Latest Updates
-
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ
Horoscope Today 29 April 2023: ಶನಿವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 29ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ನವಮಿ
ನಕ್ಷತ್ರ: ಅಶ್ಲೇಷ
ರಾಹುಕಾಲ: ಬೆಳಗ್ಗೆ 09:01ರಿಂದ 10:40ರವರೆಗೆ
ಮೇಷ ರಾಶಿ
ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಅವಸರದಲ್ಲಿ ಯಾವುದೇ ನಿರ್ರದಾರ ತೆಗೆದುಕೊಳ್ಳಲು ಹೋಗಬೇಡಿ. ಉದ್ಯಮಿಗಳಿಗೆ ಸವಾಲಿನ ದಿನ. ನಿಮ್ಮ ಕೈಗೆ ದೊಡ್ಡ ಆರ್ಡರ್ ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳು ಕೆಲಸದ ಕಡೆ ಅಧಿಕ ಗಮನ ನೀಡಲು ಸಲಹೆ ನೀಡಲಾಗಿದೆ. ಹಣ ಹಾಗೂ ಆರೋಗ್ಯದ ವಿಷಯದಲ್ಲಿ ಇಂದು ಮಿಶ್ರಫಲ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 8:30 ರವರೆಗೆ

ವೃಷಭ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿದೆ. ಉದ್ಯೋಗಿಗಳಿಗೂ ಈ ದಿನ ಉತ್ತಮವಾಗಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಆದಾಯ ಹೆಚ್ಚಾಗಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ, ಖುಷಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೆಲಸ ಒತ್ತಡ ಎಂದು ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:05 ರವರೆಗೆ
ಮಿಥುನ ರಾಶಿ
ಆಮದು-ರಫ್ತಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಈ ದಿನ ಶುಭ ಸುದ್ದಿ ಪಡೆಯಬಹುದು. ಉದ್ಯೋಗಿಗಳು ತಮ್ಮ ತುಂಬಾ ದಿನಗಳ ಶ್ರಮಕ್ಕೆ ಉತ್ತಮ ಫಲ ಪಡೆಯುವಿರಿ. ನಿಮ್ಮ ಮೇಲೆ ಜವಾಬ್ದಾರಿಗಳ ಹೊರೆ ಹೆಚ್ಚಾಗಬಹುದು. ಸಂಗಾತಿಯೊಂದಿಗೆ ವೈಮನಸ್ಸು ಉಂಟಾಗಬಹುದು. ದೈಹಿಕವಾಗಿ ಸದೃಢವಾಗಿರಲು ಮಾನಸಿಕವಾಗಿಯೂ ಸದೃಢವಾಗಿರಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ 7:20 ರವರೆಗೆ
ಕರ್ಕ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಕಛೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುವುದು. ನಿಮ್ಮ ಕೆಲಸವನ್ನು ಮೇಲಾಧಿಕಾರಿ ಮೆಚ್ಚಿಕೊಳ್ಳುತ್ತಾರೆ. ವ್ಯಾಪಾರಸ್ಥರು ಲಾಭ ಗಳಿಸುವ ಅವಕಾಶವನ್ನು ಪಡೆಯಬಹುದು. ಇಂದು ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ತುಂಬಾ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದಸ ಸಮಯ: 10:55 ರಿಂದ ಮಧ್ಯಾಹ್ನ 2 ರವರೆಗೆ
ಸಿಂಹ ರಾಶಿ
ಸಿಂಹ ರಾಶಿಯವರು ಈ ದಿನ ಖರ್ಚಿನ ಕಡೆಗೆ ಗಮನಹರಿಸುವುದು ಒಳ್ಳೆಯದು. ಇಲ್ಲದಿದ್ದರೆ ಆರ್ಥಿಕ ತೊಂದರೆ ಎದುರಿಸಬೇಕಾಗುತ್ತದೆ. ನೀವು ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವನ್ನು ಮಾಡುತ್ತಿದ್ದರೆ, ನೀವು ಯಶಸ್ವಿಯಾಗದಿರಬಹುದು, ಆದರೆ ನಿರಾಸೆ ಪಡಬೇಕಾಗಿಲ್ಲ, ಸದ್ಯದಲ್ಲಿ ನಿಮ್ಮ ಚಿಂತೆ ದೂರಾಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 5:35 ರವರೆಗೆ
ಕನ್ಯಾ ರಾಶಿ
ಈ ದಿನ ನೀವು ಸ್ನೇಹಿತರ ಜೊತೆ ಖುಷಿಯಿಂದ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಾಗುವುದು. ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಫಲವನ್ನು ಶೀಘ್ರದಲ್ಲೇ ಉನ್ನತ ಸ್ಥಾನದ ರೂಪದಲ್ಲಿ ಪಡೆಯಬಹುದು. ವ್ಯಾಪಾರಸ್ಥರು ಅನಗತ್ಯವಾಗಿ ಓಡಾಡಬೇಕಾಗುತ್ತದೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರಲಿದೆ. ನೀವು ಬಿಡುವಿಲ್ಲದ ಕೆಲಸದ ನಡುವೆ ಕೂಡ ವಿಶ್ರಾಂತಿಯ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಬೆಳಗ್ಗೆ 11 20ರಿಂದ ಮಧ್ಯಾಹ್ನ 1ರವರೆಗೆ
ತುಲಾ ರಾಶಿ
ಉದ್ಯಮಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಹಣದ ಕೊರತೆಯಿಂದ ನೀವು ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕಚೇರಿಯಲ್ಲಿ ನಿಮ್ಮಿಂದ ತಪ್ಪಾಗದಂತೆ ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಮನೆ ರಿಪೇರಿ ಇತ್ಯಾದಿಗಳಿಗಾಗಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ತುಂಬಾ ಚೆನ್ನಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:45 ರವರೆಗೆ
ವೃಶ್ಚಿಕ ರಾಶಿ
ಇಂದು ಪ್ರೇಮಿಗಳ ಹಾಗೂ ವಿವಾಹಿತರ ಜೀವನದಲ್ಲಿ ಮಾಧುರ್ಯ ಹೆಚ್ಚಾಗಬಹುದು. ಕೆಲಸದ ಕಾರಣಕ್ಕೆ ಮಾಡುವ ಪ್ರಯಾಣ ನಿಮಗೆ ಲಾಭದಾಯಕವಾಗಿದೆ. ಉದ್ಯೋಗಸ್ಥರಿಗೆ ಬಡ್ತಿಯ ಸಿಹಿ ಸುದ್ದಿ ದೊರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ಧನು ರಾಶಿ
ನೀವು ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಲು ಯೋಜಿಸುತ್ತಿದ್ದರೆ, ನಿಮ್ಮ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಒಳ್ಳೆಯದು ಎಂಬ ಸಲಹೆ ನೀಡಲಾಗಿದೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ವ್ಯಾಪಾರಸ್ಥರು ನಿರೀಕ್ಷಿತ ಲಾಭ ಪಡೆಯಬಹುದು. ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 8:25 ರವರೆಗೆ
ಮಕರ ರಾಶಿ
ಮನೆಯ ಹಿರಿಯರು ನಿಮಗೆ ಯಾವುದೇ ಜವಾಬ್ದಾರಿಯನ್ನು ಒಪ್ಪಿಸಿದರೆ ಅದನ್ನು ನಿರ್ಲಕ್ಷಿಸಬೇಡಿ. ಕೆಲಸದ ಮುಂಭಾಗದಲ್ಲಿ ಇಂದು ನಿಮಗೆ ಏರಿಳಿತಗಳು ತುಂಬಿರುತ್ತವೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಕುಸಿಯಬಹುದು. ಉದ್ಯಮಿಗಳು ತರಾತುರಿಯಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರಗಳ ಪರಿಣಾಮಗಳನ್ನು ಅನುಭವಿಸಬೇಕಾಗಬಹುದು. ನಿಮ್ಮ ಹಣಕಾಸು ನಷ್ಟವಾಗುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ಕುಂಭ ರಾಶಿ
ಕುಂಭ ರಾಶಿಯವರು ಕಚೇರಿಯಲ್ಲಿ ನಿಮ್ಮ ಕೆಲಸದ ಮೇಲೆ ಗಮನ ಹರಿಸಿದರೆ ಉತ್ತಮವಾಗಿರುತ್ತದೆ. ಇತರರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ. ವ್ಯಾಪಾರಸ್ಥರು ತಮ್ಮ ಎದುರಾಳಿಗಳೊಂದಿಗೆ ಜಾಗರೂಕರಾಗಿರಬೇಕು. ನಿಮ್ಮ ಹಣಕಾಸಿನ ಯೋಜನೆಗಳಿಗೆ ಸಂಬಂಧಿಸಿದ ವಿಷಯಗಳನ್ನು ರಹಸ್ಯವಾಗಿಡಲು ನಿಮಗೆ ಸಲಹೆ ನೀಡಲಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ನೀವು ಜಾಗ್ರತೆವಹಿಸಿ. ಪ್ರೇಮಿಗಳಿಗೆ ವಿವಾಹಿತರಿಗೆ ಈ ದಿನ ಚೆನ್ನಾಗಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಮೀನ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಇತ್ತೀಚೆಗೆ ನಿರ್ಧಾರವನ್ನು ತೆಗೆದುಕೊಂಡಿದ್ದರೆ, ನೀವು ಸರಿಯಾದ ಫಲಿತಾಂಶಗಳನ್ನು ಪಡೆಯಬಹುದು. ಕೆಲಸದ ವಿಷಯದಲ್ಲಿ ಈ ದಿನವು ಸಾಮಾನ್ಯವಾರಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳು ಉಂಟಾಗಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 10:45 ರಿಂದ ಮಧ್ಯಾಹ್ನ 1 ರವರೆಗೆ



Click it and Unblock the Notifications












