Horoscope Today 27 April 2023: ಗುರುವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್‌ 27ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ಸಪ್ತಮಿ
ನಕ್ಷತ್ರ: ಪುನರ್ವಸು
ರಾಹುಕಾಲ: ಮಧ್ಯಾಹ್ನ 01:58ರಿಂದ 03:36ರವರೆಗೆ

ಮೇಷ ರಾಶಿ
ಹಣಗಳಿಸಲು ಯಾವುದೇ ಅಡ್ಡಮಾರ್ಗದಲ್ಲಿ ಪ್ರಯತ್ನಿಸದಂತೆ ಸಲಹೆ ನೀಡಲಾಗುವುದು. ಕಛೇರಿಯಲ್ಲಿ ನಿಮ್ಮ ಕೆಲಸದಲ್ಲಿ ಏನಾದರೂ ಸಮಸ್ಯೆ ಕಂಡು ಬಂದರೆ ಮೇಲಾಧಿಕಾರಿಗಳ ಸಲಹೆ, ಮಾರ್ಗದರ್ಶನದಿಂದ ಬಗೆಹರಿಯಲಿದೆ. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನವಾಗಲಿದೆ. ನೀವು ವಿದ್ಯಾರ್ಥಿಯಾಗಿದ್ದರೆ ನಿಮ್ಮ ಅಧ್ಯಯನದತ್ತ ಗಮನ ಹರಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 10:15 ರವರೆಗೆ

Dina Bhavishya -April 27 2023 Today Rashi Bhavishya, Daily Horoscope in Kannada

ವೃಷಭ ರಾಶಿ
ಇಂದು ನೀವು ಕುಟುಂಬದ ಜೊತೆ ತುಂಬಾ ಸಮಯ ಕಳೆಯುತ್ತೀರಿ. ಕೆಲಸದ ವಿಷಯದಲ್ಲಿ ಈ ದಿನವು ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳಲಿದೆ. ಉದ್ಯೋಗಸ್ಥರಿಗೆ ಕೆಲವು ಉತ್ತಮ ಅವಕಾಶಗಳು ದೊರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರಲಿದೆ. ಆರೋಗ್ಯಕ್ಕಾಗಿ ಉತ್ತಮ ಆಹಾರಕ್ರಮದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 2:20 ರಿಂದ ಸಂಜೆ 4:30 ರವರೆಗೆ

ಮಿಥುನ ರಾಶಿ
ಈ ದಿನ ನೀವು ಧಾರ್ಮಿಕ ವಿಷಯಗಳಲ್ಲಿ ಹೆಚ್ಚು ಆಸಕ್ತಿ ತೋರುತ್ತೀರಿ. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ.ಆದರೆ ನೋಡಿ ಖರ್ಚು ಮಾಡಿದರೆ ಒಳ್ಳೆಯದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉತ್ತಮ ನಡವಳಿಕೆಯನ್ನು ಇಟ್ಟುಕೊಳ್ಳಲು ನೀವು ಪ್ರಯತ್ನಿಸಬೇಕು. ಅನಗತ್ಯ ಘರ್ಷಣೆಯನ್ನು ತಪ್ಪಿಸಿ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಯಾವುದೇ ಸಮಸ್ಯೆ ಇರಲ್ಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 11:10 ರಿಂದ ಮಧ್ಯಾಹ್ನ 2:25 ರವರೆಗೆ

ಕರ್ಕ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ, ಯಾವುದಾದರೂ ಹೊಸ ಯೋಜನೆ ಕಾರ್ಯರೂಪಕ್ಕೆ ತರಲು ದಿನ ಉತ್ತಮವಾಗುದೆ. ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ಆರೋಗ್ಯವಾಗಿರಲು, ನೀವು ಅನಗತ್ಯ ಚಿಂತೆಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6:40 ರವರೆಗೆ

ಸಿಂಹ ರಾಶಿ
ಹಣದ ವಿಷಯದಲ್ಲಿ ಈ ದಿನ ಶುಭವಲ್ಲ. ಹಣದ ಬಗ್ಗೆ ತುಂಬಾನೇ ಜಾಗ್ರತೆವಹಿಸಿ. ಕೆಲವರಿಗೆ ಬರಬೇಕಾಗಿದ್ದ ಹಣ ಕೈ ಸೇರದೆ ಹಣದ ಚಿಂತೆ ಕಾಡುವುದು. ಈ ದಿನ ಕೆಲಸದ ಕಡೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಿಮ್ಮ ಕೆಲಸಗಳು ಅಪೂರ್ಣವಾಗಿ ಉಳಿಯುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಯಾವುದೇ ದೊಡ್ಡ ತೊಂದರೆಯಿರಲ್ಲ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ

ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿ ಕೆಲವು ದಿನಗಳಿಂದ ಏನೋ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸಲು ಇಂದು ಪ್ರಯತ್ನಿಸಿ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದು, ನಿಮ್ಮಿಬ್ಬರ ಸಂಬಂಧ ಚೆನ್ನಾಗಿರಲಿದೆ. ಈ ದಿನ ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆದರೂ ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡದಿದ್ದರೆ ಒಳ್ಳೆಯದು. ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಗಾಸಿಪ್‌ ನಿಮಗೆ ಸಮಸ್ಯೆ ತರಬಹುದು ಜಾಗ್ರತೆ. ನಿಮ್ಮ ಯಾವುದೇ ರಹಸ್ಯ ಅವರೊಂದಿಗೆ ಹಂಚಿಕೊಳ್ಳಬೇಡಿ. ವ್ಯಾಪಾರಸ್ಥರು ಈ ದಿನ ಮಿಶ್ರ ಫಲ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 3 ರವರೆಗೆ

ತುಲಾ ರಾಶಿ
ನೀವು ನಿರುದ್ಯೋಗಿಗಳಾಗಿದ್ದರೆ, ನೀವು ಉದ್ಯೋಗವನ್ನು ಪಡೆಯಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಕೆಲಸಕ್ಕೆ ಪ್ರಯತ್ನ ಮಾಡದೇ ಇರಬೇಡಿ. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ಏರುಪೇರು ಉಂಟಾಗುವುದು. ಯಾವುದೋ ವಿಷಯದಲ್ಲಿ ಮನೆಯಲ್ಲಿ ಉದ್ವಿಗ್ನತೆ ಸಾಧ್ಯ. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿಯೂ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಸೊಂಟ ನೋವಿನ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 4:30 ರವರೆಗೆ

ವೃಶ್ಚಿಕ ರಾಶಿ
ಏನಾದರೂ ಹೊಸ ಕಾರ್ಯ ಮಾಡುವುದಾದರೆ ಮನೆಯ ಹಿರಿಯರ ಆಶೀರ್ವಾದ ಪಡೆಯಿರಿ. ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ನೀವು ಲಾಟರಿ ಅಥವಾ ಬೆಟ್ಟಿಂಗ್‌ಗೆ ಸಂಬಂಧಿಸಿದ ಕೆಲಸವನ್ನು ಮಾಡಿದರೆ ಇಂದು ನಷ್ಟವಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಇಂದು ಮನೆಯ ಸದಸ್ಯರು ಕೆಲವು ಉತ್ತಮ ಯಶಸ್ಸನ್ನು ಪಡೆಯಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ದಿನವು ಏರಿಳಿತಗಳಿಂದ ತುಂಬಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6:25 ರಿಂದ ಮಧ್ಯಾಹ್ನ 12:20 ರವರೆಗೆ

ಧನು ರಾಶಿ
ಕೆಲಸದ ಜೊತೆಗೆ ನಿಮ್ಮ ಕೌಟುಂಬಿಕ ಜೀವನದ ಬಗ್ಗೆಯೂ ಗಮನ ಹರಿಸಿ. ಅದರಲ್ಲೂ ಮನೆಯ ಹಿರಿಯರು ನಿಮಗೆ ಯಾವುದೇ ಜವಾಬ್ದಾರಿಯನ್ನು ಒಪ್ಪಿಸಿದರೆ ಅದನ್ನು ಚೆನ್ನಾಗಿ ಪೂರೈಸಲು ಪ್ರಯತ್ನಿಸಬೇಕು. ಕಚೇರಿಯಲ್ಲಿನ ಉನ್ನತ ಅಧಿಕಾರಿಗಳ ವರ್ತನೆಯು ನಿಮ್ಮ ಮನಸ್ಸಿಗೆ ಬೇಸರ ಉಂಟು ಮಾಡಬಹುದು, ಕೋಪ ನಿಯಂತ್ರಿಸುವುದು ಒಳ್ಳೆಯದು. ವ್ಯಾಪಾರಸ್ಥರು ಇಂದು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಯಾವುದೇ ಹಳೆಯ ಸಾಲದಿಂದ ಮುಕ್ತರಾಗುವ ಸಾಧ್ಯತೆಯಿದೆ. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:20 ರವರೆಗೆ

ಮಕರ ರಾಶಿ
ಕೆಲಸದಲ್ಲಿ ತುಂಬಾ ಕಾರ್ಯನಿರತವಾಗಿದ್ದರೂ ಇಂದು ಉತ್ತಮ ದಿನವಾಗಲಿದೆ. ವಿವಾಹಿತರಿಗೆ ಈ ದಿನ ಚೆನ್ನಾಗಿರಲಿದೆ, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಇಂದು ನಿಮ್ಮ ಕೆಲವು ದೊಡ್ಡ ಸಮಸ್ಯೆಗಳನ್ನು ಪರಿಹರಿಸಬಹುದು. ನಿಮ್ಮ ಹಣಕಾಸಿನ ಭಾಗವು ಬಲವಾಗಿರುತ್ತದೆ. ನಿಮ್ಮ ಸೌಕರ್ಯಗಳಲ್ಲಿ ಹೆಚ್ಚಳವಾಗುತ್ತದೆ. ಆರೋಗ್ಯದಲ್ಲಿ ಹಠಾತ್ ಕ್ಷೀಣತೆ ಉಂಟಾಗಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 3 ರವರೆಗೆ

ಕುಂಭ ರಾಶಿ
ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಬಹುದು. ಅನಾವಶ್ಯಕ ಜಗಳಗಳಿಂದ ದೂರವಿರುವುದು ಉತ್ತಮ. ಕಛೇರಿಯಲ್ಲಿ ಅತಿಯಾದ ಆತ್ಮವಿಶ್ವಾಸವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು, ಆದ್ದರಿಂದ ಜಾಗ್ರತೆ. ಉದ್ಯಮಿಗಳು ಮಿಶ್ರ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ವಿರೋಧಿಗಳೊಂದಿಗೆ ನೀವು ಜಾಗರೂಕರಾಗಿರಬೇಕು. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುವುದಿಲ್ಲ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿದ್ರಾಹೀನತೆ ಸಮಸ್ಯೆ ಇರಬಹುದು
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:30 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ
ಈ ದಿನ ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಇಂದು, ನಿಮ್ಮ ಪ್ರೀತಿಪಾತ್ರರ ಸಹಾಯದಿಂದ, ನಿಮ್ಮ ಮಾನಸಿಕ ಒತ್ತಡವೂ ಕಡಿಮೆಯಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಇಂದು ಅವರು ಹಣಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಕೆಲಸಗಳನ್ನು ಮಾಡಲು ಸಾಧ್ಯವಾಗುವುದು.. ಉದ್ಯಮಿಗಳು ಇಂದು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಸರಿಯಾದ ನಿರ್ಧಾರಗಳ ಫಲಿತಾಂಶಗಳನ್ನು ನೀವು ಪಡೆಯಬಹುದು. ಉದ್ಯೋಗಸ್ಥರು ಕಚೇರಿಯಲ್ಲಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಂದು ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 2:25ರವರೆಗೆ

English summary

Dina Bhavishya -April 27 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 27 April 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Thursday, April 27, 2023, 4:00 [IST]
X
Desktop Bottom Promotion