Latest Updates
-
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ
Horoscope Today 21 April 2023: ಶುಕ್ರವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 21ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ಪ್ರತಿಪಾದ
ನಕ್ಷತ್ರ: ಭರಣಿ
ರಾಹುಕಾಲ: ಬೆಳಗ್ಗೆ 10:43ರಿಂದ ಮಧ್ಯಾಹ್ನ 12 ಗಂಟೆಯವರೆಗೆ
ಮೇಷ ರಾಶಿ
ನೀವು ನಿರುದ್ಯೋಗಿಗಳಾಗಿದ್ದು ತುಂಬಾ ಉದ್ಯೋಗವನ್ನು ಹುಡುಕುತ್ತಿದ್ದರೆ ಈ ದಿನ ನಿಮಗೆ ಖುಷಿಯ ಸುದ್ದಿ ಸಿಗಬಹುದು, ನೀವು ಬಯಸಿದ ಕೆಲಸ ಸಿಗುವ ಎಲ್ಲಾ ಸಾಧ್ಯತೆಗಳಿವೆ, ನೀವು ಕುಟುಂಬದ ವ್ಯವಹಾರ ಮಾಡುತ್ತಿದ್ದರೆ ಇಂದು ಲಾಭ ಗಳಿಸುವಿರಿ. ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಇಂದು ನಿಮ್ಮ ತಂದೆಯ ಸಹಾಯದಿಂದ ನಿಮ್ಮ ಸಮಸ್ಯೆಯನ್ನು ಪರಿಹರಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

ವೃಷಭ ರಾಶಿ
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕೆಲಸ ಮಾಡುವವರಿಗೆ ಇಂದು ಅತ್ಯಂತ ಅದೃಷ್ಟದ ದಿನವಾಗಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮಾಷೆ ಮಾಡಲು ಹೋಗದಂತೆ ಸಲಹೆ ನೀಡಲಾಗಿದೆ, ನೀವು ಮಾಡುವ ತಮಾಷೆ ಸೀರಿಯಸ್ ಆಗಬಹುದು, ಆದ್ದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಿದರೆ ಕಷ್ಟವಾಗಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:40 ರವರೆಗೆ
ಮಿಥುನ ರಾಶಿ
ಬಹಳ ಸಮಯದ ನಂತರ ಇಂದು ನಿಮಗೆ ಕೆಲಸದ ಮೇಲೆ ಸಂಪೂರ್ಣ ಗಮನ ನೀಡಲು ಸಾದ್ಯವಾಗುವುದು. ಕುಟುಂಬದೊಂದಿಗೆ ಖುಷಿಯಿಂದ ಸಮಯ ಕಳೆಯುವಿರಿ. ನಿಮ್ಮ ದಿನವನ್ನು ವಿಶೇಷವಾಗಿಸಲು ಇಂದು ನೀವು ಕೆಲವು ಉತ್ತಮ ಪ್ಲ್ಯಾನ್ ಕೂಡ ಮಾಡಬಹುದು. ಇಂದು ಆಮದು-ರಫ್ತು ವ್ಯವಹಾರ ಮಾಡುವವರು ಉತ್ತಮ ಲಾಭವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಈ ದಿನ ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಕರ್ಕ ರಾಶಿ
ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಮನೆಯ ಸಮಸ್ಯೆ ಏನಾದರೂ ಇದ್ದರೆ ಹಿರಿಯರೊಂದಿಗೆ ಮಾತನಾಡಿ ಪರಿಹರಿಸಲು ಪ್ರಯತ್ನಿ. ಕೆಲಸದಲ್ಲಿ ಇಂದು ಜಾಗರೂಕರಾಗಿರಬೇಕು. ವ್ಯಾಪಾರಸ್ಥರು ಈ ದಿನ ಬಯಸಿದ ಫಲ ಸಿಗುವುದಿಲ್ಲ, ಈ ದಿನ ನಿಮಗೆ ಮಿಶ್ರಫಲ ದೊರೆಯಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಗಂಟಲು ನೋವು ಇತ್ಯಾದಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ 8 ರವರೆಗೆ
ಸಿಂಹ ರಾಶಿ
ಈ ದಿನ ಯಾವುದಾದರೂ ಹೊಸ ಕೆಲಸ ಪ್ರಾರಂಭಿಸಿದರೆ ನೀವು ಇದರಲ್ಲಿ ಆದಾಯ ಗಳಿಸುವಿರಿ. ನೀವು ಮಾಡುವ ಕೆಲಸದಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲ ಪಡೆಯುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಶೀಘ್ರದಲ್ಲೇ ನೀವು ಅದರ ಸರಿಯಾದ ಫಲಿತಾಂಶವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆಹಾರಕ್ರಮದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 6:45 ರವರೆಗೆ
ಕನ್ಯಾ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಓದಿನ ವಿಷಯದಲ್ಲ ಗಂಭೀರವಾಗುವುದು ಒಳ್ಳೆಯದು. ಕಚೇರಿಯಲ್ಲಿ ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರಸ್ಥರು ಲಾಭ ಗಳಿಸಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯ ಲಕ್ಷಣಗಳಿವೆ. ಆದರೆ ಹಣದ ವಿಷಯದಲ್ಲಿ, ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ಭವಿಷ್ಯದ ಯೋಜನೆಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 9:05 ರವರೆಗೆ
ತುಲಾ ರಾಶಿ
ಇಂದು ನೀವು ಹಣದ ವಿಷಯದಲ್ಲಿ ಅದೃಷ್ಟದ ದಿನ. ನಿಮ್ಮ ಆದಾಯದಲ್ಲಿ ಹೆಚ್ಚಳದ ಬಲವಾದ ಸಾಧ್ಯತೆಯಿದೆ. ಹಣದ ತೊಂದರೆಯಿರಲ್ಲ, ಹೀಗಾಗಿ ಹಣದ ತೊಂದರೆಯಿಂದ ಸ್ಥಗಿತಗೊಂಡಿದ್ದ ಕೆಲಸ ಪೂರ್ಣಗೊಳಿಸಲು ಗಮನಹರಿಸುತ್ತೀರಿ. ಇಂದು ನೀವು ಕಚೇರಿಯಲ್ಲಿನ ಉನ್ನತ ಅಧಿಕಾರಿಗಳಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಉತ್ತಮ ಕಾರ್ಯಕ್ಷಮತೆಯ ಬಲದ ಮೇಲೆ ನಿಮ್ಮ ಸ್ಥಾನವನ್ನು ಬಲಪಡಿಸಲು ನಿಮಗೆ ಸಾಧ್ಯವಾಗುವುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಯೋಜಿಸುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಕಾಳಜಿಯು ನಿಮ್ಮನ್ನು ಕಾಡಬಹುದು. ಆರೋಗ್ಯದ ವಿಷಯದಲ್ಲಿ ಈ ದಿನವು ಏರಿಳಿತಗಳಿಂದ ತುಂಬಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 9:35 ರವರೆಗೆ
ವೃಶ್ಚಿಕ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿರುತ್ತದೆ. ಕಚೇರಿಯಲ್ಲಿ ನೀವು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಪೂರ್ಣಗೊಳಿಸುತ್ತೀರಿ. ನಿಮ್ಮ ಶಕ್ತಿ ಮತ್ತು ಉತ್ಸಾಹ ಎಲ್ಲರನ್ನು ಮೆಚ್ಚಿಸುತ್ತದೆ. ವ್ಯಾಪಾರಸ್ಥರು ಇಂದು ಯೋಗ್ಯ ಲಾಭವನ್ನು ಪಡೆಯಬಹುದು. ಇಂದು ನೀವು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಮನೆಯ ಸದಸ್ಯರಿಂದ ಆರ್ಥಿಕ ಲಾಭ ಸಾಧ್ಯ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 4:25 ರಿಂದ ರಾತ್ರಿ 8:05 ರವರೆಗೆ
ಧನು ರಾಶಿ
ಮನಸ್ಸು ತುಂಬಾ ಚಂಚಲವಾಗಿರುತ್ತದೆ ಈ ದಿನ ನೀವು ನಿಯಂತ್ರಿಸಿಕೊಳ್ಳುವುದು ಉತ್ತಮ. ನಿಮ್ಮ ದಿನಚರಿಯಲ್ಲಿ ನೀವು ಯೋಗ ಮತ್ತು ಧ್ಯಾನವನ್ನು ಸೇರಿಸಿಕೊಳ್ಳಬೇಕು. ಇದರ ಹೊರತಾಗಿ, ನಿಮ್ಮ ಮನಸ್ಸನ್ನು ನಿಮಗೆ ಹತ್ತಿರವಿರುವ ಯಾರೊಂದಿಗಾದರೂ ಹಂಚಿಕೊಳ್ಳಬಹುದು. ಉದ್ಯೋಗಿಗಳಿಗೆ ತಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ ಎಂದು ಸಲಹೆ ನೀಡಲಾಗುವುದು. ವ್ಯಾಪಾರಸ್ಥರಿಗೆ ದಿನವು ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ವ್ಯಾಪಾರಿಗಳಿಗೆ ಅಪೇಕ್ಷಿತ ಲಾಭ ದೊರೆಯಲಿದೆ. ನೀವು ದೊಡ್ಡ ಪ್ರಗತಿಯನ್ನು ಸಾಧಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಮಯ ನಡೆಯುತ್ತಿದೆ. ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದರೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಈ ದಿನ ಆರ್ಥಿಕ ವಿಷಯದಲ್ಲಿಅದೃಷ್ಟಕರವಲ್ಲ. ನಿಮ್ಮ ಹಣಕಾಸಿನ ಪ್ರಯತ್ನವು ವಿಫಲವಾಗಬಹುದು. ಈ ದಿನ ಮನೆಯ ಸದಸ್ಯರೊಂದಿಗೆ ಬಿರುಕು ಉಂಟಾಗಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ, ಹವಾಮಾನ ಬದಲಾವಣೆಯಿಂದ ನಿಮ್ಮ ಆರೋಗ್ಯವು ಹದಗೆಡುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6:55 ರಿಂದ 9:20 ರವರೆಗೆ
ಕುಂಭ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಅದ್ಭುತ ಸಮಯವನ್ನು ಕಳೆಯುತ್ತೀರಿ. ವಿಶೇಷವಾಗಿ ನೀವು ಪೋಷಕರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಸ್ಥರು ತಮ್ಮ ಕಠಿಣ ಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಉದ್ಯಮಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ದೆ ಕಡಿಮೆ ಮಾಡಬೇಡಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ
ಮೀನ ರಾಶಿ
ಪ್ರೇಮಿಗಳಿಗೆ ಈ ದಿನ ತುಂಬಾ ವಿಶೇಷವಾಗಿರುತ್ತದೆ. ನೀವು ವಿವಾಹಿತರಾಗಿದ್ದರೆ ಕುಟುಂಬದ ಜವಾಬ್ದಾರಿ ಚೆನ್ನಾಗಿ ನಿಭಾಯಿಸಿ. ನಿಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಪ್ರಯತ್ನಿಸುವುದು ಉತ್ತಮ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅನಗತ್ಯ ವೆಚ್ಚಗಳು ನಿಮ್ಮ ಬಜೆಟ್ ಅನ್ನು ಹಾಳುಮಾಡಬಹುದು. ಇಂದು ನೀವು ಕೆಲಸ ಅಥವಾ ವ್ಯಾಪಾರದ ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ 7:25 ರವರೆಗೆ



Click it and Unblock the Notifications












