Latest Updates
-
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ!
Horoscope Today 23 April 2023: ಭಾನುವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 23ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ಬೆಳಗ್ಗೆ 07:47ರ ನಂತರ ಚತುರ್ಥಿ
ನಕ್ಷತ್ರ: ರೋಹಿಣಿ
ರಾಹುಕಾಲ: ಸಂಜೆ 05:13ರಿಂದ 06:51ರವರೆಗೆ
ಮೇಷ ರಾಶಿ
ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಉದ್ಯೋಗಿಗಳಿಗೆ ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ಆದರೆ ನೀವು ಅತಿಯಾದ ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ನಿಮ್ಮ ಆರೋಗ್ಯ ಕ್ಷೀಣಿಸಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ಖರ್ಚು ಕಡಿಮೆ ಇರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:25 ರವರೆಗೆ

ವೃಷಭ ರಾಶಿ
ವೃಷಭ ರಾಶಿಯವರಿಗೆ ದಿನ ಉತ್ತಮವಾಗಿ ಆರಂಭವಾಗಲಿದೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಮಾನಸಿಕವಾಗಿ ಇಂದು ನೀವು ಹೆಚ್ಚು ಉತ್ತಮವಾಗುತ್ತೀರಿ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳ ಸಲಹೆ ಪಾಲಿಸಿ. ಈ ದಿನ ಲವಲವಿಕೆಯಿಂದ ಇರುತ್ತೀರಿ. ಉದ್ಯಮಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ತಿಳಿ ಗುಲಾಬಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 12:40 ರಿಂದ ಸಂಜೆ 6:10 ರವರೆಗೆ
ಮಿಥುನ ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತದ ಸಾಧ್ಯತೆ ಇದೆ. ಹಣ ನಷ್ಟವಾಗಬಹುದು. ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸ ಮಾಡುವಾಗ ಆತುರಪಡದಿರುವುದು ಉತ್ತಮ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಜೊತೆ ಚರ್ಚೆ ಮಾಡುವಾಗ ಮ್ಮ ಕೋಪವನ್ನು ನೀವು ನಿಯಂತ್ರಿಸಬೇಕು. ವ್ಯಾಪಾರಿಗಳು ದೊಡ್ಡ ಲಾಭ ಗಳಿಸಲು ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ನಿಮ್ಮ ಕಠಿಣ ಪರಿಶ್ರಮ ಮತ್ತು ತಿಳುವಳಿಕೆಯ ಬಲದಿಂದ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ವಿಶ್ರಾಂತಿ ಕಡೆ ಗಮಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 12:25 ರಿಂದ ಸಂಜೆ 7:20 ರವರೆಗೆ
ಕರ್ಕ ರಾಶಿ
ನೀವು ತುಂಬಾ ಸಮತೋಲಿತವಾಗಿ ವರ್ತಿಸಲು ಸಲಹೆ ನೀಡಲಾಗುತ್ತದೆ. ಕೋಪದಲ್ಲಿ ಯಾವ ಕೆಲಸವನ್ನೂ ಮಾಡದಿರುವುದು ಉತ್ತಮ. ಕೆಲಸದ ಕಡೆ ಹೆಚ್ಚು ಗಮನಹರಿಸಬೇಕಾಗಿದೆ, ಕೆಲಸದಲ್ಲಿ ಯಾವುದೇ ನಿರ್ಲಕ್ಷ್ಯ ಬೇಡ. ಇಲ್ಲದಿದ್ದರೆ ಬಾಸ್ ನಿಮಗೆ ನೀಡಿದ ಜವಾಬ್ದಾರಿಯನ್ನು ಹಿಂಪಡೆಯುವ ಸಾಧ್ಯತೆಯಿದೆ. ವ್ಯಾಪಾರಸ್ಥರು ಇಂದು ಮಾಡುವ ಪ್ರಯಾಣದಿಂದ ಲಾಭ ಗಳಿಸುವಿರಿ. ಹಣದ ವಿಷಯದಲ್ಲಿ ಇಂದು ಅದೃಷ್ಟದ ದಿನ, ಆರೋಗ್ಯದ ಬಗ್ಗೆ ಜಾಗ್ರತೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ
ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ. ನೀವು ಹಣ ಸಂಪಾದಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಕೆಲಸದಲ್ಲಿ ನಿರ್ಲಕ್ಷ್ಯ ಬೇಡ. ಇಂದು ನಿಮ್ಮ ಯಾವುದೇ ಕೆಲಸವು ಅಪೂರ್ಣವಾಗಿದ್ದರೆ, ಅದು ನಿಮ್ಮ ಪ್ರಗತಿಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ನೀವು ಉದ್ಯಮಿಯಾಗಿದ್ದರೆ, ಸಣ್ಣ ಕೆಲಸವನ್ನು ಪೂರ್ಣಗೊಳಿಸಲು ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಹೆಚ್ಚಿರಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 5:20 ರಿಂದ 11:30 ರವರೆಗೆ
ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ.ಕುಟುಂಬ ಜೀವನದಲ್ಲಿ ಖುಷಿಯಾಗಿರುವಿರಿ. ಮನೆಯ ವಾತಾವರಣವು ಧನಾತ್ಮಕವಾಗಿರುತ್ತದೆ. ಯಾರನ್ನೂ ಕುರುಡಾಗಿ ನಂಬದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗುತ್ತದೆ, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಉತ್ತಮ ಆರೋಗ್ಯಕ್ಕಾಗಿ ನಿಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ಒಳ್ಳೆಯದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 9:40 ರಿಂದ ಮಧ್ಯಾಹ್ನ 2:30 ರವರೆಗೆ
ತುಲಾ ರಾಶಿ
ಕಚೇರಿಯಲ್ಲಿ ಬಾಸ್ ಕೆಲಸ ಮೆಚ್ಚಿಕೊಳ್ಳುತ್ತಾರೆ. ನಿಮ್ಮ ಆತ್ಮವಿಶ್ವಾಸದ ಮಟ್ಟವು ಬಹಳಷ್ಟು ಹೆಚ್ಚಾಗುತ್ತದೆ. ವ್ಯಾಪಾರಸ್ಥರು ಬಯಸಿದ ಲಾಭವನ್ನು ಪಡೆಯಬಹುದು. ನೀವು ದೊಡ್ಡ ಆರ್ಡರ್ ಪಡೆಯುವ ಸಾಧ್ಯತೆಯಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಹಣದ ಬಗ್ಗೆ ಹೇಳುವುದಾದರೆ ನಿಮ್ಮ ಆದಾಯಕ್ಕೆ ಅನುಗುಣವಾಗಿ ನೀವು ಖರ್ಚು ಮಾಡಬೇಕಾಗುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ1:30 ರಿಂದ ಸಂಜೆ7:20ರವರೆಗೆಸ
ವೃಶ್ಚಿಕ ರಾಶಿ
ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ಬಯಸಿದರೆ, ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸದ ಜೊತೆಗೆ ತಮ್ಮ ನಡವಳಿಕೆಯ ಬಗ್ಗೆ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ನಿಮ್ಮ ತಪ್ಪು ನಡವಳಿಕೆಯು ನಿಮ್ಮ ಇಮೇಜ್ ಹಾಳುಮಾಡಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನೀವು ಸಂಗಾತಿಗೆ ಹೆಚ್ಚಿನ ಸಮಯ ನೀಡಲು ಪ್ರಯತ್ನಿಸುವುದರಿಂದ ಸಂಸಾರದಲ್ಲಿ ಖುಷಿ ಇರಲಿದೆ. ಆರೋಗ್ಯ ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ
ಧನು ರಾಶಿ
ಉದ್ಯೋಗಿಗಳ ಕಾರ್ಯಕ್ಷಮತೆಯಲ್ಲಿ ಸುಧಾರಣೆ ಇರುತ್ತದೆ. ನಿಮ್ಮ ಶ್ರಮವನ್ನು ಉನ್ನತ ಅಧಿಕಾರಿಗಳು ಸಹ ಪ್ರಶಂಸಿಸುತ್ತಾರೆ. ಸಣ್ಣ ಉದ್ಯಮಿಗಳು ನಿರೀಕ್ಷೆಯಂತೆ ಲಾಭ ಪಡೆಯುವ ಸಾಧ್ಯತೆಯಿದೆ. ನಿಮ್ಮ ಸ್ಟಾಕ್ ಅನ್ನು ಹೆಚ್ಚಿಸಲು ಸಹ ನೀವು ನಿರ್ಧರಿಸಬಹುದು. ಇಂದು ಮನೆಯ ಅಷ್ಟು ವಾತಾವರಣ ಸರಿ ಇರುವುದಿಲ್ಲ. ಹೊರಗಿನವರ ಹಸ್ತಕ್ಷೇಪದಿಂದ ನಿಮ್ಮ ಮನೆಯ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗಬಹುದು. ಹಣದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ವಿಶೇಷವಾಗಿ ಕ್ರೆಡಿಟ್ ವಹಿವಾಟುಗಳನ್ನು ತಪ್ಪಿಸಿ. ಆರೋಗ್ಯದ ವಿಷಯವು ಇಂದು ಸ್ವಲ್ಪ ದುರ್ಬಲವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6 ರವರೆಗೆ
ಮಕರ ರಾಶಿ
ಕೆಲಸದ ಮುಂಭಾಗದಲ್ಲಿ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ. ಯಾವುದೇ ಕೆಲಸ ಬಾಕಿಯುಳಿಸಬೇಡಿ. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ಯಾವುದೇ ರೀತಿಯ ಹಣಕಾಸಿನ ವಹಿವಾಟು ಮಾಡಲು ಇಂದು ಸರಿಯಾದ ದಿನವಲ್ಲ. ಸಂಗಾತಿಯ ಪ್ರೀತಿಯ ನಡವಳಿಕೆಯು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ. ಈ ದಿನ ಕುಟುಂಬದೊಂದಿಗೆ ಸಂತೋಷದಿಂದ ಕಳೆಯುವಿರಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ
ಕುಂಭ ರಾಶಿ
ಇಂದು ನೀವು ವಾಹನವನ್ನು ಬಹಳ ಎಚ್ಚರಿಕೆಯಿಂದ ಬಳಸಿ. ಅದರಲ್ಲೂ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ. ಕೆಲಸದ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಬೇಡಿ. ಉದ್ಯಮಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬದೊಂದಿಗೆ ಶಾಪಿಂಗ್ ಮಾಡುವಿರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8 ರವರೆಗೆ
ಮೀನ ರಾಶಿ
ಹೆಚ್ಚುತ್ತಿರುವ ಖರ್ಚು ನಿಮ್ಮ ಆತಂಕವು ಹೆಚ್ಚಾಗಬಹುದು. ದೈನಂದಿನ ಖರ್ಚುಗಳನ್ನು ಪೂರೈಸಲು ನೀವು ಖರ್ಚು ಮಿತಿಗೊಳಿಸುವುದು ಒಳ್ಳೆಯದು. ನೀವು ಉದ್ಯಮಿಯಾಗಿದ್ದು ದೊಡ್ಡ ಲಾಭವನ್ನು ನಿರೀಕ್ಷಿಸುತ್ತಿದ್ದರೆ, ನಿಮ್ಮ ಆಸೆ ಇಂದು ಈಡೇರದಿರಬಹುದು, ಶೀಘ್ರದಲ್ಲೇ ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 3:20 ರವರೆಗೆ



Click it and Unblock the Notifications












