾಹ್ನ 1:45 ರಿಂದ 3:30 ರವರೆಗೆ
ಮೀನ ರಾಶಿ
ಮನೆಯ ವಾತಾವರಣ ಚೆನ್ನಾಗಿರುವುದಿಲ್ಲ. ಆದರೆ ನೀವು ಕೋಪಗೊಳ್ಳುವ ಬದಲಿಗೆ ಶಾಂತ ಮನಸ್ಸಿನಿಂದ ಪರಿಸ್ಥಿತಿ ನಿಭಾಯಿಸಿ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಇಂದು ಅದೃಷ್ಟದ ದಿನವಾಗಿದೆ. ಮಾಡುತ್ತಿರುವ ಕೆಲಸ ಬಿಟ್ಟು ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ಇಂದು ನಿಮಗೆ ಹತ್ತಿರವಿರುವವರ ಸಹಾಯದಿಂದ ನಿಮ್ಮ ಯೋಜನೆಯಲ್ಲಿ ಮುಂದುವರಿಯಬಹುದು. ಹಣದ ವಿಷಯದಲ್ಲಿ ಈ ದಿನ ನಿಮಗೆ ಒಳ್ಳೆಯದಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ



Click it and Unblock the Notifications
