Horoscope Today 25 April 2023: ಮಂಗಳವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್‌ 25ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ಪಂಚಮಿ
ನಕ್ಷತ್ರ: ಆರ್ದಾ
ರಾಹುಕಾಲ: ಮಧ್ಯಾಹ್ನ 03:36ರಿಂದ ಸಂಜೆ 05:14ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಇಂದು ನೀವು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ತುಂಬಾ ಸಮಯದ ನಂತರ ನಿಮಗಾಗಿ ಸಮಯ ಸಿಗಲಿದೆ. ಉದ್ಯೋಗಸ್ಥರ ಸ್ಥಾನವು ಬಲವಾಗುವುದು, ಕಚೇರಿಯಲ್ಲಿ ನಿಮ್ಮ ಕಾರ್ಯವೈಖರಿಯಯ ಬಗ್ಗೆ ಪ್ರಶಂಸೆ ಮಾತುಗಳನ್ನು ಕೇಳುವಿರಿ. ವ್ಯಾಪಾರಸ್ಥರ ಆರ್ಥಿಕ ಸ್ಥಿತಿಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ 7:20 ರವರೆಗೆ

Dina Bhavishya -April 25 2023 Today Rashi Bhavishya, Daily Horoscope in Kannada

ವೃಷಭ ರಾಶಿ
ಇಂದು ಹಣದ ವಿಷಯದಲ್ಲಿ ದುಬಾರಿ ದಿನವಾಗಲಿದೆ, ಆದರೆ ನಿಮ್ಮ ತಿಳುವಳಿಕೆಯೊಂದಿಗೆ ನೀವು ಎಲ್ಲವನ್ನೂ ನಿಭಾಯಿಸಲು ಸಾಧ್ಯವಾಗುತ್ತದೆ. ಆದರೆ ನೀವು ಖರ್ಚನ್ನು ನಿಭಾಯಿಸಿದರೆ ಒಳ್ಳೆಯದು . ಕಚೇರಿಯಲ್ಲಿ ನಿಮ್ಮ ಯಾವುದೇ ಪ್ರಮುಖ ಕೆಲಸವು ಅಪೂರ್ಣವಾಗಿದ್ದರೆ ಇಂದು ಪೂರ್ಣಗೊಳಿಸಲು ಪ್ರಯತ್ನಿಸಬೇಕು, ಇಲ್ಲದಿದ್ದರೆ ನಿಮ್ಮ ಪ್ರಗತಿಯು ನಿಲ್ಲಬಹುದು. ಇಂದು ವ್ಯಾಪಾರಸ್ಥರು ಯಾವುದೇ ಅಪಾಯಕಾರಿ ನಿರ್ಧಾರವನ್ನು ತೆಗೆದುಕೊಳ್ಳದಿರುವುದು ಒಳ್ಳೆಯದು. ಇಲ್ಲದಿದ್ದರೆ ಲಾಭದ ಬದಲು ನಷ್ಟವಾಗಬಹುದು. ಏನಾದರೂ ಹುಷಾರಿಲ್ಲದಿದ್ದರೂ ಆರೋಗ್ಯ ಸುಧಾರಿಸಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:15 ರವರೆಗೆ

ಮಿಥುನ ರಾಶಿ
ಈ ದಿನ ನೀವು ಒಳ್ಳೆಯ ಮೂಡ್‌ನಲ್ಲಿರುತ್ತೀರಿ. ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗಲಿದೆ. ನಿಮ್ಮ ಕೈ ಸೇರಬೇಕಾಗಿದ್ದ ಹಣ ಕೈ ಸೇರದ ಕಾರಣ ನೀವು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನೀವು ಕೆಲಸವನ್ನು ಮಾಡುತ್ತಿದ್ದರೆ ಮತ್ತು ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ನೀವು ಇಂದು ಆಫರ್ ಪಡೆಯಬಹುದು. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಹೊರಗಿನ ಆಹಾರ ಸೇವಿಸದಿರುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಿಗ್ಗೆ 10:30 ರಿಂದ ಸಂಜೆ 4:50 ರವರೆಗೆ

ಕರ್ಕ ರಾಶಿ
ಈ ದಿನ ನಿಮಗೆ ಶುಭದಿನ. ಈ ದಿನ ನಿಮ್ಮ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಫಲ ಪಡೆಯುವಿರಿ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಉದ್ಯಮಿಗಳ ಯಾವುದೇ ಪ್ರಮುಖ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. ಇಂದು ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ದಿನದ ಎರಡನೇ ಭಾಗದಲ್ಲಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಆದರೆ ಈ ಪ್ರಯಾಣ ಲಾಭದಾಯಕವಾಗಿರುತ್ತದೆ. ಇಂದು ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 9:05 ರವರೆಗೆ

ಸಿಂಹ ರಾಶಿ
ಮನೆಯ ಹಿರಿಯರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಲು ಪ್ರಯತ್ನಿಸಿ. ನಿಮ್ಮ ನಡವಳಿಕೆಯನ್ನು ನೀವು ಸಭ್ಯವಾಗಿರಿಸಿಕೊಳ್ಳಬೇಕು. ಈ ದಿನ ಹಣದ ವಿಷಯದಲ್ಲಿ ಯಾವುದೇ ತೊಂದರೆಯಿಲ್ಲ. ನೀವು ಕೆಲಸ ಬದಲಾವಣೆ ಬಗ್ಗೆ ಯೋಚಿಸುವುದಾದರೆ ಕೆಲಸ ಹುಡುಕಾಟ ತೀವ್ರಗೊಳಿಸಿ. ನಿಮ್ಮ ಶ್ರಮಕ್ಕೆ ತಕ್ಕ ಯಶಸ್ಸು ಸಿಗಲಿದೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ, ಶೀಘ್ರದಲ್ಲೇ ನೀವು ಅದಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ

ಕನ್ಯಾ ರಾಶಿ
ಈ ದಿನ ನಿಗೆ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ತೀವ್ರವಾಗಿರುತ್ತದೆ. ನಿಮ್ಮ ನಡುವಿನ ಸಮನ್ವಯವು ಇನ್ನೂ ಉತ್ತಮವಾಗಿರುತ್ತದೆ. ಕಚೇರಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಸಾಧ್ಯವಾಗುವುದು. ಇದೇ ರೀತಿ ಮುಂದುವರೆದರೆ ಉನ್ನತ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ. ಇದರೊಂದಿಗೆ ನಿಮ್ಮ ಆದಾಯವೂ ಹೆಚ್ಚುತ್ತದೆ. ಉದ್ಯಮಿಗಳು ಹಿಂದೆ ಮಾಡಿದ ಹೂಡಿಕೆಗಳಿಂದ ಸೂಕ್ತ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ

ತುಲಾ ರಾಶಿ
ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹಳೆಯ ಕಾಯಿಲೆ ಮರುಕಳಿಸುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ನಿರ್ಲಕ್ಷ್ಯವು ದುಬಾರಿಯಾಗಬಹುದು. ಕೆಲಸ ಕಾರ್ಯಗಳಲ್ಲಿ ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯಬಹುದು. ಉದ್ಯೋಗಿಗಳ ಮೇಲೆ ಕೆಲಸದ ಹೊರೆ ಹೆಚ್ಚಾಗಬಹುದು. ಆದರೆ, ನಿಮ್ಮ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಬಲದ ಮೇಲೆ, ನಿಮ್ಮ ಎಲ್ಲಾ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ

ವೃಶ್ಚಿಕ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಸವಾಲಿನ ದಿನವಾಗಿದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ ಬಯಸಿದ ಫಲಿತಾಂಶ ಸಿಗದೆ ಇಂದು ನೀವು ನಿರಾಶೆಯನ್ನು ಅನುಭವಿಸಬಹುದು. . ನಿಮ್ಮ ನ್ಯೂನತೆಗಳನ್ನು ತೆಗೆದುಹಾಕಲು ಪ್ರಯತ್ನಿಸಿ. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಖರ್ಚು ಮಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ

ಧನು ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ನೀವು ಕಲಿಕೆ ಕಡೆ ಗಮನಹರಿಸಿದರೆ ಒಳ್ಳೆಯದು. ಹಣದ ಖರ್ಚು ಹೆಚ್ಚಾಗಿರಬಹುದು, ನೀವು ಮಿತಿಯಲ್ಲಿ ಖರ್ಚು ಮಾಡದಿದ್ದರೆ ಹಣದ ತೊಂದರೆ ಉಂಟಾಗಬಹುದು. ಕೆಲಸದ ಕಡೆಗೆ ಹೆಚ್ಚಿನ ಗಮನ ಕೊಡದಿದ್ದರೆ ನಿಮ್ಮ ಕೆಲಸದಲ್ಲಿ ತೊಂದರೆ ಉಂಟಾಗಬಹುದು. ಉದ್ಯಮಿಗಳು ತಮ್ಮ ವ್ಯಾಪಾರ ಯೋಜನೆಗಳನ್ನು ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 6 ರವರೆಗೆ

ಮಕರ ರಾಶಿ
ಉತ್ತಮ ಆರೋಗ್ಯಕ್ಕಾಗಿ ನೀವು ಯೋಗ, ಧ್ಯಾನದ ಕಡೆಗೆ ಗಮನಹರಿಸುವುದು ಒಳ್ಳೆಯದು. ಕಚೇರಿಯಲ್ಲಿ ನಿಮ್ಮ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುವುದು. ಇಂದು, ಉನ್ನತ ಅಧಿಕಾರಿಗಳು ನಿಮ್ಮ ಆಯ್ಕೆಯ ಯಾವುದೇ ಕೆಲಸವನ್ನು ನಿಯೋಜಿಸಿದ್ದರೆ ಪೂರ್ಣ ಶ್ರದ್ಧೆಯಿಂದ ಕೆಲಸದ ಕಡೆ ಗಮನಹರಿಸಿ. ಉದ್ಯಮಿಗಳು ದೊಡ್ಡ ಲಾಭವನ್ನು ನಿರೀಕ್ಷಿಸುತ್ತಿದ್ದರೆ, ಇಂದು ನೀವು ನಿರಾಶೆ ಅನುಭವಿಸಬಹುದು. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 1:30 ರವರೆಗೆ

ಕುಂಭ ರಾಶಿ
ನಿರುದ್ಯೋಗಿಯಾಗಿದ್ದರೆ ಇಂದು ಕೆಲಸದ ಆಫರ್ ಸಿಗಬಹುದು. ಇದರಿಂದ ದೊಡ್ಡ ಚಿಂತೆ ದೂರವಾಗಲಿದೆ. ಉದ್ಯೋಗಿಗಳ ಕೆಲಸದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ನೀವು ಬಡ್ತಿ ಅಥವಾ ನೀವು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಉದ್ಯಮಿಗಳೇ, ನೀವು ಹಣದ ವಿಷಯದಲ್ಲಿ ಬಹಳ ಜಾಗರೂಕರಾಗಿರಬೇಕು, ಇಲ್ಲದಿದ್ದರೆ ಹಣ ನಷ್ಟವಾಗುವ ಸಾಧ್ಯತೆಯಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 12:45 ರವರೆಗೆ

ಮೀನ ರಾಶಿ
ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರಲಿದೆ. ಕೆಲವು ದಿನಗಳ ಕಾಲ ಮನೆಯ ವಾತಾವರಣ ಸರಿಯಿಲ್ಲದಿದ್ದರೆ ಇಂದು ಸುಧಾರಣೆ ಕಾಣಬಹುದು. ನಿಮ್ಮ ಮಕ್ಕಳ ಮದುವೆಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಮನೆಯ ಖರ್ಚಿಗೆ ಕಡಿವಾಣ ಹಾಕಬೇಕು. ಸರ್ಕಾರಿ ಕೆಲಸ ಮಾಡುವವರಿಗೆ ಇಂದು ಉತ್ತಮವಾದ ದಿನವಾಗಲಿದೆ. ಉದ್ಯಮಿಗಳಿಗೆ ಹೂಡಿಕೆ ಮಾಡಲು ಉತ್ತಮ ಅವಕಾಶ ಪಡೆಯುವಿರಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ 4:30 ರವರೆಗೆ

English summary

Dina Bhavishya -April 25 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 25 April 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Tuesday, April 25, 2023, 4:00 [IST]
X
Desktop Bottom Promotion