Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 26 April 2023: ಬುಧವಾರ: ದ್ವಾದಶ ರಾಶಿಗಳಲ್ಲಿ ಈ ದಿನ 5 ರಾಶಿಯವರಿಗೆ ಅದೃಷ್ಟ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 26ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ಷಷ್ಠಿ
ನಕ್ಷತ್ರ: ಪುನರ್ವಸು
ರಾಹುಕಾಲ: ಮಧ್ಯಾಹ್ನ 12:19ರಿಂದ 01:58ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಕಾರ್ಯನಿರತವಾಗಿರಲಿದೆ, ಅತಿಯಾದ ಕೆಲಸದ ಒತ್ತಡದಿಂದಾಗಿ ಆಯಾಸ ಉಂಟಾಗುವುದು. ನೀವು ಕೆಲಸ ಅಂತ ಆರೋಗ್ಯ ಹಾಳು ಮಾಡುವ ಬದಲಿಗೆ ಸ್ವಲ್ಪ ವಿಶ್ರಾಂತಿ ಕಡೆಯೂ ಗಮನ ನೀಡುವುದು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಈ ದಿನ ಮನೆಯ ವಾತಾವರಣ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ ರಾತ್ರಿ 9:05 ರವರೆಗೆ
ವೃಷಭ ರಾಶಿ
ಈ ದಿನ ಪ್ರೇಮಿಗಳಿಗೆ ತುಂಬಾನೇ ವಿಶೇಷವಾಗಿರುತ್ತದೆ. ಉದ್ಯೋಗಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಬೇಕಾಗಿದೆ. ವ್ಯಾಪಾರಿಗಳು ದೊಡ್ಡ ಲಾಭಕ್ಕಾಗಿ ಸಣ್ಣ ಲಾಭಗಳನ್ನು ನಿರ್ಲಕ್ಷ್ಯ ಮಾಡದಂತೆ ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ಈ ದಿನವು ಏರಿಳಿತಗಳಿಂದ ತುಂಬಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ
ಮಿಥುನ ರಾಶಿ
ನೀವು ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ಸಂಬಂಧ ಹೊಂದಿದ್ದರೆ ಮತ್ತು ಹೊಸ ಯೋಜನೆಯಲ್ಲಿ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ಹಿರಿಯರ ವಿಶ್ವಾಸ ಪಡೆಯುವುದು ಒಳ್ಳೆಯದು. ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಮೂಡಲು ಮೂರನೇಯ ವ್ಯಕ್ತಿಯ ಚಾಡಿ ಮಾತು ಕಾರಣವಾಗಬಹುದು, ಈ ಬಗ್ಗೆ ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಈ ದಿನ ಖರ್ಚು ಕಡಿಮೆ ಇರಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಹಲ್ಲು ನೋವಿನ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯವರ ವೃತ್ತಿ ಜೀವನದಲ್ಲಿ ಹೊಸ ತಿರುವು ಸಿಗಬಹುದು. ಸಣ್ಣ ಉದ್ಯಮಿಗಳು ಇಂದು ಉತ್ತಮ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಮನೆಯಲ್ಲಿ ಅವಾಹಿತರಾಗಿದ್ದರೆ ಇಂದು ನಿಮಗೆ ಒಳ್ಳೆಯ ಪ್ರಸ್ತಾಪ ಬರಬಹುದು. ಇಂದು ನೀವು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 37
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 7:55 ರವರೆಗೆ
ಸಿಂಹ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ನಿಮ್ಮ ಅಧ್ಯಯನದ ಮೇಲೆ ಸಂಪೂರ್ಣವಾಗಿ ಗಮನ ಹರಿಸುವುದು ಉತ್ತಮ. ಈ ಸಮಯವು ನಿಮಗೆ ಬಹಳ ಅಮೂಲ್ಯವಾಗಿದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಸ್ವಲ್ಪ ನಿಧಾನವಾಗಿರುತ್ತದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಕೆಲವು ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಬಹಳ ಸಮಯದ ನಂತರ ನೀವು ನಿಮಗಾಗಿ ಸಾಕಷ್ಟು ಸಮಯವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5:30 ರವರೆಗೆ
ಕನ್ಯಾ ರಾಶಿ
ನೀವು ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡುತ್ತಿದ್ದರೆ ಇಂದು ನಿಮಗೆ ತುಂಬಾ ಲಾಭದಾಯಕವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಜಿಗಿತದ ಸಾಧ್ಯತೆಯಿದೆ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಮತ್ತೊಂದೆಡೆ, ಖಾಸಗಿ ಉದ್ಯೋಗ ಮಾಡುವವರೂ ಅವರ ಶ್ರಮಕ್ಕೆ ತಕ್ಕಂತೆ ಫಲಿತಾಂಶವನ್ನು ಪಡೆಯುತ್ತಾರೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 39
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ತುಲಾ ರಾಶಿ
ಇಂದು ನೀವು ಮನೆಯ ಹಿರಿಯರೊಂದಿಗೆ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಬಹುದು. ಇಂದು ನೀವು ನಿಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಸ್ವಲ್ಪ ಚಿಂತಿತರಾಗುತ್ತೀರಿ. ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯ ವಾತಾವರಣವು ಚೆನ್ನಾಗಿರಲಿದೆ. ಇಂದು ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳಲಿದೆ. ಹಣದ ವಿಷಯದಲ್ಲಿ, ಈ ದಿನವು ಮಿಶ್ರಫಲ. ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: 7:55 ರಿಂದ 11:30 ರವರೆಗೆ
ವೃಶ್ಚಿಕ ರಾಶಿ
ಕೆಲಸ ಮಾಡುವವರು ಕಚೇರಿಯಲ್ಲಿ ಬಹಳ ಜಾಗರೂಕರಾಗಿರಬೇಕು ಇಲ್ಲದಿದ್ದರೆ ಒಳ ರಾಜಕೀಯಕ್ಕೆ ಬಲಿಯಾಗಬಹುದು. ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬದಿರುವುದು ಉತ್ತಮ. ವ್ಯಾಪಾರಸ್ಥರು ತಕ್ಕ ಲಾಭವನ್ನು ಪಡೆಯಬಹುದು. ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ನೀವು ಕೆಲವು ಬದಲಾವಣೆಗಳನ್ನು ಸಹ ಮಾಡಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ಕೆಲಸವನ್ನು ಮಾಡಲು ಹೋಗಬೇಡಿ. ಅನಾವಶ್ಯಕವಾಗಿ ಯೋಚಿಸಿ ಮಾನಸಿಕ ನೆಮ್ಮದಿಗೆ ಭಂಗ ತರಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 13
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12:25 ರವರೆಗೆ
ಧನು ರಾಶಿ
ನೀವು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತೀರಿ. ಕೆಲಸಕ್ಕೆ ಸಂಬಂಧಿಸಿದಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ, ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗಲಿದೆ. ನೀವು ನಿಮ್ಮ ಅಧ್ಯಯನವನ್ನು ಪೂರ್ಣಗೊಳಿಸಿ ಉತ್ತಮ ಉದ್ಯೋಗವನ್ನು ಹುಡುಕುತ್ತಿದ್ದರೆ, ನೀವು ಉತ್ತಮ ಕೊಡುಗೆಯನ್ನು ಪಡೆಯುವ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ಇಂದು ಉತ್ತಮವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8 ರವರೆಗೆ
'ಮಕರ ರಾಶಿ
ಹಣದ ವಿಷಯದಲ್ಲಿ ಈ ದಿನ ಅನುಕೂಲಕರವಲ್ಲ. ನೀವು ಖರ್ಚುಗಳನ್ನು ನಿಯಂತ್ರಿಸಬೇಕು. ಅಗತ್ಯ ವಸ್ತುಗಳನ್ನು ಮಾತ್ರ ಖರೀದಿಸಿದರೆ ಉತ್ತಮ. ಕಚೇರಿಯಲ್ಲಿ ನೀವು ತುಂಬಾ ಸಮತೋಲಿತವಾಗಿ ವರ್ತಿಸಬೇಕು. ಇಂದು, ವ್ಯಾಪಾರಕ್ಕೆ ಸಂಬಂಧಿಸಿದ ವ್ಯವಹಾರಗಳಲ್ಲಿ ಜಾಗ್ರತೆವಹಿಸಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ನೀವು ದೊಡ್ಡ ಸವಾಲನ್ನು ಎದುರಿಸಬೇಕಾಗಬಹುದು. ಇಂದು ಆರೋಗ್ಯದ ಏರಿಳಿತಗಳಿರಬಹುದು.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:40 ರಿಂದ ಮಧ್ಯಾಹ್ನ 3:00 ರವರೆಗೆ
ಕುಂಭ ರಾಶಿ
ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಇಂದು ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತದೆ. ನೀವು ಕೆಲಸದ ಬಗ್ಗೆ ಹೆಚ್ಚು ಟೆನ್ಷನ್ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ಅದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಧನಾತ್ಮಕವಾಗಿರಿ, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಸಮತೋಲನದಲ್ಲಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 2 ರವರೆಗೆ
ಮೀನ ರಾಶಿ
ಅನಗ್ಯತ ಚರ್ಚೆಯನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ಚಿಕ್ಕ ತಪ್ಪು ಮಾಡದಂತೆ ಎಚ್ಚರವಹಿಸಬೇಕು. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ದೊಡ್ಡ ಗ್ರಾಹಕರೊಂದಿಗೆ ವ್ಯವಹಾರ ಮಾಡಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಣದ ವಿಷಯದಲ್ಲಿ ಇಂದು ಮಿಶ್ರ ದಿನವಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದ ಕೆಟ್ಟ ಚಟಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ



Click it and Unblock the Notifications